Site icon Vistara News

Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Petrol Diesel Price

Petrol Diesel Price Hike In Karnataka By 3 Rupees Per Litre

ಬೆಂಗಳೂರು: ರಾಜ್ಯದ ಜನರಿಗೆ ಐದು ಉಚಿತ ಗ್ಯಾರಂಟಿಗಳನ್ನು ನೀಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮದ್ಯದ ಬೆಲೆ ಹಾಗೂ ಆಸ್ತಿ ನೋಂದಣಿ ಶುಲ್ಕವನ್ನು ಹೆಚ್ಚಿಸಿ ಸಂಪನ್ಮೂಲ ಕ್ರೋಡೀಕರಣಕ್ಕೆ ಮುಂದಾಗಿತ್ತು. ಈಗ ರಾಜ್ಯದ ಜನರಿಗೆ ಮತ್ತೊಂದು ಬೆಲೆಯೇರಿಕೆಯ ಬರೆಯನ್ನು ಕರ್ನಾಟಕ ಸರ್ಕಾರ ಎಳೆದಿದೆ. ಹೌದು, ಕರ್ನಾಟಕದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ (Petrol Diesel Price) ಮಾಡಿ ರಾಜ್ಯ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಬೇಕಾದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ.

Rs 8 to 10 price cut in Petrol and Diesel, PM Modi to announce on year end

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಮತ್ತೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆತೀಕ್‌ ಅವರು ಸಿದ್ದರಾಮಯ್ಯ ಅವರ ಎದುರು ಕಡತ ಮುಂದಿರಿಸಿದ್ದು, ಇದಕ್ಕೆ ಸಿದ್ದರಾಮಯ್ಯ ಅಂಕಿತ ಹಾಕಿದ್ದಾರೆ.

ಸಿದ್ದರಾಮಯ್ಯ ಅವರು ಸಹಿ ಹಾಕಿದ ಮರುದಿನವೇ ಅಂದರೆ, ಜೂನ್‌ 15ರಂದು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಲಾಗಿದೆ. ಇದರಿಂದಾಗಿ ತಕ್ಷಣದಿಂದಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ಆಗಿದೆ. ಮದ್ಯದ ಬೆಲೆಯೇರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರವು ಖಜಾನೆಗೆ ಹಣ ತುಂಬಿಸಿಕೊಳ್ಳುತ್ತಿದೆ. ಆಸ್ತಿ ನೋಂದಣಿ ಶುಲ್ಕವನ್ನೂ ಏರಿಕೆ ಮಾಡಿದೆ. ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ

ಇದನ್ನೂ ಓದಿ: Modi 3.0: ಶೀಘ್ರ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌? ಕೇಂದ್ರ ಸಚಿವರು ಹೇಳಿದ್ದೇನು?

Exit mobile version