Site icon Vistara News

Assembly Session : ಮೋದಿ 118 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

PM Narendra Modi and CM Siddaramaiah and Countrys debt

ಬೆಂಗಳೂರು: ನರೇಂದ್ರ ಮೋದಿ (Narendra Modi) ಅವರು ಪ್ರಧಾನಿ (Prime Minister) ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ರೂಪಾಯಿ ಮಾತ್ರವೇ ಇತ್ತು. ಆದರೆ, ಈಗ ದೇಶದ ಸಾಲ 170 ಲಕ್ಷ ಕೋಟಿ ರೂಪಾಯಿ ಆಗಿದೆ. ಪ್ರಧಾನಿ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ರೂಪಾಯಿ ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ದೇಶದ ಸಾಲದ (Countrys debt) ಪ್ರಮಾಣವನ್ನು ಬಿಚ್ಚಿಟ್ಟರು. ವಿಧಾನ ಮಂಡಲ ಅಧಿವೇಶನ (Assembly Session) ಸಂಬಂಧ ವಿಧಾನ ಪರಿಷತ್‌ನಲ್ಲಿ (Legislative Council) ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡುವಾಗ ದೇಶದ ಸಾಲವನ್ನು ಉಲ್ಲೇಖಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ ರೂಪಾಯಿ ಇತ್ತು. ಈ ಸಾಲವನ್ನು 170 ಲಕ್ಷ ಕೋಟಿ ರೂಪಾಯಿಗೆ ಏರಿಸಿದ್ದೇ ಮೋದಿಯವರ ಸಾಧನೆಯಾಗಿದೆ. ಶ್ರೀಮಂತ ಕಾರ್ಪೋರೇಟ್‌ಗಳ 12 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ ಮೋದಿ ಅವರು, ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುತ್ತಾರೆ. ಕಚ್ಚಾತೈಲದ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್-ಡೀಸೆಲ್ ಬೆಲೆ (Petrol and diesel price) ಈ ಮಟ್ಟಕ್ಕೆ ಏರಿಸಿದ್ದಾರೆ. ಹಾಲು-ಮೊಸರು-ಮಜ್ಜಿಗೆ- ಮಂಡಕ್ಕಿ ಮೇಲೂ ಜಿಎಸ್‌ಟಿ (GST) ಹಾಕಿದರೆ ಬಡವರು, ಮಧ್ಯಮ ವರ್ಗದವರ ಗತಿ ಏನು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಟೆಕ್ನಿಕಲಿ ಅಲ್ಲಿದ್ದಾರೆ ಅಷ್ಟೇ

ಮುಖ್ಯಮಂತ್ರಿಗಳು ಉತ್ತರ ನೀಡುವಾಗ ಎದುರು ಸಾಲಿನಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ ಮತ್ತು ಬಿಜೆಪಿಯ ಎಚ್. ವಿಶ್ವನಾಥ್ ಮಾತ್ರ ಕುಳಿತು ಉಳಿದವರೆಲ್ಲ ಬಹಿಷ್ಕರಿಸಿದ್ದರು. ಇದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮರಿತಿಬ್ಬೇಗೌಡರು ಟೆಕ್ನಿಕಲಿ ಜೆಡಿಎಸ್‌ನಲ್ಲಿದ್ದಾರೆ. ಆದರೆ ವಾಸ್ತವವಾಗಿ ಅವರಿಗೆ ವಿರುದ್ಧವಿದ್ದಾರೆ. ಎಚ್. ವಿಶ್ವನಾಥ್ ಕೂಡ ಟೆಕ್ನಿಕಲಿ ಬಿಜೆಪಿಯಲ್ಲಿದ್ದಾರೆ. ಆದರೆ, ವಾಸ್ತವವಾಗಿ ಬಿಜೆಪಿಗೆ ವಿರುದ್ಧವಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ: Fraud Case : 800 ಕೋಟಿ ರೂ. ವಂಚನೆಯ ʼಆಯುರ್ವೇದʼ ಚೈನ್‌ಲಿಂಕ್ ದೋಖಾ‌ ನಡೆದಿದ್ದು ಹೀಗೆ!

ಸಿಎಂ ಪ್ರಮುಖ ಮಾತುಗಳು

Exit mobile version