Site icon Vistara News

PFI BANNED | ದೇಶ ವಿಭಜಕ ಶಕ್ತಿಗಳ ನಿಷೇಧದಲ್ಲಿ ರಾಜಕಾರಣ ಬೇಡ; ಸಿ.ಟಿ ರವಿ

ಸಿ.ಟಿ.ರವಿ

ಬೆಂಗಳೂರು: ಐಸಿಸ್ ಮಾದರಿಯ ಉಗ್ರಗಾಮಿಗಳನ್ನು ಬೆಂಬಲಿಸಿದ, ದೇಶದ ಒಳಗೆ ಅಭದ್ರತೆ, ಅಂತರ್ಯುದ್ಧದ, ದೇಶದ್ರೋಹದ ಸಂಚನ್ನು ಮಾಡುತ್ತಿದ್ದ ಪಿಎಫ್ಐ ಹಾಗೂ ಅದರ ಸಹ ಸಂಘಟನೆಗಳನ್ನು ನಿಷೇಧಿಸಿದ(PFI BANNED) ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಹಾಗು ಸರಕಾರವನ್ನು ಅಭಿನಂದಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ.

ಸರಕಾರ ಈ ಸಂಘಟನೆಗಳನ್ನು ಬ್ಯಾನ್ ಮಾಡಿದೆ. ಆದರೆ ಇಷ್ಟು ಸಾಕಾಗುವುದಿಲ್ಲ. ಸಮಾಜವು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ. ವಿದ್ರೋಹಿ ಹಾಗು ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜದ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕಾಗಿದೆ. ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟಿಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ದೃಷ್ಟಿಯ ರಾಜಕಾರಣ ಮಾಡಬಾರದು. ರಾಜಕೀಯವಾಗಿ ನಿಮಗೆ ಲಾಭ ಕೊಟ್ಟರು, ದೇಶದ ಭವಿಷ್ಯದ ದೃಷ್ಟಿಯಿಂದ, ಸಮಾಜವನ್ನು ಈ ದುಷ್ಟ ಶಕ್ತಿಗಳ ಕೈಯಿಂದ ಬಿಡಿಸುವ ಕಾರ್ಯದಲ್ಲಿ ತೊಡಕಾಗಲಿದೆ ಎಂದಿದ್ದಾರೆ.

ದೇಶದ ಭದ್ರತೆಯ, ಸಮಾಜದ ಗೌರವ ಕಾಪಾಡುವ ನಿಟ್ಟಿನಲ್ಲಿ, ದೇಶಪ್ರೇಮಿ ಮುಸ್ಲಿಮರು, ರಾಷ್ಟ್ರ ವಿರೋಧಿ ಹಾಗು ಮತಾಂಧತೆಯ ವಿರುದ್ಧ ಅರಿವು ಮೂಡಿಸಬೇಕಾಗಿದೆ. ನಿಷೇಧದ ನಂತರ ಪಿಎಫ್ ಐ ಸಂಘಟನೆಗೆ ಸೇರಿದ ದುಷ್ಟ ಶಕ್ತಿಗಳು ಭೂಗತರಾಗಿ ಕಾರ್ಯನಿರ್ವಹಿಸುವ, ಸಮಾಜವನ್ನು ಪ್ರಚೋದಿಸುವ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, ಇಂತಹ ಯಾವುದೇ ಘಟನೆಗಳು ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಮುಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಕಾನೂನಿನ ಜೊತೆ ಕೈ ಜೋಡಿಸಲು ಮನವಿ ಮಾಡಿದ್ದಾರೆ.

ಇದನ್ನೂ ಓದಿ | PFI BANNED | ಶಾಂತಿ ಸುವ್ಯವಸ್ಥೆಗಾಗಿ ಮತಾಂಧ ಸಂಘಟನೆಗಳ ಬ್ಯಾನ್‌ ಸ್ವಾಗತಾರ್ಹ: ಗೃಹ ಸಚಿವ ಜ್ಞಾನೇಂದ್ರ

Exit mobile version