ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ದೆಹಲಿಯ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೆಹಲಿಯ ತಾಲಕಟೋರಾ ಸ್ಟೇಡಿಯಂನಲ್ಲಿ ಆಯೋಜಿಸಿರುವ ‘ಬಾರಿಸುವ ಕನ್ನಡ ಡಿಂಡಿಮವ ಸಾಂಸ್ಕೃತಿಕ ಸಂಭ್ರಮ’ಕ್ಕೆ (Barisu Kannada Dindimava) ಪ್ರಧಾನಿ ನರೇಂದ್ರ ಮೋದಿ ಅವರು ನಗಾರಿ ಬಾರಿಸುವ ಮೂಲಕ ಅದ್ಧೂರಿಯಾಗಿ ಚಾಲನೆ ನೀಡಿದರು.
ನಾಡಗೀತೆಗೆ ಎದ್ದು ನಿಂತು ಗೌರವ
ಕಾರ್ಯಕ್ರಮದಲ್ಲಿ ಕರ್ನಾಟಕದ ನಾಡಗೀತೆಯನ್ನು ಹಾಡಲಾಯಿತು. ದೆಹಲಿ ಕರ್ನಾಟಕ ಸಂಘದ ಮಹಿಳೆಯರು ನಾಡಗೀತೆ ಹಾಡಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿ ಪ್ರಮುಖ ಗಣ್ಯರು ಎದ್ದು ನಿಂತು ನಾಡಗೀತೆಗೆ ಗೌರವ ಸಲ್ಲಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮಿ, ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ, ನಂಜಾವಧೂತ ಮಹಾಸ್ವಾಮಿ, ಉಡುಪಿಯ ವಿಶ್ವಪ್ರಸನ್ನ ತೀರ್ಥ ಸ್ವಾಮಿ, ಮೈಸೂರಿನ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಕಿಶನ್ ರೆಡ್ಡಿ, ಶೋಭಾ ಕರಂದ್ಲಾಜೆ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ: Delhi Karnataka Sangha: 75ರ ಸಂಭ್ರಮದಲ್ಲಿ ದಿಲ್ಲಿ ಕರ್ನಾಟಕ ಸಂಘ, ಫೆ.25, 26ರಂದು ಅಮೃತ ಮಹೋತ್ಸವ, ಮೋದಿ ಉದ್ಘಾಟನೆ