Peenya ITI Convocation | 120 ಐಟಿಐಗಳ ಉನ್ನತೀಕರಣ, ಪಿಯುಸಿಗೆ ತತ್ಸಮಾನ ಪರಿಗಣನೆ - Vistara News

ಕರ್ನಾಟಕ

Peenya ITI Convocation | 120 ಐಟಿಐಗಳ ಉನ್ನತೀಕರಣ, ಪಿಯುಸಿಗೆ ತತ್ಸಮಾನ ಪರಿಗಣನೆ

ಐಟಿಐಯನ್ನು ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲಾಗುವುದು ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಜ್ಯದ 120 ಐಟಿಐಗಳನ್ನು ಉನ್ನತೀಕರಣಗೊಳಿಸಲಾಗುವುದು ಎಂದೂ ಹೇಳಿದರು.

VISTARANEWS.COM


on

ITI Ashwatha narayana
ಪೀಣ್ಯ ಐಟಿಐನಲ್ಲಿ ಶನಿವಾರ ನಡೆದ ಪ್ರಥಮ ಘಟಿಕೋತ್ಸವದಲ್ಲಿ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಭಾಗವಹಿಸಿದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯುವಜನರಿಗೆ ಗುಣಮಟ್ಟದ ಶಿಕ್ಣಣ ಮತ್ತು ಕೌಶಲಗಳನ್ನು ಕಲಿಸಿದರೆ ಮತ್ತು ಸದೃಢ ಹಾಗೂ ಸ್ವಾವಲಂಬಿ ಭಾರತವನ್ನು ಕಟ್ಟಲು ಸಾಧ್ಯವಾಗುತ್ತದೆ. ಇದಕ್ಕಾಗಿ ಬಾಕಿ ಉಳಿದಿರುವ 120 ಸರಕಾರಿ ಐಟಿಐಗಳನ್ನು ಉನ್ನತೀಕರಿಸಲಾಗುವುದು ಮತ್ತು ಈ ವರ್ಷ ನೂತನವಾಗಿ 30 ಐಟಿಐಗಳನ್ನು ಸ್ಥಾಪಿಸಲಾಗುವುದು ಎಂದು ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಪೀಣ್ಯದಲ್ಲಿರುವ ಸರಕಾರಿ ಐಟಿಐನಲ್ಲಿ ಶನಿವಾರ ಏರ್ಪಡಿಸಿದ್ದ ಬೆಂಗಳೂರು ನಗರ ಜಿಲ್ಲಾ ಮಟ್ಟದ ಪ್ರಪ್ರಥಮ ಐಟಿಐ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅವರು 2021-22ರ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಪ್ರದಾನ ಮಾಡಿದರು.

ಸರಕಾರವು ಐಟಿಐ ಶಿಕ್ಷಣವನ್ನು ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲಾಗುವುದು. ಜತೆಗೆ, ಇಂಗ್ಲಿಷ್ ಭಾಷೆಯ ಕಲಿಕೆಯನ್ನು ಇದರ ಭಾಗವಾಗಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಟಾಟಾ ಸಮೂಹದ ನೆರವಿನಲ್ಲಿ ಈಗಾಗಲೇ 150 ಸರಕಾರಿ ಐಟಿಐಗಳನ್ನು ಅಭಿವೃದ್ಧಿ ಪಡಿಸಿ, ಹೊಸ ಕೋರ್ಸುಗಳನ್ನು ಆರಂಭಿಸಲಾಗಿದೆ. ಇದಕ್ಕಾಗಿ 4,500 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಅವರು ನುಡಿದರು.

ಜಪಾನ್, ಚೀನಾ ತರಹದ ದೇಶಗಳು ಉತ್ಪಾದನಾ ವಲಯದಲ್ಲಿ ಸಾಕಷ್ಟು ಸಾಧಿಸಿವೆ. ಭಾರತ ಮತ್ತು ಕರ್ನಾಟಕ ಕೂಡ ಸೇವಾ ವಲಯದ ಜತೆಗೆ ಉತ್ಪಾದನಾ ರಂಗದಲ್ಲಿ ಮುಂಚೂಣಿಗೆ ಬರಬೇಕು. ಇದರಲ್ಲಿ ಐಟಿಐ ಪದವೀಧರರ ಪಾತ್ರವು ನಿರ್ಣಾಯಕವಾಗಿದೆ ಎಂದು ಅವರು ಸಲಹೆ ನೀಡಿದರು.

