Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ - Vistara News

ಕರ್ನಾಟಕ

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Petrol Diesel Price Hike: ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿ, ರಾಜ್ಯದಲ್ಲಿ ಪೆಟ್ರೊಲ್, ಡೀಸೆಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

VISTARANEWS.COM


on

Petrol Diesel Price Hike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ‌ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ (Petrol Diesel Price Hike) ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಎಕ್ಸ್ ಮೂಲಕ ಸರಣಿ ಟ್ವೀಟ್ ಮಾಡಿರುವ ಅವರು, ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಹೇಳಿದ್ದಾರೆ.

ಸಾಮಾನ್ಯರ ಮೇಲೆ ಹೊರೆ ಹಾಕಿ ಬೇರೆ ರಾಜ್ಯಗಳಿಗೆ ವ್ಯಾಪಾರ ತೊಂದರೆಯಾಗುತ್ತದೆ ಎಂದು ಹೇಳಿ ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿರುವುದು ರಾಜದ್ರೋಹ ಮಾಡಿದಂತೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿ, ರಾಜ್ಯದಲ್ಲಿ ಪೆಟ್ರೊಲ್, ಡೀಸೆಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ? ದರ ಏರಿಕೆ ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿಯವರ ಹೇಳಿಕೆ ಜನ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ಉಚಿತ ಗ್ಯಾರಂಟಿ ಕೊಡುತ್ತಿರುವುದಾಗಿ ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಟ್ಟುಕೊಂಡು ರಾಜಕೀಯ ಲಾಭ‌ ಮಾಡಿಕೊಳ್ಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದು, ಈ ಕೆಳಗಿನ ಅಂಶಗಳನ್ನು ಪ್ರಸ್ತಾವಿಸಿ ರಾಜ್ಯ ಸರ್ಕಾರವ ವಿರುದ್ಧ ಕಿಡಿಕಾರಿದ್ದಾರೆ.

1) ರಾಜ್ಯದ‌ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ.

2) ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ರಾಜ್ಯದ ಪ್ರಗತಿ ಶೂನ್ಯವಾಗಿದೆ.

3) ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ.

4) ಸಾಮಾನ್ಯರ ಮೇಲೆ ಹೊರೆ ಹಾಕಿ ಬೇರೆ ರಾಜ್ಯಗಳಿಗೆ ವ್ಯಾಪಾರ ತೊಂದರೆಯಾಗುತ್ತದೆ ಎಂದು ಹೇಳಿ ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿರುವುದು ರಾಜದ್ರೋಹ ಮಾಡಿದಂತೆ.

5) ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಪೆಟ್ರೊಲ್, ಡಿಸೇಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ? ದರ ಏರಿಕೆ ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿಯವರ ಹೇಳಿಕೆ ಜನ ವಿರೋಧಿಯಾಗಿದೆ.

6) ಉಚಿತ ಗ್ಯಾರಂಟಿ ಕೊಡುತ್ತಿರುವುದಾಗಿ ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಟ್ಟುಕೊಂಡು ರಾಜಕೀಯ ಲಾಭ‌ ಮಾಡಿಕೊಳ್ಳುವುದು ಯಾವ ನ್ಯಾಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ನವಭಾರತ ನಿರ್ಮಾಣಕ್ಕೆ ಅತ್ಯುತ್ತಮ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ

Pralhad Joshi: ಭಾರತದ ಆರ್ಥಿಕ ಪ್ರಗತಿ, ಸಾಮರ್ಥ್ಯದ ಜತೆಗೆ ಯುವಜನತೆ, ಮಹಿಳೆಯರು ಮತ್ತು ರೈತರ ಅಭಿವೃದ್ಧಿಯ ಬದ್ಧತೆಯನ್ನು ಈ ಬಜೆಟ್ ಸಾಬೀತುಪಡಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

