Plastic rice | ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿ ಜತೆ ಮಿಕ್ಸ್‌ ಆಗಿದೆಯಾ ಪ್ಲಾಸ್ಟಿಕ್‌ ರೈಸ್‌: ತೇಲುವ ಮಣಿಗಳು ಏನಿವು? - Vistara News

ಕರ್ನಾಟಕ

Plastic rice | ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿ ಜತೆ ಮಿಕ್ಸ್‌ ಆಗಿದೆಯಾ ಪ್ಲಾಸ್ಟಿಕ್‌ ರೈಸ್‌: ತೇಲುವ ಮಣಿಗಳು ಏನಿವು?

ಮಡಿಕೇರಿಯ ಪ್ರೌಢ ಶಾಲೆಗೆ ಬಂದಿರುವ ಬಿಸಿಯೂಟದ ಅಕ್ಕಿ ಮೂಟೆಯಲ್ಲಿ ಅಕ್ಕಿಯ ಜತೆಗೆ ಕೆಲವು ತೇಲುವ ಮಣಿಗಳು ಪತ್ತೆಯಾಗಿದ್ದು, ಪ್ಲಾಸ್ಟಿಕ್‌ ಅಕ್ಕಿಯ ಆತಂಕವನ್ನು ಸೃಷ್ಟಿಸಿದೆ.

VISTARANEWS.COM


on

Plastic rice
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಡಿಕೇರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ (Platic rice) ಮಿಶ್ರವಾಗಿರುವ ಸಂಶಯ ವ್ಯಕ್ತವಾಗಿದ್ದು, ಈ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದಾರೆ.

ಕೊಡಗು ಜಿಲ್ಲೆ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗಕ್ಕೆ ಸರಬರಾಜು ಮಾಡಲಾದ ಬಿಸಿಯೂಟದ ಅಕ್ಕಿಯಲ್ಲಿ ಕಲಬೆರಕೆ ಪತ್ತೆಯಾಗಿದೆ. ಅಕ್ಕಿಯ ನಡುವೆ ಅಲ್ಲಲ್ಲಿ ಪ್ಲಾಸ್ಟಿಕ್ ಮಣಿಯಂಥ ವಸ್ತುಗಳು ಸಿಕ್ಕಿವೆ. ಇದು ಜಿಲ್ಲೆಯಲ್ಲಿನ ಶಾಲೆಗಳ ಆಡಳಿತ ಮಂಡಳಿಗಳಿಗೆ ಹೊಸ ತಲೆನೋವು ಜೊತೆ ಆತಂಕ ಮನೆಮಾಡಿದೆ.

ಸೋಮವಾರ ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿ ಮಾಡಲು ಮುಂದಾದ ಅಡುಗೆ ಸಿಬ್ಬಂದಿ ಅಕ್ಕಿಯನ್ನು ತೊಳೆಯುವ ಸಂದರ್ಭದಲ್ಲಿ ಪ್ಲಾಸ್ಟಿಕ್‌ನಂಥ ಮಣಿಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡಿದ್ದಾರೆ. ತಕ್ಷಣವೇ ಎಚ್ಚೆತ್ತ ಆಡುಗೆ ಸಿಬ್ಬಂದಿ ಶಾಲೆಯ ಪ್ರಮುಖರ ಗಮನಕ್ಕೆ ತಂದಿದ್ದಾರೆ.

