Site icon Vistara News

PM Modi: ಮಾ.12ರಂದು ಮಂಡ್ಯದಲ್ಲಿ ಮೋದಿ ರೋಡ್‌ ಶೋ ಫಿಕ್ಸ್‌; 1.5 ಕಿ.ಮೀ. ಸಂಚರಿಸಲಿರುವ ಪ್ರಧಾನಿ

PM Modi to hold roadshow in Mandya on March 12 One and a half kilometers PM to travel

ಮಂಡ್ಯ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಅದರಲ್ಲೂ ಕರ್ನಾಟಕವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಮ್ಯಾರಥಾನ್‌ ಭೇಟಿಯನ್ನು ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದೆರಡು ತಿಂಗಳಿಂದೀಚೆಗೆ ರಾಜ್ಯಕ್ಕೆ ಹಲವು ಬಾರಿ ಬಂದು ಹೋಗಿದ್ದಾರೆ. ಈಗ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಮಾ.12ರಂದು ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಅಂದು ಮಂಡ್ಯದಲ್ಲಿ ಒಂದೂವರೆ ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ. ಈ ಸಂಬಂಧ ಜಿಲ್ಲಾಡಳಿತದಿಂದ ಸ್ಥಳ ಪರಿಶೀಲನೆ ನಡೆದಿದೆ.

ಮಂಡ್ಯದಲ್ಲಿ ಪ್ರಧಾನಿ ಮೋದಿ ಅವರು ಒಂದೂವರೆ ಕಿ.ಮೀ. ರೋಡ್ ಶೋ ನಡೆಸಲು ಅನುಮತಿ ದೊರಕಿದೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದ ತಂಡವು ಭಾನುವಾರ (ಮಾ. 5) ಸ್ಥಳ ಪರಿಶೀಲನೆ ನಡೆಸಿದೆ.

ಸ್ಥಳ ಪರಿಶೀಲನೆಯಲ್ಲಿ ನಿರತರಾಗಿರುವ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮತ್ತಿತರ ಅಧಿಕಾರಿಗಳು

ಇದನ್ನೂ ಓದಿ: Bengaluru Cylinder Blast: ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ; 13 ವರ್ಷದ ಬಾಲಕ ಸಾವು

ಅಂದು ಮಂಡ್ಯದ ಐಬಿ ಬಳಿಯಿಂದ ನಂದ ಥಿಯೇಟರ್‌ವರೆಗೆ ರೋಡ್ ಶೋ ಇರಲಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಲಿರುವ ಮೋದಿ, ಅಂದು ಪಿಇಎಸ್ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ.
ಹೆಲಿಪ್ಯಾಡ್‌ನಿಂದ ಆಗಮಿಸಿ ರೋಡ್ ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ನಡೆಯಲಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Exit mobile version