Best places to visit in Mandya : ಮಂಡ್ಯದ ಸುತ್ತಮುತ್ತ ನೋಡಲೇಬೇಕಾದ ಸ್ಥಳಗಳಿವು - Vistara News

ಕರ್ನಾಟಕ

Best places to visit in Mandya : ಮಂಡ್ಯದ ಸುತ್ತಮುತ್ತ ನೋಡಲೇಬೇಕಾದ ಸ್ಥಳಗಳಿವು

ಮಂಡ್ಯ ಜಿಲ್ಲೆಯ ಸುತ್ತಮುತ್ತ ಸಾಕಷ್ಟು ಪ್ರವಾಸಿ ತಾಣಗಳಿವೆ. ಅವುಗಳ ಕುರಿತಾದ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

mandya tourism
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರಿಗರಿಗೆ ಒಂದು ದಿನದ ಪ್ರವಾಸಕ್ಕೆ ಸರಿಹೊಂದುವ ಅನೇಕ ಸ್ಥಳಗಳಿವೆ. ಅದರಲ್ಲಿ ಮೈಸೂರು ಕೂಡ ಒಂದು. ಆದರೆ ಮೈಸೂರಿಗಿಂತ ಮೊದಲು ಸಿಗುವ ಮಂಡ್ಯದ (Best places to visit in Mandya) ಸನಿಹದಲ್ಲೇ ಹಲವಾರು ಪ್ರವಾಸಿ ತಾಣಗಳಿವೆ. ಅಂತಹ ಸ್ಥಳಗಳ ಬಗ್ಗೆ ಮಾಹಿತಿ ಇಲ್ಲಿದೆ.

ಶ್ರೀರಂಗಪಟ್ಟಣ


ಶ್ರೀರಂಗಪಟ್ಟಣದ ಶ್ರೀ ರಂಗನಾಥನ ದೇವಾಲಯವನ್ನು ಕ್ರಿ.ಶ 984ರಲ್ಲಿ ತಿರುಮಲಯ್ಯ ಎಂಬ ಗಂಗರ ಸರದಾರನು ನಿರ್ಮಿಸಿದನು ಎಂದು ಶಾಸನವು ತಿಳಿಸುತ್ತದೆ. ಇದು ಹೊಯ್ಸಳ ಮತ್ತು ವಿಜಯನಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದೆ. ಇಲ್ಲಿನ ಮುಖ್ಯ ದೇವತೆಯು ಭಗವಂತನಾದ ವಿಷ್ಣುವಿನ (ರಂಗನಾಥನ) ರೂಪದಲ್ಲಿ ಆದಿಶೇಷನ (ಸಾವಿರ ತಲೆಯ ದೈವಿಕ ಸರ್ಪವು ಹಾವುಗಳ ರಾಜ) ಸುರುಳಿಗಳ ಮೇಲೆ ಮಲಗಿದ ರೀತಿಯಲ್ಲಿದೆ. ಇಲ್ಲಿ ಭಗವಾನ್ ವಿಷ್ಣುವು ತನ್ನ ನಾಭಿಯಲ್ಲಿ ದೇವಿ, ಶ್ರೀದೇವಿ, ಭೂದೇವಿ ಮತ್ತು ಬ್ರಹ್ಮ ದೇವರಿಂದ ಸುತ್ತುವರಿದಿದ್ದಾನೆ. ಅವನ ಪಾದದಲ್ಲಿ ಕಾವೇರಿ ಎಂದು ಗುರುತಿಸಲಾದ ಲಕ್ಷ್ಮಿ ದೇವಿಯ ಕುಳಿತಿರುವ ಚಿತ್ರವಿದೆ. ಸಂಕೀರ್ಣ ಸಮರ್ಪಿತ ನರಸಿಂಹ, ಗೋಪಾಲಕೃಷ್ಣ, ಶ್ರೀನಿವಾಸ, ಹನುಮಾನ್, ಗರುಡ, ರಂಗನಾಯಕಿ, ಸುದರ್ಶನ ಚಕ್ರ ಮತ್ತು ಆಳ್ವಾರರುಗಳಲ್ಲಿ ಅನೇಕ ಉಪ-ದೇಗುಲಗಳಿವೆ.

ಇದನ್ನೂ ಓದಿ: Places To Visit In July : ಜುಲೈ ತಿಂಗಳಲ್ಲಿ ಸುಮಧುರ ಪ್ರವಾಸಕ್ಕೆ ಸೂಕ್ತ ಸ್ಥಳಗಳಿವು…
ಸುದೀರ್ಘ ಕಾಲ ಮೈಸೂರು ಸಾಮ್ರಾಜ್ಯದ ರಾಜಧಾನಿಯಾಗಿದ್ದದ್ದು ಶ್ರೀರಂಗಪಟ್ಟಣ. ಆದರೂ ಇದು ಹೆಚ್ಚಾಗಿ ಗುರುತಿಸಿಕೊಂಡಿದ್ದು ಟಿಪು ಸುಲ್ತಾನನಿಂದ. ಟಿಪ್ಪು ಸುಲ್ತಾನನು ಶ್ರೀರಂಗಪಟ್ಟಣದಲ್ಲಿ ಬೇಸಿಗೆ ಅರಮನೆಯನ್ನು ಕಟ್ಟಿಕೊಂಡಿದ್ದ. ಇದೀಗ ಅದು ವಸ್ತು ಸಂಗ್ರಾಹಲಯವಾಗಿದೆ. ಟಿಪ್ಪು ಮತ್ತು ಅವನ ತಂದೆ ಹೈದರ್‌ ಅಲಿಯನ್ನು ಸಮಾಧಿ ಮಾಡಿದ ಗುಂಬಜ್‌, ಜಾಮಾ ಮಸೀದಿ, ಗನ್‌ ಪೌಡರ್‌ ಕೋಣೆ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