ಪ್ಲಾಸ್ಟಿಕ್‌ ಅಕ್ಕಿ ಪತ್ತೆಯಾದ ಬಗ್ಗೆ ಅಧಿಕಾರಿಗಳಿಗೆ ಎಸ್‌ಡಿಎಂಸಿ ಕಡೆಯಿಂದ ದೂರು

ಬಿಸಿಯೂಟಕ್ಕೆ ಸರಬರಾಜಾದ ಅಕ್ಕಿಯನ್ನು ಶಿಕ್ಷಕರು ಪರಿಶೀಲಿಸಿದಾಗ ಶಾಲೆಗೆ ರವಾನೆಯಾದ ಒಂದು ಮೂಟೆಯಲ್ಲಿ ಈ ರೀತಿಯ ಅಕ್ಕಿಯ ರೂಪದಲ್ಲಿರುವ ಮಣಿಗಳು ಪತ್ತೆಯಾಗಿದೆ. ಒಂದು ವೇಳೆ ಅಡುಗೆ ಸಿಬ್ಬಂದಿಗಳು ಸರಿಯಾಗಿ ಗಮನಿಸದೆ ಅಡುಗೆ ಮಾಡಿದಲ್ಲಿ ದೊಡ್ಡದೊಂದು ಅನಾಹುತ ನಡೆಯುತಿತ್ತು ಎಂದು ಪೋಷಕರು ಹೇಳಿದ್ದಾರೆ

ಮಡಿಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಎಲ್ಲರೂ ಬಡ ಕುಟುಂಬಕ್ಕೆ ಸೇರಿದವರು. ಈ ಬಡ ಮಕ್ಕಳ ಬಿಸಿಯೂಟದ ಅಕ್ಕಿಯನ್ನೂ ಕೂಡ ಕಲಬೆರಕೆ ಮಾಡಿ ಪೂರೈಸುತ್ತಿರುವುದು ದುರಂತವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ವಾರದ ಹಿಂದೆಯಷ್ಟೇ ಬಂದ ಅಕ್ಕಿಯ ಒಂದು ಚೀಲದಲ್ಲಿ ಈ ರೀತಿಯ ಮಣಿಗಳು ಪತ್ತೆಯಾಗಿದ್ದರ ಬಗ್ಗೆ ಶಾಲಾ ಆಡಳಿತ ಮಂಡಳಿ ಹಾಗೂ ಎಸ್‌ಡಿಎಂಸಿ ಉನ್ನತ ಮಟ್ಟದ ಅಧಿಕಾರಿಗಳ ಗಮನಕ್ಕೂ ತಂದಿದ್ದು ಸರಬರಾಜಾದ ಅಕ್ಕಿಯನ್ನ ಹಿಂದಿರುಗಿಸಲಾಗಿದೆ.

ಇದು ಕೇವಲ ಮಕ್ಕಳಿಗೆ ಮಾತ್ರ ಸರಬರಾಜಾಗುವ ಪಡಿತರವಲ್ಲ. ನ್ಯಾಯಬೆಲೆ ಅಂಗಡಿಗಳಿಗೂ ಈ ಅಕ್ಕಿ ಸರಬರಾಜಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ‌. ಜಿಲ್ಲೆಗೆ ಬರುವ ಅಕ್ಕಿ ಬಹುತೇಕ ಹರಿಯಾಣದಿಂದ ಬರುತ್ತಿದೆ ಎನ್ನಲಾಗಿದೆ‌. ಹರಿಯಾಣದ ಭಾಗದಿಂದ ಅಕ್ಕಿಯನ್ನು ಮಡಿಕೇರಿಯ ಆಹಾರ ಪೂರೈಕೆ ಗೋದಾಮಿ ನಲ್ಲಿ ಶೇಖರಿಸಿಟ್ಟು ಅಲ್ಲಿಂದ ಎಲ್ಲ ಕಡೆಗಳಿಗೂ ಪೂರೈಸಲಾಗುತ್ತಿದೆ.

‌ಪ್ಲಾಸ್ಟಿಕ್‌ ಅಕ್ಕಿ ಪತ್ತೆಯಾಗಿದ್ದನ್ನು ಶಾಲೆಯ ಎಸ್.ಡಿ.ಎಂ.ಸಿ ಪ್ರಮುಖರು ಕೊಡಗು ಜಿಲ್ಲಾಧಿಕಾರಿಗಳ ಗಮನಕ್ಕೂ ತಂದಿದ್ದಾರೆ. ಅಕ್ಕಿ ಎಲ್ಲಿಂದ ಪೂರೈಕೆ ಆಗಿದೆಯೋ ಆ ಕಂಪನಿಯ ಪರವಾನಗಿ ರದ್ದುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್.ಡಿ.ಎಂ.ಸಿ ಆಡಳಿತ ಮಂಡಳಿಯ ಪ್ರಮುಖರು ಆಗ್ರಹಿಸಿದ್ದಾರೆ.

