ಹುಬ್ಬಳ್ಳಿ ಏರ್‌ಪೋರ್ಟ್‌ ವಿಶ್ವದರ್ಜೆಗೆ; ಹೊಸ ಟರ್ಮಿನಲ್‌ಗೆ ಮಾ.10ರಂದು ಮೋದಿ ಶಂಕುಸ್ಥಾಪನೆ - Vistara News

ಕರ್ನಾಟಕ

ಹುಬ್ಬಳ್ಳಿ ಏರ್‌ಪೋರ್ಟ್‌ ವಿಶ್ವದರ್ಜೆಗೆ; ಹೊಸ ಟರ್ಮಿನಲ್‌ಗೆ ಮಾ.10ರಂದು ಮೋದಿ ಶಂಕುಸ್ಥಾಪನೆ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್‌ ನಿರ್ಮಾಣಕ್ಕೆ ನರೇಂದ್ರ ಮೋದಿ ಅವರು ವರ್ಚ್ಯುವಲ್‌ ವೇದಿಕೆ ಮೂಲಕ ಮಾರ್ಚ್‌ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

VISTARANEWS.COM


on

Hubli Airport
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿರುವ (Hubli) ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು (Hubli Airport) ವಿಶ್ವದರ್ಜೆಗೇರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರ ಪ್ರಯತ್ನದ ಫಲವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್‌ ನಿರ್ಮಾಣಕ್ಕೆ ನಾಂದಿ ಹಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾರ್ಚ್‌ 10ರಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್‌ ನಿರ್ಮಾಣಕ್ಕೆ ವರ್ಚ್ಯುವಲ್‌ ವೇದಿಕೆ ಮೂಲಕ ಶಂಕುಸ್ತಾಪನೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಉತ್ತರ ಪ್ರದೇಶದ ಅಜಂಗಢದಿಂದ ಪ್ರಧಾನಿ ಮೋದಿ ಅವರು ವರ್ಚ್ಯುವಲ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿಯನ್ನು ಕೈಗೊಂಡಿದ್ದು, ವಿಶ್ವ ದರ್ಜೆಯ ವಿಮಾನ ನಿಲ್ದಾಣವನ್ನಾಗಿ ರೂಪಿಸಲು ಈ ಮೂಲಕ ಕ್ರಮ ಕೈಗೊಂಡಿದೆ ಎಂದು ವಿಮಾನ ನಿಲ್ದಾಣದ ಕಾರ್ಯ ನಿರ್ವಾಹಕ ನಿರ್ದೇಶಕ ಮನೋಜ್ ಶೇಖರನ್ ತಿಳಿಸಿದ್ದಾರೆ.

ಸಚಿವ ಪ್ರಹ್ಲಾದ ಜೋಶಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ವಿಶ್ವದರ್ಜೆ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಮಾತುಕತೆ ನಡೆಸಿದ್ದು, ಈಗ ಕಾಲ ಸನ್ನಿಹಿತವಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡು ನಿಲ್ದಾಣದ ಅಭಿವೃದ್ಧಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ವಿಮಾನ ನಿಲ್ದಾಣ ಪ್ರಾಧಿಕಾರವು ಸಚಿವ ಜೋಶಿ ಅವರನ್ನು ಆಹ್ವಾನಿಸಿದೆ.

ಇದನ್ನೂ ಓದಿ: Raw Jute: ರೈತರಿಗೂ ಮೋದಿ ಸಿಹಿ ಸುದ್ದಿ; ಸೆಣಬು ಬೆಂಬಲ ಬೆಲೆ 285 ರೂ. ಹೆಚ್ಚಳ

350 ಕೋಟಿ ರೂ. ವೆಚ್ಚ

ಹುಬ್ಬಳ್ಳಿ ಈಗ ಉತ್ತರ ಕರ್ನಾಟಕದ ಹೆಬ್ಬಾಗಿಲು ಮಾತ್ರವಲ್ಲ. ಪ್ರಮುಖ ವಾಣಿಜ್ಯ ಕೇಂದ್ರ ಬಿಂದುವಾಗಿದೆ. ಹಾಗಾಗಿ ಮಾ.10ರಂದು 350 ಕೋಟಿ ರು. ವೆಚ್ಚದಲ್ಲಿ ಮತ್ತೊಂದು ಟರ್ಮಿನಲ್ ಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ ಎಂದು ಸಚಿವ ಜೋಶಿ ಅವರು ಧಾರವಾಡ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಪಕ್ಷಿ ನೋಟ ಬುಕ್ ಬಿಡುಗಡೆ ವೇಳೆ ಘೋಷಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

CBSE Class 10 Results: ಸತತ 9ನೇ ಬಾರಿಗೆ ಶೇ.100 ಫಲಿತಾಂಶ; ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಅಮೋಘ ಸಾಧನೆ

CBSE Class 10 Results: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿರುವ ಪ್ರತಿಷ್ಠಿತ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಶೇ. 100 ಫಲಿತಾಂಶ ದಾಖಲಿಸುವ ಮೂಲಕ ಅಮೋಘ ಸಾಧನೆ ಮಾಡಿದೆ.