ಸಮಾಜದಲ್ಲಿ ಎಲ್ಲೆಡೆ ಕೇವಲ ಪದವಿ ಶಿಕ್ಷಣದ ಮೋಹವಿದೆ. ಆದರೆ ಇವತ್ತು ಕೌಶಲ್ಯಗಳಿಗೆ ಮಹತ್ತ್ವ ಬಂದಿದೆ. ಇದನ್ನು ಯುವಜನರು ಅರ್ಥ ಮಾಡಿಕೊಂಡು ಮುನ್ನುಗ್ಗಬೇಕು. ಇದರಿಂದ ಕನಸಿನ ಉದ್ಯೋಗ ಪಡೆಯುವುದು ಸುಲಭವಾಗುತ್ತದೆ ಎಂದು ಅವರು ಕಿವಿಮಾತು ಹೇಳಿದರು.

ಪ್ರಧಾನಿ ಮೋದಿಯವರು ವಿಶ್ವಕರ್ಮ ಸಮುದಾಯದ ಕೌಶಲ್ಯವನ್ನು ಗೌರವಿಸಿ, ‘ವಿಶ್ವಕರ್ಮ ದಿನ’ದಂದೇ ದೇಶದಲ್ಲಿ ಇರುವ ಎಲ್ಲಾ 14 ಸಾವಿರ ಐಟಿಐಗಳಲ್ಲಿ ಘಟಿಕೋತ್ಸವ ಆಚರಿಸುವ ಸಂಪ್ರದಾಯ ಆರಂಭಿಸಿದ್ದಾರೆ ಎಂದು ಸಚಿವರು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಕೌಶಲಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತೆ ಕೆ. ಜ್ಯೋತಿ, ಐಎಸ್‌ಡಿಎಸ್ ಪ್ರಾಂತೀಯ ನಿರ್ದೇಶಕ ಬಿ.ಎನ್ ಶ್ರೀಧರ್ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಲಬುರಗಿ

Prajwal Revanna Case: ಗಾಣಗಾಪುರಕ್ಕೆ ಎಚ್‌ಡಿ ರೇವಣ್ಣ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ

Prajwal Revanna Case: ಷ್ಟಗಳನ್ನು ನಿವಾರಣೆ ಮಾಡುವಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರಕ್ಕೆ ಭೇಟಿ ನೀಡಿದ್ದು, ದತ್ತಾತ್ರೇಯನ ದರ್ಶನ ಪಡೆದಿದ್ದಾರೆ. ಒಂದು ಗಂಟೆಗಳ ಕಾಲ ದತ್ತಾತ್ರೇಯ ದೇವಸ್ಥಾನದಲ್ಲಿ ರೇವಣ್ಣ ಪೂಜೆ ಸಲ್ಲಿಸಿದ್ದಾರೆ. ಎಚ್‌ಡಿ ರೇವಣ್ಣ ಅವರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಸತ್ಕಾರ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ಗಾಣಗಾಪುರಕ್ಕೆ ಆಗಮಿಸಿ ದತ್ತನ ದರ್ಶನವನ್ನು ರೇವಣ್ಣ ಪಡೆದಿದ್ದರು.

VISTARANEWS.COM


on

Prajwal Revanna Case HD Revanna visit to Gangapur and special pooja to Dattatreya
Koo

ಕಲಬುರಗಿ: ಪ್ರಜ್ವಲ್‌ ರೇವಣ್ಣ ಮೇಲಿನ ಅತ್ಯಾಚಾಋ ಪ್ರಕರಣಕ್ಕೆ (Prajwal Revanna Case) ಸಂಬಂಧಪಟ್ಟಂತೆ ಬಂದಿರುವ ಸಂಕಷ್ಟಗಳನ್ನು ನಿವಾರಣೆ ಮಾಡುವಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರಕ್ಕೆ ಭೇಟಿ ನೀಡಿದ್ದು, ದತ್ತಾತ್ರೇಯನ ದರ್ಶನ ಪಡೆದಿದ್ದಾರೆ.

ದೇವಸ್ಥಾನದಲ್ಲಿ ದತ್ತನ ನಿರ್ಗುಣ ಪಾದುಕೆಗಳಿಗೆ ಎಚ್.ಡಿ. ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸುವ ಸಲುವಾಗಿ ರೇವಣ್ಣ ಅವರು ತಮ್ಮ ಜತೆಯಲ್ಲಿಯೇ ಪುರೋಹಿತರನ್ನು ಕರೆದುಕೊಂಡು ಬಂದಿರುವುದು ವಿಶೇಷವಾಗಿತ್ತು.