ಇದನ್ನೂ ಓದಿ | Motivational story | ನಿಮ್ಮಂಥ ಮಗು ಬೇಕು ಎಂದು ಬಂದವಳಿಗೆ ನಾನೇ ನಿಮಗೆ ಮಗುವಾಗುವೆ ಎಂದಿದ್ದರು ವಿವೇಕಾನಂದರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Polluted Water : ಕಲುಷಿತ ನೀರು ಕುಡಿದು ಒಂದೇ ಗ್ರಾಮದ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

Polluted Water : ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿರುವ ವರಲಕ್ಷ್ಮೀ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರಿತಿ ವಾಂತಿ, ಭೇದಿಯಿಂದ ಇಬ್ಬರು ಗ್ರಾಮಸ್ಥರು. ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವರಲಕ್ಷ್ಮಿ ಲಕ್ಷ್ಮೀದೇವಮ್ಮ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

VISTARANEWS.COM


on

Polluted Water
Koo

ಚಿಕ್ಕಬಳ್ಳಾಪುರ : ಕಲುಷಿತ ನೀರು (Polluted Water ) ಸೇವಿಸಿದ್ದರಿಂದ ಉಂಟಾದ ಅಸ್ವಸ್ಥೆಯಿಂದ ಒಂದೇ ಗ್ರಾಮದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿನ ವೀರಪ್ಪಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಿಂದ ಈ ನಾಲ್ವರು ಮೃತಪಟ್ಟಿದ್ದಾರೆ. ಅದೇ ರೀತಿ ವೀರಾಪುರ ಗ್ರಾಮದಲ್ಲಿಯೂ ‌ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ಗಂಗಮ್ಮ (70) ಮುನಿನಾರಾಯಣಮ್ಮ (74), ಲಕ್ಷ್ಮಮ್ಮ (70). ನರಸಿಂಹಪ್ಪ (75) ಎಂಬುವರು ಮೃತಪಟ್ಟಿದ್ದರು.

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿರುವ ವರಲಕ್ಷ್ಮೀ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರಿತಿ ವಾಂತಿ, ಭೇದಿಯಿಂದ ಇಬ್ಬರು ಗ್ರಾಮಸ್ಥರು. ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವರಲಕ್ಷ್ಮಿ ಲಕ್ಷ್ಮೀದೇವಮ್ಮ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮ ಪಂಚಾಯ್ತಿ ವತಿಯಿಂದ ಪೂರೈಸಿದ್ದ ನೀರು ಕಲುಷಿತ ಗೊಂಡಿದ್ದ ಕಾರಣ ಆರೋಗ್ಯ ಸಮಸ್ಯೆ ಉಂಟಾಗಿದೆ. ನೀರು ಸರಬರಾಜು ಮಾಡಿರುವ ಕೋಟಗಲ್ ಗ್ರಾಮಪಂಚಾಯಿತಿ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ವಾರದಲ್ಲಿ ಗ್ರಾಮದಲ್ಲಿ ನಾಲ್ಕು ಸರಣಿ ಸಾವಾದರೂ ಎಚ್ಚೆತ್ತುಕೊಳ್ಳದ ಪಿಡಿಒ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ವಾಸನೆ ಬರುತ್ತಿವೆ. ಅದನ್ನೆಲ್ಲ ರಿಪೇರಿ ಮಾಡದ ಕಾರಣ ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುತ್ತಿದೆ. ಅದರಿಂದಾಗಿಯೇ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

