ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ ಒಬಿಸಿ 2ಡಿ ಹೊಸ ಪ್ರವರ್ಗ ಸೃಷ್ಟಿಸಿ ಮಿಸಲಾತಿ ನೀಡುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಹೈಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ಹಿಂದಿನ ಬೇಡಿಕೆಯಂತೆ (Panchamasali Reservation) 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ, ಶಿಗ್ಗಾಂವಿಯ ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಮುಂದೆ ಜನವರಿ ೧೩ರಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮಾಜದಿಂದ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಪಂಚಮಸಾಲಿಗಳಿಗೆ ರಾಜ್ಯ ಸರ್ಕಾರ ಘೋಷಿಸಿರುವ 2ಡಿ ಮೀಸಲಾತಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಹಾವೇರಿ ಜಿಲ್ಲೆ ಶಿಗ್ಗಾಂವಿಯ ಸಿಎಂ ಮನೆ ಮುಂದೆ ಶುಕ್ರವಾರ ಧರಣಿ ಸತ್ಯಾಗ್ರಹ ಕೈಗೊಂಡಿದ್ದೇವೆ. ಶಿಗ್ಗಾಂವಿಯ ರಾಣಿ ಚನ್ನಮ್ಮ ಸರ್ಕಲ್‌ಯಿಂದ ಬೆಳಗ್ಗೆ 10 ಗಂಟೆಗೆ ಸಿಎಂ ನಿವಾಸದವರೆಗೂ ಬೃಹತ್ ಪಾದಯಾತ್ರೆ ನಡೆಸಲಾಗುತ್ತದೆ. ಧರಣಿ ಬಳಿಕ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಧರಣಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ, ಅರವಿಂದ ಬೆಲ್ಲದ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿನಯ್ ಕುಲಕರ್ಣಿ ಸೇರಿ ಸಾವಿರಾರು ಜನ ಸೇರುವ ನೀರಿಕ್ಷೆ ಇದೆ.
ಇದನ್ನೂ ಓದಿ | National Youth Festival | ಡಿಜಿಟಲ್ ಪೇಮೆಂಟ್ ಅಸಾಧ್ಯ ಎಂದರು; ಈಗ ನಾವೇ ನಂ.1: ಎದುರಾಳಿಗಳಿಗೆ ಮೋದಿ ತಿರುಗೇಟು