Prajwal Revanna Case HD Revanna visit to Gangapur and special pooja to Dattatreya

ಒಂದು ಗಂಟೆಗಳ ಕಾಲ ದತ್ತಾತ್ರೇಯ ದೇವಸ್ಥಾನದಲ್ಲಿ ರೇವಣ್ಣ ಪೂಜೆ ಸಲ್ಲಿಸಿದ್ದಾರೆ. ಎಚ್‌ಡಿ ರೇವಣ್ಣ ಅವರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಸತ್ಕಾರ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ಗಾಣಗಾಪುರಕ್ಕೆ ಆಗಮಿಸಿ ದತ್ತನ ದರ್ಶನವನ್ನು ರೇವಣ್ಣ ಪಡೆದಿದ್ದರು.

Prajwal Revanna Case HD Revanna visit to Gangapur and special pooja to Dattatreya

ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ರಾಜತಾಂತ್ರಿಕ ಸಮರ ಸಾರಿದೆ. ಪ್ರಜ್ವಲ್‌ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಇಕ್ಕಟ್ಟಿಗೆ ಸಿಲುಕಿದ್ದು, ಬಂಧನ ಬಹುತೇಕ ಖಚಿತ ಎಂದೇ ಹೇಳಲಾಗಿದೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆಯನ್ನು ಶುರು ಮಾಡಿದೆ. ಕಾರಣ, ಈಗಾಗಲೇ ಅರೆಸ್ಟ್ ವಾರೆಂಟ್, ಸಮೇತ ಪತ್ರ ಎಸ್‌ಐಟಿ ಬರೆದಿದೆ.

ಹೇಗೆ ರದ್ದಾಗುತ್ತದೆ ಪ್ರಜ್ವಲ್ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.

ಪಾಸ್‌ಪೋರ್ಟ್‌ ರದ್ದಾದರೆ ಮುಂದೇನು?

ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರುವ ಸಾಧ್ಯತೆ ಇದೆ.

ಪಾಸ್‌ಪೋರ್ಟ್ ರದ್ದಾದರೆ ಪ್ರಜ್ವಲ್‌ ಕರೆತರುವುದು ಹೇಗೆ?

ಒಂದು ವೇಳೆ ಪಾಸ್‌ಪೋರ್ಟ್‌ ರದ್ದು ಮಾಡಿದರೆ, ಎರಡು ವಿಧಾನಗಳಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಬಹುದು. ಪ್ರಜ್ವಲ್‌ ಯಾವ ದೇಶದಲ್ಲಿದ್ದಾರೋ ಅಲ್ಲಿ ಅವರನ್ನು ಹಸ್ತಾಂತರ ಪ್ರಕ್ರಿಯೆ (Extradition) ಅಡಿ ವಾಪಸ್‌ ಕರೆತರಬಹುದಾಗಿದೆ. ಆದರೆ, ಆ ದೇಶದ ನಡುವೆ ಭಾರತವು ಈ ಮೊದಲು ಒಪ್ಪಂದ ಮಾಡಿಕೊಂಡಿರಬೇಕು. ಇಲ್ಲವಾದಲ್ಲಿ, ಗಡಿಪಾರು ಪ್ರಕ್ರಿಯೆ (Deportation) ಮೂಲಕವೂ ಪ್ರಜ್ವಲ್‌ ಅವರನ್ನು ಕರೆತರಬಹುದು.

ಹಸ್ತಾಂತರ, ಗಡಿಪಾರು ಪ್ರಕ್ರಿಯೆಗಳು ಹೇಗೆ ನಡೆಯುತ್ತವೆ?