ಮುಂಗಾರು ಚುರುಕಾಗುತ್ತಿದೆ. ಮಳೆಗಾಲವನ್ನು ಸಿಕ್ಕಾಪಟ್ಟೆ ಪ್ರೀತಿಸುವವರು ಇದ್ದಷ್ಟೇ ಮುಖ ಹಿಂಡುವವರೂ ಇದ್ದಾರೆ. ಇದಕ್ಕೆ ಕಾರಣಗಳು ಬಹಳಷ್ಟಿದ್ದರೂ, ಈ ಒದ್ದೆ-ಥಂಡಿ-ಶೀತದ ದಿನಗಳಲ್ಲಿ ಕಾಡುವ ಸೋಂಕುಗಳು ಅವುಗಳಲ್ಲಿ ಒಂದು ಪ್ರಮುಖ ಕಾರಣ. ಹೊರಗೆ ಮೋಡ ಕಟ್ಟಿದಂತೆಯೇ ಒಳಗೆ ಮೂಗು ಕಟ್ಟಿ, ಹೊರಗಿನಂತೆ ಒಳಗೂ ಧಾರಾಕಾರ ಹರಿದು, ಗುಡುಗು-ಸಿಡಿಲಿನಂತೆ ಕೆಮ್ಮು ಪ್ರಾರಂಭವಾದರೆ- ಮಳೆಯನ್ನು ಪ್ರೀತಿಸಲು ಹೇಗೆ ಸಾಧ್ಯ? ರೋಗಾಣುಗಳನ್ನು ತಡೆಯಲು ಸಾಧ್ಯವಿಲ್ಲದಿದ್ದರೂ, ನಮ್ಮ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಬಹುದಲ್ಲ. ರೋಗ ನಿರೋಧಕ ಶಕ್ತಿಗೆ ಬಲ ಬರುವುದೇ ನಮ್ಮ ಆಹಾರದಿಂದ. ಸೋಂಕು ದೂರ ಇರಿಸುವುದಕ್ಕೆ (Tips For Rainy Season) ಎಂಥ ಆಹಾರ ಒಳ್ಳೆಯದು?

ವಿಟಮಿನ್‌ ಸಿ ಆಹಾರಗಳು

ದೇಹದ ರೋಗ ನಿರೋಧಕ ಶಕ್ತಿಯನ್ನು ಉದ್ದೀಪಿಸುವಲ್ಲಿ ಸಿ ಜೀವಸತ್ವ ಪ್ರಧಾನವಾಗಿ ಬೇಕು. ಅದರಲ್ಲೂ ನೆಗಡಿ, ಕೆಮ್ಮು, ಜ್ವರದಂಥ ಮಳೆಗಾಲದ ಸೋಂಕು ರೋಗಗಳನ್ನು ದೂರ ಇಡುವುದಕ್ಕೆ ವಿಟಮಿನ್‌ ಸಿ ಅಗತ್ಯವಾಗಿ ಬೇಕು. ಹಾಗಾಗಿ ಕಿತ್ತಳೆ, ನಿಂಬೆ, ದಾಳಿಂಬೆ, ಪಪ್ಪಾಯ, ಪೇರಳೆ, ಬ್ರೊಕೊಲಿ, ದಪ್ಪಮೆಣಸು, ಮೊಳಕೆ ಕಟ್ಟಿದ ಕಾಳುಗಳನ್ನು ತಪ್ಪದೆ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ginger

ಶುಂಠಿ

ಇದಕ್ಕೆ ಹಲವಾರು ಔಷಧೀಯ ಗುಣಗಳಿವೆ. ಅದರಲ್ಲೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ಬ್ಯಾಕ್ಟೀರಿಯ ನಿರೋಧಕ ಮತ್ತು ಉರಿಯೂತ ಶಾಮಕ ಗುಣಗಳು ಇದರಲ್ಲಿ ಧಾರಾಳವಾಗಿವೆ. ಕೆಮ್ಮು, ನೆಗಡಿ, ಕಫದಂಥ ಸಮಸ್ಯೆಗಳಿಗೆ ಶುಂಠಿ ಚಹಾ, ಶುಂಠಿ ಕಷಾಯಗಳು ಉಪಶಮನ ನೀಡಬಲ್ಲವು. ಗಂಟಲು ಕಟ್ಟಿದ್ದರೆ, ಗಂ

