ಬೆಳಗಾವಿ : ವಾಯವ್ಯ ಪಶ್ಚಿಮ ಪರಿಷತ್ ಚುನಾವಣೆ ಫಲಿತಾಂಶದಿಂದ ಪಂಚಮಸಾಲಿ ಸಮುದಾಯಕ್ಕೆ ಆನೆ ಬಲ ಸಿಕ್ಕಂತಾಗಿದೆ. ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಮೂವರು ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದವರೇ ಆಯ್ಕೆಯಾಗಿದ್ದಾರೆ. ಪ್ರಕಾಶ್ ಹುಕ್ಕೇರಿ, ಹನುಮಂತ ನಿರಾಣಿ, ಮತ್ತು ಬಸವರಾಜ ಹೊರಟ್ಟಿ ಮೂವರು ಪಂಚಮಸಾಲಿ ಸಮುದಾಯವರಾಗಿದ್ದಾರೆ.
ಇದಕ್ಕಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಜೂನ್ 27ರಂದು ಹಾವೇರಿಯ ಶಿಗ್ಗಾಂವಿಯ ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಎದುರು ಧರಣಿಗೆ ನಡೆಸಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಮೂಲಕ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಲು ಸಿದ್ದತೆ ಮಾಡಿಕೊಂಡಿದ್ದು, ಧರಣಿಗೆ 1 ಲಕ್ಷಕ್ಕೂ ಅಧಿಕ ಜನರು ಸೇರಿಸಲು ಸ್ವಾಮೀಜಿಗಳು ತೀರ್ಮಾನಿಸಿದ್ದಾರೆ.
ಸದ್ಯ ಕಾಂಗ್ರೆಸ್ ಪಂಚಮಸಾಲಿ ಸಮುದಾಯದ ಓಲೈಕೆ ಮೇಲೆ ಕಣ್ಣಿಟ್ಟಿದೆ. ಈ ಹಿಂದೆ ಕೂಡ ಬೆಳಗಾವಿ ಜಿಲ್ಲಾ ಸ್ಥಳೀಯ ಸಂಸ್ಥೆ ಕ್ಷೇತ್ರದ ಚುನಾವಣೆಯಲ್ಲೂ ಕಾಂಗ್ರೆಸ್ ಪಂಚಮಸಾಲಿ ಸಮುದಾಯಕ್ಕೆ ಟಿಕೆಟ್ ನೀಡಿತ್ತು. ಆಗ ಪರಿಷತ್ ಸದಸ್ಯರಾಗಿ ಚನ್ನೆರಾಜ ಹಟ್ಟಿಹೊಳಿ ಆಯ್ಕೆಯಾಗಿದ್ದರು.
ಇದನ್ನು ಓದಿ| ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕೈಕೊಟ್ಟ ಪಂಚಮಸಾಲಿ ಮತಗಳು: ಬಿಜೆಪಿಗೆ ಎಚ್ಚರಿಕೆಯ ಗಂಟೆ
ಸದ್ಯಕ್ಕೆ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಪಟ್ಟು ಹಿಡಿದಿದ್ದಾರೆ. ಮುಂಬರುವ ದಿನಗಳಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರವಾಗುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ಪಂಚಮಸಾಲಿ ಸಮುದಾಯಕ್ಕೆ ಮಣೆ ಹಾಕಲು ಮುಂದಾಗಿದೆ.
ಇದನ್ನು ಓದಿ|ಪ್ರವರ್ಗ 2ಎಗೆ ಪಂಚಮಸಾಲಿ ಸೇರ್ಪಡೆ; ಸಿಎಂ ಭೇಟಿಯಾದ ಶ್ರೀ ವಚನಾನಂದ ಸ್ವಾಮೀಜಿ