  1. ಆರೋಪಿ ಮೊದಲು ಯಾವ ದೇಶದಲ್ಲಿ ಇದ್ದಾನೆ ಎನ್ನುವುದರ ಮಾಹಿತಿಯನ್ನು ಸಂಗ್ರಹಿಸಬೇಕು
  2. ನಂತರ ಆ ದೇಶದೊಟ್ಟಿಗೆ MLAT ( mutual legal assistance treaty) ಪ್ರಕ್ರಿಯೆಯನ್ನು ಆರಂಭ ಮಾಡಬೇಕು
  3. ಅದಾದ ಬಳಿಕ ದೇಶಕ್ಕೆ ಸಂಬಂಧಪಟ್ಟ ಪ್ರಕರಣದ ಮಾಹಿತಿಯನ್ನು ಒದಗಿಸಬೇಕು
  4. ಆಗ ಆ ದೇಶವು ಆರೋಪಿಯನ್ನು ಬಂಧನ ಮಾಡಿ ಇಲ್ಲಿಯ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡುತ್ತದೆ
  5. ಆಗ ಹಸ್ತಾಂತರ ಪ್ರಕ್ರಿಯೆ ಮುಖಾಂತರವಾದರೆ ಇಲ್ಲಿಯ ತನಿಖಾಧಿಕಾರಿಗಳ ತಂಡ ಅಲ್ಲಿ ಬಂಧನವಾದ ವ್ಯಕ್ತಿಯನ್ನು ತಮ್ಮ ವಶಕ್ಕೆ ಹಸ್ತಾಂತರ ಮಾಡಿಕೊಳ್ಳಬೇಕು
  6. ಇದಕ್ಕಾಗಿ ಇಲ್ಲಿಯ ಪ್ರಕರಣದ ಕಡತವನ್ನು ಸಂಬಂಧಪಟ್ಟ ದೇಶದ ಭಾಷೆಗೆ ತರ್ಜುಮೆ‌ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿ ಅನುಮತಿ ಪಡೆಯಬೇಕು
  7. ಗಡಿಪಾರು ಪ್ರಕ್ರಿಯೆಗೊಳಪಡುವುದಾದರೆ, ಇದರಲ್ಲಿ ಆ ದೇಶವೇ ಇಲ್ಲಿಯ ಪ್ರಕರಣದ ಮಾಹಿತಿಯನ್ನು ಅಲ್ಲಿಯ ನ್ಯಾಯಾಲಯಕ್ಕೆ ನೀಡಿ ಗಡಿಪಾರು ಮಾಡಲು ಅನುಮತಿ ಪಡೆಯುತ್ತದೆ
  8. ನಂತರ ಇಲ್ಲಿಯ ವಿದೇಶಾಂಗ ಇಲಾಖೆಗೆ ಆ ದೇಶ ಮಾಹಿತಿ ನೀಡಿ ನಿರ್ದಿಷ್ಟ ವಿಮಾನದಲ್ಲಿ ಆರೋಪಿಯನ್ನು ಕಳಿಸಿಕೊಡುತ್ತದೆ

ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಭಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆ್ಯಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಅರೆಸ್ಟ್‌ ವಾರಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮುಜುಗರ, ಇಕ್ಕಟ್ಟಿಗೆ ಸಿಲುಕಿಸಲು ಪತ್ರ?

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

Continue Reading

ವಿಜಯನಗರ

Ration Card : ಸಾವಿನ ಎಡವಟ್ಟು ಸರಿಪಡಿಸಿದ ಆಹಾರ ಇಲಾಖೆ! ಮನೆ ಬಾಗಿಲಿಗೆ ಬಂತು ರೇಷನ್‌ ಕಾರ್ಡ್‌; ಇದು ವಿಸ್ತಾರ ನ್ಯೂಸ್‌ ಇಂಪ್ಯಾಕ್ಟ್‌

Ration Card : ಜೀವಂತ ಇದ್ದ ಮಹಿಳೆಯನ್ನು ಸತ್ತಿದ್ದಾಗಿ ತಿಳಿದ ಆಹಾರ ಇಲಾಖೆ ಅಧಿಕಾರಿಗಳು ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌ ಮಾಡಿದ್ದರು. ಇದರಿಂದ ನೊಂದಿದ್ದ ಮಹಿಳೆ ಕಣ್ಣೀರು ಹಾಕಿದ್ದರು. ಈ ಸಂಬಂಧ ವಿಸ್ತಾರ ನ್ಯೂಸ್‌ (Vistara news Impact) ಸುದ್ದಿ ಪ್ರಸಾರ ಮಾಡಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಕಡು ಬಡತನ ಕುಟುಂಬಕ್ಕೆ ಹೊಸ ಪಡಿತರ ಚೀಟಿಯನ್ನು ಮನೆ ಬಾಗಿಲಿಗೆ ತಂದು ಕೊಟ್ಟಿದೆ.

