ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ (Physical abuse) ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.
ಬಾಗಲುಗುಂಟೆ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಕೆಲ ದಿನಗಳ ಹಿಂದೆ ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದಯಾನಂದ್‌ನ ಪೊಲೀಸರು ಬಂಧಿಸಿದ್ದಾರೆ.
ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ದಯಾನಂದ್ ಅರಸೀಕೆರೆ ಬಳಿಯ ಗೊಲ್ಲರಹಳ್ಳಿ ಕುರುಗುಂದ ಗ್ರಾಮ ಪಂಚಾಯಿತಿಯ ಸದಸ್ಯನಾಗಿದ್ದಾನೆ. ಮಹಿಳೆ ಪುರದಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಪರಿಚಯ ಮಾಡಿಕೊಂಡಿದ್ದ. ಶಾಸ್ತ್ರ ಹೇಳುತ್ತಿದ್ದ ಪೂಜಾರಿ ದಯಾನಂದ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಹಿಳೆಗೆ ಕಂಟಕವಿದೆ ಹೇಳಿ ಆಗಾಗ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಒಂದು ಲಕ್ಷಕ್ಕಿಂತ ಹೆಚ್ಚು ಹಣ ಮಹಿಳೆಯಿಂದ ಪಡೆದಿದ್ದ ಎನ್ನಲಾಗಿದೆ.
ಇನ್‌ಸ್ಟಾಗ್ರಾಮ್ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ
ತುಮಕೂರು: ಪರಪುರುಷನ ಮೋಹಕ್ಕೆ ಸಿಲುಕಿದಾಕೆ ತನ್ನ ಪ್ರೀತಿಗೆ ಅಡ್ಡಿಯಾಗಿದ್ದ ಪತಿಯನ್ನೇ ಕೊಂದು (Murder case) ಮುಗಿಸಿದ್ದಾಳೆ. ಇನ್‌ಸ್ಟಾಗ್ರಾಮ್ ಪ್ರಿಯತಮನಿಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಘಟನೆ ನಡೆದಿದೆ.
ಪ್ರಕಾಶ್ (30) ಮೃತ ದುರ್ದೈವಿ. ಹರ್ಷಿತಾ (28) ಪತಿಯನ್ನು ಕೊಲೆ ಮಾಡಿಸಿದವಳು. ಕಲಬುರಗಿ ಜಿಲ್ಲೆಯ ಚಿಂಚುಲಿ ಮೂಲದ ಪ್ರಕಾಶ್‌ಗೆ ಇದೇ ಇನ್‌ಸ್ಟಾಗ್ರಾಮ್‌ನಿಂದ ಮೂರು ವರ್ಷದ ಹಿಂದೆ ಈ ಹರ್ಷಿತಾಳ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು.
ಮದುವೆಯಾದ್ಮೇಲೆ ಪ್ರಕಾಶ್ ಪತ್ನಿಯ ತವರಿನಲ್ಲೇ ವಾಸವಿದ್ದ. ಈ ದಂಪತಿಗೆ ಒಂದೂವರೆ ವರ್ಷದ ಮಗುವೂ ಇತ್ತು. ಆದರೆ ಇತ್ತೀಚೆಗೆ ಹರ್ಷಿತಾಳಿಗೆ ಇನ್‌ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಎಂಬಾತ ಸಂಪರ್ಕಕ್ಕೆ ಸಿಕ್ಕಿದ್ದ. ಗುಂಡನ ಮೋಹಕ್ಕೆ ಸಿಲುಕಿದ ಹರ್ಷಿತಾ, ಪ್ರಕಾಶ್‌ನನ್ನು ಕಡೆಗಣಿಸಿದ್ದಳು. ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರುಪ್ರೇಮಾಂಕುರವಾಗಿತ್ತು.
ಮಾತ್ರವಲ್ಲ, ಮಗು- ಗಂಡನನ್ನು ಬಿಟ್ಟು ಕಳೆದ 2 ತಿಂಗಳ ಹಿಂದೆ ಪ್ರಿಯತಮ ಗುಂಡನ ಜತೆಗೆ ಮನೆ ಬಿಟ್ಟು ಪರಾರಿಯಾಗಿದ್ದಳು. ಈ ವೇಳೆ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳಿ. ಆದರೆ ಒಳಗೊಳಗೆ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು. ಪತಿಯ ಕೊಲೆಗಾಗಿ ಸಹೋದರ ಸೋಮಶೇಖರ್ ಹಾಗೂ ಪ್ರಿಯತಮ ಗುಂಡನಿಗೆ ಸುಪಾರಿ ನೀಡಿದ್ದಳು.
ಪ್ರಕಾಶ್‌ನನ್ನು ಏನೇನೋ ಹೇಳಿ ಪುಸಲಾಯಿಸಿ ಸೋಮಶೇಖರ್ ಕರೆಸಿಕೊಂಡಿದ್ದ. ಗುಂಡ ಮತ್ತು ಆತನ ಸ್ನೇಹಿತ ರಂಗಸ್ವಾಮಯ್ಯ, ಪ್ರಕಾಶ್ ಬರುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಡ್ರ್ಯಾಗರ್‌ನಿಂದ ಎದೆಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದರು. ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಲು ಹೊರಟಿದ್ದರು. ಆದರೆ ಎದೆಭಾಗಕ್ಕೆ ಚುಚ್ಚಿದ ಗಾಯದ ಗುರುತು ಪತ್ತೆ ಮಾಡಿದ ಪೊಲೀಸರು ಇದು ಅಪಘಾತವಲ್ಲ ಬದಲಿಗೆ ಕೊಲೆ ಎಂದು ಖಚಿತ ಪಡಿಸಿಕೊಂಡಿದ್ದರು.
ವಿಚಾರಣೆ ವೇಳೆ ಪತ್ನಿ ಹರ್ಷಿತಾಳ ಮಾಸ್ಟ್‌ರ್ ಪ್ಲ್ಯಾನ್‌ಗೆ ಪೊಲೀಸರೇ ದಂಗಾಗಿದ್ದಾರೆ. ಸದ್ಯ ಕೊರಟಗೆರೆ ಪೊಲೀಸರಿಂದ ಹರ್ಷಿತಾ, ಸೋಮಶೇಖರ್, ರಂಗಸ್ವಾಮಯ್ಯನನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿ ಗುಂಡನಿಗಾಗಿ ಬಲೆ ಬೀಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.