Union Minister Pralhad Joshi statement about Union Budget
Koo

ನವದೆಹಲಿ: ಎನ್‌ಡಿಎ ಸರ್ಕಾರ ನವಭಾರತ ನಿರ್ಮಾಣಕ್ಕೆ ಪ್ರಸ್ತುತದಲ್ಲಿ ಅತ್ಯುತ್ತಮ ಬಜೆಟ್ ಸಮರ್ಪಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತದ ಆರ್ಥಿಕ ಪ್ರಗತಿ, ಸಾಮರ್ಥ್ಯದ ಜತೆಗೆ ಯುವಜನತೆ, ಮಹಿಳೆಯರು ಮತ್ತು ರೈತರ ಅಭಿವೃದ್ಧಿಯ ಬದ್ಧತೆಯನ್ನು ಈ ಬಜೆಟ್ ಸಾಬೀತುಪಡಿಸಿದೆ ಎಂದು ಪ್ರತಿಪಾದಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಜೆಟ್ ವಿಶೇಷವಾಗಿ ಯುವ ಜನರಲ್ಲಿ ವಿಶ್ವಾಸವನ್ನು ತುಂಬುತ್ತದೆ ಎಂದ ಅವರು, ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಮಧ್ಯಮ, ಕೆಳ ವರ್ಗ ಮತ್ತು ಬಡ ಜನರಿಗೆ ಪ್ರಯೋಜನಕಾರಿ ಹಾಗೂ ವಿಶ್ವದ ಅತ್ಯುತ್ತಮ ಯೋಜನೆಗಳಲ್ಲಿ ಇದು ಒಂದಾಗಿದೆ ಎಂದು ಹೇಳಿದರು.

ಇದನ್ನೂ ಓದಿ: R Ashok: ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್‌: ಆರ್‌. ಅಶೋಕ್‌ ಶ್ಲಾಘನೆ

ಪ್ರಸ್ತುತ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಈ ಮೂಲಕ ವಿಕಸಿತ ಭಾರತಕ್ಕೆ ಮಾರ್ಗ ತೋರಿದ್ದಾರೆ ಎಂದು ತಿಳಿಸಿದರು.

ಎಂಎನ್‌ಆರ್‌ಇ ವಲಯದ ಬಗ್ಗೆ ಪ್ರತಿಕ್ರಿಯಿಸಿ, ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ 1.28 ಕೋಟಿಗೂ ಹೆಚ್ಚು ನೋಂದಣಿ ಮತ್ತು 14 ಲಕ್ಷ ಅರ್ಜಿ ಸಲ್ಲಿಕೆಯಾಗಿವೆ. ಮೇಲ್ಛಾವಣಿ ಸೌರ ಫಲಕ ಅಳವಡಿಸಲು ಅನುಕೂಲ ಆಗುವಂತೆ ಈ ಯೋಜನೆ ಪ್ರಾರಂಭಿಸಲಾಗಿದೆ ಎಂದು ಸಚಿವ ಜೋಶಿ ಮಾಹಿತಿ ನೀಡಿದರು.

300 ಯುನಿಟ್‌ವರೆಗೆ ಉಚಿತ ವಿದ್ಯುತ್

ಸೂರ್ಯ ಘರ್ ಯೋಜನೆ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಕಲ್ಪಿಸಲಿದೆ ಎಂದು ತಿಳಿಸಿದರು.

ನಿರ್ಣಾಯಕ ಮತ್ತು ಕಡಲಾಚೆಯ ಖನಿಜಗಳ ಗಣಿಗಾರಿಕೆ: 25 ನಿರ್ಣಾಯಕ ಖನಿಜಗಳ ಮೇಲಿನ ಕಸ್ಟಮ್ಸ್ ವಿನಾಯಿತಿ ಮತ್ತು 2 ಖನಿಜಗಳ ಮೇಲೆ ಮೂಲಭೂತ ಕಸ್ಟಮ್ ಸುಂಕವನ್ನು (ಬಿಸಿಡಿ) ಕಡಿತಗೊಳಿಸಲಾಗಿದೆ. ಇದು ನಿರ್ಣಾಯಕ ಖನಿಜಗಳ ಪೂರೈಕೆಯನ್ನು ಸರಳ ಮತ್ತು ಸುವ್ಯವಸ್ಥಿತಗೊಳಿಸಲಿ ಎಂದು ಹೇಳಿದರು.

