ಕಾರವಾರ: ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು (Physical Abuse) ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲ್ಯಾಕ್ ಮೇಲ್ (Black mail) ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಆರೋಪಿಯಾಗಿದ್ದಾನೆ.
ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿ ಪ್ರಶಾಂತ ಭಟ್ ಪರಿಚಯವಾಗಿತ್ತು. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದರು. 2023ರ ಜನವರಿ ತಿಂಗಳಲ್ಲಿ ಪ್ರಶಾಂತ್ ಮಹಿಳೆಯನ್ನು ಭೇಟಿಯಾಗಲು ಮುಂದಾಗಿದ್ದ. ಲಾಡ್ಜ್ ಒಂದರಲ್ಲಿ ರೂಂ ಮಾಡಿ, ಬಲವಂತವಾಗಿ ಮಹಿಳೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದ. ಅಲ್ಲದೇ ಅದೇ ಲಾಡ್ಜಿನಲ್ಲಿ ಮತ್ತೊಮ್ಮೆ ಇದೆ ಘಟನೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ.
ಇದನ್ನೂ ಓದಿ: Actor Suriya: ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ಕೊಟ್ಟು ಸಾಂತ್ವನ ಹೇಳಿದ ನಟ ಸೂರ್ಯ!
ಈ ವೇಳೆ ಪ್ರಶಾಂತ ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೊ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೊ ಕಾಲ್ ಮಾಡಿ ಅಲ್ಲಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ. ಮಾತ್ರವಲ್ಲದೆ ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.
ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