VISTARANEWS.COM


on

By

Ration Card Officials who gave new ration card to poor Family
ಅಂಜಿನಮ್ಮ ಕುಟುಂಬದ ಕೈ ಸೇರಿದ ಹೊಸ ರೇಷನ್‌ ಕಾರ್ಡ್‌
Koo

ವಿಜಯನಗರ: ಜೀವಂತವಾಗಿರುವ ತಾಯಿ-ಮಗನನ್ನು ಸತ್ತಿದ್ದಾಗಿ ಘೋಷಿಸಿ, ಇಬ್ಬರನ್ನೂ ಪಡಿತರ ಚೀಟಿ (BPL Card) ಹೆಸರಿನಿಂದ ಆಹಾರ ಇಲಾಖೆಯು (Food Department) ಡಿಲೀಟ್ ಮಾಡಿತ್ತು. ವಿಜಯನಗರ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ (ration card) ಎಡವಟ್ಟಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದೀಗ ವಿಸ್ತಾರ ನ್ಯೂಸ್ ವರದಿಯ ಪರಿಣಾಮ ಬಡ ಕುಟುಂಬಕ್ಕೆ ನಾಲ್ಕೇ ದಿನದಲ್ಲಿ ಮನೆ ಬಾಗಿಲಿಗೆ ಪಡಿತರ ಚೀಟಿ ಬಂದಿದೆ.

ಅಂಜೀನಮ್ಮ ಮತ್ತು ಅವರ ಪುತ್ರ ಅಜಯ್ ಬದುಕಿದ್ದರೂ 2019ರಲ್ಲೇ ಸತ್ತಿದ್ದಾರೆ ಎಂದು ಬಿಪಿಎಲ್‌ ಕಾರ್ಡ್‌ನಿಂದ ಹೆಸರು ಡಿಲೀಟ್‌ ಮಾಡಲಾಗಿತ್ತು. ಕಳೆದ ಐದು ವರ್ಷದಿಂದ ಪಡಿತರದಿಂದ ಬಡ ಕುಟುಂಬವೊಂದು ವಂಚಿತವಾಗಿತ್ತು. ಆಹಾರ ಇಲಾಖೆ ಎಡವಟ್ಟಿನಿಂದ ಪಡಬಾರದ ಕಷ್ಟ ಪಡುತ್ತಿರುವ ಕುಟಂಬ ತಿಂಗಳ ಪಡಿತರಕ್ಕೂ ಅಲೆಯುತ್ತಿತ್ತು.

ಕೂಡ್ಲಿಗಿ ತಾಲೂಕಿನ ಅಂಜಿನಮ್ಮ ತೀರಾ ಕಡು ಬಡವರಾಗಿದ್ದು, ಆಹಾರ ಇಲಾಖೆಯ ಕೆಲಸಕ್ಕೆ ಇತರೇ ಸೌಕರ್ಯಗಳಿಂದ ವಂಚಿತರಾಗಿದ್ದರು. ರೇಷನ್ ಕಾರ್ಡ್ ಇಲ್ಲದೇ ಇರುವುದರಿಂದ ಗೃಹ ಲಕ್ಷ್ಮೀ ಯೋಜನೆಯ ಲಾಭವೂ ಅಂಜಿನಮ್ಮಗೆ ಸಿಕ್ಕಿರಲಿಲ್ಲ. ಇತ್ತ ನ್ಯಾಯಕ್ಕಾಗಿ ಅಂಜಿನಮ್ಮ ಕುಟುಂಬ ನಿತ್ಯ ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗೆ ಅಲೆದು ಸುಸ್ತಾಗಿದ್ದರು.

ಅಂಜಿನಮ್ಮ ಪಡುತ್ತಿರುವ ಸಮಸ್ಯೆಯನ್ನು ಮನಗಂಡು ವಿಸ್ತಾರ ನ್ಯೂಸ್, ಆಹಾರ ಇಲಾಖೆ ಯಡವಟ್ಟು, ಐದು ವರ್ಷದಿಂದ ಬಡ ಮಹಿಳೆ ಅಂಜೀನಮ್ಮ ಇದ್ದು ಸತ್ತಂತೆ ಬದುಕುತ್ತಿದ್ದಾಳೆ ಎನ್ನುವ ನಾಮಾಂಕಿತದಡಿ ವರದಿಯನ್ನು ಪ್ರಸಾರ ಮಾಡಿತ್ತು. ವಿಸ್ತಾರ ನ್ಯೂಸ್ ವರದಿ ಪ್ರಸಾರದ ಬಳಿಕ ಖುದ್ದು ಆಹಾರ ಇಲಾಖೆ ಅಧಿಕಾರಿಗಳು ಕೂಡ್ಲಿಗಿ ತಾಲೂಕಿನ 10ನೇ ವಾರ್ಡ್‌ನಲ್ಲಿ ವಾಸ ಮಾಡುತ್ತಿದ್ದ ಅಂಜೀನಮ್ಮ ಮನೆಗೆ ತೆರಳಿ ವಾಸ್ತವ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ನಾಲ್ಕು ದಿನದಲ್ಲೇ ಹೊಸ ಪಡಿತರ ಚೀಟಿಯನ್ನು ಅಂಜೀನಮ್ಮಗೆ ನೀಡಿದ್ದಾರೆ.