ಪಾಂಡವಪುರ


ಮಂಡ್ಯದಿಂದ 28 ಕಿ.ಮೀ ದೂರದಲ್ಲಿರುವ ಪಾಂಡವಪುರ ಹೈದರ್‌ ಮತ್ತು ಟಿಪ್ಪು ಸುಲ್ತಾನರ ಆಳ್ವಿಕೆಯ ಸಮಯದಲ್ಲಿ ಫ್ರೆಂಚ್‌ ಸೈನ್ಯದ ಶಿಬಿರದ ಜಾಗವಾಗಿತ್ತು. ಅದೇ ಕಾರಣಕ್ಕೆ ಈ ಸ್ಥಳವನ್ನು ಫ್ರೆಂಚ್‌ ರಾಕ್ಸ್‌ ಎಂದೂ ಕರೆಯಲಾಗುತ್ತದೆ. ಪಾಂಡವಪುರವು ಮಹಾಭಾರತಕ್ಕೆ ಸಂಬಂಧಿಸಿದ ಘಟನೆಗಳೊಂದಿಗೆ ಸಂಬಂಧಿಸಿದೆ. ಪಾಂಡವರು ಕಾಡಿನಲ್ಲಿದ್ದಾಗ, ಮೇಣದ ಅರಮನೆಯಿಂದ ತಪ್ಪಿಸಿಕೊಂಡ ನಂತರ, ಇಲ್ಲಿನ ‘ಕುಂತಿ ಬೆಟ್ಟ’ ಎಂಬ ಬೆಟ್ಟದ ಮೇಲೆ ಬೀಡು ಬಿಟ್ಟಿದ್ದರು ಎಂದು ನಂಬಲಾಗಿದೆ. ಅದೇ ಕಾರಣಕ್ಕೆ ಇದನ್ನು ಪಾಂಡವಪುರ ಎಂದು ಕರೆಯಲಾಗುತ್ತದೆ. ಕುಂತಿ ಬೆಟ್ಟವು ಒಂದೇ ಬೆಟ್ಟವಲ್ಲ. ಹಲವಾರು ಮೈಲುಗಳಷ್ಟು ಪ್ರದೇಶದಲ್ಲಿ ಹರಡಿರುವ ಅನೇಕ ಬೆಟ್ಟಗಳ ಸರಪಳಿಯಾಗಿದೆ. ಈ ಬೆಟ್ಟಗಳಿಗೆ ಕುಂತಿ, ಭೀಮ ಮತ್ತು ಬಕಾಸುರನ ದಂತಕಥೆಗಳೊಂದಿಗೆ ಸಂಬಂಧವಿರುವುದರಿಂದ ಈ ಬೆಟ್ಟಗಳಿಗೆ ಸ್ಥಳೀಯವಾಗಿ ಕುಂತಿ ಬೆಟ್ಟ, ಭೀಮನ ಬೆಟ್ಟ (ಒನಕೆ ಬೆಟ್ಟ), ಬಕಾಸುರ ಬೆಟ್ಟ ಎಂದು ಕರೆಯಲಾಗುತ್ತದೆ. ಕುಂತಿ ಬೆಟ್ಟದ ಮೇಲೆ ಶಿವನ ದೇವಾಲಯ ಮತ್ತು ಕುಂತಿ ಕೋಲ ಎಂದು ಕರೆಯಲ್ಪಡುವ ತೊಟ್ಟಿಯಿದೆ. ಹಾಗೆಯೇ ಭೀಮನ ಬಂಡಿ ಮತ್ತು ಭೀಮನ ಪಾದದ ಗುರುತೂ ಇಲ್ಲಿದೆ. ಕುಂತಿ ಬೆಟ್ಟದ ತಪ್ಪಲಿನಲ್ಲಿ ಶಾಲೆ, ಹಾಸ್ಟೆಲ್ ಮತ್ತು ಕಲ್ಯಾಣ ಮಂಟಪದೊಂದಿಗೆ ದಕ್ಷಿಣಾಮೂರ್ತಿ ಮತ್ತು ಮಲ್ಲಿಕಾರ್ಜುನ ದೇವಾಲಯಗಳಿವೆ.

ರಂಗನತಿಟ್ಟು ಪಕ್ಷಿಧಾಮ


1940ರಲ್ಲಿ ಪ್ರಸಿದ್ಧ ಪಕ್ಷಿ ವಿಜ್ಞಾನಿ ಡಾ. ಸಲೀಂ ಅಲಿ ಅವರ ಅಪೇಕ್ಷೆಯ ಮೇರೆಗೆ ಅಭಯಾರಣ್ಯವಾಗಿ ಘೋಷಿಸಲ್ಪಿಟ್ಟಿದ್ದು ರಂಗನತಿಟ್ಟು ಪಕ್ಷಿಧಾಮ. ಈ ಪಕ್ಷಿಧಾಮ ಕಾವೇರಿ ನದಿಯ ದಡದಲ್ಲಿ 0.67 ಚ.ಕಿ.ಮೀನಷ್ಟು ವಿಸ್ತೀರ್ಣದಲ್ಲಿದೆ. ಇಲ್ಲಿಗೆ ಅಮೆರಿಕ, ಯುರೋಪ್‌ ಮತ್ತು ಸೈಬೀರಿಯಾದಿಂದ ವಲಸೆ ಪಕ್ಷಿಗಳು ಬರುತ್ತವೆ. ಇಲ್ಲಿ ದೋಣಿ ವಿಹಾರಕ್ಕೂ ಅವಕಾವಿದೆ. ಕೊಕ್ಕರೆ, ಮಿಂಚುಳ್ಳಿ, ಕಾರ್ಮೊರೆಂಟ್, ಡಾರ್ಟರ್, ಹೆರಾನ್‌ಗಳು, ಕಾಡು ಬಾತುಕೋಳಿಗಳು, ರಿವರ್ ಟರ್ನ್, ಕ್ಯಾಟಲ್ ಎಗ್ರೆಟ್ಸ್, ಇಂಡಿಯನ್ ರೋಲರ್, ಐಬಿಸ್, ಕಾಮನ್ ಸ್ಪೂನ್‌ಬಿಲ್, ಗ್ರೇಟ್ ಸ್ಟೋನ್ ಪ್ಲೋವರ್ ಮತ್ತು ಪೆಲಿಕಾನ್‌ಗಳನ್ನು ಇಲ್ಲಿ ಕಾಣಬಹುದು. ಹಾಗೆಯೇ ಮೊಸಳೆಗಳನ್ನೂ ಕೂಡ ಇಲ್ಲಿ ಸಾಕಲಾಗಿದೆ.

ಇದನ್ನೂ ಓದಿ: D.K. Shivakumar: ಎರಡು ದಿನ ನವದೆಹಲಿ ಪ್ರವಾಸಕ್ಕೆ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್‌

ಕೊಕ್ಕರೆಬೆಳ್ಳೂರು


ನವೆಂಬರ್‌ ಮತ್ತು ಡಿಸೆಂಬರ್‌ ತಿಂಗಳಲ್ಲಿ ಈ ಕೊಕ್ಕರೆಬೆಳ್ಳೂರಿಗೆ ಸ್ಪಾಟ್‌-ಬಿಲ್ಡ್‌ ಪೆಲಿಕಾನ್‌ಗಳು ಮತ್ತು ಬಣ್ಣದ ಬಣ್ಣದ ಕೊಕ್ಕರೆಗಳು ವಲಸೆ ಬರುತ್ತವೆ. ಪ್ರತಿ ವರ್ಷ ಈ ಸಮಯದಲ್ಲಿ ಪ್ರಪಂಚದಾದ್ಯಂತದ ಪಕ್ಷಿ ಪ್ರೇಮಿಗಳು ಈ ಸ್ಥಳಕ್ಕೆ ಬಂದು ಪಕ್ಷಿಗಳನ್ನು ವೀಕ್ಷಿಸುತ್ತಾರೆ. ಪೆಲಿಕಾನ್‌ಗಳು ಮಾತ್ರವಲ್ಲದೆ ಹಳ್ಳಿಯ ಮರಗಳಲ್ಲಿ ಗೂಡುಕಟ್ಟುವ ಮತ್ತು ಸಂತಾನೋತ್ಪತ್ತಿ ಮಾಡುವ ಇತರ ಪಕ್ಷಿಗಳಾದ ಕಾರ್ಮೊರೆಂಟ್, ಬ್ಲ್ಯಾಕ್ ಐಬಿಸ್, ಗ್ರೇ ಹೆರಾನ್, ಕಪ್ಪು-ಕಿರೀಟದ ನೈಟ್ ಹೆರಾನ್ ಮತ್ತು ಇಂಡಿಯನ್ ಪಾಂಡ್ ಹೆರಾನ್ ಅನ್ನೂ ನೀವಿಲ್ಲಿ ಕಾಣಬಹುದು. ಹಳ್ಳಿಗರು ಈ ಪಕ್ಷಿಗಳ ಹಿಕ್ಕೆಗಳನ್ನು ತಮ್ಮ ಕೃಷಿಗೆ ಗೊಬ್ಬರವಾಗಿ ಬಳಸುತ್ತಾರೆ.

