ರಾಮನಗರ: ಯಾವುದೇ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರೆ ಅಂಥವುಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಆಗಬೇಕು. ಈ ವಿಚಾರವಾಗಿ ನಾನು ಮೊದಲೇ ಹೇಳಿದ್ದೇನೆ. ಆದರೆ, ನಿಷೇಧಕ್ಕೊಳಪಟ್ಟ ಸಂಘಟನೆಗಳ ಕೃತ್ಯದ ಬಗ್ಗೆ ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಕೇಂದ್ರ ಸರ್ಕಾರದ ಪಿಎಫ್‌ಐ ನಿಷೇಧ (PFI BANNED) ಕ್ರಮದ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಘಟನೆ ವೇಳೆಯಲ್ಲಿಯೇ ನಾನು ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದೆ. ಯಾವುದೇ ಸಂಘಟನೆ ಇರಲಿ, ಸಮಾಜಘಾತುಕ ಕ್ರಿಯೆಗಳಲ್ಲಿ ತೊಡಗಿದ್ದರೆ ಅವುಗಳನ್ನು ಹದ್ದುಬಸ್ತಿನಲ್ಲಿ ಇಡುವುದು ಸರ್ಕಾರದ ಕರ್ತವ್ಯವಾಗಿದೆ. ಎನ್‌ಐಎ ದಾಳಿಯ ಸತ್ಯಾಂಶಗಳನ್ನು ಜನತೆ ಮುಂದೆ ಇಡಬೇಕು ಎಂದು ಆಗ್ರಹಿಸಿದರು.
ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ? ಯಾವ ರೀತಿ ಗಲಭೆ ಸೃಷ್ಟಿಗೆ ಪ್ರೋತ್ಸಾಹ ಕೊಡಲಾಗುತ್ತಿದೆ ಎಂಬಿತ್ಯಾದಿ ಮಾಹಿತಿಯನ್ನು ಜನತೆ ಮುಂದೆ ಇಡಬೇಕು. ಇದು ಕೇಂದ್ರ ಸರ್ಕಾರ ಕರ್ತವ್ಯವಾಗಿದೆ. ಬ್ಯಾನ್ ಮಾಡಿದ ತಕ್ಷಣ ಸಂಪೂರ್ಣವಾಗಿ ಶಾಂತಿ ನೆಲಸಲಿದೆ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ದತೆ ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ | PFI Banned | ಪಿಎಫ್‌ಐ ನಿಷೇಧದಿಂದ ಬಿಜೆಪಿಗಿಂತಲೂ ಕಾಂಗ್ರೆಸ್‌ಗೇ ಖುಷಿ: ಕಾರಣವೇನು? ಪರಿಣಾಮವೆಷ್ಟು?