Continue Reading

ಪ್ರಮುಖ ಸುದ್ದಿ

HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

HSRP Number Plate : ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

VISTARANEWS.COM


on

HSRP Number plate
Koo

ಬೆಂಗಳೂರು: 2019ಕ್ಕಿಂತ ಹಿಂದೆ ಮಾರುಕಟ್ಟೆಗೆ ಇಳಿದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಸಂಖ್ಯೆ ಫಲಕ (HSRP Number Plate) ಕಡ್ಡಾಯವಾಗಿ ಅಳವಡಿಸಬೇಕೆಂಬ ಗಡುವು ಜುಲೈ 4ರವರೆಗೆ ವಿಸ್ತರಣೆಯಾಗಿದೆ. ಹೀಗಾಗಿ ನಾನಾ ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ನಂಬರ್​ಪ್ಲೇಟ್​ ಅಳವಡಿಸದ ವಾಹನಗಳ ಮಾಲೀಕರಿಗೆ ನೆಮ್ಮದಿ ಸಿಕ್ಕಿದೆ. ಹೊಸ ನಂಬರ್​ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಹೈಕೋರ್ಟ್‌ ಮೇ 21ರಂದು ಹೊರಡಿಸಿದ್ದ ಆದೇಶ ಜುಲೈ 4ರವರೆಗೆ ವಿಸ್ತರಣೆಯಾಗಿರುವುದರಿಂದ ವಾಹನ ಮಾಲೀಕರಿಗೆ ತೊಂದರೆ ತಪ್ಪಿದೆ.

ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

ಪ್ರಕರಣದಲ್ಲಿ ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ, ಅವರೂ ಸರ್ಕಾರದ ನಿಲುವನ್ನು ಇದೇ ವೇಳೆ ವ್ಯಕ್ತಪಡಿಸಿದ್ದಾರೆ. “ಎಚ್‌ಎಸ್‌ಆರ್‌ಪಿ ಫಲಕಗಳ ಅಳವಡಿಕೆ ಅವಧಿಯನ್ನು ರಾಜ್ಯ ಸರಕಾರ 2024ರ ಆಗಸ್ಟ್‌ ಇಲ್ಲವೇ ಸೆಪ್ಟೆಂಬರ್‌ವರೆಗೂ ವಿಸ್ತರಿಸುವ ಚಿಂತನೆ ನಡೆಸಿದೆ. ಹೈಕೋರ್ಟ್‌ ಅನುಮತಿ ನೀಡಿದಲ್ಲಿ ಸರಕಾರ ಈ ಸಂಬಂಧ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಿದೆ,” ಎಂದು ಮನವರಿಕೆ ಮಾಡಿದರು. ಈ ವೇಳೆ ನ್ಯಾಯಪೀಠ, ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಅವಧಿಯನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲು ಸರಕಾರ ಸ್ವತಂತ್ರ,” ಎಂದು ಹೇಳಿತು.

ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುನ್ನ ನೋಂದಣಿಯಾದ ಎಲ್ಲ ಮಾದರಿಯ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ, ವಿತರಣೆ, ಅಳವಡಿಕೆ ಸೇರಿದಂತೆ ನಾನಾ ಸಮಸ್ಯೆಗಳಿಂದ ಈ ಯೋಜನೆಗೆ ಸಮಸ್ಯೆಯಾಗುತ್ತಿದೆ. ಸುರಕ್ಷಿತ ನಂಬರ್​ ಪ್ಲೇಟ್ ಅಳವಡಿಸಲು ಸುಮಾರು ಅರ್ಧದಷ್ಟು ವಾಹನ ಮಾಲೀಕರಿಗೆ ಇನ್ನೂ ಆಗಿಲ್ಲ. ಹೀಗಾಗಿ ಗಡುವು ವಿಸ್ತರಣೆ ಆಗುತ್ತಲೇ ಇದೆ. ಇದೀಗ ಕೋರ್ಟ್​ ಆದೇಶದ ಮೂಲಕ ಮತ್ತಷ್ಟು ವಿಸ್ತರಣೆಯಾಗಿದೆ. ಸರ್ಕಾರವೂ ಇದನ್ನು ಇನ್ನಷ್ಟು ಮುಂದುವರಿಸುವ ಯೋಜನೆ ಹೊಂದಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಕೆಲವು ಸಂಸ್ಥೆಗಳನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಆಕ್ಷೇಪಿಸಿ ಹೈ ಸೆಕ್ಯುರಿಟಿ ರೆಜಿಸ್ಪ್ರೇಷನ್‌ ಪ್ಲೇಟ್‌ ಮ್ಯಾನುಫ್ಯಾಕ್ಚರರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಸೇರಿ ಅವಕಾಶ ವಂಚಿತ ಕೆಲ ಸಂಸ್ಥೆಗಳು ನ್ಯಾಯಾಲಯದ ಮೊರೆ ಹೋಗಿವೆ. ಆ ಅರ್ಜಿ ಜತೆಗೆ ಮಧ್ಯಂತರ ಅರ್ಜಿ ಹೂಡಿರುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಧಿಸಿರುವ ಗಡುವು ವಿಸ್ತರಿಸಲು ಕೋರಿದೆ.

