ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕೆಎಸ್‌ಆರ್‌ಟಿಸಿಯ (KSRTC) ನೂತನ ಸೇವೆ ʼಪಲ್ಲಕ್ಕಿ ಉತ್ಸವʼಕ್ಕೆ (Pallakki Utsav) ಚಾಲನೆ ನೀಡಲಿದ್ದಾರೆ.
ಪಲ್ಲಕ್ಕಿ ಉತ್ಸವ ಹೆಸರಿನ 40 ನಾನ್ ಎಸಿ ಸ್ಲೀಪರ್ ಬಸ್‌ಗಳಿಗೆ (non AC sleeper bus) ಇಂದು ಗ್ರೀನ್ ಸಿಗ್ನಲ್ ನೀಡಲಾಗುತ್ತಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ 40 ಪಲ್ಲಕ್ಕಿ ಉತ್ಸವ ಬಸ್‌ಗಳ ಉದ್ಘಾಟನೆಯಾಗಲಿದೆ. ಬೆಳಗ್ಗೆ 10 ಗಂಟೆಗೆ ಪಲ್ಲಕ್ಕಿ ಉತ್ಸವ ಬಸ್‌ಗಳಿಗೆ ಅಧಿಕೃತ ಚಾಲನೆ ದೊರೆಯಲಿದ್ದು, ಈ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಇರಲಿದ್ದಾರೆ.
ಜೊತೆಗೆ ಶಕ್ತಿ ಯೋಜನೆಯಿಂದ (shakti scheme) ಉಂಟಾಗಿರುವ ಒತ್ತಡ ನಿವಾರಣೆಗೆ ಇವತ್ತೇ 100 ಸಾಮಾನ್ಯ ಬಸ್‌ಗಳಿಗೂ ಗ್ರೀನ್ ಸಿಗ್ನಲ್ ನೀಡಲಾಗುತ್ತಿದೆ.
ಪಲ್ಲಕ್ಕಿ ಉತ್ಸವದ ವಿಶೇಷತೆ ಇದು:
1) ನಾನ್ ಎಸಿ ಸ್ಲೀಪರ್ ಬಸ್ ಇದಾಗಿದೆ. ಅತ್ಯಂತ ಆಕರ್ಷಕ ಹೊರಾಂಗಣ ಮತ್ತು ಒಳಾಂಗಣ ವಿನ್ಯಾಸ ಹೊಂದಿದೆ.
2) ಪಲ್ಲಕ್ಕಿ ಉತ್ಸವ ಸ್ಲೀಪರ್ ಬಸ್ 28 ಸೀಟ್ ಸಾಮರ್ಥ್ಯ ಹೊಂದಿದೆ.
3) ಅಶೋಕ್ ಲೇಲ್ಯಾಂಡ್ ಕಂಪನಿಯಿಂದ ನಿರ್ಮಾಣಗೊಂಡ ಪ್ರತಿ ಬಸ್ ಬೆಲೆ 45 ಲಕ್ಷ ರೂಪಾಯಿ.
4) 40 ಬಸ್‌ಗಳ ಪೈಕಿ 30 ಬಸ್‌ಗಳು ರಾಜ್ಯದೊಳಗೆ ಸಂಚರಿಸಲಿವೆ.
5) ಉಳಿದ 10 ಬಸ್‌ಗಳು ಬೆಂಗಳೂರಿನಿಂದ ಹೊರರಾಜ್ಯಗಳಿಗೆ ಸಂಚರಿಸಲಿವೆ.
6) ಈ ಬಸ್ ಸೇವೆಯು ಇಂದಿನಿಂದಲೇ ಆರಂಭವಾಗುತ್ತಿದೆ.
7) ಕೆಎಸ್‌ಆರ್‌ಟಿಸಿಯಲ್ಲಿ ನಾನ್ ಎಸಿ ಸ್ಲೀಪರ್ ಬಸ್‌ಗಳು ಆರಂಭವಾಗಿ ಸಾಕಷ್ಟು ವರ್ಷಗಳಾಗಿವೆ. ನಾನ್ ಎಸಿ ಬಸ್‌ಗಳಿಗೆ ಯಾವುದೇ ಹೆಸರಿಟ್ಟು ಬ್ರ್ಯಾಂಡಿಂಗ್ ಮಾಡಿರಲಿಲ್ಲ. ಸದ್ಯ ಪಲ್ಲಕ್ಕಿ ಉತ್ಸವ ಎಂಬ ಬ್ರ್ಯಾಂಡ್ ನೇಮ್ ಇಡಲಾಗಿದೆ. ಈ ಹೆಸರನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.
ಇದನ್ನೂ ಓದಿ: KSRTC Staff : ಹಬ್ಬದ ದಿನ ಕೆಲಸ ಮಾಡಿದ್ರೆ ಡಬಲ್ ಧಮಾಕಾ; ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್