ಶಿವನಸಮುದ್ರ


ನಿಸರ್ಗ ಪ್ರೇಮಿಗಳಿಗೆ ಉಲ್ಲಾಸ ತಂದುಕೊಡುವಂತಹ ಸ್ಥಳ ಶಿವನಸಮುದ್ರ. ಕಾಡಿನಿಂದ ಕೂಡಿದ ಬೆಟ್ಟಗಳ ನಡುವೆ ನೀರು ಗರ್ಜಿಸಿಕೊಂಡು 75 ಮೀಟರ್‌ ಆಳಕ್ಕೆ ಬೀಳುತ್ತದೆ. ಮಳೆಗಾಲದ ಸಮಯದಲ್ಲಿ ಇಲ್ಲಿ ಕಾವೇರಿ ನದಿ ಎರಡು ಕವಲೊಡೆದುಕೊಂಡು ಜಲಪಾತದ ರೂಪದಲ್ಲಿ ಬೀಳುವುದನ್ನು ಕಾಣಬಹುದು. ಈ ಎರಡು ಜಲಪಾತಗಳನ್ನು ಗಗನಚುಕ್ಕಿ ಮತ್ತು ಭರಚುಕ್ಕಿ ಎಂದು ಕರೆಯಲಾಗುತ್ತದೆ. ಶಿವನಸಮುದ್ರವು 1902ರಲ್ಲಿ ಕೋಲಾರದ ಗೋಲ್ಡ್ ಫೀಲ್ಡ್‌ಗಳಿಗೆ ವಿದ್ಯುತ್ ಪೂರೈಸಲು ಸ್ಥಾಪಿಸಲಾದ ಭಾರತದ ಮೊದಲ ಜಲವಿದ್ಯುತ್ ಸ್ಥಾವರಕ್ಕೆ ನೆಲೆಯಾಗಿದೆ.

ಕಾವೇರಿ ವನ್ಯಜೀವಿ ಅಭಯಾರಣ್ಯ:


ಕಾವೇರಿ ವನ್ಯಜೀವಿ ಅಭಯಾರಣ್ಯವು ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳನ್ನು ವ್ಯಾಪಿಸಿರುವ ಸಂರಕ್ಷಿತ ವನ್ಯಜೀವಿ ಪ್ರದೇಶವಾಗಿದೆ. ಇದು ಸುಮಾರು 519 ಚ.ಕಿ.ಮೀ. ವಿಸ್ತೀರ್ಣಕ್ಕೆ ಹಬ್ಬಿರುವ ಅಭಯಾರಣ್ಯವಾಗಿದೆ.

ಆದಿಚುಂಚನಗಿರಿ ನವಿಲು ಅಭಯಾರಣ್ಯ

ಆದಿಚುಂಚನಗಿರಿ ಯಾತ್ರಾ ಕೇಂದ್ರದ ಪಕ್ಕದಲ್ಲಿ ಆದಿಚುಂಚನಗಿರಿ ನವಿಲು ಅಭಯಾರಣ್ಯವಿದೆ. ನಾಗಮಂಗಲ ತಾಲೂಕಿನಲ್ಲಿರವ ಈ ಅಭಯಾರಣ್ಯವು 88.4 ಹೆಕ್ಟೇರ್‌ ವಿಸ್ತೀರ್ಣಕ್ಕೆ ಹಬ್ಬಿದೆ. ಇಲ್ಲಿ ಸುಮಾರು 99 ಜಾತಿಯ ಪಕ್ಷಿಗಳು, 32 ಜಾತಿಯ ಚಿಟ್ಟೆಗಳು ಮತ್ತು ಹಲವಾರು ಜಾತಿಯ ಸರೀಸೃಪಗಳು ಹಾಗೆಯೇ ಉಭಯಚರಗಳನ್ನು ಹೊಂದಿದೆ.

ಇದನ್ನೂ ಓದಿ: Benefits Of Cardamom: ಏಲಕ್ಕಿ ಪರಿಮಳಕ್ಕೆ ಮಾತ್ರವಲ್ಲ, ಆರೋಗ್ಯಕ್ಕೂ ಬೇಕು!

ಬಲಮುರಿ ಜಲಪಾತ


ಶ್ರೀರಂಗಪಟ್ಟಣದಿಂದ 12 ಕಿ.ಮೀ ದೂರದಲ್ಲಿರುವ ಬಲಮುರಿ ಜಲಪಾತ ಚಿಕ್ಕದಾದರೂ ರಮಣೀಯ ಜಲಪಾತವಾಗಿದೆ. ಚೆಕ್‌ ಡ್ಯಾಮ್‌ ಮೇಲೆ ನೀರು ಬೀಳುವುದನ್ನು ಇಲ್ಲಿ ಕಾಣಬಹುದು. ನೀರಿನಲ್ಲಿ ಯಾವುದೇ ಭಯವಿಲ್ಲದೆ ಆಟವಾಡಲು ಬಯಸುವವರು ಈ ಸ್ಥಳಕ್ಕೆ ಭೇಟಿ ನೀಡಬಹುದು.

ಹೇಮಗಿರಿ ಜಲಪಾತ

ಕೆ.ಆರ್.ಪೇಟೆಯಿಂದ ಸುಮಾರು 10 ಕಿ.ಮೀ ದೂರವನ್ನು ಕ್ರಮಿಸಿದರೆ ನೀವು ಹೇಮಗಿರಿ ಜಲಪಾತವನ್ನು ಕಾಣಬಹುದು. ಹೇಮಾವತಿ ನದಿಯಿಂದಾಗಿರುವ ಈ ಜಲಪಾತವು ಸಂಜೆಯ ವಿಹಾರಕ್ಕೆ ಹೇಳಿ ಮಾಡಿಸಿದ ಸ್ಥಳವೆಂದೇ ಹೇಳಬಹುದು.

ಭೀಮೇಶ್ವರಿ ನೇಚರ್ ಅಂಡ್ ಅಡ್ವೆಂಚರ್ ಕ್ಯಾಂಪ್


ರಾಜ್ಯ ಸರ್ಕಾರ ನಡೆಸುವ ಜಂಗಲ್‌ ಲಾಡ್ಜ್‌ ಮತ್ತು ರೆಸಾರ್ಟ್‌ಗಳ ಒಂದು ಘಟಕ ಭೀಮೇಶ್ವರಿ ನೇಚರ್‌ ಅಂಡ್‌ ಅಡ್ವೆಂಚರ್‌ ಕ್ಯಾಂಪ್‌. ಈ ಕ್ಯಾಂಪ್‌ನಲ್ಲಿ ಹಲವು ಸಾಹಸಮಯ ಕ್ರೀಡೆಗಳನ್ನು ನೀವು ಆಡಬಹುದಾಗಿದೆ. ಜಿಪ್‌ ಲೈನ್‌, ರೋಪ್‌ ವಾಕಿಂಗ್‌, ಕಯಾಕಿಂಗ್‌ ಸೇರಿ ಹಲವು ಆಟಗಳು ಇಲ್ಲಿವೆ. ಮಳೆಗಾಲದ ನಂತರ ಆಗಸ್ಟ್‌ನಿಂದ ಫೆಬ್ರವರಿ ನಡುವೆ ಇಲ್ಲಿಗೆ ಭೇಟಿ ನೀಡುವುದು ಸೂಕ್ತ. ಕಾವೇರಿ ನದಿ ಹರಿಯುವ ಈ ಸ್ಥಳ ನಿಸರ್ಗ ಪ್ರಿಯರಿಗೂ ಇಷ್ಟವಾಗುತ್ತದೆ.