Continue Reading

ಕರ್ನಾಟಕ

Karnataka Weather: ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಭಾರಿ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

Rain News
ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಭಾರೀ ಮಳೆ ಸುರಿದಿದ್ದು, ಕಿನ್ನಾಳ ರಸ್ತೆಯಲ್ಲಿ ದೊಡ್ಡ ಪ್ರಮಾಣದಲ್ಲಿ ರಾಜಕಾಲುವೆ ನೀರು ರಸ್ತೆ ಮೇಲೆ ಹರಿದಿದ್ದರಿಂದ ವಾಹನ ಸವಾರರು ಪರದಾಡಿದರು.
Koo

ಬೆಂಗಳೂರು: ಕರ್ನಾಟಕದ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹತ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಜೂನ್‌ 14ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಜೂನ್‌ 16ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ

ಚಂಡಮಾರುತದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ: ಮೂಲ್ಕಿಯಿಂದ ಮಂಗಳೂರಿನವರೆಗೆ ದಕ್ಷಿಣ ಕನ್ನಡ, ಕರ್ನಾಟಕ ಕರಾವಳಿಗೆ ಹೈ ವೇವ್ ಅಲರ್ಟ್‌ ಇದೆ. . ಜೂನ್ 12‌ರಿಂದ 13ರ ಬೆಳಗ್ಗೆ 11:30 ಗಂಟೆಗಳವರೆಗೆ 1.9 – 2.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉಡುಪಿ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ ಹೈ ವೇವ್ ಅಲರ್ಟ್‌ ಇದೆ. ಜೂನ್‌ 12ರಿಂದ 13ರ ಬೆಳಗ್ಗೆ 11:30ರವರೆಗೆ 1.9- 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉತ್ತರ ಕನ್ನಡ: ಉತ್ತರ ಕನ್ನಡ, ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಹೈ ವೇವ್ ಅಲರ್ಟ್‌ ನೀಡಲಾಗಿದೆ. ಜೂನ್‌ 12ರಿಂದ 13ರ ರಾತ್ರಿ 11.30ರವರೆ 2.0 – 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ಸಲಹೆ ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ. ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29ನೇC ಮತ್ತು 21c ಆಗಿರಬಹುದು.

Continue Reading

ಪ್ರಮುಖ ಸುದ್ದಿ

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರವು ಮತ್ತೊಂದು ಶಾಕ್‌ ನೀಡಲು ಸಜ್ಜಾದಂತಿದೆ. ಒಂದು ವರ್ಷದಲ್ಲಿಯೇ ಎರಡು ಬಾರಿ ಮದ್ಯದ ಬೆಲೆಯೇರಿಕೆ ಮಾಡಿದ್ದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಮೂರನೇ ಬಾರಿ ಬೆಲೆಯೇರಿಕೆ ಮಾಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಅಬಕಾರಿ ಇಲಾಖೆಯು ವರ್ಷದಲ್ಲಿ ಒಮ್ಮೆ ಬೆಲೆ ಪರಿಷ್ಕರಣೆ ಮಾಡುತ್ತದೆ. ಆದರೆ, ಸಂಪನ್ಮೂಲ ಕ್ರೋಡೀಕರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಬೆಲೆಯೇರಿಕೆ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Alcohal
Koo

