Site icon Vistara News

Ayodhya Ram Mandir: ಅಯೋಧ್ಯೆಯಲ್ಲಿ 25,000 ಭಕ್ತರ ವಸತಿ ಸಾಮರ್ಥ್ಯದ ಯಾತ್ರಿ ಭವನ ನಿರ್ಮಾಣ: ಪೇಜಾವರ ಶ್ರೀ

pejawar sri says Yatri Bhavan to be constructed in Ayodhya with a capacity to accommodate 25,000 devotees

ಉಡುಪಿ: ಅಯೋಧ್ಯೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾಗಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯದ (Ayodhya Ram Mandir) ಪ್ರಗತಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಬೆಳವಣಿಗೆಗಳ‌ ಕುರಿತು ಮಾಹಿತಿ ನೀಡಿದ ಶ್ರೀಗಳು, ಮಂದಿರ ನಿರ್ಮಾಣ ಕಾರ್ಯ ವೇಗದಿಂದ ನಡೆಯುತ್ತಿದ್ದು, ಪ್ರಸ್ತುತ ಗರ್ಭಗುಡಿಯ ಉಭಾಪೀಠದ ಮೇಲೆ ಸ್ತಂಭಗಳ ಜೋಡಣೆ ಮತ್ತು ಗೋಡೆ ನಿರ್ಮಾಣ ನಡೆಯುತ್ತಿದೆ. ಮುಂದಿನ 10 ದಿನಗಳಲ್ಲಿ ಚಾವಣಿಯ ಶಿಲಾ ಬೀಮ್ ಮತ್ತು ಶಿಲಾ ಹೊದಿಕೆಗಳನ್ನು ಅಳವಡಿಸುವ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಮಂದಿರದ ಲೋಕಾರ್ಪಣೆಯ ವೇಳೆಗೆ ದೇಶದ ವಿವಿಧೆಡೆಯಿಂದ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ 25,000 ಜನರ ವಸತಿ ಸಾಮರ್ಥ್ಯದ ಬೃಹತ್ ಯಾತ್ರಿ ಭವನ ನಿರ್ಮಿಸಲಾಗುತ್ತಿದೆ. ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ಶ್ರೀ ರಾಮ, ಸೀತೆ, ಲಕ್ಷ್ಮಣ ವಿಗ್ರಹಗಳ ನಿರ್ಮಾಣಕ್ಕಾಗಿ ಕರ್ನಾಟಕದ ಹೆಗ್ಗಡೆ ದೇವನ‌ಕೋಟೆ, ಕಾರ್ಕಳ, ತಮಿಳುನಾಡಿನ ಮಹಾಬಲಿಪುರಂ, ರಾಜಸ್ಥಾನ ಹಾಗೂ ನೇಪಾಳಗಳಿಂದ ಶಿಲೆಗಳನ್ನು ತರಲಾಗಿದ್ದು, ಶಿಲ್ಪಿಗಳು ಅವುಗಳ ಪರಿಶೀಲನೆ ನಡೆಸಿ ಉತ್ತಮವಾದವುಗಳನ್ನು ಆಯ್ದುಕೊಂಡು ಪ್ರತಿಮೆಗಳನ್ನು ನಿರ್ಮಿಸಲಿದ್ದಾರೆ ಎಂದು ಶ್ರೀಗಳು ತಿಳಿಸಿದರು.

ಇದನ್ನೂ ಓದಿ | Actor Chetan Ahimsa : ಹಿಂದು ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್‌; ನಟ ಚೇತನ್‌ ಅಹಿಂಸಾ ಅರೆಸ್ಟ್‌

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ವಿಶ್ವ ಹಿಂದು ಪರಿಷತ್ ಮುಖಂಡ ಗೋಪಾಲ್ ಜೀ, ಶ್ರೀಗಳ ಆಪ್ತ ಕಾರ್ಯದರ್ಶಿ ಕೃಷ್ಣ ಭಟ್, ಅಯೋಧ್ಯೆ ಪೇಜಾವರ ಮಠದ ವ್ಯವಸ್ಥಾಪಕ ಮಹೇಂದ್ರ ದುಬೆ ಉಪಸ್ಥಿತರಿದ್ದರು.

ಮಾ.22ರಂದು ಕುಷ್ಟಗಿ ತಾಲೂಕಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭೇಟಿ

ಕೊಪ್ಪಳ: ಪಂಚಮುಖಿ ಆಂಜನೇಯ ದೇವಸ್ಥಾನ ಉದ್ಘಾಟನೆ ಹಿನ್ನೆಲೆಯಲ್ಲಿ ಮಾ.22 ರಂದು ಕುಷ್ಟಗಿ ತಾಲೂಕಿನ ಶಾಖಾಪೂರ ಗ್ರಾಮಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಭೇಟಿ ನೀಡಲಿದ್ದಾರೆ. ದೇವಸ್ಥಾನವನ್ನು ರಾಜ್ಯಪಾಲರು ಲೋಕಾರ್ಪಣೆ ಮಾಡಲಿದ್ದು, ಸಂಸದ ಕರಡಿ ಸಂಗಣ್ಣ, ಶಾಸಕ ಅಮರೇಗೌಡ ಬಯ್ಯಾಪುರ, ಹುನಗುಂದ ಶಾಸಕ ದೊಡ್ಡನಗೌಡ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

Exit mobile version