Site icon Vistara News

Navaratri: ದಸರಾ ಎಫೆಕ್ಟ್‌; ಊರಿನತ್ತ ಮುಖಮಾಡಿದ ರಾಜಧಾನಿಯ ಜನ, ಬಸ್‌ಗಳು ಫುಲ್‌ ರಶ್, ಟ್ರಾಫಿಕ್‌ ಜಾಮ್‌

ಬೆಂಗಳೂರು: ದಸರಾ ಹಬ್ಬದ (Navaratri) ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಸಿಲಿಕಾನ್ ಸಿಟಿ ಜನ ಊರುಗಳತ್ತ ಮುಖಮಾಡಿದ್ದಾರೆ. ಇದರಿಂದ ಮೆಜೆಸ್ಟಿಕ್ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ಗಳಿಗಾಗಿ ಜನರು ಕಾದು ಕುಳಿತಿದ್ದು, ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ. ಜತೆಗೆ ರಾಜಧಾನಿಯ ಮುಖ್ಯರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.

ಅಕ್ಟೋಬರ್ 21 ರಿಂದ 24ರವರೆಗೆ ರಜೆಗಳು ಇರುವುದರಿಂದ ಪ್ರಯಾಣಿಕರಿಗೆ ಅನುಕೂಲವಾಗಲು 2000ಕ್ಕೂ ಹೆಚ್ಚು ಹೆಚ್ಚುವರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ನಿಯೋಜನೆ ಮಾಡಿದೆ. ವಾರಾಂತ್ಯದಲ್ಲಿ ಸಹಜವಾಗಿ ಹೆಚ್ಚು ಪ್ರಯಾಣಿಕರು ಇರುತ್ತಾರೆ. ಇದರ ಜತೆಗೆ ಹಬ್ಬದ ಸೀಸನ್‌ ಆಗಿದ್ದರಿಂದ ಸಾರಿಗೆ ಬಸ್‌ಗಳಲ್ಲದೇ, ಖಾಸಗಿ ಬಸ್‌ಗಳು ಪುಲ್ ರಶ್ ಆಗಿವೆ.

ಒಂದೇ ಬಾರಿ ಸಾವಿರಾರು ವಾಹನಗಳು ರಸ್ತೆಗಿಳಿದಿದ್ದರಿಂದ ರಾಜಧಾನಿಯ ಮುಖ್ಯರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ. ತುಮಕೂರು ರಸ್ತೆ, ಮೈಸೂರು ರಸ್ತೆ ಸೇರಿ ನಗರಕ್ಕೆ ಸಂಪರ್ಕ ಬೆಳೆಸುವ ರಸ್ತೆಗಳು ಟ್ರಾಫಿಕ್ ಜಾಮ್ ಹೆಚ್ಚಾಗಿದೆ. ಟ್ರಾಫಿಕ್ ಕ್ಲಿಯರ್ ಮಾಡಲು ಸಂಚಾರ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

KSRTC bus

ಇದನ್ನೂ ಓದಿ | Navaratri: ಇಲ್ಲಿವೆ, ನವದುರ್ಗೆಯರು ಅಸುರರನ್ನು ಕೊಂದ ಕುತೂಹಲಕರ ಕತೆಗಳು!

ಸ್ಲೀಪರ್ ಮತ್ತು ಸೆಮಿ ಸ್ಲೀಪರ್ ಬಸ್‌ಗಳಿಗೆ ಬಾರಿ ಡಿಮ್ಯಾಂಡ್ ಉಂಟಾಗಿದೆ. ಇನ್ನು ಕೆಲವರು ಬಸ್‌ಗಳಿಲ್ಲದೆ ತಮ್ಮ ಸ್ವಂತ ವಾಹನಗಳಲ್ಲಿ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ.

ದಸರಾಗೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್‌

KSRTC bus

ಬೆಂಗಳೂರು: ಮೈಸೂರು ದಸರಾ-2023 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ದಸರಾ ರಜೆಗಳಲ್ಲಿ ವಿವಿಧೆಡೆ ಪ್ರಯಾಣಿಸುವವರಿಗೆ 2000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆ ಹಾಗೂ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗಾಗಿ (Mysore Dasara) ಮೈಸೂರಿಗೆ ತೆರಳುವ ಪ್ರವಾಸಿಗರಿಗಾಗಿ 600 ದಸರಾ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ.

ಕೆಎಸ್‌ಆರ್‌ಟಿಸಿಯಿಂದ ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟ ಆಕ್ಸಲ್‌) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜತೆಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆ ಒದಗಿಸಲಾಗುತ್ತದೆ.

ದಸರಾ ರಜೆಗಳ ಪ್ರಯುಕ್ತ 2000ಕ್ಕೂ ಹೆಚ್ಚು ಬಸ್‌

ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅ.20ರಿಂದ 26ವರೆಗೆ ಬೆಂಗಳೂರಿನಿಂದ `ರಾಜ್ಯದ ಮತ್ತು ನೆರೆ ರಾಜ್ಯಗಳ ವಿವಿಧ ಸ್ಥಳಗಳಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಈ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಚರಣೆ ಮಾಡಲಾಗುತ್ತದೆ. ಅದೇ ರೀತಿ ಅ. 24ರಿಂದ 29ರವರೆಗೆ ರಾಜ್ಯದ ಮತ್ತು ನೆರೆ ರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು. ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್‌, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರುತ್ತದೆ.

ಮೈಸೂರಿಗೆ 600 ವಿಶೇಷ ಬಸ್‌

ಬೆಂಗಳೂರಿನ ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 250 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣಿಕಟ್ಟು ಬೃಂದಾವನ ಉದ್ಯಾನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್‌.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಸಲು 350 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 600 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.

ಇದನ್ನು ಓದಿ | Navaratri Purple Colour: ನವರಾತ್ರಿಯ 8ನೇ ದಿನದ ನೇರಳೆ ಬಣ್ಣದಲ್ಲಿ ನಿಮ್ಮದಾಗಲಿ ಆಕರ್ಷಕ ಸ್ಟೈಲಿಂಗ್‌!

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ” ಫ್ಲೈ ಬಸ್” (Fly Bus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಸಲಾಗಿದೆ. ಇ-ಟಿಕೇಟ್ ಬುಕಿಂಗ್‌ ಅನ್ನು www.ksrtc.karnataka.gov.in ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ.

Exit mobile version