ಬೆಂಗಳೂರು: ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು (Guarantee Schemes) ಜಾರಿಗೆ ತಂದು, ಹಲವು ಉಚಿತ ಕೊಡುಗೆಗಳನ್ನು ನೀಡುತ್ತಿರುವ ರಾಜ್ಯ ಸರ್ಕಾರವು (Karnataka Government), ವರ್ಷಕ್ಕೆ ಇವುಗಳಿಗೆಂದೇ ಸುಮಾರು 59 ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿಯೇ ಸಂಪನ್ಮೂಲ ಕ್ರೋಡೀಕರಿಸಲು ರಾಜ್ಯ ಸರ್ಕಾರವು ಹಲವು ರೀತಿಯ ಬೆಲೆಯೇರಿಕೆಯ ಅಸ್ತ್ರ ಬಳಸುತ್ತಿದೆ. ಅದರಲ್ಲೂ, ಕಳೆದ ಒಂದು ವರ್ಷದಲ್ಲಿಯೇ ಎರಡು ಬಾರಿ ಮದ್ಯದ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರವು ಈಗ ವರ್ಷದೊಳಗೇ ಮೂರನೇ ಬಾರಿ ಬೆಲೆಯೇರಿಕೆ (Liquor Price Hike ) ಮಾಡುವ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಇದು ಮದ್ಯಪ್ರಿಯರಿಗೆ ಶಾಕಿಂಗ್‌ ಎನಿಸಿದೆ.

ಹೌದು, ಅಬಕಾರಿ ಇಲಾಖೆಯು ಮದ್ಯದ ಬೆಲೆಯೇರಿಕೆ ಮಾಡುವ ಕುರಿತು ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ಹಾಗೊಂದು ವೇಳೆ ರಾಜ್ಯ ಸರ್ಕಾರವು ಬೆಲೆಯೇರಿಕೆ ಮಾಡಿದರೆ ಓಲ್ಡ್‌ ಮಾಂಕ್‌, ಎಂಸಿ ರಮ್‌, ಬಿಪಿ, ಒಟಿ ಹಾಗೂ 8 ಪಿಎಂ ಬ್ರ್ಯಾಂಡ್‌ನ ಮದ್ಯದ ಬಾಟಲಿಗಳ ಬೆಲೆಯೇರಿಕೆ ಆಗಲಿದೆ. ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದೆ. ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರವು ಸಂಪನ್ಮೂಲ ಕ್ರೋಡೀಕರಣ ಮಾಡಲು ಮದ್ಯದ ಬೆಲೆಯೇರಿಕೆ ಪ್ರಮುಖ ಅಸ್ತ್ರವಾಗಲಿದೆ. ಹಾಗಾಗಿ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಬೆಲೆಯೇರಿಕೆ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

Constables

2023ರ ಜೂನ್‌ ತಿಂಗಳಲ್ಲಿ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಮದ್ಯದ ದರದಲ್ಲಿ ಪ್ರತಿ ಬಾಟಲ್‌ಗೆ 10 ರೂ.ನಿಂದ 20 ರೂ.ವರೆಗೆ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿತ್ತು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಗಳ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಬಡ್ ವೈಸರ್ ಬಿಯರ್ ದರ 198 ರೂ.ನಿಂದ 220 ರೂ.ಗೆ ಏರಿಕೆ ಮಾಡಲಾಗಿತ್ತು. ಕಿಂಗ್‌ಫಿಶರ್ ಬಿಯರ್ ದರವನ್ನು 160 ರೂ.ನಿಂದ 170 ರೂ.ಗೆ ಏರಿಕೆ ಮಾಡಲಾಗಿತ್ತು. ಯುಬಿ ಪ್ರೀಮಿಯಂ ದರವನ್ನು 125 ರೂ.ನಿಂದ 130-135 ರೂ.ಗೆ ಏರಿಕೆಸಲಾಗಿತ್ತು.

