ಬೆಂಗಳೂರು: ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ (Parking Restrictions) ಮಾಡುತ್ತಿದ್ದವರಿಗೆ ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ಶಾಕ್ ನೀಡಿದೆ. ಫ್ರೀಡಂ ಪಾರ್ಕ್‌ನಲ್ಲಿ ಸ್ಮಾರ್ಟ್ ಪಾರ್ಕಿಂಗ್ ಕಾಂಪ್ಲೆಕ್ಸ್ ಉದ್ಘಾಟನೆಯಾದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಗಾಂಧಿನಗರ, ಆನಂದ್ ರಾವ್ ಸರ್ಕಲ್ ಸುತ್ತಮುತ್ತ ಪಾರ್ಕಿಂಗ್ ನಿಷೇಧಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದರೆ ಭಾರಿ ದಂಡ ವಿಧಿಸುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.
ಉಪ್ಪಾರಪೇಟೆ ಸಂಚಾರ ಠಾಣೆ ವ್ಯಾಪ್ತಿಗೆ ಸಂಬಂಧಿಸಿ ವಿವಿಧ ರಸ್ತೆಗಳಿಗೆ ಹೊರಡಿಸಿರುವ ವಾಹನ ನಿಲುಗಡೆ ನಿಷೇಧ ಪ್ರದೇಶಗಳನ್ನು ಮಾರ್ಪಡಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಆದೇಶ ಸಂಬಂಧ ಅಗತ್ಯ ಸೂಚನಾ ಫಲಕ ಅಳವಡಿಕೆ ಹಾಗೂ ಇತ್ಯಾದಿ ಕ್ರಮಕ್ಕೆ ಅವರು ಸೂಚನೆ ನೀಡಿದ್ದು, ಯಾವ ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ ಹಾಗೂ ಯಾವ ಸ್ಥಳಗಳಲ್ಲಿ ವಾಹನ ನಿಲ್ಲಿಸಬಹುದು ಎಂಬ ವಿವರ ಇಲ್ಲಿದೆ.
ವಾಹನ ನಿಲುಗಡೆ ನಿಷೇಧ ರಸ್ತೆಗಳು
ಇದನ್ನೂ ಓದಿ | Job Recruitment: ಮೈಸೂರು ಮಹಾನಗರ ಪಾಲಿಕೆ; ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