Site icon Vistara News

Paragliding accident | ಪ್ಯಾರಾ ಗ್ಲೈಡರ್ ಅಪಘಾತ; ಅಪಾಯದಿಂದ ಇಬ್ಬರು ಪಾರು

Paragliding accident

ಕೊಡಗು: ಜಿಲ್ಲೆ ಪೊನ್ನಂಪೇಟೆ ತಾಲೂಕಿ ನಿಟ್ಟೂರು ಗ್ರಾಮದ ಬಳಿ ನಿಯಂತ್ರಣ ತಪ್ಪಿ ಪ್ಯಾರಾ ಗ್ಲೈಡರ್ ರಸ್ತೆಗೆ ಅಪ್ಪಳಿಸಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂಜಿನ್‌ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಏಕಾಏಕಿ ಪ್ಯಾರಾ ಗ್ಲೈಡರ್ ಭೂಸ್ಪರ್ಶ ಮಾಡಿದೆ. ಇದರಿಂದ ಸಣ್ಣ ಪುಟ್ಟ ಗಾಯಗಳೊಂದಿಗೆ ಇಬ್ಬರು ಪಾರಾಗಿದ್ದಾರೆ. ನಿಟ್ಟೂರು ಗ್ರಾಮದ ಲಕ್ಷ್ಮಣ ತೀರ್ಥ ನದಿ ಸೇತುವೆ ಬಳಿ ಅಪಘಾತ ನಡೆದಿದೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುತ್ತಣ್ಣ ಎಂಬುವವರ 2 ಸೀಟರ್ ಗ್ಲೈಡರ್ ಅಪಘಾತಕ್ಕೀಡಾಗಿದೆ.

ಇದನ್ನೂ ಓದಿ | Road Accident | ಟಿಪ್ಪರ್-ಆಟೋ ಮುಖಾಮುಖಿ ಡಿಕ್ಕಿಯಾಗಿ 3 ವರ್ಷದ ಬಾಲಕಿ ಸಾವು, ನಾಲ್ವರ ಸ್ಥಿತಿ ಗಂಭೀರ

Exit mobile version