ಇದಾದ ಕೆಲವೇ ತಿಂಗಳಲ್ಲಿ ಮತ್ತೆ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಬಿಯರ್‌ ಮೇಲಿನ ದರವನ್ನು ಹೆಚ್ಚಳ ಮಾಡಲು ಅಬಕಾರಿ ಇಲಾಖೆ 2024ರ ಜನವರಿಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿತ್ತು. ಅದರಂತೆ, ಒಂದು ಬಿಯರ್‌ ಮೇಲೆ 8ರಿಂದ 10 ರೂಪಾಯಿ ಹೆಚ್ಚಳ ಮಾಡಲು ಸರ್ಕಾರಕ್ಕೆ ಮನವಿ ಮಾಡಿತ್ತು. ಅದರಂತೆ, ಫೆಬ್ರವರಿಯಲ್ಲಿ ಬಜೆಟ್‌ ಮಂಡಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯದ ಬೆಲೆಯೇರಿಕೆ ಕುರಿತು ಘೋಷಣೆ ಮಾಡಿದ್ದರು. ಈಗ ಮೂರನೇ ಬಾರಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 500 ಕೋಟಿ ರೂ. ಸೇರಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Continue Reading
Advertisement
Himachal tour
ಲೈಫ್‌ಸ್ಟೈಲ್4 mins ago

Himachal Tour: ರೋಮಾಂಚನ ಉಂಟುಮಾಡುವ ಹಿಮಾಚಲ ಪ್ರದೇಶದ ಡಾಲ್ ಹೌಸಿ ಗಿರಿಧಾಮ!

Coconut in Worship
ಧಾರ್ಮಿಕ7 mins ago

Coconut in Worship: ಪೂಜೆ, ಶುಭ ಕಾರ್ಯಗಳಲ್ಲಿ ತೆಂಗಿನಕಾಯಿ ಬಳಸುವುದೇಕೆ ಗೊತ್ತಿದೆಯೆ?

Baba Vanga Predictions
ಭವಿಷ್ಯ21 mins ago

Baba Vanga Predictions: ಪ್ರಪಂಚದ ಅಂತ್ಯ ಯಾವಾಗ? ಈ ವರ್ಷ ಏನೇನಾಗಲಿವೆ? ಬಾಬಾ ವಂಗಾ ಭವಿಷ್ಯ ಹೀಗಿದೆ!

Viral Video
ಸಿನಿಮಾ21 mins ago

Viral Video: ಪುಷ್ಪ 2 ಚಿತ್ರದ ‘ಅಂಗಾರನ್’ ಹಾಡಿಗೆ ಪತ್ನಿ ಜೊತೆ ಸ್ಟೆಪ್‌ ಹಾಕಿದ ವಿಶೇಷ ಚೇತನ

Polluted Water
ಪ್ರಮುಖ ಸುದ್ದಿ28 mins ago

Polluted Water : ಕಲುಷಿತ ನೀರು ಕುಡಿದು ಒಂದೇ ಗ್ರಾಮದ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

Fire Accident
ದೇಶ38 mins ago

Fire Accident: ಮನೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ; 7 ತಿಂಗಳ ಮಗು ಸಹಿತ ಐವರ ಸಜೀವ ದಹನ

Health Tips Kannada
ಆರೋಗ್ಯ1 hour ago

Health Tips Kannada: ನಮ್ಮ ದೇಹದಲ್ಲಿ ಉಪ್ಪಿನ ಅಂಶ ಕಡಿಮೆಯಾಗಿದೆ ಎಂದು ತಿಳಿಯುವುದು ಹೇಗೆ?

HSRP Number plate
ಪ್ರಮುಖ ಸುದ್ದಿ1 hour ago

HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

Rain News
ಕರ್ನಾಟಕ2 hours ago

Karnataka Weather: ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

Tips For Rainy Season
ಆರೋಗ್ಯ2 hours ago

Tips For Rainy Season: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