ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ನಡುವೆ ಹೊಸದಾಗಿ ನಿರ್ಮಾಣಗೊಂಡಿರುವ ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು (Bengaluru-Mysuru Expressway) ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ (ಮಾರ್ಚ್ 12ರಂದು) ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭರ್ಜರಿ ತಯಾರಿ ನಡೆಸಿಕೊಂಡಿದೆ. ಈ ರಸ್ತೆಯ ಅತ್ಯುತ್ತಮ ಚಿತ್ರಗಳನ್ನು ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಕನ್ನಡದಲ್ಲಿ ಮಾಡಿದ ಟ್ವೀಟ್
ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಹೆದ್ದಾರಿಯ ಚಿತ್ರ ಹಾಗೂ ವಿಡಿಯೊ ಶೇರ್ ಮಾಡಿ 2019ರ ಫೆಬ್ರವರಿ 19ರಂದು ಎನ್ಎಚ್ 275 ಘೋಷಣೆ ಮಾಡಲಾಗಿತ್ತು. 12ನೇ ಮಾರ್ಚ್ 2023ರಂದು ಎನ್ಎಚ್ 275 ಉದ್ಘಾಟನೆಯಾಗಲಿದೆ. ನಾಳೆ ಕರ್ನಾಟಕದ ಪಾಲಿಗೆ ಐತಿಹಾಸಿಕ ದಿನ. ಐದು ವರ್ಷಗಳ ಹಿಂದೆ ಪ್ರಧಾನಿ ಮೋದಿಯವರು ಮೈಸೂರಿಗೆ ಬಂದಾಗ ಎನ್ಎಚ್ 275 ಯೋಜನೆ ಘೋಷಿಸಿದ್ದರು ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ ಅನ್ನು ಶೇರ್ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸರ್ಕಾರ ಸಂಪರ್ಕ ಮತ್ತು ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವತ್ತ ಕೆಲಸ ಮಾಡುತ್ತಿದೆ. ಮೈಸೂರು ಮತ್ತು ಬೆಂಗಳೂರು ನಡುವಿನ ಹೆದ್ದಾರಿ ಮಾರ್ಗ ಆ ದಿಕ್ಕಿನತ್ತ ಹೆಜ್ಜೆಯಾಗಿದೆ ಬರೆದುಕೊಂಡಿದ್ದಾರೆ.
ಮೋದಿ ಅವರು ಇಂಗ್ಲಿಷ್ನಲ್ಲಿ ಮಾಡಿದ ಟ್ವೀಟ್
ಇಂಗ್ಲಿಷ್ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, “ಮಾರ್ಚ್ 12ರಂದು ಮಂಡ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಅನ್ನು ದೇಶಕ್ಕೆ ಅರ್ಪಿಸಲಿದ್ದೇನೆ” ಎಂದಿದ್ದಾರೆ.
ಪ್ರಲ್ಹಾದ್ ಜೋಶಿ ಟ್ವೀಟ್
ಇದೇ ವೇಳೆ “ಮೈಸೂರು- ಕುಶಾಲನಗರ ಹೆದ್ದಾರಿ ನಿರ್ಮಾಣ ಕಾಮಗಾರಿಗೂ ಅಡಿಗಲ್ಲು ಹಾಕುವೆ. ಈ ಎರಡೂ ಯೋಜನೆಗಳು ಸಂಪರ್ಕ ಹಾಗೂ ಸಾಮಾಜಿಕ- ಆರ್ಥಿಕ ಬೆಳವಣಿಗೆಗೆ ಪೂರಕ” ಎಂದು ಮೋದಿ ಬರೆದುಕೊಂಡಿದ್ದಾರೆ.