ಶಿಂಷಾ ಜಲಪಾತ

ಮಳವಳ್ಳಿ ಪಟ್ಟಣದಿಂದ 25 ಕಿ.ಮೀ ಪ್ರಯಾಣ ಮಾಡಿದರೆ ನಿಮಗೆ ಶಿಂಷಾ ಜಲಪಾತ ಸಿಗುತ್ತದೆ. ಈ ಜಲಪಾತದಲ್ಲಿ ಶಿಂಷಾ ನದಿ 200 ಅಡಿ ಆಳಕ್ಕೆ ಬಿದ್ದು ಜಲಪಾತದ ರೂಪ ಪಡೆದುಕೊಳ್ಳುತ್ತದೆ. ಇಲ್ಲಿ ನೇತಾಡುವ ಸೇತುವೆಯೂ ಇದ್ದು, ಪ್ರವಾಸಿಗರನ್ನು ಸೆಳೆಯುತ್ತದೆ.

ಇದನ್ನೂ ಓದಿ: Delhi Court Firing: ಕೋರ್ಟ್‌ ಆವರಣದಲ್ಲಿ ಹೈಡ್ರಾಮಾ; ವಕೀಲರ ಮಧ್ಯೆಯೇ ಸಂಘರ್ಷ, ಫೈರಿಂಗ್‌ ವಿಡಿಯೊ ವೈರಲ್

ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್)


ಮೈಸೂರು ರಾಜ್ಯವಾಗಿದ್ದ ಸಮಯದಲ್ಲಿ ಮೈಸೂರು ಮತ್ತು ಅಕ್ಕಪಕ್ಕದ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವುದಕ್ಕೆ ಮತ್ತು ಶಿವನಸಮುದ್ರ ಜಲವಿದ್ಯುತ್‌ ಕೇಂದ್ರಕ್ಕೆ ನೀರು ಪೂರೈಸುವ ಉದ್ದೇಶವನ್ನಿಟ್ಟುಕೊಂಡು ಕೃಷ್ಣರಾಜ ಸಾಗರ ಆಣೆಕಟ್ಟನ್ನು ನಿರ್ಮಿಸಲಾಯಿತು. ಭಾರತ ರತ್ನ ಸರ್‌.ಎಂ.ವಿಶ್ವೇಶ್ವರಯ್ಯ ಅವರು ಟಿ.ಆನಂದ ರಾವ್‌, ಸರ್‌ ಮಿರ್ಜಾ ಇಸ್ಮಾಯಿಲ್‌ ಸೇರಿ ಹಲವು ಇಂಜಿನಿಯರ್‌ಗಳ ಜತೆ ಸೇರಿಕೊಂಡು ಮಾಡಿದ ಆಣೆಕಟ್ಟಿದು. ಅಣೆಕಟ್ಟಿನ ಕೆಲಸವು 1911-1932 ರ ನಡುವೆ ಪೂರ್ಣಗೊಂಡಿತು. ಅಣೆಕಟ್ಟು 8600 ಅಡಿ ಉದ್ದ ಮತ್ತು 130 ಅಡಿ ಎತ್ತರವಿದೆ.

ಬೃಂದಾವನ ಉದ್ಯಾನವನ


ಬೃಂದಾವನ ಉದ್ಯಾನವನ ಸುಮಾರು 60 ಎಕರೆ ವಿಸ್ತೀರ್ಣ ಹೊಂದಿದೆ. ಈ ಉದ್ಯಾನವನವು ಕಾಶ್ಮೀರದ ಶಾಲಿಮಾರ್ ಉದ್ಯಾನವನದ ಮಾದರಿಯಲ್ಲಿ, ಹಚ್ಚ ಹಸಿರಿನ ಹುಲ್ಲುಹಾಸುಗಳು, ಸಸ್ಯಾಲಂಕರಣ ಮತ್ತು ಕಾರಂಜಿಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಸತ್ಯಾಗ್ರಹ ಸೌಧ, ಶಿವಪುರ


ಇದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಿಗುವ ಮದ್ದೂರಿನಲ್ಲಿರುವ ಸ್ವಾತಂತ್ರ್ಯ ಹೋರಾಟದ ಸ್ಮಾರಕ. ಇದನ್ನು 1938 ರ ಶಿವಪುರ ಧ್ವಜ ಸತ್ಯಾಗ್ರಹದ ನೆನಪಿಗಾಗಿ ನಿರ್ಮಿಸಲಾಗಿದೆ.

ಮೇಲುಕೋಟೆ


ಮೇಲುಕೋಟೆಯಲ್ಲಿ ಚೆಲುವನಾರಾಯಣ ಸ್ವಾಮಿ ದೇಗುಲ, ಯೋಗಾನರಸಿಂಹ ದೇವಸ್ಥಾಮ, ವಿವಿಧ ಮಠಗಳು ಮತ್ತು ಸಂಸ್ಕೃತ ಸಂಶೋಧನಾ ಅಕಾಡೆಮಿಯಿದೆ. ಸುಂದರ ಬೆಟ್ಟವನ್ನು ಹೊಂದಿರುವ ಇದು ರಾಜ್ಯದ ಪ್ರಮುಖ ಯಾತ್ರಾ ಕೇಂದ್ರವೂ ಹೌದು. ವೈಷ್ಣವ ಸಂತ ರಾಮಾನುಜರು ಕಳೆದುಹೋದ ಮುಖ್ಯ ದೇವತೆಯ ವಿಗ್ರಹವನ್ನು ಮರಳಿ ಇಲ್ಲಿ ಸ್ಥಾಪಿಸಿದರು ಎಂದು ಪುರಾಣ ಹೇಳುತ್ತದೆ. ಇಲ್ಲಿಯ ಪ್ರಮುಖ ಆಕರ್ಷಣೆಯೆಂದರೆ ವಾರ್ಷಿಕ ವೈರಮುಡಿ ಬ್ರಹ್ಮೋತ್ಸವ ಉತ್ಸವದಲ್ಲಿ ದೇವರನ್ನು ಮೈಸೂರಿನ ಮಾಜಿ ಮಹಾರಾಜರು ಅರ್ಪಿಸಿದ ಭವ್ಯವಾದ ವಜ್ರಖಚಿತ ಕಿರೀಟದಿಂದ ಅಲಂಕರಿಸಿ ಮೆರವಣಿಗೆಯಲ್ಲಿ ಕರೆದೊಯ್ಯಲಾಗುತ್ತದೆ. ಇಲ್ಲಿ ಏಳು ಆಂಜನೇಯ ದೇವಾಲಯಗಳು, ನಾಲ್ಕು ಗರುಡ ದೇವಾಲಯಗಳು, ಪಂಚ ಭಾಗವತ ದೇವಾಲಯ, ವೆಂಕಟರಮಣ ದೇವಾಲಯ ಮತ್ತು ಹೊಸ ವೆಂಕಟೇಶ್ವರ ದೇವಾಲಯ ಸೇರಿದಂತೆ ಹಲವಾರು ದೇವಾಲಯಗಳಿವೆ.

ಇದನ್ನೂ ಓದಿ: International Bikini Day 2023: ಅಂತಾರಾಷ್ಟ್ರೀಯ ಬಿಕಿನಿ ದಿನ ಕಿರುತೆರೆ ಸೆಲೆಬ್ರಿಟಿಗಳ ಹಾಟ್‌ ಫೋಟೊಗಳು ವೈರಲ್‌!

