Site icon Vistara News

IAS Posted | ಎಂಟು ಐಎಎಸ್‌ ಅಧಿಕಾರಿಗಳಿಗೆ ಸ್ಥಳ ನಿಯೋಜನೆ, ವರ್ಗಾವಣೆ: ರಾಜ್ಯ ಸರ್ಕಾರದಿಂದ ಆದೇಶ

Vidhana soudha

ಬೆಂಗಳೂರು: ಸ್ಥಳ ನಿರೀಕ್ಷೆಯಲ್ಲಿದ್ದ ಐಎಎಸ್‌ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಹಾಗೂ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ‌ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸ್ಥಳ ನಿರೀಕ್ಷೆಯಲ್ಲಿದ್ದ ಐಎಎಸ್‌ ಅಧಿಕಾರಿ ಶೆಟ್ಟೆನ್ನವರ್ ಎಸ್.ಬಿ ಅವರನ್ನು ಬೆಂಗಳೂರಿನ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ, ಮಂಜುನಾಥ್.ಜೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪದನಿಮಿತ್ತ ಜಂಟಿ ಕಾರ್ಯದರ್ಶಿ ಹಾಗೂ ಸರ್ಕಾರದ ವಿಶೇಷ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಅನೀಸ್ ಕಣ್ಮಣಿ ಜಾಯ್ ಅವರನ್ನು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿ, ಚಾರುಲತಾ ಸೋಮಲ್ ಅವರನ್ನು ನವದೆಹಲಿಯ ಕರ್ನಾಟಕ ಭವನದ ಹೆಚ್ಚುವರಿ ರೆಸಿಡೆಂಡ್ ಕಮಿಷನರ್‌ ಆಗಿ ನೇಮಿಸಲಾಗಿದೆ. ಬಸವರಾಜೇಂದ್ರ ಎಚ್. ಅವರನ್ನು ಬೆಂಗಳೂರಿನ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೆಳದರ್ಜೆಯ ಹುದ್ದೆಯಲ್ಲಿ ಸರ್ಕಾರದ ಜಂಟಿ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.

ಕವಿತಾ ಎಸ್. ಮನ್ನಿಕೇರಿ ಅವರನ್ನು ಕರ್ನಾಟಕ ಗೃಹ ಮಂಡಳಿ ಆಯುಕ್ತೆಯಾಗಿ ನಿಯೋಜಿಸಲಾಗಿದ್ದು, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಆಗಿದ್ದ ರವಿ ಕುಮಾರ್ ಎಂ.ಆರ್. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಹಾಗೂ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದ ಡಾ. ವಾಸಂತಿ ಅಮರ್ ಬಿ.ವಿ. ಅವರನ್ನು ಬೆಂಗಳೂರು ನಗರ ಜಿಲ್ಲೆ (ಉತ್ತರ) ವಿಶೇಷ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಇದನ್ನೂ ಓದಿ | Appu Namana | ಅಪ್ಪುಗೆ ನಾಳೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ, ಸಾವಿರಾರು ಜನರ ಆಗಮನ ನಿರೀಕ್ಷೆ

Exit mobile version