ಇದನ್ನೂ ಓದಿ: Bengaluru Power Cut: ಜು.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಇಂಧನ ಪರಿವರ್ತನಾ ಮಾರ್ಗಗಳ ಕುರಿತು ವಿವರಿಸಿದ ಸಚಿವರು, ನವೀಕರಿಸಬಹುದಾದ ಇಂಧನವನ್ನು ಕೇಂದ್ರೀಕರಿಸುವ ಬಹು ವಲಯದ ದಾಖಲೆಯಾಗಿದೆ ಎಂದು ಅವರು ತಿಳಿಸಿದರು.

Continue Reading

ಕರ್ನಾಟಕ

The Kaptan Song: ‘ದ ಕಪ್ತಾನ್’ ಆಲ್ಬಂ ಸಾಂಗ್ ಬಿಡುಗಡೆ

The Kaptan Song: ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹುಟ್ಟುಹಬ್ಬದ ಅಂಗವಾಗಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು “ದ ಕಫ್ತಾನ್” ಎಂಬ ಆಲ್ಬಂ ಸಾಂಗ್ ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಪದ್ದಿ ಮಲ್ನಾಡ್ ಬರೆದು, ಅನಿಲ್ ಸಿ.ಜೆ. ಹಾಡಿ, ಸಂಗೀತ ನೀಡಿರುವ ಈ ” ದ ಕಪ್ತಾನ್ ” ಆಲ್ಬಂ ಸಾಂಗ್ ಮಾಸ್ ಮ್ಯೂಸಿಕ್ ಅಡ್ಡ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

VISTARANEWS.COM


on

The Kaftan kannada Album Song Release
Koo

ಬೆಂಗಳೂರು: ಹೆಬ್ಬುಲಿ, ರಾಷ್ಟ್ರಪ್ರಶಸ್ತಿ ವಿಜೇತ “ಒಂದಲ್ಲಾ ಎರಡಲ್ಲಾ” ಹಾಗೂ “ರಾಬರ್ಟ್” ಚಿತ್ರಗಳ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹುಟ್ಟುಹಬ್ಬದ ಅಂಗವಾಗಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು “ದ ಕಪ್ತಾನ್” (The Kaptan Song) ಆಲ್ಬಂ ಸಾಂಗ್ ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಕಿಕ್ ಬಾಕ್ಸಿಂಗ್‌ನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

“ನನಗೆ ಉಮಾಪತಿ ಶ್ರೀನಿವಾಸ್, ಅವರ ಮೇಲೆ ಅಪಾರ ಪ್ರೀತಿ ಹಾಗೂ ಗೌರವ. ನಮ್ಮ ಎಲ್ಲಾ ಕೆಲಸಗಳಿಗೂ ಅವರ ಪ್ರೋತ್ಸಾಹ ಇರುತ್ತದೆ. ಹಾಗಾಗಿ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಮುಂಚಿತವಾಗಿಯೇ ತಿಳಿಸುತ್ತಿರುವುದಾಗಿ ನಿರ್ಮಾಪಕ ಶರಣಪ್ಪ ಗೌರಮ್ಮ ತಿಳಿಸಿದ್ದಾರೆ.

ಇದನ್ನೂ ಓದಿ: Foreign Investment: ರಾಜ್ಯದಲ್ಲಿ ಹೂಡಿಕೆಗೆ ದ. ಕೊರಿಯಾ ಆಸಕ್ತಿ; ಸಚಿವ ಎಂ‌.ಬಿ. ಪಾಟೀಲ್‌ ಚರ್ಚೆ

ಪದ್ದಿ ಮಲ್ನಾಡ್ ಬರೆದು, ಅನಿಲ್ ಸಿ.ಜೆ. ಹಾಡಿ, ಸಂಗೀತ ನೀಡಿರುವ ಈ ” ದ ಕಪ್ತಾನ್ ” ಆಲ್ಬಂ ಸಾಂಗ್ ಮಾಸ್ ಮ್ಯೂಸಿಕ್ ಅಡ್ಡ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ.

