ಮಂಗಳೂರು: ಜಿಲ್ಲೆಯ ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ 15 ದಿನಗಳೊಳಗೆ ಅನುಮತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚಿಸಿದ್ದಾರೆ.
ಶಬ್ದ ಮಾಲಿನ್ಯ ನಿಯಂತ್ರಣ ನಿಯಮ-2000 ಹಾಗೂ ಪರಿಸರ ರಕ್ಷಣೆ ಕಾಯ್ದೆ-1996 ಅನ್ವಯ ಧ್ವನಿ ಉತ್ಪಾದಿಸುವ ಉಪಕರಣಗಳಿಂದ ಆಗುತ್ತಿರುವ ಶಬ್ದ ಮಾಲಿನ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗಿದೆ. ಶಬ್ದದ ಪ್ರಮಾಣ ಮಿತಿಮೀರದಂತೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯಲು ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಅಧಿಕೃತ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಇರುವವರು ಸ್ವಯಂಪ್ರೇರಣೆಯಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು. ಯಾವುದೇ ಕಾರ್ಯಕ್ರಮ ಅಥವಾ ಧಾರ್ಮಿಕ ಸ್ಥಳಗಳಲ್ಲಿ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಧ್ವನಿವರ್ಧಕ ಬಳಕೆ ಮಾಡಬೇಕು. ಧ್ವನಿವರ್ಧಕ ಬಳಕೆಗೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಮಾಹಿತಿ ನೀಡಿದ್ದಾರೆ.