Site icon Vistara News

Murder news | ಒನಕೆಯಿಂದ ತಲೆಗೆ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ

murder news

ರಾಯಚೂರು: ರಾಯಚೂರಿನಲ್ಲಿ ವ್ಯಕ್ತಿಯೊಬ್ಬರನ್ನು ಒನಕೆಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರಾಯಚೂರು ತಾಲೂಕಿನ ಗಿಲ್ಲೆಸುಗೂರು ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ. ಮೃತ ದುರ್ದೈವಿ ನರಸಿಂಹಲು (35) ಎಂದು ಗುರುತಿಸಲಾಗಿದೆ. ಮೃತ ನರಸಿಂಹಲು ಹೊಲ, ಕೂಲಿ ಕೆಲಸ‌ ಮಾಡುತ್ತಿದ್ದರು. ಅವರ ಪತ್ನಿ ಇಬ್ಬರು ಮಕ್ಕಳೊಂದಿಗೆ ಹೊರಗೆ ಹೋಗಿದ್ದ ಸಂದರ್ಭ ಕೊಲೆ ನಡೆದಿದ್ದು, ಆಕೆ ಮರಳಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಮೃತ ನರಸಿಂಹಲು ದೇಹ ಮನೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದು, ಇಡಪನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವರನ್ನು ವಿಚಾರಣೆಗೆ ಒಳಪಡಿಸಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ | NIA raid | ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ದಾಳಿ, 100ಕ್ಕೂ ಹೆಚ್ಚು ಮಂದಿ ವಶಕ್ಕೆ

Exit mobile version