VISTARANEWS.COM


on

CBSE Class 10 Results
Koo

ಮಂಡ್ಯ: 2024-24ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶ (CBSE Class 10 Results) ಸೋಮವಾರ ಪ್ರಕಟಗೊಂಡಿದ್ದು, ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿರುವ ಪ್ರತಿಷ್ಠಿತ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಶೇ. 100 ಫಲಿತಾಂಶ ದಾಖಲಿಸುವ ಮೂಲಕ ಅಮೋಘ ಸಾಧನೆ ಮಾಡಿದೆ. ಈ ಬಾರಿ ಪರೀಕ್ಷೆಗೆ 56 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗುವ ಮೂಲಕ ಸತತ 9ನೇ ಬಾರಿ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಶೇ.100 ಫಲಿತಾಂಶ ದಾಖಲಿಸಿ ರಾಜ್ಯದ ಗಮನ ಸೆಳೆದಿದೆ.

ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಧನಂಜಯ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 23 ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಶ್ರೇಣಿಯಲ್ಲಿ 24 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಗೋರ್ವಧನ್ ಗೌಡ ಶೇ. 95, (ಇಂಗ್ಲಿಷ್ 88, ಕನ್ನಡ 96, ಗಣಿತ 97, ವಿಜ್ಞಾನ 95, ಸಮಾಜ 98) ಸಾನ್ವಿ ಯು ಗೌಡ ಶೇ.90, (ಇಂಗ್ಲಿಷ್ 94, ಕನ್ನಡ 98, ಗಣಿತ 66, ವಿಜ್ಞಾನ 95, ಸಮಾಜ 95) ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದ ಪ್ರಶಾಂತ ವಾತಾವರಣದಲ್ಲಿ 2013ರಲ್ಲಿ ಪ್ರಾರಂಭವಾದ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ರೈತಾಪಿ ವರ್ಗದ ಮಕ್ಕಳು, ಗ್ರಾಮೀಣ ಪ್ರದೇಶದ ಮಕ್ಕಳು ಸೇರಿದಂತೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ | CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ಗ್ರಾಮೀಣ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒದಗಿಸುತ್ತಿರುವುದು ಅಕ್ಷರ ಶಾಲೆಯ ಹೆಗ್ಗಳಿಕೆಯಾಗಿದ್ದು, ಜಿಲ್ಲೆಯಾದ್ಯಂತ ಪೋಷಕರ ನೆಚ್ಚಿನ ಶಾಲೆಯಾಗಿ ಮನೆಮಾತಾಗಿದೆ. ಪೋಷಕರಿಗೆ ಹೆಚ್ಚಿನ ಹೊರಯಾಗಬಾರದು ಎಂಬ ನಿಟ್ಟಿನಲ್ಲಿ ಕಡಿಮೆ ಫೀಸ್ ಪಡೆದು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಹಲವು ರಾಜ್ಯಗಳ ಶಿಕ್ಷಕರು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾದ್ದು, ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಸುವಲ್ಲಿ ಇದು ನೆರವಾಗುತ್ತಿದೆ. ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಒಲಿಂಪಿಕ್ಸ್‌ ಮಾದರಿಯ ಸ್ವಿಮ್ಮಿಂಗ್ ಫೂಲ್, ಅತ್ಯಾಧುನಿಕ ಲೈಬ್ರರಿ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಸಕಲ ಸೌಲಭ್ಯ ಒದಗಿಸಲಾಗಿದೆ. ಹಾಸ್ಟೆಲ್, ಶಾಲಾ ವಾಹನ ವ್ಯವಸ್ಥೆಯೂ ಲಭ್ಯವಿದೆ.