Continue Reading

ಕರ್ನಾಟಕ

Farmer Self Harming: ಕೆಂಚನಾಲ ಗ್ರಾಮದಲ್ಲಿ ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

Farmer Self Harming: ಸಾಲಬಾಧೆ ತಾಳಲಾರದೆ ರೈತ ಕಳೆನಾಶಕ ಸೇವಿಸಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಿಪ್ಪನ್‌ಪೇಟೆ ಪಟ್ಟಣ ಸಮೀಪದ ಕೆಂಚನಾಲ ಗ್ರಾಮದಲ್ಲಿ ಸೋಮವಾರ ಸಂಜೆ ಜರುಗಿದೆ. ಕೊಲ್ಲೂರಪ್ಪ (55) ಮೃತಪಟ್ಟ ರೈತ. ಮೃತ ಕೊಲ್ಲೂರಪ್ಪ ಅವರಿಗೆ ಕೆಂಚನಾಲ ಗ್ರಾಮದಲ್ಲಿ 1.18 ಗುಂಟೆ ಜಮೀನು ಹೊಂದಿದ್ದು, ಅಡಕೆ ಹಾಗೂ ಶುಂಠಿ ಬೆಳೆಗಾಗಿ ಕೆನರಾ ಬ್ಯಾಂಕ್, ಯೂನಿಯನ್‌ ಬ್ಯಾಂಕ್‌ ಸೇರಿದಂತೆ ಕೆಲ ಖಾಸಗಿ ಹಣಕಾಸು ಸಂಸ್ಥೆಗಳಿಂದ ಸುಮಾರು ಹತ್ತು ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ.

VISTARANEWS.COM


on

Farmer commits suicide in Kenchanala village
Koo

ರಿಪ್ಪನ್‌ಪೇಟೆ: ಸಾಲಬಾಧೆ ತಾಳಲಾರದೆ ರೈತ ಕಳೆನಾಶಕ ಸೇವಿಸಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Farmer Self Harming) ರಿಪ್ಪನ್‌ಪೇಟೆ ಪಟ್ಟಣ ಸಮೀಪದ ಕೆಂಚನಾಲ ಗ್ರಾಮದಲ್ಲಿ ಸೋಮವಾರ ಸಂಜೆ ಜರುಗಿದೆ.

ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಮೃತಪಟ್ಟ ರೈತ. ಮೃತ ಕೊಲ್ಲೂರಪ್ಪನವರಿಗೆ ಕೆಂಚನಾಲ ಗ್ರಾಮದಲ್ಲಿ 1.18 ಗುಂಟೆ ಜಮೀನು ಹೊಂದಿದ್ದು, ಅಡಕೆ ಹಾಗೂ ಶುಂಠಿ ಬೆಳೆಗಾಗಿ ಕೆನರಾ ಬ್ಯಾಂಕ್, ಯೂನಿಯನ್‌ ಬ್ಯಾಂಕ್‌ ಸೇರಿದಂತೆ ಕೆಲ ಖಾಸಗಿ ಹಣಕಾಸು ಸಂಸ್ಥೆಗಳಿಂದ ಸುಮಾರು ಹತ್ತು ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Road Accident: ಬಸ್-ಕಾರು ಡಿಕ್ಕಿಯಾಗಿ ಶಿಕಾರಿಪುರ ಶಾಲೆಯ ಫಾದರ್ ಸಾವು, ಚಾಲಕನ ಸ್ಥಿತಿ ಗಂಭೀರ

ಕಳೆದ ಎರಡು ವರ್ಷಗಳಿಂದ ಹವಾಮಾನ ವೈಪರಿತ್ಯದಿಂದ ಬೆಳೆ ಕೈಕೊಟ್ಟ ಕಾರಣ ಸಾಲದ ಸುಳಿಗೆ ಸಿಲುಕಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಅವರು ಕಳೆದ ಭಾನುವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳೆನಾಶಕ ಸೇವಿಸಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣವೇ ಅವರನ್ನು ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.

