ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಗರದಾದ್ಯಂತ ಏಕಬಳಕೆ ಪ್ಲಾಸ್ಟಿಕ್ ಅನ್ನು ಉಪಯೋಗಿಸುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಸೋಮವಾರ ಅನಿರೀಕ್ಷಿತ ದಾಳಿ ನಡೆಸಿ, ತಪಾಸಣೆ ನಡೆಸಲಾಯಿತು.
ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳುವ ಜತೆಗೆ ದಂಡ ವಿಧಿಸಲಾಗುತ್ತಿದೆ. ಅದರಂತೆ ಜುಲೈ 1 ರಿಂದ 10ರವರೆಗೆ 990 ಕಡೆ ಒಟ್ಟು 1,380.8 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಜಪ್ತಿ ಮಾಡಿ 5,97,800 ರೂ. ದಂಡ ವಿಧಿಸಲಾಗಿದೆ.
ಇದನ್ನೂ ಓದಿ | ಮಂತ್ರಾಲಯ: ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿರುವ ಶ್ರೀಮಠ
ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಬರುವ ಎಲ್ಲ ವಾರ್ಡ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಘನತ್ಯಾಜ್ಯ ವಿಭಾಗದದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ಪಾಲಿಕೆಯ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳ ಮೇಲ್ವಿಚಾರಕರು ಹಾಗೂ ಮಾರ್ಷಲ್‌ಗಳ ತಂಡವು ಅನಿರೀಕ್ಷಿತವಾಗಿ ಭೇಟಿ ನೀಡುತ್ತಿದ್ದಾರೆ.
ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಕೆ ಬದಲು ಪುನರ್ ಬಳಕೆ ಮಾಡಬಹುದಾದ ಬಟ್ಟೆ ಬ್ಯಾಗ್, ನಾರಿನ ಬ್ಯಾಗ್, ಪೇಪರ್‌ನಿಂದ ತಯಾರಿಸಿದ ಕವರ್ ಬಳಸುವ ಬಗ್ಗೆ ಪಾಲಿಕೆ ವತಿಯಿಂದ ಮಾರಾಟಗಾರರು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.
ಇದನ್ನೂ ಓದಿ | Plastic Ban | ಬೆಂಗಳೂರಿನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಫೀಲ್ಡಿಗಿಳಿದ ಮಾರ್ಷಲ್ಸ್