ಇದನ್ನೂ ಓದಿ: Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿಸ್ತಾರ ನ್ಯೂಸ್‌ ಕಾರ್ಯಕ್ಕೆ ನಗು ಬೀರಿದ ಅಂಜೀನಮ್ಮ

ಇನ್ನೂ ಆಹಾರ ಇಲಾಖೆ ಯಡವಟ್ಟಿನಿಂದ ಅಂಜೀನಮ್ಮ, ಪುತ್ರ ಅಜ್ಜಯ್ಯ ಜೀವಂತ ಇದ್ದರೂ ಕಳೆದ ಐದು ವರ್ಷದಿಂದ ಸತ್ತಂತೆ ಬದುಕುತ್ತಿದ್ದರು. ಐದು ವರ್ಷದಿಂದ ಪಡಿತರವೂ ಇಲ್ಲ, ಅತ್ತ ಗೃಹ ಲಕ್ಷ್ಮೀ ಯೋಜನೆಯ ಲಾಭವೂ ಇಲ್ಲದಂತಾಗಿತ್ತು. ಜತೆಗೆ ಪಡಿತರ ಇಲ್ಲದಿರುವ ಕಾರಣ ಇತರೇ ಸೌಲಭ್ಯದಿಂದಲೂ ಅಂಜೀನಮ್ಮ ವಂಚಿತರಾಗಿದ್ದರು.

ಕಷ್ಟದಲ್ಲಿ ಇದ್ದ ಅಂಜೀನಮ್ಮಗೆ ಸಹಾಯ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ವಿಸ್ತಾರ ಟಿವಿಯಲ್ಲಿ ವರದಿ ಪ್ರಸಾರ ಆಗಿದ್ದಕ್ಕೆ ಅಧಿಕಾರಿಗಳು ನಮ್ಮ ಮನೆಗೆ ಬಂದು ಮಾತಾಡಿಸಿದ್ದಾರೆ. ಜತೆಗೆ ನನಗೆ ಪಡಿತರ ಚೀಟಿ ಕೊಟ್ಟಿದ್ದಾರೆ. ಹೀಗಾಗಿ ವಿಸ್ತಾರ ಟಿವಿಯವರಿಗೆ ಧನ್ಯವಾದ ಎಂದು ನಗು ಮುಖ ಬೀರಿದರು. ನೊಂದವರ ಧ್ವನಿಯಾಗಿ ನಿಖರ – ಜನಪರ ಕೆಲಸ ಮಾಡುತ್ತಿರುವ ವಿಸ್ತಾರ ನ್ಯೂಸ್‌ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CM Siddaramaiah: ಕಾಲರಾ ಕಂಡು ಬಂದರೆ ಅಧಿಕಾರಿಗಳು ಸಸ್ಪೆಂಡ್‌; ಸಿಎಂ ಖಡಕ್‌ ವಾರ್ನಿಂಗ್

CM Siddaramaiah: ರಾಜ್ಯದಲ್ಲಿ ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿದರು.

VISTARANEWS.COM


on

cm siddaramaiah meet
Koo

ಬೆಂಗಳೂರು: ಕುಡಿಯುವ ನೀರಿನಿಂದಾಗಿ ಕಾಲರಾ (cholera) ಉಂಟಾದರೆ ಅದಕ್ಕೆ ಕಾರಣರಾದ ಎಂಜಿನಿಯರ್‌ಗಳನ್ನು ಹಾಗೂ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಿಡಿಯೋ ಸಂವಾದ ನಡೆಸಿದರು.

ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು. ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆಯಾದರೆ, ಡಿಸಿಗಳೇ ನೇರ ಹೊಣೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು.

ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ತಾಕೀತು ಮಾಡಿದರು.

ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ರೈತರಿಗೆ ಸಾಲದ ಲಭ್ಯತೆ

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್‌ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ. ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ಫೆಬ್ರುವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್‌ ಕೊನೆಯ ವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ ಎಂದರು.

500ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಅಭಿವೃದ್ಧಿ ಕಡೆ ಹೆಚ್ಚು ಗಮನ ಹರಿಸಲು ಸಿಎಂ ಸೂಚಿಸಿದರು.

ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್‌, ಕೆ.ಹೆಚ್.‌ ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ ಎಸ್.‌ ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: CM Siddaramaiah : ನನ್ನ ಸರ್ಕಾರದ ತಪ್ಪುಗಳಿದ್ದರೆ ಬರೆಯಿರಿ, ಕಾಗೆ ಸುದ್ದಿ ಬೇಡ: ಮಾಧ್ಯಮಕ್ಕೆ ಸಿಎಂ ಕರೆ

Continue Reading

ಚಿಕ್ಕೋಡಿ

Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Self Harming : ಮದುವೆಗೆ ಹುಡುಗಿ ಸಿಗುತ್ತಿಲ್ಲ ಎಂದು ಮನನೊಂದ ಯುವಕನೊಬ್ಬ, ಇದೇ ಬೇಸರದಲ್ಲಿ ತನ್ನ ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

By

Self Harming
Koo

ಚಿಕ್ಕೋಡಿ: ಮದುವೆಗೆ ವಿಳಂಬ ಆಗಿದ್ದ ಮನನೊಂದ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಘಟನೆ ನಡೆದಿದೆ. ಶಾಂತಿನಾಥ ಸುರೇಶ ಕೇಸ್ತಿ (27) ಆತ್ಮಹತ್ಯೆ ಮಾಡಿಕೊಂಡವನು.

ಹುಕ್ಕೇರಿ ಪಟ್ಟಣದಲ್ಲಿ ಸ್ವಂತ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಶಾಂತಿನಾಥ ಸುರೇಶ್‌ ಕೇಸ್ತಿ, ಸಾಲದ ಸುಳಿಗೆ ಸಿಲುಕಿದ್ದ. ಜತೆಗೆ ಮದುವೆಗೆ ಹೆಣ್ಣು ಸಿಗದ ಕಾರಣಕ್ಕೆ ಸುರೇಶ್‌ ಮನನೊಂದಿದ್ದ. ಇದೇ ಬೇಸರದಲ್ಲಿ ಗುರುವಾರ ಬೆಳಗ್ಗೆ ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ಯಾರೇಜ್‌ ತೆರಯದೆ ಇದ್ದಾಗ ಅನುಮಾನಗೊಂಡು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ನಡೆಸಲಾಗುತ್ತಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

ಮಧ್ಯಪ್ರದೇಶ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಒಂದೆಡೆ ಒಲಿತನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಹಿಂದೆ ಸಿನಿಮಾಗಳನ್ನು ಮನೋರಂಜನೆಗಾಗಿ, ಸಾಮಾಜಿಕ ಮೌಲ್ಯಗಳ ಅರಿವಿಗಾಗಿ ನೋಡುತ್ತಿದ್ದ ಕಾಲಘಟ್ಟವೊಂದಿತ್ತು. ಆದರೆ ಈಗ ಅದೇ ಸಿನಿಮಾದಿಂದ ಪ್ರೇರಿತರಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಘಟನೆಗಳು ಆಗಾಗ ಕಣ್ಣೆದುರು ಬರುತ್ತಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಮಧ್ಯಪ್ರದೇಶದಲ್ಲಿ 21ವರ್ಷದ ಯುವಕನೋರ್ವ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸೆದು ಕೊಲೆಗೈದು(Physical Abuse & Murder) ಬಳಿಕ ದೃಶ್ಯಂ(Drishyam) ಸಿನಿಮಾ ಶೈಲಿನಲ್ಲಿ ಪೊಲೀಸರಿಂದ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ.

ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಳಿಕ ಉಸಿರುಗಟ್ಟಿಸಿ ಕೊಂದಿದ್ದಾನೆ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವೊಂದನ್ನು ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ದೃಶ್ಯಂ ಶೈಲಿಯಲ್ಲಿ ಎಸ್ಕೇಪ್‌ ಆಗಲು ಪ್ಲ್ಯಾನ್‌

ಬಾಲಕಿಯನ್ನು ಕೊಲೆ ಮಾಡಿದ ಬಳಿಕ ಗೌರವ್‌ ಬಾಲಿವುಡ್‌ ಖ್ಯಾತ ಸಿನಿಮಾ ದೃಶ್ಯಂ ಶೈಲಿಯಲ್ಲೇ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಕೃತ್ಯ ಎಸಗಿದ ನಂತರ ಆತ ನೇರವಾಗಿ ಜಿಮ್‌ಗೆ ಹೋಗಿದ್ದಾನೆ. ಅಲ್ಲಿಂದ ನೇರವಾಗಿ ಒಂದು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದಾನೆ. ಅಲ್ಲಿ ಸುಮಾರು ಹೊತ್ತು ಕಳೆದಿದ್ದಾನೆ. ಹೀಗೆ ಘಟನೆ ವೇಳೆ ತಾನು ಆ ಸ್ಥಳದಲ್ಲೇ ಇರಲಿಲ್ಲ ಎಂಬುದನ್ನು ಪೊಲೀಸರಿಗೆ ನಂಬಿಸುವ ಪ್ರಯತ್ನ ಮಾಡಿದ್ದ. ಮಗುವಿನ ಮೃತ ಸಿಗುತ್ತಿದ್ದಂತೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು ಎಂಬುದು ಸ್ಪಷ್ಟವಾಗಿತ್ತು. ಅನುಮಾನದ ಮೇರೆ ಯುವಕನನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಅದ್ಯ ಗೌರವ್‌ನನ್ನು ಅರೆಸ್ಟ್‌ ಮಾಡಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕಾಯಿದೆಯಲ್ಲಿ ಕೇಸ್‌ ದಾಖಲಿಸಲಾಗಿದೆ.

ಮಹಾರಾಷ್ಟ್ರದಲ್ಲೂ ಎರಡು ದಿನಗಳ ಹಿಂದೆ ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿದ್ದು, 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case HD Revanna visit to Gangapur and special pooja to Dattatreya
ಕಲಬುರಗಿ5 seconds ago

Prajwal Revanna Case: ಗಾಣಗಾಪುರಕ್ಕೆ ಎಚ್‌ಡಿ ರೇವಣ್ಣ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ

Ration Card Officials who gave new ration card to poor Family
ವಿಜಯನಗರ8 mins ago

Ration Card : ಸಾವಿನ ಎಡವಟ್ಟು ಸರಿಪಡಿಸಿದ ಆಹಾರ ಇಲಾಖೆ! ಮನೆ ಬಾಗಿಲಿಗೆ ಬಂತು ರೇಷನ್‌ ಕಾರ್ಡ್‌; ಇದು ವಿಸ್ತಾರ ನ್ಯೂಸ್‌ ಇಂಪ್ಯಾಕ್ಟ್‌

Aadhaar Card Fact Check
ವೈರಲ್ ನ್ಯೂಸ್20 mins ago

Aadhaar Card Fact Check: 10 ವರ್ಷಗಳ ಹಿಂದಿನ ಆಧಾರ್ ಕಾರ್ಡ್‌ ಜೂ. 14ರ ಬಳಿಕ ರದ್ದಾಗುತ್ತದೆಯೆ?

cm siddaramaiah meet
ಪ್ರಮುಖ ಸುದ್ದಿ28 mins ago

CM Siddaramaiah: ಕಾಲರಾ ಕಂಡು ಬಂದರೆ ಅಧಿಕಾರಿಗಳು ಸಸ್ಪೆಂಡ್‌; ಸಿಎಂ ಖಡಕ್‌ ವಾರ್ನಿಂಗ್

Job Alert
ಉದ್ಯೋಗ34 mins ago

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

SRH vs RR
ಕ್ರೀಡೆ41 mins ago

SRH vs RR: ರಾಜಸ್ಥಾನ್​-ಹೈದರಾಬಾದ್​ ಐಪಿಎಲ್​ ದಾಖಲೆ, ಹವಾಮಾನ ವರದಿ ಹೇಗಿದೆ?

Self Harming
ಚಿಕ್ಕೋಡಿ42 mins ago

Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Viral Video
ವೈರಲ್ ನ್ಯೂಸ್51 mins ago

Viral Video: ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

ರಾಜಕೀಯ1 hour ago

Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Weather Report
ದೇಶ1 hour ago

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ9 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