Site icon Vistara News

Physical Abuse: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್ಐಆರ್ ದಾಖಲು

Physical Abuse

ಬೆಂಗಳೂರು: ಎಚ್ಎಸ್ಆರ್ ಲೇಔಟ್‌ನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ (Physical Abuse) ಸಂಬಂಧ ಯುವತಿ ಸ್ನೇಹಿತ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ. ಶನಿವಾರ ತಡರಾತ್ರಿ 1 ಗಂಟೆಗೆ ಅತ್ಯಾಚಾರ ಯತ್ನ ನಡೆದ ಬಳಿಕ ಸಂತ್ರಸ್ತೆ ಯುವತಿಯ ಸ್ನೇಹಿತೆ ದೂರುದಾರನಿಗೆ ಕರೆ ಮಾಡಿದ್ದಳು. ಸ್ಥಳಕ್ಕೆ ಹೋಗಿ ನೋಡಿದಾಗ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಆಕೆಯ ಸ್ನೇಹಿತ ನೀಡಿದ ದೂರಿನ ಮೇರೆಗೆ ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸಂತ್ರಸ್ತೆ ಯುವತಿಯಿಂದ ಎಮರ್ಜೆನ್ಸಿ ಕರೆ ಮತ್ತು ಲೊಕೇಶನ್ ಬಂದಿದೆ. ಆದರೆ ಫೋನ್ ಕರೆ ಸ್ವೀಕರಿಸುತ್ತಿಲ್ಲ ಎಂದು ಸ್ನೇಹಿತೆ ದೂರುದಾರನಿಗೆ ಹೇಳಿದ್ದ. ಲೊಕೇಶನ್ ಆಧರಿಸಿ ಹೊಸೂರು ಸರ್ವಿಸ್ ರಸ್ತೆ ಬಳಿ ಸ್ನೇಹಿತ ಹೋಗಿದ್ದ. ಗಿರಿಯಾಸ್ ಶೋರೂಮ್ ಹಿಂಭಾಗದ ಲಾರಿ ನಿಲ್ಲಿಸುವ ಜಾಗಕ್ಕೆ ಬಂದು ನೋಡಿದ್ದ. ಯುವತಿ ಬೆತ್ತಲೆಯಾಗಿ ಲಾರಿಯ ಹಿಂಭಾಗದಲ್ಲಿ ಬಿದ್ದಿದ್ದಳು. ಆಕೆಯ ಮೇಲೆ ಒಂದು ರೆಡ್ ಜಾಕೆಟ್ ಮಾತ್ರ ಇತ್ತು. ಈ ವೇಳೆ ದೂರುದಾರ ಸ್ನೇಹಿತ ತನ್ನ ಬಟ್ಟೆಯಿಂದ ಆಕೆಯ ದೇಹ ಮುಚ್ಚಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಮತ್ತೊಬ್ಬ ಸ್ನೇಹಿತ ಕೂಡ ಮೊಬೈಲ್‌ನಿಂದ ಹೋಗಿದ್ದ ಮೆಸೇಜ್ ಆಧಾರದ ಮೇಲೆ ಸ್ಥಳಕ್ಕೆ ಬಂದಿದ್ದ. ಇಬ್ಬರು ಸೇರಿಕೊಂಡು ಕಾರ್‌ನ ಶೀಟ್ ಕವರ್‌ನಿಂದ ಆಕೆಯ ದೇಹವನ್ನು ಮುಚ್ಚಿಕೊಂಡು ಕಾರಿನಲ್ಲಿ ಮಲಗಿಸಿದ್ದಾರೆ. ಅಷ್ಟರಲ್ಲಿ, ಸ್ಥಳದಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಕೇವಲ ಪ್ಯಾಂಟ್‌ನಲ್ಲಿ ನಿಂತಿದ್ದ. ಗಾಬರಿಯಲಿದ್ದ ಆತನ ಮುಖಕ್ಕೆ ಪರಚಿರುವಂತಹ ಗಾಯಗಳಾಗಿತ್ತು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದೂರುದಾರ ಆರೋಪಿಯನ್ನು ಹಿಡಿದುಕೊಳ್ಳಲು ಹೋದಾಗ ಆತ ಸ್ಥಳದಿಂದ ಓಡಿ ಹೋಗಿದ್ದಾನೆ. ನಂತರ ಆಸ್ವಸ್ಥಗೊಂಡಿದ್ದ ಯುವತಿಯನ್ನು ಸ್ನೇಹಿತನ ಕಾರಿನಲ್ಲಿ ಬೊಮ್ಮಸಂದ್ರ ಖಾಸಗಿ ಆಸ್ಪತ್ರೆಗೆ ದಾಖಲು ದೂರುದಾರ ಮಾಡಿದ್ದ. ಕಾರಿನಲ್ಲಿ ಯುವತಿ ಬಳಿ ಘಟನೆ ಬಗ್ಗೆ ಸ್ನೇಹಿತರು ಕೇಳಿದ್ದರು. ಆಗ ಅಪರಿಚಿತ ವ್ಯಕ್ತಿ, ಅತ್ಯಾಚಾರ ಮಾಡಲು ಯತ್ನಿಸಿರೋದಾಗಿ‌ ಯುವತಿ ಹೇಳಿಕೆ ನೀಡಿದ್ದಾಳೆ. ಘಟನೆ ಬಗ್ಗೆ ದೂರುದಾರ ಆಕೆಯ ತಂದೆ-ತಾಯಿಗೆ ವಿಷಯ ತಿಳಿಸಿದ್ದಾರೆ.