ಆದಿಚುಂಚನಗಿರಿ


ಒಕ್ಕಲಿಗ ಸಮುದಾಯದ ಸ್ವಾಮಿಯ ಸ್ಥಾನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ. ಭಗವಾನ್ ಗಂಗಾಧರೇಶ್ವರ ಇಲ್ಲಿ ಪ್ರಧಾನ ದೇವರಾಗಿದ್ದಾರೆ. ಅವರ ಜತೆಯಲ್ಲಿ ಶಿವನ ನಾಲ್ಕು ಅವತಾರಗಳಾದ ಮಲ್ಲೇಶ್ವರ, ಸೋಮೇಶ್ವರ, ಸಿದ್ದೇಶ್ವರ ಮತ್ತು ಚಂದ್ರಮೌಳೇಶ್ವರನಿಗೂ ಪೂಜೆ ಸಲ್ಲಿಸಲಾಗುತ್ತದೆ. ಈ ದೇವಾಲಯದ ಸಂಕೀರ್ಣವು ಗಣಪತಿ, ಸ್ತಂಭಂಬಿಕಾ ದೇವಿ, ಸುಬ್ರಮಣ್ಯ ದೇವರು, ಮಲ್ಲಮ್ಮ ದೇವಿ ಮುಂತಾದ ದೇವತೆಗಳನ್ನು ಒಳಗೊಂಡಿದೆ. ಆದಿಚುಂಚನಗಿರಿಯಲ್ಲಿ ಹೊಸ ಕಾಲಭೈರವೇಶ್ವರ ದೇವಾಲಯವನ್ನು ನಿರ್ಮಿಸಲಾಗಿದೆ. ದೇವಾಲಯವು 18 ಅಡಿ ಅಗಲ ಮತ್ತು ಒಟ್ಟು 21 ಅಡಿ ಎತ್ತರವಿದೆ. ಈ ದೇಗುಲದಲ್ಲಿ ಒಟ್ಟು 128 ಕಂಬಗಳಿವೆ.

ವೆಂಕಟರಮಣಸ್ವಾಮಿ ದೇವಸ್ಥಾನ, ಕರಿಘಟ್ಟ


ಕರಿಘಟ್ಟವು ಶ್ರೀರಂಗಪಟ್ಟಣದಿಂದ ಸುಮಾರು 5 ಕಿ.ಮೀ ದೂರದಲ್ಲಿ, ಲೋಕಪಾವನಿ ನದಿಯ ದಡದಲ್ಲಿದೆ. ಇಲ್ಲಿ ಅತ್ಯಂತ ಎತ್ತರದ ಬೆಟ್ಟ(2697 ಅಡಿ) ಇರುವುದರಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಬೆಟ್ಟದ ಮೇಲೆ ವೆಂಕಟರಮಣಸ್ವಾಮಿ ದೇಗುಲವಿದೆ. ಅಲ್ಲಿಗೆ ಕಾಲ್ನಡಿಗೆ ಅಥವಾ ವಾಹನದ ಮೂಲಕ ಹೋಗಬಹುದಾಗಿದೆ. ವೆಂಕಟರಮಣಸ್ವಾಮಿ ದೇವಾಲಯವನ್ನು ಮೈಸೂರು ರಾಜರ (ರಾಜ ಒಡೆಯ) ಕಾಲದಲ್ಲಿ ನಿರ್ಮಿಸಲಾಗಿದೆ ಎಂದು ನಂಬಲಾಗಿದೆ. ಈ ದೇವಾಲಯದ ಸಂಕೀರ್ಣವು ವೆಂಕಟರಮಣ, ಲಕ್ಷ್ಮಿ ಮತ್ತು ರಾಮ-ಲಕ್ಷ್ಮಣ-ಸೀತೆಯ ದೇವರ ಮೂರ್ತಿಗಳನ್ನು ಹೊಂದಿದೆ. ದೇವಾಲಯದ ಮುಂಭಾಗದಲ್ಲಿರುವ ಗರುಡ ಮಂಟಪದಲ್ಲಿ ಗರುಡ ಶಿಲ್ಪವನ್ನು ಇರಿಸಲಾಗಿದೆ. ಬಲಕ್ಕೆ ಪದ್ಮಾವತಿ ದೇವಸ್ಥಾನ ಮತ್ತು ಎಡಕ್ಕೆ ಹನುಮಾನ್ ದೇವಸ್ಥಾನವನ್ನು ಕಾಣಬಹುದಾಗಿದೆ.

ಇನ್ನಷ್ಟು ದೇಗುಲಗಳು

ಈ ಮೇಲಿನದಷ್ಟೇ ಅಲ್ಲದೆ ಇನ್ನೂ ಅನೇಕ ದೈವಿಕ ಸ್ಥಳಗಳನ್ನು ಮಂಡ್ಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ನೀವು ಕಾಣಬಹುದು. ಅಘಾಲಯ, ಬಸರಾಳು, ಬೆಳ್ಳೂರು, ಬಿಂಡಿಗನವಿಲೆ, ಗೋಂವಿದನಹಳ್ಳಿ, ಹರಿಹರಪುರ, ಹೊಸಹೊಳಲು, ಕಂಬದಹಳ್ಳಿ, ಕಿಕ್ಕೇರಿ, ಮದ್ದೂರುಮ ಮಾರೇಹಳ್ಳಿ, ನಾಗಮಂಗಲ, ತೊಳಚಿ, ತೊಣ್ಣೂರು, ಕಲ್ಲಹಳ್ಳಿಯಲ್ಲಿ ಅದ್ಭುತವಾದ ದೇಗುಲಗಳಿವೆ. ಎಲ್ಲ ದೇವಸ್ಥಾನಗಳು ರಾಜರ ಕಾಲದ ಇತಿಹಾಸವನ್ನು ಹೊಂದಿವೆ.

FAQ

what is the famous name of mandya?

Mandya seems to have been known as ‘Vedaranya’ and later, as ‘Vishnupura’ in Kritayuga. It is said that a rishi (sage) was doing a penance here and installed an image of God Janardana and was said to be teaching wild beast to pronounce the sacred word, VEDA.

What is the traditional food of Mandya?

Ragi mudde is the main food in Kolar, Mandya, Hassan, Mysore, Tumkur districts in Karnataka and Rayalaseema Region in Andhra Pradesh. A similar variation known as Dhindo is also eaten in Northeast India, Nepal and Bhutan.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

Teachers Transfer: ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು (ಜೂನ್‌ 15) ಪ್ರಕಟಗೊಂಡಿದೆ. ಇದಾದ ನಂತರ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆ ಕೋರಿ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ವೇಳಾಪಟ್ಟಿಯನ್ನು ಪ್ರಕಟಿಸುವ ಕಾರಣ ಶಿಕ್ಷಕರ ಕನಸು ಈಡೇರುವ ಸಮಯ ಬಂದಂತಾಗಿದೆ.

VISTARANEWS.COM


on

Teachers Transfer
Koo

ಬೆಂಗಳೂರು: ರಾಜ್ಯಾದ್ಯಂತ (Teachers Transfer 2024) ಸಾವಿರಾರು ಸರ್ಕಾರಿ ಶಿಕ್ಷಕರು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ವರ್ಗಾವಣೆ ವೇಳಾಪಟ್ಟಿ ಶನಿವಾರ (ಜೂನ್‌ 15) ಪ್ರಕಟಗೊಂಡಿದೆ. ಕಡ್ಡಾಯ ಹಾಗೂ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರವು (Karnataka Government), ಕೋರಿಕೆಯ ವರ್ಗಾವಣೆ ಪಟ್ಟಿಯನ್ನು ಮಾತ್ರ ಪ್ರಕಟಿಸಿದೆ. ಇದರಿಂದ ಸಾವಿರಾರು ಶಿಕ್ಷಕರು ನಿಟ್ಟುಸಿರು ಬಿಡುವಂತಾಗಿದೆ. ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ವಲಯವಾರು ವರ್ಗಾವಣೆ ಈ ವರ್ಷ ಕೈಬಿಡುವಂತೆಯೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿತ್ತು.

ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವೇಳಾಪಟ್ಟಿ ಪ್ರಕಟವಾಗಿದೆ. ಇನ್ನುಮುಂದೆ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆಗೆ ಅರ್ಜಿ ಇತ್ಯಾದಿ ಪ್ರಕ್ರಿಯೆ ಮಾರ್ಚ್‌ 18ರಿಂದ ಪ್ರಾರಂಭವಾಗಿತ್ತು. ಲೋಕಸಭೆ ಚುನಾವಣೆ ಘೋಷಣೆ ಮತ್ತು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯು ಈ ಪ್ರಕ್ರಿಯೆಗೆ ತೊಡಕಾಗಿತ್ತು. ಈಗ ಕೊನೆಗೂ ವರ್ಗಾವಣೆ ವೇಳಾಪಟ್ಟಿ ಪ್ರಕಟಗೊಂಡಿದೆ.

ವರ್ಗಾವಣೆಗಳಲ್ಲಿ ಮೂರು ವಿಧ

ಸಾಮಾನ್ಯವಾಗಿ ಶಿಕ್ಷಕರ ವರ್ಗಾವಣೆಯಲ್ಲಿ ಮೂರು ವಿಧಗಳಿವೆ. ಇವುಗಳನ್ನೇ ರಾಜ್ಯ ಸರ್ಕಾರ ಅನುಸರಿಸುತ್ತದೆ. ಸಾಮಾನ್ಯ ವರ್ಗಾವಣೆಯಲ್ಲಿ ಕೋರಿಕೆ ಸಲ್ಲಿಸಿದವರು, ಪರಸ್ಪರ ವರ್ಗಾವಣೆ ಬಯಸಿದವರಿಗೆ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಇನ್ನು, ಒಂದೇ ಶಾಲೆಯಲ್ಲಿ ಸತತ 10 ವರ್ಷ ಕಾರ್ಯನಿರ್ವಹಿಸಿದವರಿಗೆ ಕಡ್ಡಾಯ ವರ್ಗಾವಣೆ ಮಾಡಲಾಗುತ್ತದೆ. ಹಾಗೆಯೇ, ಯಾವುದಾದರೂ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಹೆಚ್ಚಿನ ಶಿಕ್ಷಕರು ಇದ್ದರೆ, ಅವರನ್ನು ಹೆಚ್ಚುವರಿ ವರ್ಗಾವಣೆ ವಿಧದಲ್ಲಿ ಟ್ರಾನ್ಸ್‌ಫರ್‌ ಮಾಡಲಾಗುತ್ತದೆ.

ಕಡ್ಡಾಯ ವರ್ಗಾವಣೆ ಮಾಡುವ ವೇಳೆ ಮೂರು ವಲಯಗಳನ್ನು ಗಮನಿಸಲಾಗುತ್ತದೆ. ಎ ವಲಯದಲ್ಲಿ ನಗರಗಳು ಅಥವಾ ಪಟ್ಟಣಗಳು ಇದ್ದರೆ, ಬಿ ವಲಯದಲ್ಲಿ ನಗರದಿಂದ ಮೂರು ಕಿಲೋಮೀಟರ್‌ ದೂರದಲ್ಲಿರುವ ಗ್ರಾಮಗಳು, ಸಿ ವಲಯದಲ್ಲಿ ನಗರದಿಂದ 10 ಕಿಲೋಮೀಟರ್‌ ದೂರದಲ್ಲಿರುವ ಗ್ರಾಮಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಎ ವಲಯದಲ್ಲಿ ಅಂದರೆ ಯಾವುದೇ ಒಂದು ನಗರದಲ್ಲಿ 10 ವರ್ಷ ಸತತವಾಗಿ ಕಾರ್ಯನಿರ್ವಹಿಸಿದ ಶಿಕ್ಷಕರನ್ನು ಬಿ ಅಥವಾ ಸಿ ವಲಯಗಳಿಗೆ, ಅಂದರೆ ಹಳ್ಳಿಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಹಾಗೆಯೇ, ಸಿ ವಲಯದಲ್ಲಿ ಕೆಲಸ ಮಾಡಿದ ಶಿಕ್ಷಕರನ್ನು ಎ ವಲಯಕ್ಕೂ ವರ್ಗಾವಣೆ ಮಾಡಲಾಗುತ್ತದೆ.

ಶಿಕ್ಷಕರ ಸಂಘದಿಂದ ಅಭಿನಂದನೆ

ವಲಯವಾರು ವರ್ಗಾವಣೆಯನ್ನು ಕೈಬಿಟ್ಟು, ಕೋರಿಕೆಯ ವರ್ಗಾವಣೆಯ ವೇಳಾಪಟ್ಟಿ ಪ್ರಕಟಿಸಿದ ಕಾರಣ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್‌ ಅವರು ಸಂಘದ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಂಘದ ಪರವಾಗಿ ರಾಜ್ಯಾಧ್ಯಕ್ಷ ಕೆ.ನಾಗೇಶ್‌ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ವರ್ಗಾವಣೆಗೆ ಕಾಯುತ್ತಿರುವ ಶಿಕ್ಷಕರು

ಕೌಟುಂಬಿಕ, ಶೈಕ್ಷಣಿಕ ಇತ್ಯಾದಿ ಕಾರಣಗಳಿಂದ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ವರ್ಗಾವಣೆಯನ್ನು ಎದುರು ನೋಡುತ್ತಿದ್ದಾರೆ. ಪ್ರತಿ ಬಾರಿಯೂ ರಾಜ್ಯ ಸರ್ಕಾರ, ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಹೇಳುತ್ತದೆ. ಆದರೆ ನಾನಾ ಕಾರಣಗಳಿಂದ ಇದು ವಿಳಂಬವಾಗುತ್ತಲೇ ಇತ್ತು. ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಇನ್ನೂ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿದಿಲ್ಲ. ಈ ತಿಂಗಳಲ್ಲಿ ಕೌನ್ಸೆಲಿಂಗ್‌ ಆರಂಭವಾದರೂ ಈ ಪ್ರಕ್ರಿಯೆ ಅಂತಿಮವಾಗಿ ಮುಗಿಯಲು ಕನಿಷ್ಠ ಇನ್ನೆರಡು ತಿಂಗಳು ಬೇಕಾಗಬಹುದು.

ದ್ವಿಭಾಷಾ ನೀತಿಗೂ ಅನುಮತಿ

ಶಿಕ್ಷಕರ ವರ್ಗಾವಣೆ ಜತೆಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ನೀತಿಯ ಜಾರಿಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಒಂದು ಸಾವಿರ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನೂ ಪ್ರಾರಂಭಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿಗೆ ಬರಲಿದೆ.

ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿಗೆ ತರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಹಾಗೆಯೇ, ದ್ವಿಭಾಷಾ ನೀತಿ ಅನ್ವಯ ತರಗತಿಗಳನ್ನು ಆರಂಭಿಸುವ ಕುರಿತು ಆಯಾ ಜಿಲ್ಲೆಗಳಲ್ಲಿರುವ ಶಾಲೆಗಳ ಪಟ್ಟಿಯನ್ನೂ ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ.

ಇದನ್ನೂ ಓದಿ: Raichur News: ಸರ್ಕಾರಿ ಶಾಲೆಗೆ ದಾಖಲಾದ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ!

Continue Reading

ಶ್ರದ್ಧಾಂಜಲಿ

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Sagri Raghavendra Upadhyaya: ಹಿರಿಯ ವಿದ್ವಾಂಸ, ಪ್ರವಚನಕಾರ, ಗ್ರಂಥಕರ್ಥ, ಪ್ರಕಾಶಕ, ಉಡುಪಿ ಮೂಲದ ಸಗ್ರಿ ರಾಘವೇಂದ್ರ ಉಪಾಧ್ಯಾಯ (71) ಅವರು ಬೆಂಗಳೂರಿನಲ್ಲಿ ಶನಿವಾರ ನಿಧನರಾಗಿದ್ದಾರೆ.

VISTARANEWS.COM


on

Hiriya vidwamsa Sagri Raghavendra Upadhyaya passed away
Koo

ಬೆಂಗಳೂರು: ಹಿರಿಯ ವಿದ್ವಾಂಸ, ಪ್ರವಚನಕಾರ, ಗ್ರಂಥಕಾರ, ಉಡುಪಿ ಮೂಲದ ಸಗ್ರಿ ರಾಘವೇಂದ್ರ ಉಪಾಧ್ಯಾಯ (71) (Sagri Raghavendra Upadhyaya) ಅವರು ಬೆಂಗಳೂರಿನಲ್ಲಿ ಶನಿವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ ಇದ್ದಾರೆ.

ನರಸಿಂಹ ಉಪಾಧ್ಯಾಯ ಮತ್ತು ಸೀತಾಲಕ್ಷ್ಮಿ ದಂಪತಿಯ ಪುತ್ರನಾಗಿ 1953ರಲ್ಲಿ ಜನಿಸಿದ ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶ್ರೀ ವಿದ್ಯಾಮಾನ್ಯ ತೀರ್ಥರು, ಶೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಶ್ರೀ ಕಾಪು ಹಯಗ್ರೀವಾಚಾರ್ಯರು ಮೊದಲಾದ ಪಂಡಿತರಲ್ಲಿ ಅಧ್ಯಯನ ಮಾಡಿ, ವೇದಾಂತ ಶಾಸ್ತ್ರದಲ್ಲಿ, ಸಂಸ್ಕೃತದಲ್ಲಿ ಎಂ.ಎ ಪಡೆದು ಎಸ್‌ಎಂಎಸ್‌ಪಿ ಸಂಸ್ಕೃತ ಕಾಲೇಜು, ಉಡುಪಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ತಮ್ಮದೇ ಆದ ಪರವಿದ್ಯಾ ಪ್ರಕಾಶನ ಸಂಸ್ಥೆ ಪ್ರಾರಂಭಿಸಿ, ನೂರಾರು ಗ್ರಂಥಗಳನ್ನು ರಚಿಸಿದ್ದಾರೆ. ಉಡುಪಿಯ ಹಲವಾರು ಮಠಗಳಿಗೆ ಆಸ್ಥಾನ ವಿದ್ವಾಂಸರಾಗಿ ಗೌರವ ಮತ್ತು ಮಾನ್ಯತೆಗೆ ಭಾಜನರಾಗಿದ್ದರು. ಕನ್ನಡ ಧಾರ್ಮಿಕ ಸಾಹಿತ್ಯದಲ್ಲಿ ಉತ್ತಮ ಹೆಸರು ಗಳಿಸಿರುವ ತತ್ವವಾದ ಮತ್ತು ಸರ್ವಮೂಲ ಮಾಸ ಪತ್ರಿಕೆಯ ಸಂಪಾದಕರಾಗಿದ್ದರು.

ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶುಕ್ರವಾರ ಸಂಜೆ ಬೆಂಗಳೂರಿನ ಶ್ರೀ ಭಂಡಾರಕೇರಿ ಮಠದಲ್ಲಿ ಶ್ರೀ ವಿದ್ಯೇಶತೀರ್ಥರ 70ನೇ ವರ್ಷದ ವರ್ಧಂತಿ ಕಾರ್ಯಕ್ರಮದಲ್ಲಿ ತಮ್ಮ ಕೊನೆಯ ಉಪನ್ಯಾಸ ನೀಡಿ, ನಂತರದ ಕೆಲವೇ ನಿಮಿಷಗಳಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಹೃದಯಾಘಾತದಿಂದ ಬಳಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚೇತರಿಸಿಕೊಳ್ಳಲಾಗದೇ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಚಾಮರಾಜಪೇಟೆ ಚಿತಾಗಾರದಲ್ಲಿ ನೂರಾರು ವಿದ್ವಾಂಸರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಿತು.

ಇದನ್ನೂ ಒದಿ: Drown in Quarry: ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು‌

ತೀವ್ರ ಸಂತಾಪ: ಸಗ್ರಿ ರಾಘವೇಂದ್ರ ಉಪಾಧ್ಯಾಯ ಅವರ ನಿಧನಕ್ಕೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರು, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು, ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಮತ್ತು ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

R Ashok: ಎಟಿಎಂ ಕಾಂಗ್ರೆಸ್ ಸರ್ಕಾರ ಹೈಕಮಾಂಡ್‌ಗೆ ಹಣ ಕಳುಹಿಸಲು ಟ್ಯಾಂಕರ್ ಮಾಫಿಯಾವನ್ನು ಬಳಸಿಕೊಂಡಿದೆ ಎಂದು ಆರೋಪಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಕಾಂಗ್ರೆಸ್ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನದಲ್ಲಿ ಶೇ.25 ರಷ್ಟು ಕಡಿತ ಮಾಡಿ ಮೂಲಸೌಕರ್ಯ ಸಿಗದಂತೆ ಮಾಡಿದೆ. ಇದರ ಪ್ರತಿಫಲವಾಗಿ ಜನರಿಗೆ ಸರಿಯಾಗಿ ನೀರು ದೊರೆಯುತ್ತಿಲ್ಲ. ಸಿಎಂ ಸೂಚನೆಗೆ ಅಧಿಕಾರಿಗಳು ಬೆಲೆ ನೀಡದೆ ಕೈ ಚೆಲ್ಲಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ದೂರಿದ್ದಾರೆ.

VISTARANEWS.COM


on

Government has no money to clean tankers no ability to provide clean drinking water says R Ashok
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರ್ಕಾರಕ್ಕಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನಡಿ ಅವರ ಕ್ಷೇತ್ರ ವರುಣದಲ್ಲಿ ಕಲುಷಿತ ನೀರನ್ನು ಜನರು ಸೇವಿಸಿ ಸಾವಿಗೀಡಾಗಿದ್ದಾರೆ. ಅಂದರೆ ಮುಖ್ಯಮಂತ್ರಿಗಳಿಗೆ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ. ಈಗ ತುಮಕೂರಿನಲ್ಲೂ ಕಲುಷಿತ ನೀರು ಸೇವಿಸಿ ಆರು ಜನರ ಸಾವಾಗಿದೆ. ಇದಕ್ಕೆ ಜಿಲ್ಲಾಧಿಕಾರಿಯನ್ನು ಕೇಳಿದರೆ ಮೂತ್ರಪಿಂಡ ಸಮಸ್ಯೆ ಎಂದು ಕಾರಣ ಹೇಳಿದ್ದಾರೆ. ಆರೋಗ್ಯ ಸಮಸ್ಯೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಅದನ್ನೇ ಸಬೂಬು ಮಾಡಬಾರದು. ಈ ಕುರಿತು ವರದಿ ಕೇಳಿದ್ದೇನೆ ಎಂದು ತಿಳಿಸಿದರು‌.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ಕೊಪ್ಪಳದಲ್ಲಿ ಕೂಡ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ‌‌. ಇದರಿಂದಲೇ ಜನರು ಕಲುಷಿತ ನೀರು ಕುಡಿಯಬೇಕಾಗಿದೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯ್ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ ಎಂದು ಆರೋಪಿಸಿದರು.