Continue Reading

ಕರ್ನಾಟಕ

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 (Climate Plan) ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021 ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

VISTARANEWS.COM


on

By

Climate Plan
Koo

ಬೆಂಗಳೂರು: ಕರ್ನಾಟಕ (karnataka) ಸರ್ಕಾರ (government) 2021ರಲ್ಲಿ ಸಿದ್ಧಪಡಿಸಲಾದ ಹವಾಮಾನ ಕ್ರಿಯಾ ಯೋಜನೆ (Climate Plan) ಇತ್ತೀಚೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದೆ. ಈ ಬಾರಿ ಕರ್ನಾಟಕದಲ್ಲಿ ಅತ್ಯಂತ ಭೀಕರ ಬರಗಾಲ (worst droughts) ಎದುರಾಗಿದೆ. ಆದರೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ನಿರೀಕ್ಷೆ ಇದೆ. ಈ ನಡುವೆ ಇದೀಗ ಹವಾಮಾನ ಕ್ರಿಯಾ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

42 ವಿವಿಧ ಇಲಾಖೆಗಳೊಂದಿಗೆ ಹಲವು ಬಾರಿ ಸಭೆ ನಡೆಸಿದ ಅಭಿವೃದ್ಧಿ ಆಯುಕ್ತರು, ಜೂನ್‌ನಲ್ಲಿ ಮಾದರಿ ನೀತಿ ಸಂಹಿತೆ ಹಿಂಪಡೆದ ಅನಂತರ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದರೊಂದಿಗೆ ಹವಾಮಾನ ಯೋಜನೆಯನ್ನು ಜಾರಿಗೆ ತಂದ ಮೊದಲ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಲಿದೆ ಎಂದು ತಿಳಿಸಿದ್ದರು. ಹವಾಮಾನ ಕ್ರಿಯಾ ಯೋಜನೆ ಕಾರ್ಯಕ್ರಮಕ್ಕೆ ನಿರ್ದಿಷ್ಟ ಯೋಜನೆಗಳು, ಕಾರ್ಯಕ್ಷಮತೆ ಸೂಚಕಗಳು ಮತ್ತು ಗುರಿಗಳನ್ನು ಸಿದ್ಧಪಡಿಸಲು ನಾವು ಎಲ್ಲಾ ಇಲಾಖೆಗಳಿಗೆ ತಿಳಿಸಿದ್ದೇವೆ. ಮಾದರಿ ನೀತಿ ಸಂಹಿತೆ ಹಿಂತೆಗೆದುಕೊಂಡ ತಕ್ಷಣ ನಾವು ಸಚಿವ ಸಂಪುಟದ ಮುಂದೆ ಸಲ್ಲಿಕೆ ಮಾಡಲು ಯೋಜಿಸಿದ್ದೇವೆ ಎಂದು ಅಭಿವೃದ್ಧಿ ಆಯುಕ್ತ ಡಾ. ಶಾಲಿನಿ ರಜನೀಶ್ ಹೇಳಿದ್ದಾರೆ.

ಶೀಘ್ರ ಜಾರಿಯಾಗಬೇಕು

ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದ ಮೇಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಕ್ರಿಯಾ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕು ಎನ್ನುತ್ತಾರೆ ತಜ್ಞರು. ಪರಿಸರ ಇಲಾಖೆಯ ಅಧಿಕಾರಿಯ ಪ್ರಕಾರ, ಕ್ರಿಯಾ ಯೋಜನೆಯಲ್ಲಿ ಸೂಚಿಸಲಾದ ಕ್ರಮಗಳನ್ನು ಸಂಯೋಜಿಸಲು ಮತ್ತು ತಮ್ಮ ಗುರಿಗಳನ್ನು ಸಲ್ಲಿಸಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಕೆಲಸ ಮಾಡಬೇಕಾಗುತ್ತದೆ. ಪ್ರಸ್ತುತ ಕಾರ್ಯನಿರ್ವಹಣೆಯೊಂದಿಗೆ ಬೇಸ್‌ಲೈನ್‌ನಂತೆ ಕಾರ್ಯನಿರ್ವಹಿಸುವ ಪಟ್ಟಿಯನ್ನು ಸಿದ್ಧಪಡಿಸಬೇಕು. ಉದಾಹರಣೆಗೆ, ಅರಣ್ಯ ಇಲಾಖೆಯು ತಾನು ಯೋಜಿಸಿರುವ ಅರಣ್ಯೀಕರಣದ ಪ್ರಮಾಣ ಮತ್ತು ಐದು ವರ್ಷಗಳಲ್ಲಿ ಗುರಿಯನ್ನು ಸಲ್ಲಿಸಬೇಕು ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಏನೆಲ್ಲಾ ಒಳಗೊಂಡಿರುತ್ತದೆ?