ಇದನ್ನೂ ಓದಿ: Child Rescued: ಆಟವಾಡುತ್ತ ಕೂದಲಿನ ಕ್ಲಿಪ್ ನುಂಗಿದ 10 ತಿಂಗಳ ಮಗು!

ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Assembly Session: ಕೆಳಮನೆಯಲ್ಲಿ ವಿಧಾನ ಮಂಡಲ ಅನರ್ಹತಾ‌ ನಿವಾರಣಾ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ

Assembly Session: ವಿಪಕ್ಷ ಶಾಸಕರ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ಸಿಕ್ಕಿದೆ. ಸಿಎಂ ರಾಜಕೀಯ ಸಲಹೆಗಾರ, ಕಾನೂನು ಸಲಹೆಗಾರ ಹುದ್ದೆಗಳ ಅನರ್ಹತೆಗೆ ಕಡಿವಾಣ ಹಾಕುವ ವಿಧೇಯಕ ಇದಾಗಿದೆ.

VISTARANEWS.COM


on

Koo

ಬೆಂಗಳೂರು: ವಿಧಾನ ಸಭೆಯಲ್ಲಿ (Assembly Session) ಕರ್ನಾಟಕ ವಿಧಾನಮಂಡಲ ಅನರ್ಹತಾ‌ ನಿವಾರಣಾ ಎರಡನೇ ತಿದ್ದುಪಡಿ ವಿಧೇಯಕ 2024 ಕೂಡ ಅಂಗೀಕಾರಗೊಂಡಿದೆ. ವಿಪಕ್ಷ ಶಾಸಕರ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ಸಿಕ್ಕಿದೆ. ಸಿಎಂ ರಾಜಕೀಯ ಸಲಹೆಗಾರ, ಕಾನೂನು ಸಲಹೆಗಾರ ಹುದ್ದೆಗಳ ಅನರ್ಹತೆಗೆ ಕಡಿವಾಣ ಹಾಕುವ ವಿಧೇಯಕ ಇದಾಗಿದೆ.

ಶಾಸಕ ಸುನೀಲ್ ಕುಮಾರ್ ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್‌ನವರು ವಿಪಕ್ಷದಲ್ಲಿ ಇದ್ದಾಗ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಲಹೆ ಕೊಟ್ಟಿದ್ದರು. ಈಗ ಆರ್ಥಿಕ ಸಲಹೆಗಾರು, ರಾಜಕೀಯ ಸಲಹೆಗಾರರ ನೇಮಕ ದುಂದು ವೆಚ್ಚದ ಭಾಗವಲ್ಲವೇ? ಅವರಿಗೆ ಕಾರು, ಮನೆ ಸೌಲಭ್ಯ ಕೊಡಬೇಕಾಗುತ್ತದೆ. ಇದು ದುಂದು ವೆಚ್ಚವಲ್ಲವೇ ಎಂದು ಪ್ರಶ್ನಿಸಿದರು. ಈ ವೇಳೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿ, ನಾನು ಸರ್ಕಾರದಿಂದ ಸಂಬಳ, ಭತ್ಯೆ ತೆಗೆದುಕೊಳ್ಳುವುದಿಲ್ಲ ಅಂತ ತಿರುಗೇಟು ನೀಡಿದರು. ನಂತರ ವಿರೋಧ ಪಕ್ಷದ ಸದಸ್ಯರ ಆಕ್ಷೇಪದ ನಡುವೆ ವಿಧೇಯಕ ಅಂಗೀಕಾರವಾಯಿತು.

