ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ (Minor Aged student) ಜತೆ ಅಸ್ವಾಭಾವಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ (Unnatural sexual act) ನಡೆಸಿ ದೌರ್ಜನ್ಯ ಎಸಗಿದ (Physical abuse) ಅಪರಾಧಿ ಉಪನ್ಯಾಸಕನಿಗೆ (professor) ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ತೀರ್ಪು ನೀಡಿದ್ದಾರೆ.
ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದ ಅಪರಾಧಿ. ಈತ 2014ರ ಆ.1ರಿಂದ 2016ರ ಸೆ.2ರವರೆಗೆ ಪ್ರೌಢ ಶಾಲೆಯ ವಿದ್ಯಾರ್ಥಿಗೆ ಅಸ್ವಾಭಾವಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯವನ್ನು ಎಸಗಿದ್ದ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೃಥ್ವಿರಾಜ್ ಹೈಸ್ಕೂಲ್‌ನಲ್ಲಿ ತನ್ನ ವಿದ್ಯಾರ್ಥಿಯಾಗಿರುವ ಬಾಲಕನನ್ನು ತನ್ನ ಮನೆಗೆ ಕರೆಯಿಸಿ ನಿರಂತರವಾಗಿ ಲೈಂಗಿಕ ಕ್ರಿಯೆಯನ್ನು ನಡೆಸುತ್ತಿದ್ದ. ಯಾರಿಗಾದರೂ ಹೇಳಿದರೆ ಬಿಡುವುದಿಲ್ಲ ಪರೀಕ್ಷೆಯಲ್ಲಿ ಅಂಕ ಕಡಿತ ಮಾಡುತ್ತೇನೆ. ಹಾಜರಾತಿ ಕಡಿತ ಮಾಡುತ್ತೇನೆ ಎಂದು ಬೆದರಿಸಿದ್ದ.
ಈ ನಡುವೆ ಬಾಲಕನ ಮರ್ಮಾಂಗದಲ್ಲಿ ಗಾಯವಾಗಿ ವೈದ್ಯರಲ್ಲಿ ತಪಾಸಣೆಗೆ ಕರೆದುಕೊಂಡು ಹೋಗಲಾಗಿತ್ತು. ಈ ಚಿಕಿತ್ಸೆ ವೇಳೆ ಬಾಲಕ ತನ್ನ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ಮನೆಯವರು ಮತ್ತು ವೈದ್ಯರಿಗೆ ತಿಳಿಸಿದ್ದ.
ಅಂದಿನ ಸುರತ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ಚೆಲುವರಾಜ್ ಬಿ. ತನಿಖೆ ನಡೆಸಿ, ನ್ಯಾಯಾಲಯಕ್ಕೆ ಅವರು ಆರೋಪಿಯ ಅಪರಾಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಂಜುಳಾ ಅವರು ಆರೋಪ ದೃಢಪಟ್ಟಿರುವುದರಿಂದ ತಪ್ಪಿತಸ್ಥನೆಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಎಷ್ಟು ಶಿಕ್ಷೆ, ಎಷ್ಟು ದಂಡ?
ಅಪರಾಧಿಗೆ ಪೋಕ್ಸೊ ಕಾಯಿದೆ ಸೆಕ್ಷನ್ 6ರಡಿ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 6 ತಿಂಗಳು ಹೆಚ್ಚುವರಿ ಕಠಿಣ ಸಜೆ, ಪೋಕ್ಸೊ ಸೆಕ್ಷನ್ 10ರಂತೆ 5 ವರ್ಷ ಸಾದಾ ಸಜೆ, ಐದು ಸಾವಿರ ರೂ. ದಂಡ ಮತ್ತು ದಂಡ ಪಾವತಿಸಲು ತಪ್ಪಿದರೆ ಮೂರು ತಿಂಗಳ ಸಾದಾ ಸಜೆ, ಐಪಿಸಿ ಸೆಕ್ಷನ್ 377ರಡಿ 10 ವರ್ಷ ಕಠಿನ ಸಜೆ, 10 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ ಮೂರು ತಿಂಗಳ ಕಠಿಣ ಸಜೆ, ಐಪಿಸಿ 506ರಡಿ 1 ವರ್ಷ ಸಾದಾ ಸಜೆ, ಒಂದು ಸಾವಿರ ರೂ.ದಂಡ, ಒಂದು ವೇಳೆ ದಂಡ ಪಾವತಿಸದಿದ್ದರೆ ಹೆಚ್ಚುವರಿ ಒಂದು ತಿಂಗಳು ಹೆಚ್ಚುವರಿ ಸಾದಾ ಸಜೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಅಲ್ಲದೆ ಸಂತ್ರಸ್ತ ಬಾಲಕನಿಗೆ ರಾಜ್ಯ ಸರಕಾರ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.
ಇದನ್ನೂ ಓದಿ : Physical Abuse : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸವಾರ ಅರೆಸ್ಟ್