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಸಿದ್ಧಪಡಿಸಿದ ಕ್ರಿಯಾ ಯೋಜನೆಯು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಹಲವಾರು ಮಧ್ಯಸ್ಥಿಕೆಗಳು ಮತ್ತು ಮೌಲ್ಯಮಾಪನ ತಂತ್ರಗಳನ್ನು ಸೂಚಿಸುತ್ತದೆ. ಕೃಷಿ, ತೋಟಗಾರಿಕೆ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು 10 ಇತರ ಕ್ಷೇತ್ರಗಳಲ್ಲಿ ಕ್ರಮಗಳನ್ನು ಜಾರಿಗೆ ತರಲು 2025 ಮತ್ತು 2030 ರ ನಡುವೆ ರಾಜ್ಯಕ್ಕೆ 52,827 ಕೋಟಿ ರೂಪಾಯಿ ಅಗತ್ಯವಿದೆ ಎಂದು ಯೋಜನೆ ಸೂಚಿಸುತ್ತದೆ.

ಹಣಕಾಸು ಅಂದಾಜು ಹೆಚ್ಚಳ ಸಾಧ್ಯತೆ

ಅರಣ್ಯೀಕರಣದಿಂದ ನವೀಕರಿಸಬಹುದಾದ ಶಕ್ತಿಯ ಬಳಕೆಯವರೆಗೆ, ಯೋಜನೆಯು ಪ್ರತಿಯೊಂದು ಇಲಾಖೆಗೆ ಕ್ರಮಗಳನ್ನು ಸೂಚಿಸುತ್ತದೆ.

ಹಣಕಾಸಿನ ಅಂದಾಜುಗಳನ್ನು 2021ರಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಈಗ ಹೆಚ್ಚಾಗಿರಬಹುದು. ಕ್ರಿಯಾ ಯೋಜನೆಯು ಹಣವನ್ನು ಸಂಗ್ರಹಿಸಲು ಹಲವಾರು ಹಣಕಾಸು ವಿಧಾನಗಳನ್ನು ರೂಪಿಸುತ್ತದೆ. ನಾವು ಇಲಾಖೆ-ನಿರ್ದಿಷ್ಟ ಯೋಜನೆಗಳನ್ನು ಹೊಂದಬಹುದು ಎಂದು ಕ್ರಿಯಾ ಯೋಜನೆ ತಯಾರಿಕೆಯ ಭಾಗವಾಗಿದ್ದ ಪ್ರೊ. ಕೃಷ್ಣ ರಾಜ್ ಹೇಳಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.


ಖಾಸಗಿ ಹೂಡಿಕೆಗಳನ್ನು ಆಕರ್ಷಿಸುವುದರಿಂದ ಹಿಡಿದು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಉತ್ತಮ ಬಳಕೆಗೆ, ಯೋಜನೆಯು ವಿವಿಧ ಹಣಕಾಸು ವಿಧಾನಗಳನ್ನು ವಿವರಿಸುತ್ತದೆ.ಬರ ಮತ್ತು ಪ್ರವಾಹಗಳ ಆವರ್ತನ ಹೆಚ್ಚಾಗಿದೆ. ತಾಪಮಾನ ಮತ್ತು ಮಳೆಯ ಮಾದರಿಗಳು ಅನಿರೀಕ್ಷಿತವಾಗಿವೆ. ಇವುಗಳು ಅನೇಕ ಕ್ಷೇತ್ರಗಳ ಮೇಲೆ, ವಿಶೇಷವಾಗಿ ಕೃಷಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಕೃಷಿಯ ಮೇಲೆ ಪರಿಣಾಮ ಬೀರಿದರೆ, ಅದು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಕ್ರಮವನ್ನು ಕಾರ್ಯಗತಗೊಳಿಸುವುದು ನಿರ್ಣಾಯಕವಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ಬರ ಪರಿಸ್ಥಿತಿ ಮತ್ತು ನೀರಿನ ಕೊರತೆಯಿಂದಾಗಿ ಅಧಿಕಾರಿಗಳು ಮತ್ತು ನಾಗರಿಕರಲ್ಲಿ ಜಾಗೃತಿ ಹೆಚ್ಚಾಗಿದೆ ಮತ್ತು ಆದ್ದರಿಂದ ಈ ಕ್ರಮಕ್ಕೆ ಇದು ಸರಿಯಾದ ಸಮಯ ಎಂದು ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

ಏನು ಕ್ರಮ ?

