ವಿಜಯನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಪ್ರಥಮ ಬಾರಿಗೆ ನೂತನ ವಿಜಯನಗರ ಜಿಲ್ಲೆಗೆ ಮಂಗಳವಾರ (ಮೇ 2) ಆಗಮಿಸಲಿದ್ದಾರೆ.
ಪ್ರಧಾನಿ ಮೋದಿ ಅವರ ಭೇಟಿ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಆನಂದ್ ಸಿಂಗ್, ವಿಜಯನಗರ ಜಿಲ್ಲೆಗೆ ಪ್ರಧಾನಿ ಮೋದಿಯವರು ಮೊದಲ ಬಾರಿಗೆ ಬರುತ್ತಿದ್ದಾರೆ. ಅವರ ಭೇಟಿಯು ಕೇವಲ ಸಿದ್ದಾರ್ಥ ಸಿಂಗ್‌ಗೆ ಲಾಭ ತರುವುದಿಲ್ಲ. ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಎಂಟೂ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಅನುಕೂಲ ಆಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: Karnataka Election: ವಿನಾಶದ ಅಂಚಿನಲ್ಲಿರುವ ಕಾಂಗ್ರೆಸ್ ಗ್ಯಾರಂಟಿಗಳನ್ನು ಜನ ನಂಬಲ್ಲ: ಅರುಣ್ ಸಿಂಗ್
ಭರದಿಂದ ಸಾಗಿದ ಸಿದ್ಧತೆ
ಚುನಾವಣಾ ಪ್ರಚಾರದ ಬಹಿರಂಗ ಸಮಾವೇಶದಲ್ಲಿ ಮೂರು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದ್ದು, ಕಾರ್ಯಕ್ರಮದ ಸಿದ್ಧತೆ ಭರದಿಂದ ಸಾಗಿದೆ ಎಂದು ಹೇಳಿದರು.
ಒಂದೂವರೆ ಲಕ್ಷ ಮತಗಳಾಗಿ ಬದಲಾಗುವ ಸಾಧ್ಯತೆ
ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್ ಮಾತನಾಡಿ, ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನು ಒಂದು ಲಕ್ಷ ಮತಗಳು ಪಡೆಯುವ ಗುರಿ ಹೊಂದಿದ್ದೇನೆ. ಆದರೆ ಮೇ 02 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹೊಸಪೇಟೆಗೆ ಬಂದು ಹೋದ ಬಳಿಕ ಅದು ಒಂದೂವರೆ ಲಕ್ಷ ಮತಗಳಾಗಿ ಬದಲಾಗುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: Pratap Simha: ಗದಗದಲ್ಲಿ ಕೂಲ್ ಡ್ರಿಂಕ್ಸ್ ವ್ಯಾಪಾರಿಗೆ ನಷ್ಟ; ಹಣ ನೀಡಿ ಮಾನವೀಯತೆ ಮೆರೆದ ಪ್ರತಾಪ್ ಸಿಂಹ
ಪ್ರಧಾನಿ ಮೋದಿ ಬರುವುದು ನಮ್ಮ ಪುಣ್ಯ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಜಯನಗರ ವಿಧಾನಸಭೆ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಬರುವುದು ನಮ್ಮ ಪುಣ್ಯ, ಅವರು ಬಂದು ಪ್ರಚಾರ ಮಾಡಿ ಹೋದಾಗ, ಅದು ನಮ್ಮಲ್ಲಿ ಮತ್ತಷ್ಟು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು. ಪ್ರಧಾನಿ ಮೋದಿ ಅವರನ್ನು ಬರ ಮಾಡಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಹೇಳಿದರು.