ಶಿವಮೊಗ್ಗ: ಮಹಿಳೆಯನ್ನು ಲೈಂಗಿಕವಾಗಿ ದುರ್ಬಳಕೆ (Physical Abuse) ಮಾಡಿಕೊಂಡ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಂಧನವಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇನ್ನು 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಬಿಜೆಪಿ ಸಕ್ರಿಯ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಬಂಧಿತ ಆರೋಪಿ. ಮಹಿಳೆಯೊಬ್ಬರು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿರುವ ಅರುಣ್ ಕುಗ್ವೆಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂ. 28ಕ್ಕೆ ಅರುಣ್ ಕುಗ್ವೆ ಮದುವೆ ಫಿಕ್ಸ್ ಆಗಿತ್ತು. ಮುಂದಿನ 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಅರುಣ್‌ನನ್ನು ಇದೀಗ ಪೊಲೀಸರು ಬಂಧಿಸಿ, ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ | Mayur Mohite: ಶಾಸಕನ ಸೋದರಳಿಯ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಯುವಕ ಸಾವು
ಅಂತರ್ಜಾತಿ ವಿವಾಹಕ್ಕೆ ಪ್ರಿಯಕರನ ಪೋಷಕರು ಅಡ್ಡಿ; ಕಟ್ಟಡದಿಂದ ಜಿಗಿದು ಯುವತಿ ಸೂಸೈಡ್
ರಾಯಚೂರು: ರಾಯಚೂರಿನಲ್ಲಿ ಅಂತರ್ಜಾತಿ ವಿವಾಹಕ್ಕೆ (Love Failure) ಯುವಕನ ಕಡೆಯವರ ಅಡ್ಡಿ ಆಗಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಸಾಂತ್ವನ ಕೇಂದ್ರದ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಅನುರಾಧ (18) ಆತ್ಮಹತ್ಯೆ ಮಾಡಿಕೊಂಡವಳು.
ರಾಯಚೂರು ನಗರದ ಜಲಾಲ್ ನಗರದ ನಿವಾಸಿಯಾದ ಅನುರಾಧ, ವಿನಯ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಈ ನಡುವೆ ಇವರಿಬ್ಬರು ಮದುವೆಯಾಗಲು ಸಹ ನಿಶ್ಚಯಿಸಿದ್ದರು. ಆದರೆ ಯುವತಿ ಕೆಳಜಾತಿಯವಳು ಎಂಬ ವಿಚಾರಕ್ಕೆ ವಿನಯ್ ಕುಟುಂಬಸ್ಥರು ಕ್ಯಾತೆ ತೆಗೆದಿದ್ದರು ಎನ್ನಲಾಗಿದೆ.
ಈ ವಿಚಾರ ತಿಳಿದು ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು. ಯುವಕನ ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು. ಇದರಿಂದ ಮನನೊಂದ ಅನುರಾಧ ಸಾಂತ್ವನ ಕೇಂದ್ರದ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿ | Suraj Revanna Case: ಸೂರಜ್ʼಗೇʼ ಸಂಕಷ್ಟ; ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಆಪ್ತ ಪರಾರಿ!
ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಮೇಲಿಂದ ಬಿದ್ದ ರಭಸಕ್ಕೆ ಅನುರಾಧ ಮೃತಪಟ್ಟಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.