ಇದನ್ನೂ ಓದಿ | Union Budget 2024: ಇನ್ನೊಂದು ವರ್ಷದಲ್ಲಿ ಹಳೇ ತೆರಿಗೆ ಪದ್ಧತಿ ರದ್ದು? ಕೇಂದ್ರ ವಿತ್ತ ಸಚಿವೆ ಹೇಳಿದ್ದಿಷ್ಟು

ವಿಧಾನಸಭೆಯಲ್ಲಿ ಸಿನಿ‌, ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಅಂಗೀಕಾರ; ಸಿನಿಮಾ ಟಿಕೆಟ್, OTT ಶುಲ್ಕ ಭಾರಿ ಏರಿಕೆ!

ಬೆಂಗಳೂರು: ವಿಧಾನಸಭೆಯಲ್ಲಿ (Assembly Session) ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024 ಹಾಗೂ ಕರ್ನಾಟಕ ವಿಧಾನಮಂಡಲ ಅನರ್ಹತಾ‌ ನಿವಾರಣಾ ಎರಡನೇ ತಿದ್ದುಪಡಿ ವಿಧೇಯಕ 2024 ಸರ್ವಾನುಮತದಿಂದ ಅಂಗೀಕಾರಗೊಂಡಿವೆ. ಸುದೀರ್ಘ ಚರ್ಚೆ ಬಳಿಕ ವಿಪಕ್ಷಗಳ ವಿರೋಧದ ನಡುವೆಯೂ ಎರಡು ಮಸೂದೆಗಳಿಗೆ ಅಂಗೀಕಾರ ‌ನೀಡಲಾಗಿದೆ. ಇನ್ನು ವಿಧಾನ ಪರಿಷತ್‌ನಲ್ಲೂ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024 ಅಂಗೀಕಾರಗೊಂಡು, ಕಾಯ್ದೆ ಜಾರಿಯಾದರೆ ಸಿನಿಮಾ ಪ್ರಿಯರಿಗೆ ದರ ಏರಿಕೆ ಬಿಸಿ ತಟ್ಟಲಿದೆ.

ಏನಿದು ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024?

ರಾಜ್ಯ ಸರ್ಕಾರ, ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024 ಅನ್ನು ಮಂಗಳವಾಡ ಮಂಡಿಸಿ ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದೆ. ಈ ಮಸೂದೆಯಲ್ಲಿ ಸಿನಿಮಾ, ಸಾಂಸ್ಕೃತಿಕ ಕಲಾವಿದರ ಅನುಕೂಲಕ್ಕಾಗಿ ಸಿನಿಮಾ ಟಿಕೆಟ್‌ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇಕಡ 1ರಿಂದ 2ರಷ್ಟು ಹೊಸ ಸೆಸ್ ವಿಧಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಇಎಸ್ಐ, ಪಿಎಫ್ ಸೇರಿದಂತೆ ಅನೇಕ ಅನುಕೂಲಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದೆ.

ರಾಜ್ಯದಲ್ಲಿನ ಸಿನಿಮಾ, ಸಾಂಸ್ಕೃತಿಕ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿ ಎಂಬ ನಿಧಿ ಸ್ಥಾಪಿಸಲಾಗುವುದು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ. ಇದರಿಂದ ಸಿನಿಮಾ ಟಿಕೆಟ್ ಹಾಗೂ ಒಟಿಟಿ ಚಂದಾದಾರಿಕೆ ಮೇಲೆ ಶೇಕಡ 2 ಪರ್ಸೆಂಟ್ ಮೀರದಂತೆ ಶೇಕಡ 1 ಪರ್ಸೆಂಟ್​ಗಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲಿದೆ. ಈ ಸೆಸ್ ಅನ್ನು ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ | Union Budget 2024: ಇನ್ನೊಂದು ವರ್ಷದಲ್ಲಿ ಹಳೇ ತೆರಿಗೆ ಪದ್ಧತಿ ರದ್ದು? ಕೇಂದ್ರ ವಿತ್ತ ಸಚಿವೆ ಹೇಳಿದ್ದಿಷ್ಟು