ಯುವತಿ ಪ್ರಾಣ ಉಳಿಸಿದ SOS ಬಟನ್

ಎಚ್ಎಸ್‌ಆರ್ ಲೇಔಟ್ ಯುವತಿ ಅತ್ಯಾಚಾರ ಪ್ರಕರಣದಲ್ಲಿ SOS ಬಟನ್ ಯುವತಿ ಪ್ರಾಣ ಉಳಿಸಿದೆ ಎಂಬ ವಿಷಯ ತಿಳಿದುಬಂದಿದೆ. ಮೊಬೈಲ್‌ನಲ್ಲಿ ಸ್ವಿಚ್ ಆಫ್ ಬಟನ್ ಪ್ರೆಸ್ ಮಾಡಿದಾಗ SOS ಆಪ್ಷನ್ ಕಾಣಲಿದೆ. ಅದಕ್ಕೆ ಎಮೆರ್ಜೆನ್ಸಿ ನಂಬರ್ ಆ್ಯಡ್ ಮಾಡಬಹುದು. ಅದನ್ನು ಪ್ರೆಸ್ ಮಾಡಿದಾಗ ಆ್ಯಡ್ ಮಾಡಿದ ನಂಬರ್‌ಗೆ ನಿರಂತರ ಕರೆ ಹಾಗೂ ಲೊಕೆಶನ್ ಶೇರ್ ಆಗುತ್ತೆ.

ಹೀಗಾಗಿ SOS ನಲ್ಲಿ ತಂದೆ ಹಾಗೂ ಸ್ನೇಹಿತೆ ನಂಬರ್ ಅನ್ನು ಆ್ಯಡ್ ಸಂತ್ರಸ್ತ ಯುವತಿ ಮಾಡಿದ್ದಳು. ಹೀಗಾಗಿ ತಕ್ಷಣ ಸ್ನೇಹಿತರಿಗೆ ಕರೆ ಹೋಗಿದೆ. ಲೊಕೇಶನ್ ಆಧರಿಸಿ ಬಂದು ಸ್ನೇಹಿತರು ಯುವತಿಯ ರಕ್ಷಣೆ ಮಾಡಿದ್ದಾರೆ. ಅರೆನಗ್ನ ಸ್ಥಿತಿಯಲ್ಲೇ ಯುವತಿಯನ್ನು ಆರೋಪಿ ಬಿಟ್ಟು ತೆರಳಿದ್ದ. ದೌರ್ಜನ್ಯ ಎಸಗಿದಾಗ ಯುವತಿ ಕೂಡ ಪ್ರತಿರೋಧ ಒಡ್ಡಿದ್ದಳು. ಇದರಿಂದ‌ ಆರೋಪಿ ಹೆದರಿ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದ. ಸದ್ಯ ಹೆಬ್ಬಗೋಡಿ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಏನಿದು ಪ್ರಕರಣ?

