ಶಿವಮೊಗ್ಗ: ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ (PFI BANNED) ಮಾಡಿರುವುದು ಸ್ವಾಗತಾರ್ಹ ಎಂದು ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.
ಪಿಎಫ್‌ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು ಐದು ವರ್ಷಗಳ ವರೆಗೆ UAPA ಕಾಯಿದೆ ಅಡಿಯಲ್ಲಿ ನಿಷೇಧಿಸಿದೆ. ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳು ಕುಮ್ಮಕ್ಕು ನೀಡುತ್ತಿದ್ದವು. ಅವುಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.
ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ. ಶಾಂತಿ ಸುವ್ಯವಸ್ಥೆಗಾಗಿ ಮತಾಂಧ ಸಂಘಟನೆಗಳ ನಿಷೇಧ ಮಾಡುವುದು ಒಳ್ಳೆಯ ಬೆಳವಣಿಗೆ. ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿಷೇಧ ಕ್ರಮಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | PFI BANNED | ಪಿಎಫ್‌ಐ ನಿಷೇಧಕ್ಕೆ ಸಿದ್ಧವಾಗುತ್ತಿತ್ತು ಒಂದೊಂದೇ ಡಾಕ್ಯುಮೆಂಟ್, ಇವತ್ತು ಕಾಲ ಕೂಡಿಬಂತು!