Site icon Vistara News

Karnataka CM: ಸಿದ್ದರಾಮಯ್ಯ ಪಟ್ಟಾಭಿಷೇಕ ವೈಭವ ಹೇಗಿತ್ತು? ಚಿತ್ರಗಳಲ್ಲಿ ನೋಡಿ

oth taking ceremony of Karnataka CM and other ministers in pictures

oth taking ceremony of Karnataka CM and other ministers in pictures

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ (Karnataka CM) ಸಿದ್ದರಾಮಯ್ಯ (Siddaramaiah), ಉಪಮುಖ್ಯಮಂತ್ರಿಯಾಗಿ (Deputy Chief Minister) ಡಿ.ಕೆ. ಶಿವಕುಮಾರ್‌ (DK Shivakumar) ಮತ್ತು ಎಂಟು ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸುವ ಮೂಲಕ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava stadium) ನಡೆದ ಸಮಾರಂಭದಲ್ಲಿ ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು, ಮಿತ್ರ ಪಕ್ಷಗಳ ಆಡಳಿತ ಇರುವ ರಾಜ್ಯಗಳ ಸಿಎಂಗಳು, ಮಿತ್ರ ಪಕ್ಷಗಳ ಮಿತ್ರರು ಸೇರಿದಂತೆ ಹಲವು ಗಣ್ಯರು ಹಾಗೂ ಲಕ್ಷಾಂತರ ಅಭಿಮಾನಿಗಳು ಭಾಗವಹಿಸಿದ್ದರು. ಕಾಂಗ್ರೆಸ್‌ನ ನಾಯಕರಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸುವ ಮೂಲಕ ಸಮಾರಂಭಕ್ಕೆ ರಂಗು ತುಂಬಿದರು. ಹಾಗಿದ್ದರೆ ಈ ಕಾರ್ಯಕ್ರಮ ಹೇಗಿತ್ತು ಎನ್ನುವುದರ ಒಂದು ಚಿತ್ರ ಸಂಪುಟ ಇಲ್ಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಜನರತ್ತ ಕೈಬೀಸಿದಾಗ..
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಗಣ್ಯರು
ಸ್ಟಾಲಿನ್‌, ಖರ್ಗೆ, ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಖುಷಿ ಖುಷಿಯಾಗಿ
ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ
ಪ್ರಮಾಣವಚನ ಸಮಾರಂಭದಲ್ಲಿ ಜನರತ್ತ ಹೆಮ್ಮೆಯ ಸಂಕೇತ ತೋರಿಸಿದ ಸಿದ್ದರಾಮಯ್ಯ
ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ
ಡಿ.ಕೆ.ಶಿಯನ್ನು ಅಪ್ಪಿಕೊಂಡು ಅಭಿನಂದಿಸಿದ ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಮತ್ತು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌
ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ವಿಧಾನಸೌಧ ಪ್ರವೇಶಿಸುವಾಗ ಮೆಟ್ಟಿಲುಗಳಿಗೆ ನಮಸ್ಕರಿಸಿದ ಡಿ.ಕೆ. ಶಿವಕುಮಾರ್‌
ಕರ್ನಾಟಕದ ಜನತೆಗೆ ವಂದನೆ ಸಲ್ಲಿಸಿದ ಪ್ರಿಯಾಂಕಾ ಗಾಂಧಿ
ಕಂಠೀರವ ಸ್ಟುಡಿಯೋದಲ್ಲಿ ಸೇರಿದ ಜನಸ್ತೋಮ
Exit mobile version