ಬೆಂಗಳೂರು: ಪ್ಲಾಸ್ಟಿಕ್ ನಿಷೇಧ ನಿಯಮ 2016ರಲ್ಲೇ ಕರ್ನಾಟಕದಲ್ಲಿ ಜಾರಿ ಮಾಡಲಾಗಿತ್ತು. ಆದರೆ ಬೇರೆ ರಾಜ್ಯದಲ್ಲಿ ಪ್ಲಾಸ್ಟಿಕ್ ಬ್ಯಾನ್ ಆಗದ ಕಾರಣ ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆ ತಡೆಯಲು ಕಷ್ಟವಾಗಿತ್ತು. ಆದರೆ ಈಗ ಕಠಿಣ ನಿಯಮ ಜಾರಿಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸಜ್ಜಾಗಿದ್ದು, ಜುಲೈ 1ರಿಂದ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ.
ಇದನ್ನೂ ಓದಿ | ಜುಲೈ 1ರಿಂದ ಪ್ಲಾಸ್ಟಿಕ್ ಸ್ಟ್ರಾ ಬಳಕೆ ನಿಷೇಧ, ಸಣ್ಣ ಟೆಟ್ರಾ ಪ್ಯಾಕ್ ಜ್ಯೂಸ್ ಇನ್ನು ಸಿಗಲ್ವಾ?
ಈ ಸಂಬಂಧ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಶರತ್ ಎ. ತಿಮ್ಮಯ್ಯ ಸುದ್ದಿಗೋಷ್ಠಿ ನಡೆಸಿದ್ದು, “”ಶುಕ್ರವಾರದಿಂದ ದೇಶದಲ್ಲಿ ಸಿಂಗಲ್ ಯೂಸ್ ಪ್ಲಾಸ್ಟಿಕ್ ನಿಷೇಧ ಆಗಲಿದೆ. ನಿತ್ಯ ಪಾಲಿಕೆಯ ಕಸದ ಗಾಡಿಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಕಾಂಪೋಸ್ಟೇಬಲ್ ಪ್ಲಾಸ್ಟಿಕ್ ಅನ್ನು ಪರ್ಯಾಯವಾಗಿ ಬಳಸಲು ಗುರುತಿಸಲಾಗುತ್ತಿದೆʼʼ ಎಂದರು.
“”ಬೀದಿ ಬದಿ ವ್ಯಾಪಾರಿಗಳು, ಹೋಲ್ ಸೇಲ್ ವ್ಯಾಪಾರಿಗಳು ಪ್ಲಾಸ್ಟಿಕ್ ಬಳಸಿದರೆ ದಂಡ ಪ್ರಯೋಗ ಮಾಡಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗೆ ಮೊದಲ ಮೂರು ಉಲ್ಲಂಘನೆಗೆ ತಲಾ 200, 500, 1,000 ರೂ ದಂಡ ಹಾಕಲಾಗುತ್ತದೆ. ಜತೆಗೆ ಪ್ಲಾಸ್ಟಿಕ್ ಉತ್ಪತ್ತಿ ಮಾಡುವವ ಕಾರ್ಖಾನೆಯನ್ನು ಸೀಜ್ ಮಾಡಿ ದಂಡ ಹಾಕಲಾಗುತ್ತದೆʼʼ ಎಂದರು.
ಯಾವೆಲ್ಲ ರೀತಿಯ ಪ್ಲಾಸ್ಟಿಕ್ ಬ್ಯಾನ್?
ಸರ್ಕಾರದ ಆದೇಶದ ಪ್ರಕಾರ ಯಾವುದೇ ವ್ಯಕ್ತಿ, ಅಂಗಡಿ ಮಾಲೀಕ, ಮಾರಾಟಗಾರ, ಸಗಟು ಮಾರಾಟಗಾರ ಅಥವಾ ಚಿಲ್ಲರೆ ವ್ಯಾಪಾರಿ, ವ್ಯಾಪಾರಿ ಅಥವಾ ಮಾರಾಟಗಾರರು ಯಾವುದೇ ರೀತಿಯ ಪ್ಲಾಸ್ಟಿಕ್ ಬಳಸುವಂತಿಲ್ಲ. ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಡ್ ಮತ್ತು ಊಟದ ಟೇಬಲ್ ಮೇಲೆ ಹಾಕುವ ಪ್ಲಾಸ್ಟಿಕ್ ಹಾಳೆ, ಥರ್ಮೋಕೋಲ್, ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‌ನಿಂದ ತಯಾರಾದಂತಹ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿದೆ. ಹಾಗೆಯೇ ಈ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹ, ಸಾಗಾಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ಸರ್ಕಾರ ನಿಷೇಧಿಸಿದೆ.
ಇದನ್ನೂ ಓದಿ | ತೇಲಿ ಬಂದ ಮೈಕ್ರೋ ಪ್ಲಾಸ್ಟಿಕ್, ಎಣ್ಣೆ ಜಿಡ್ಡು