ಅಧಿಕಾರಿಗಳ ಬಳಿ ಈ ಬಗ್ಗೆ ಕಾರಣ ಕೇಳಿದರೆ ಜಾತ್ರೆಯಲ್ಲಿ ಅವಾಂತರವಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರು 15 ಬಾರಿ ಬಜೆಟ್ ಮಂಡಿಸಿದರೂ ಕುಡಿಯುವ ನೀರು ಕೊಡಲು ಸಾಧ್ಯವಾಗಿಲ್ಲ. ನಾನು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದರು.

ಟ್ಯಾಂಕರ್ ಮಾಫಿಯಾ

ಎಟಿಎಂ ಕಾಂಗ್ರೆಸ್ ಸರ್ಕಾರ ಹೈಕಮಾಂಡ್‌ಗೆ ಹಣ ಕಳುಹಿಸಲು ಟ್ಯಾಂಕರ್ ಮಾಫಿಯಾವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನದಲ್ಲಿ ಶೇ.25 ರಷ್ಟು ಕಡಿತ ಮಾಡಿ ಮೂಲಸೌಕರ್ಯ ಸಿಗದಂತೆ ಮಾಡಿದೆ. ಇದರ ಪ್ರತಿಫಲವಾಗಿ ಜನರಿಗೆ ಸರಿಯಾಗಿ ನೀರು ದೊರೆಯುತ್ತಿಲ್ಲ. ಸಿಎಂ ಸೂಚನೆಗೆ ಅಧಿಕಾರಿಗಳು ಬೆಲೆ ನೀಡದೆ ಕೈ ಚೆಲ್ಲಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ದೂರಿದರು.

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರೂ ಅದನ್ನು ಸಾಬೀತುಪಡಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ ಎಂದರು.

ಇದನ್ನೂ ಓದಿ: ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ದ್ವೇಷದ ರಾಜಕಾರಣ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಚಾರದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಅವರಂತೂ ಇದನ್ನು ನೇರವಾಗಿ ಒಪ್ಪಿಕೊಂಡಿದ್ದಾರೆ. ಕರ್ನಾಟಕದಲ್ಲಿ ದ್ವೇಷ ರಾಜಕಾರಣ ಈವರೆಗೆ ಇರಲಿಲ್ಲ. ದೂರುದಾರರು ಮಾನಸಿಕ ಅಸ್ವಸ್ಥೆ ಎಂದು ಗೃಹ ಸಚಿವರು ಹೇಳಿದ್ದರೂ, ಚುನಾವಣೆಯ ಬಳಿಕ ರಾಜಕೀಯ ದ್ವೇಷ ಸಾಧಿಸಲಾಗಿದೆ ಎಂದು ದೂರಿದರು.

Continue Reading

ಕರ್ನಾಟಕ

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Pralhad Joshi: ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಗೆ ಹೊರೆ ಮಾಡಿದೆ ಎಂದು ಖಂಡಿಸಿದ ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್‌ ಜೋಶಿ, ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯಗಳನ್ನು ನೀಡಿದೆಯೇ ಹೊರತು ಜನರ ಪಾಲಿಗೆ ಭಾಗ್ಯಶಾಲಿಯಾಗಿ ಉಳಿದಿಲ್ಲ ಎಂದು ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi statement about increase in petrol and diesel prices in the state
Koo

ಹುಬ್ಬಳ್ಳಿ: ರಾಜ್ಯದಲ್ಲಿ ಗ್ಯಾರಂಟಿ ಗ್ಯಾರಂಟಿ ಎಂದು ಬಾಯಿ ಬಡಿದುಕೊಳ್ಳುವ ಕಾಂಗ್ರೆಸ್ ಸರ್ಕಾರ ಈಗ ತೈಲ ಬೆಲೆ ಏರಿಸುವ ಮೂಲಕ ಜನರ ಕೈಗೆ ಅಕ್ಷರಶಃ ಚೊಂಬು ಕೊಟ್ಟಿದೆ ನೋಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi), ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ರಾಜ್ಯದಲ್ಲಿ ಅಭಿವೃದ್ಧಿ ಮಾತ್ರ ಕೇಳ್ಬೇಡಿ, ತಗೊಳ್ರಪ್ಪ ಕೊಟ್ರು ಚೊಂಬು ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದ ಸಚಿವರು, ಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಸಚಿವ ಜೋಶಿ ಕಿಡಿಕಾರಿದರು.

ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಗೆ ಹೊರೆ ಮಾಡಿದೆ ಎಂದು ಖಂಡಿಸಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯಗಳನ್ನು ನೀಡಿದೆಯೇ ಹೊರತು ಜನರ ಪಾಲಿಗೆ ಭಾಗ್ಯಶಾಲಿಯಾಗಿ ಉಳಿದಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ 1.5 ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳನ್ನೇ ಕೈಗೊಂಡಿಲ್ಲ. ಈಗ ನೇರವಾಗಿ ಜನರ ಜೇಬಿಗೇ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದರು.

Continue Reading
Advertisement
Dina Bhavishya
ಭವಿಷ್ಯ53 mins ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಕುಟುಂಬ ಸದಸ್ಯರಿಂದ ಸಿಗಲಿದೆ ಬೆಂಬಲ

Teachers Transfer
ಪ್ರಮುಖ ಸುದ್ದಿ7 hours ago

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

T20 World Cup 2024
T20 ವಿಶ್ವಕಪ್8 hours ago

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

Hiriya vidwamsa Sagri Raghavendra Upadhyaya passed away
ಶ್ರದ್ಧಾಂಜಲಿ9 hours ago

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Government has no money to clean tankers no ability to provide clean drinking water says R Ashok
ಪ್ರಮುಖ ಸುದ್ದಿ9 hours ago

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

Union Minister Pralhad Joshi statement about increase in petrol and diesel prices in the state
ಕರ್ನಾಟಕ9 hours ago

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Bribe Case
ಕ್ರೈಂ9 hours ago

Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

Minister dr G Parameshwar inaugurated the hasiru grama programme in Koratagere
ತುಮಕೂರು9 hours ago

Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌

Giorgia Meloni
ವಿದೇಶ9 hours ago

Giorgia Meloni: ಇಟಲಿ ಪ್ರಧಾನಿ ಮೆಲೋನಿ ಕಾರ್ಮಿಕ ಮಹಿಳೆಯ ಮಗಳು! ಅವರ ಕುರಿತ ಕುತೂಹಲಕರ ಸಂಗತಿಗಳಿವು

Sapthami Gowda
ಪ್ರಮುಖ ಸುದ್ದಿ9 hours ago

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ16 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