ಶಿರಸಿ: ಪರಿವಾರ ಸಹಕಾರಿ ಸಂಘ ನಿಯಮಿತ (ಶಿರಸಿ) ಇದರ ಉದ್ಘಾಟನಾ ಸಮಾರಂಭ ಮತ್ತು ಹಿರಿಯ ಸಹಕಾರಿಗಳಿಗೆ ಸನ್ಮಾನ ಕಾರ್ಯಕ್ರಮವು ಅಕ್ಟೋಬರ್ 23ರಂದು ಸಂಜೆ 6.15 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ʻಪರಿವಾರ ಸಹಕಾರಿ ಷೇರು ಸರ್ಟಿಫಿಕೇಟ್ʼ ಬಿಡುಗಡೆಗೊಳಿಸಲಿದ್ದಾರೆ. ಕಾರ್ಮಿಕ ಸಚಿವ ಹಾಗೂ ಶಿರಸಿ ಕೆನರಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅರಬೈಲ್ ಶಿವರಾಮ್ ಹೆಬ್ಬಾರ್ ʻಪರಿವಾರ ವಿಶೇಷ ಠೇವಣಿ ಸರ್ಟಿಫಿಕೇಟ್ʼ ಬಿಡುಗಡೆ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನೂ ಓದಿ | NCF | 3-6 ವರ್ಷದ ಮಕ್ಕಳ ಕಲಿಕೆಗೆ ಪಠ್ಯಪುಸ್ತಕ ಅಗತ್ಯವಿಲ್ಲ; ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನಲ್ಲಿ ಉಲ್ಲೇಖ
ಮುಖ್ಯ ಅತಿಥಿಗಳಾಗಿ ಶಿರಸಿ ಕೆನರಾ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯಕ, ಕಾರವಾರ ಸಹಕಾರಿ ಸಂಘಗಳ ಉಪನಿಬಂಧಕ ಮಂಜುನಾಥ.ಆರ್, ಬೆಂಗಳೂರಿನ ಮೆಗಾಲೈಟ್ ಇಂಡಸ್ಟ್ರೀಸ್ ಹಾಗೂ ವಿಸ್ತಾರ ಮೀಡಿಯ ಪ್ರೈವೇಟ್ ಲಿಮಿಟೆಡ್ ಚೇರ್ಮನ್ ಹಾಗೂ ಸಂಘದ ಉಪಾಧ್ಯಕ್ಷ ಎಚ್.ವಿ.ಧರ್ಮೇಶ್, ವಿಸ್ತಾರ ಮೀಡಿಯಾದ ಪ್ರಧಾನ ಸಂಪಾದಕ ಮತ್ತು ಸಿಇಒ ಹಾಗೂ ಸಂಘದ ನಿರ್ದೇಶಕ ಹರಿಪ್ರಕಾಶ್ ಕೋಣೆಮನೆ, ಸಂಘದ ಮುಖ್ಯ ಕಾರ್ಯನಿರ್ವಾಹಕ ಪ್ರಶಾಂತ್ ಕೆ.ಎಸ್ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಶಿರಸಿ ಟಿಎಪಿಸಿಎಂಎಸ್ ಅಧ್ಯಕ್ಷ ಜಿ.ಎಂ. ಹೆಗಡೆ ಹುಳಗೋಳ, ಸಿದ್ದಾಪುರ ಟಿಎಪಿಸಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಯಲ್ಲಾಪುರ ಟಿಎಪಿಸಿಎಂಸಿಸಿ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ ಅವರನ್ನು ಸನ್ಮಾನಿಸಲಾಗುತ್ತದೆ. ಸಂಜೆ 8 ಗಂಟೆಗೆ ಸತ್ಕಾರ ಕೂಟವನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ | Kempe gowda | 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಕನ್ನಡಿಗರ ಸ್ವಾಭಿಮಾನದ ಸಂಕೇತ ಎಂದ ಸಿಎಂ