Site icon Vistara News

Physical Abuse: ಮೇಲುಕೋಟೆಯಲ್ಲಿ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಹಳೇ ವಿದ್ಯಾರ್ಥಿ ಬಂಧನ!

Physical Abuse

ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ (Physical Abuse) ಎಸಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯ ಹಳೇ ವಿದ್ಯಾರ್ಥಿಯಿಂದಲೇ ಈ ಹೀನ ಕೃತ್ಯ ನಡೆದಿದ್ದು, ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಯೋಗಿ ಬಂಧಿತ ಆರೋಪಿಯಾಗಿದ್ದಾನೆ. ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಸರ್ಕಾರಿ ಪ್ರೌಢ ಶಾಲೆಯೊಂದರ ವಿದ್ಯಾರ್ಥಿನಿಯರ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಣ್ಣನಂತೆ ನಂಬಿಸಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ನಗ್ನ ಚಿತ್ರ ತೆಗೆದು ಬ್ಲ್ಯಾಕ್‌ ಮೇಲ್ ಮಾಡಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ನಾಲ್ವರು ಸಂತ್ರಸ್ತ ಬಾಲಕಿಯರು ನೀಡಿದ ದೂರಿನ ಮೇರೆಗೆ ಯೋಗಿ ಎಂಬಾತನ ವಿರುದ್ಧ ಮೇಲುಕೋಟೆ ಪೊಲೀಸರು ಪೋಕ್ಸೊ ಕೇಸ್‌ ಜತೆಗೆ ಐಪಿಸಿ ಸೆಕ್ಷನ್ 354 A, 354 D, 509 ಅಡಿ ಕೇಸ್ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಕ್ರೀಡೆಯಲ್ಲಿ ಆಸಕ್ತಿ ಇದ್ದ ಬಾಲಕಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿ, ಡ್ರಾಪ್ ಕೊಡುವ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಇನ್ನು ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಪೋಟೊ ತೆಗೆದು ಅವುಗಳನ್ನ ಹೆತ್ತವರಿಗೆ ಕಳುಹಿಸವುದುದಾಗಿ ಬೆದರಿಸಿ ದೌರ್ಜನ್ಯ ನಡೆಸಿದ್ದ ಎನ್ನಲಾಗಿದೆ. ಹೀಗಾಗಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಗಳ ಮೂಲಕ ವಿದ್ಯಾರ್ಥಿನಿಯರು ನೀಡಿದ ದೂರಿನನ್ವಯ ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ | Cheating Case: ಮದುವೆ ಆಗೋದೇ ಇವಳ ಬ್ಯುಸಿನೆಸ್!‌ ಪೊಲೀಸ್‌ ಅಧಿಕಾರಿ ಸೇರಿ 50 ಮಂದಿ ಜತೆ ವಿವಾಹ!

ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Suraj Revanna Case) ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಸೂರಜ್ ಬಂಧನವಾಗಿ, ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.

ಸಿಆರ್‌ಪಿಸಿ 437 ಅಡಿ ಸೂರಜ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ. ಸೂರಜ್ ರೇವಣ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜುಲೈ 3ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ನ ಜುಲೈ 18ರವರೆಗೆ (Suraj Revanna Case) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದರು. ಇದರಿಂದ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು.

Exit mobile version