Site icon Vistara News

ವಿಧಾನಸೌಧದಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ನಿಜ; ಎಫ್‌ಎಸ್‌ಎಲ್‌ ತಜ್ಞ ಫಣೀಂದ್ರ ಹೇಳಿಕೆ

Pakistan Zindabad Slogan Case

Pakistan Zindabad slogan is true In Vidhana Soudha: Says FSL Expert Dr B N Phaneendar

ಬೆಂಗಳೂರು: ವಿಧಾನಸೌಧಲ್ಲಿಯೇ (Vidhana Soudha) ಪಾಕಿಸ್ತಾನ್‌ ಜಿಂದಾಬಾದ್‌ ಎಂಬುದಾಗಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. “ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದು ನಿಜ” ಎಂಬುದಾಗಿ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞ (FSL Expert) ಡಾ.ಬಿ.ಎನ್‌.ಫಣೀಂದ್ರ (Dr B N Phaneendar) ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ. ಎಫ್‌ಎಸ್‌ಎಲ್‌ ವರದಿಯಲ್ಲೂ (FSL Report) ಇದನ್ನೇ ಉಲ್ಲೇಖಿಸಿರುವುದಾಗಿ ಫಣೀಂದ್ರ ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಪ್ರಕಟಗೊಂಡ ವೇಳೆ ಕಾಂಗ್ರೆಸ್‌ನ ಮೂವರು ಸದಸ್ಯರ ಪೈಕಿ ನಾಸೀರ್‌ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಜೈಕಾರ ಕೂಗಿದ್ದಾರೆ ಎಂಬ ಪ್ರಕರಣದ ಕುರಿತು ವಿಧಿ ವಿಜ್ಞಾನ ಪ್ರಯೋಗಾಲಯದ (FSL Report) ವರದಿ ಸಿದ್ಧಗೊಂಡಿದೆ. ಘಟನೆ ನಡೆದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರುಎರಡು ದಿನಗಳ ಎಫ್ಎಸ್ಎಲ್ ರಿಪೋರ್ಟ್ ಕೊಡುವಂತೆ ಸೂಚಿಸಿದ್ದ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಅಂತೆಯೇ ವರದಿ ಸಿದ್ದಗೊಂಡಿದ್ದು ಗೃಹ ಇಲಾಖೆಗೆ ವರದಿ ಸಲ್ಲಿಕೆಯಾಗಿದೆ. ಈಗ ವರದಿಯ ಸ್ಫೋಟಕ ಮಾಹಿತಿಯು ಲಭ್ಯವಾಗಿದೆ.

“ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ರೆಕಾರ್ಡ್‌ ಆದ ವಿಡಿಯೊ ಹಾಗೂ ಆಡಿಯೊಗಳನ್ನು ಎರಡು ಹಂತದಲ್ಲಿ ಪರಿಶೀಲನೆ ಮಾಡಲಾಗಿದೆ. ಘೋಷಣೆ ಕೂಗಿದವರ ಆಡಿಯೊ, ಬಾಯಿ, ತುಟಿಯ ಚಲನವಲನಗಳನ್ನು ಕೂಲಂಕಷವಾಗಿ ಗಮನಿಸಲಾಗಿದೆ. ಪರಿಶೀಲನೆ ಬಳಿಕ, ಒಬ್ಬನು ನಾಸೀರ್‌ ಸಾಬ್‌ ಜಿಂದಾಬಾದ್‌ ಎಂದೂ, ಮತ್ತೊಬ್ಬನು ಪಾಕಿಸ್ತಾನ್‌ ಜಿಂದಾಬಾದ್‌ ಎಂಬುದಾಗಿ ಘೋಷಣೆ ಕೂಗಿದ್ದು ನಿಜ. ಹಾಗೊಂದು ವೇಳೆ, ಘೋಷಣೆ ಕೂಗಿದ ಆರೋಪಿಗಳನ್ನು ಕರೆದುಕೊಂಡು ಬಂದರೆ, ಅವರ ಧ್ವನಿ ತಪಾಸಣೆ ಮೂಲಕ ಇವರೇ ಘೋಷಣೆ ಕೂಗಿದ್ದಾರೆ ಎಂಬುದನ್ನು ಪತ್ತೆಹಚ್ಚಬಹುದು” ಎಂದು ಫಣೀಂದ್ರ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Sedition case: ರಾಜ್ಯಪಾಲರ ಅಂಗಳಕ್ಕೆ ‘ಪಾಕಿಸ್ತಾನ್‌ ಜಿಂದಾಬಾದ್‌’ ಕದನ; ಸರ್ಕಾರ ವಜಾಕ್ಕೆ ಬಿಜೆಪಿ ಆಗ್ರಹ

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಗೆಲುವು ಸಾಧಿಸಿದ್ದಾರೆ ಎಂದು ಘೋಷಣೆಯಾಯಿತು. ಆಗ ನೂತನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರನ್ನು ಕಾಂಗ್ರೆಸ್‌ ಬೆಂಬಲಿಗರು ಎತ್ತಿ ಖುಷಿಪಟ್ಟಿದ್ದಾರೆ. ಹಾರವನ್ನು ಹಾಕಿ ಸಂಭ್ರಮಿಸಿದ್ದಾರೆ. ಇದೇ ವೇಳೆ, ಕೆಲವು ಪಾಪಿಗಳು “ಪಾಕಿಸ್ತಾನ್‌ ಜಿಂದಾಬಾದ್‌” ಎಂದು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಅದರ ವಿಡಿಯೊ ಎಲ್ಲೆಡೆ ವೈರಲ್ ಆಗಿದ್ದವು. ಪ್ರಕರಣದ ಕುರಿತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಲಂಕಷ ತನಿಖೆಗೂ ಆದೇಶಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version