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ.17ರ ರಾತ್ರಿ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು. ನಾಗಾಲ್ಯಾಂಡ್‌ ಮೂಲದ ಯುವತಿಯ ಸ್ಥಿತಿ ತೀರ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಶನಿವಾರ ಮಧ್ಯರಾತ್ರಿ ಘಟನೆ ನಡೆದಿತ್ತು. ಆಟೋದಲ್ಲೇ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು ಎನ್ನಲಾಗಿದೆ. ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ಕೋರಮಂಗಲದ ಪಬ್‌ಗೆ ಹೋಗಿ ವಾಪಸ್‌ ಮನೆಗೆ ಆಟೋದಲ್ಲಿ ಬರುವಾಗ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.

ಭಾನುವಾರ ಘಟನೆ ಸಂಬಂಧ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಂತ್ರಸ್ತೆಗೆ ಮೆಡಿಕಲ್ ಟೆಸ್ಟ್ ಮಾಡಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಚ್‌ಎಸ್‌ಆರ್‌ ಲೇಔಟ್ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಡ್ರಾಪ್‌ ಕೊಡುವ ನೆಪದಲ್ಲಿ ಅತ್ಯಾಚಾರ

ಘಟನೆ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ರಮನ್ ಗುಪ್ತಾ ಮಾಹಿತಿ ನೀಡಿದ್ದಾರೆ. ಶನಿವಾರ ಮಧ್ಯರಾತ್ರಿ 1:30ರ ಸಂಧರ್ಭದಲ್ಲಿ ಈ ಘಟನೆ ನಡೆದಿದೆ. ಅಪರಿಚಿತನ ಜತೆಗೆ ಯುವತಿ ಡ್ರಾಪ್ ತೆಗೆದುಕೊಂಡಿದ್ದಾಳೆ. ಇದೇ ಅವಕಾಶವನ್ನು ಬಳಸಿಕೊಂಡ ಆರೋಪಿ ಅತ್ಯಾಚಾರವೆಸಗಿದ್ದಾನೆ. ಇದು ಗೆಟ್ ಟು ಗೆದರ್‌ ಪಾರ್ಟಿ ಮುಗಿಸಿ ಅಲ್ಲಿಂದ ವಾಪಾಸ್ ಬರುವಾಗ ಘಟನೆ ನಡೆದಿದೆ. ಇದು ಗ್ಯಾಂಗ್ ರೇಪ್ ಅಲ್ಲ, ಡ್ರಾಪ್‌ ತೆಗೆದುಕೊಂಡವನಿಂದ ಈ ಕೃತ್ಯ ನಡೆದಿದೆ. ನಾವು ಕೂಡ ಘಟನಾ ಸ್ಥಳಕ್ಕೆ ಹೋಗಿದ್ದೇವೆ, ಈಗಾಗಲೆ ಐದು ಜನರ ತಂಡವನ್ನು ರಚನೆ ಮಾಡಲಾಗಿದೆ.

ಇದನ್ನೂ ಓದಿ: Accident News : ನರಗುಂದಲ್ಲಿ ಭೀಕರ ಅಫಘಾತ; ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ

ಯುವತಿ ರ‍್ಯಾಪಿಡೋ ಅಥವಾ ರ‍್ಯಾಂಡಮ್ ಬೈಕ್‌ನಲ್ಲಿ ಡ್ರಾಪ್‌ ಪಡೆದಿದ್ದಳಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯಕ್ಕೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಸಂತ್ರಸ್ತೆ ಹೊರ ರಾಜ್ಯದವಳಾಗಿದ್ದು, ಆಕೆಯ ಮೊಬೈಲ್ ಮಿಸ್ ಆಗಿದೆ. ಆಸ್ಪತ್ರೆಯಲ್ಲಿರುವ ಆಕೆ ಚೇತರಿಸಿಕೊಂಡಿದ್ದಾಳೆ. ಬಿಎನ್ ಎಸ್ ಸೆಕ್ಷನ್ 64 ಅಡಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ ಎಂದಿದ್ದಾರೆ.

Exit mobile version