ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಕೇಂದ್ರ ನಾಯಕರು ಪಣತೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ (Modi In Karnataka) ಹಲವು ಸಚಿವರು ರಾಜ್ಯದಲ್ಲಿ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅದರಲ್ಲೂ, ಬೃಹತ್ ರ‍್ಯಾಲಿ, ಸಮಾವೇಶಗಳ ಮೂಲಕ ಮೋದಿ ಅವರು ಮತ ಬೇಟೆ ಆರಂಭಿಸಿದ್ದಾರೆ. ಶನಿವಾರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ಮೋದಿ ಅವರು ಭಾನುವಾರವೂ (April 30) ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಹೀಗಿದೆ.
ಶನಿವಾರ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ಮೋದಿ ಅವರು ಭಾನುವಾರ ಬೆಳಗ್ಗೆ 10.35ಕ್ಕೆ ರಾಜಭವನದಿಂದ ರಸ್ತೆ ಮಾರ್ಗವಾಗಿ ಬೆಂಗಳೂರು ಹೆಲಿಪ್ಯಾಡ್‌ಗೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಕೋಲಾರಕ್ಕೆ ತೆರಳಲಿರುವ ಮೋದಿ ಬೆಳಗ್ಗೆ 11.30ರಿಂದ 12.15ರವರೆಗೆ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೋಲಾರದಿಂದ ಮಧ್ಯಾಹ್ನ 12.30ಕ್ಕೆ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿಯವರು ಚನ್ನಪಟ್ಟಣಕ್ಕೆ ತೆರಳಲಿದ್ದಾರೆ. ಚನ್ನಪಟ್ಟಣದಲ್ಲಿ ಮಧ್ಯಾಹ್ನ 1.30ರಿಂದ 2.15ರವರೆಗೆ ಚುನಾವಣೆ ಸಮಾವೇಶದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿಯು ಬೇಲೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ 3.45ರಿಂದ ಬೇಲೂರಿನಲ್ಲಿ ಸಮಾವೇಶ ನಡೆಯಲಿದ್ದು, ಮೋದಿ ಅವರು ಸಂಜೆ 4.30ರವರೆಗೆ ಪಾಲ್ಗೊಳ್ಳಲಿದ್ದಾರೆ.
ಸಂಜೆ 4.45ಕ್ಕೆ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ಹೊರಡಲಿರುವ ಮೋದಿ, 5.45ರಿಂದ 6.30ರವರೆಗೆ ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಂತರ ಸಂಜೆ 7ಗಂಟೆಗೆ ಮೈಸೂರು ಏರ್‌ಪೋರ್ಟ್‌ನಿಂದ ದೆಹಲಿಗೆ ಹಾರಾಟ ನಡೆಸಲಿದ್ದಾರೆ. ರಾತ್ರಿ 9.50ಕ್ಕೆ ಅವರು ದೆಹಲಿ ತಲುಪಲಿದ್ದಾರೆ.
ಇದನ್ನೂ ಓದಿ: Modi In Karnataka: ಚನ್ನಪಟ್ಟಣದಲ್ಲಿ ಭಾನುವಾರ ಮೋದಿ ಪ್ರಚಾರ; ಬೆಂಗಳೂರು-ಮೈಸೂರು ಹೆದ್ದಾರಿ ಬಂದ್