ಪೆಟ್ರೋಲ್‌, ಡೀಸೆಲ್‌ ಏರಿಕೆ ಬೆನ್ನಲ್ಲೇ ಇದೀಗ ಮನರಂಜನೆ ಕ್ಷೇತ್ರದ ಮೇಲೆ ರಾಜ್ಯ ಸರ್ಕಾರ ಕಣ್ಣಿಟ್ಟು, ಸಿನಿಮಾ ಟಿಕೆಟ್ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್ ವಿಧಿಸಲು ಸರ್ಕಾರ ಮುಂದಾಗಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ರಾಜ್ಯ ಸರ್ಕಾರದ ನಿರ್ಧಾರವನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿತ್ತು. ಎಲ್ಲದರ ಮೇಲೂ ತೆರಿಗೆಯನ್ನು ಹೇರಿರುವ ಸಿದ್ದರಾಮಯ್ಯ ಸರ್ಕಾರ, ಇದೀಗ ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ (Movie ticket price hike) ಮಾಡಲು ‘ಕೈ’ ಎತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿತ್ತು. ಇದೀಗ ವಿಪಕ್ಷ ನಾಯಕರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ ಮಸೂದೆ ಅಂಗೀಕಾರಗೊಂಡಿದೆ.

Continue Reading
Advertisement
Allergies During Monsoon
ಆರೋಗ್ಯ23 mins ago

Allergies During Monsoon: ಮಳೆಗಾಲದಲ್ಲಿ ಅಲರ್ಜಿ ಸಮಸ್ಯೆಯಿಂದ ಪಾರಾಗುವುದು ಹೇಗೆ?

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ಮಧುರ ಪ್ರೀತಿ ಸಿಗಲಿದೆ

INDIA Bloc To Protest
ದೇಶ7 hours ago

INDIA Bloc To Protest: ಬಜೆಟ್‌ ತಾರತಮ್ಯ ಖಂಡಿಸಿ ನಾಳೆ ಸಂಸತ್ತಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ

Paris Olympics
ಕ್ರೀಡೆ7 hours ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೂ ವಕ್ಕರಿಸಿದ ಕೊರೊನಾ ಸೋಂಕು; ಮೊದಲ ಪ್ರಕರಣ ಪತ್ತೆ

Union Minister Pralhad Joshi statement about Union Budget
ಕರ್ನಾಟಕ7 hours ago

Pralhad Joshi: ನವಭಾರತ ನಿರ್ಮಾಣಕ್ಕೆ ಅತ್ಯುತ್ತಮ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ

The Kaftan kannada Album Song Release
ಕರ್ನಾಟಕ7 hours ago

The Kaptan Song: ‘ದ ಕಪ್ತಾನ್’ ಆಲ್ಬಂ ಸಾಂಗ್ ಬಿಡುಗಡೆ

kimberly cheatle
ವಿದೇಶ8 hours ago

Kimberly Cheatle: ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್ ಹುದ್ದೆಗೆ ಕಿಂಬರ್ಲಿ ಚೀಟಲ್ ದಿಢೀರ್​ ರಾಜೀನಾಮೆ

Womens Asia Cup
ಕ್ರೀಡೆ8 hours ago

Womens Asia Cup: ಶಫಾಲಿ ಬ್ಯಾಟಿಂಗ್​ ಆರ್ಭಟ; ಭಾರತಕ್ಕೆ ಹ್ಯಾಟ್ರಿಕ್​ ಜಯ

Farmer commits suicide in Kenchanala village
ಕರ್ನಾಟಕ9 hours ago

Farmer Self Harming: ಕೆಂಚನಾಲ ಗ್ರಾಮದಲ್ಲಿ ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

ಕರ್ನಾಟಕ9 hours ago

Assembly Session: ಕೆಳಮನೆಯಲ್ಲಿ ವಿಧಾನ ಮಂಡಲ ಅನರ್ಹತಾ‌ ನಿವಾರಣಾ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ12 hours ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ13 hours ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ17 hours ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ1 week ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

ಟ್ರೆಂಡಿಂಗ್‌