Site icon Vistara News

Panchamasali Reservation : ಮಾ. 24ರಂದು ಪಂಚಮಸಾಲಿ ಸಮುದಾಯಕ್ಕೆ GOOD NEWS ಕೊಡ್ತಾರಂತೆ ಸಿಎಂ ಬೊಮ್ಮಾಯಿ

BPL Card holders will get half liter nandini milk says BJP Manifesto

ಬಾಗಲಕೋಟೆ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಾಲಿಗೆ ಅತ್ಯಂತ ಮಹತ್ವದ್ದಾಗಿರುವ ಪಂಚಮಸಾಲಿ ಮೀಸಲಾತಿಗೆ (Panchamasali Reservation) ಸಂಬಂಧಿಸಿ ಮಾರ್ಚ್‌ 24ರಂದು ಮಹತ್ವದ ಮಾಹಿತಿ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಮುಧೋಳದಲ್ಲಿ ಮಾಧ್ಯಮದವರ ಜತೆ ಮಾತನಾಡುತ್ತಾ ಈ ವಿಚಾರ ತಿಳಿಸಿದರು.

ಪಂಚಮಸಾಲಿ ಸಮಾಜವು 2ಎ ಮೀಸಲಾತಿಗಾಗಿ ಒತ್ತಾಯಿಸಿ ದೊಡ್ಡ ಮಟ್ಟದ ಹೋರಾಟವನ್ನೇ ನಡೆಸುತ್ತಿದೆ. ಈಗ ಸಮುದಾಯಕ್ಕೆ ಕೇಂದ್ರ ಸರ್ಕಾರ ಮೇಲ್ವರ್ಗದ ಮೀಸಲಾತಿಯಲ್ಲಿ ಒಂದು ಪಾಲನ್ನು ಪಂಚಮಸಾಲಿಗಳಿಗೆ ನೀಡಲಾಗುವುದು ಎಂದು ಈ ಹಿಂದೆ ಪ್ರಕಟಿಸಲಾಗಿತ್ತು. ಆದರೆ, ಇದನ್ನು ಪಂಚಮಸಾಲಿ ಮೀಸಲು ಹೋರಾಟಗಾರರು ತಿರಸ್ಕರಿಸಿದ್ದಾರೆ. ತಮಗೆ 2ಎ ಮೀಸಲಾತಿಯೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಒಂದೊಮ್ಮೆ ಈ ಮೀಸಲಾತಿ ಸಿಗದೆ ಹೋದರೆ ತಾವು ಬಿಜೆಪಿ ವಿರುದ್ಧವೂ ಮತ ಚಲಾಯಿಸಲು ಮತದಾರರಿಗೆ ಕರೆ ನೀಡಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಸಿಎಂ ಬೊಮ್ಮಾಯಿ ಅವರ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ.

ಮಾರ್ಚ್ 24ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ಸಿಗಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅಂದರೆ, ಅಂದು ನಡೆಯುವ ಸಭೆಯಲ್ಲಿ ಮೀಸಲಾತಿ ಬಗ್ಗೆ ಒಂದು ತೀರ್ಮಾನವನ್ನು ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಇದೇ ವೇಳೆ ʻ2 ಎ ಸಮುದಾಯಗಳನ್ನು 3ಬಿಗೆ ಹಾಕುವ ಬಗ್ಗೆ ಯಾವುದೇ ವರದಿ ಇಲ್ಲʼʼ ಎಂದೂ ಸಿಎಂ ಸ್ಪಷ್ಟಪಡಿಸಿದ್ದಾರೆ.

ಅಭಿವೃದ್ಧಿಗೆ ಒತ್ತು ಎಂದ ಸಿಎಂ ಬೊಮ್ಮಾಯಿ

ಕಳೆದ ಮೂರು ವರ್ಷಗಳಲ್ಲಿ ನೀರಾವರಿ, ಕುಡಿಯುವ ನೀರು, ರೈತರಿಗೆ ಅನುಕೂಲವಾಗುವ ಯೋಜನೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳಿಗೆ ಒಟ್ಟು ನೀಡಲಾಗಿದೆ. ಹುನಗುಂದ ಮತ್ತು ಮುಧೋಳದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ಮಾಡಲಾಗಿದೆ. ಮುದ್ದೇಬಿಹಾಳ ಕ್ಷೇತ್ರದಲ್ಲಿ 1600 ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರಲ್ಲದೇ ಕಳೆದ ಮೂರು ವರ್ಷಗಳ ಸರ್ಕಾರದ ನಿರ್ಣಯ, ಬಿಡುಗಡೆ ಮಾಡಿರುವ ಅನುದಾನ ಮತ್ತು ಅನುಷ್ಠಾನದ ಫಲವಾಗಿ ಇದಾಗುತ್ತಿದೆ. ನಮ್ಮ ಕೆಲಸಗಳು ಮಾತನಾಡಬೇಕು ಎಂದರು.

ಆರೋಗ್ಯ ಇಲಾಖೆ ನೌಕರರ ವೇತನ ಹೆಚ್ಚಳ
ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಉತ್ತರಿಸಿ ಈಗಾಗಲೇ ಅವರಿಗೆ 15 ರಷ್ಟು ವೇತನ ಹೆಚ್ಚಳ ಮಾಡಲಾಗಿದೆ ಎಂದರು.

ಮುಖ್ಯಮಂತ್ರಿ ನಾನೇ ಎಂದರು ಬೊಮ್ಮಾಯಿ

ಈ ನಡುವೆ ಬೀಳಗಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಬೊಮ್ಮಾಯಿ ಅವರು ಮುಂದಿನ ಮುಖ್ಯಮಂತ್ರಿಯೂ ನಾನೇ ಎಂದು ಹೇಳಿಕೊಂಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿ ಮತ್ತೆ ಬೀಳಗಿಗೆ ಬರುತ್ತೇನೆ ಎಂದು ಅವರು ಹೇಳಿದ್ದು ಚರ್ಚೆಗೆ ಕಾರಣವಾಗಿದೆ. ಅದೇ ಹೊತ್ತಿಗೆ ಅವರು ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದನ್ನು ಹೈಕಮಾಂಡ್‌ ತೀರ್ಮಾನ ಮಾಡಲಿದೆ ಎಂದೂ ಹೇಳಿದರು.

ಇದನ್ನೂ ಓದಿ : Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

Exit mobile version