ಕೃಷಿಗೆ ಶುಷ್ಕ- ಋತುವಿಗೆ ಸಂಬಂಧಿಸಿದ ವಿವಿಧ ಬೆಳೆ ಯೋಜನೆ, ನಿಖರವಾದ ನೀರಾವರಿ ತಂತ್ರಜ್ಞಾನ ಅಳವಡಿಕೆ. ಅರಣ್ಯಕ್ಕೆ ಹವಾಮಾನಕ್ಕೆ ಪೂರಕವಾದ ಅರಣ್ಯೀಕರಣ ಕಾರ್ಯಕ್ರಮಗಳು, ಜಾನುವಾರುಗಳ ಸಮಗ್ರ ರೋಗಗಾಲ ಮೇಲೆ ಕಣ್ಗಾವಲು ಮತ್ತು ತಕ್ಷಣ ಪ್ರತಿಕ್ರಿಯೆ ನೀಡಲು ಕ್ರಮ. ಅಂತರ್ಜಲ ಹೆಚ್ಚಳಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದು. ಶಕ್ತಿ ಮೂಲಗಳಲ್ಲಿ ನವೀಕರಿಸಬಹುದಾದ ವಸ್ತುಗಳ ಮೇಲೆ ಹೆಚ್ಚಿನ ಗಮನ ಹರಿಸುವುದು ಮೊದಲಾದವುಗಳನ್ನು ಹವಾಮಾನ ಕ್ರಿಯಾ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ.

Continue Reading

ಬೆಂಗಳೂರು

Namma Metro : ಜುಲೈ ಅಂತ್ಯಕ್ಕೆ ನಾಗಸಂದ್ರ-ಮಾದಾವರ ಮೆಟ್ರೋ ಕಾಮಗಾರಿ ಪೂರ್ಣ!

Nagasandra To Madavara Metro: ಹಸಿರು ಮಾರ್ಗದ (Green Line) ನಾಗಸಂದ್ರದಿಂದ ಮಾದಾವರವರೆಗಿನ ಮೆಟ್ರೋ ಕಾಮಗಾರಿ ಪೂರ್ಣಗೊಳ್ಳುತ್ತಿದ್ದು, ಜುಲೈ ಅಂತ್ಯದಲ್ಲಿ ಮೆಟ್ರೋ ಓಡಾಟ (Namma Metro ) ಪ್ರಾರಂಭವಾಗಲಿದೆ.

VISTARANEWS.COM


on

By

Namma Metro green line
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಹಸಿರು ಮಾರ್ಗದ (Green Line) ನಾಗಸಂದ್ರದಿಂದ ಮಾದಾವರಕ್ಕೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ಮೆಟ್ರೋ ರೈಲು (Namma Metro) ಜುಲೈ ಅಂತ್ಯದ ವೇಳೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಕೇವಲ 3.7 ಕಿ.ಮೀ ವಿಸ್ತರಣೆಯ ಮೆಟ್ರೋ ಕಾಮಗಾರಿಯು ಬರೋಬ್ಬರಿ ಐದು ವರ್ಷಗಳ ನಂತರ ತಡವಾಗಿ (Nagasandra To Madavara Metro) ಪೂರ್ಣಗೊಂಡಿದೆ.

ವಿಸ್ತರಣೆಯು ಮೂರು ನಿಲ್ದಾಣಗಳನ್ನು ಒಳಗೊಂಡಿದ್ದು, ನಾಗಸಂದ್ರದಿಂದ ಮಂಜುನಾಥ ನಗರ, ಚಿಕ್ಕಬಿದರಕಲ್ಲು (ಜಿಂದಾಲ್ ನಗರ) ಮತ್ತು ಮಾದಾವರ (ಬಿಐಇಸಿ)ಕ್ಕೆ ಸಂಪರ್ಕ ಕಲ್ಪಿಸಲಾಗಿದೆ. ಆಗಸ್ಟ್‌ 2019ರಲ್ಲೇ ಕಾಮಗಾರಿ ಪೂರ್ಣ ಮಾಡಲು ಬಿಎಂಆರ್‌ಸಿಎಲ್‌ ಮುಂದಾಗಿತ್ತು. ಆದರೆ ಹಲವಾರು ಸವಾಲುಗಳನ್ನು ಎದುರಿಸಬೇಕಾಯಿತು.

ಇನ್ನೂ ವಿಸ್ತೃತ ಮಾರ್ಗದಿಂದ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ (BIEC) ಬರುವವರಿಗೆ ಅನುಕೂಲವಾಗಲಿದೆ. ಮಾದವಾರದಿಂದ ಮಾದನಾಯಕನಹಳ್ಳಿ, ಮಾಕಳಿ ಮತ್ತು ನೆರೆಯ ನೆಲಮಂಗಲದ ನಿವಾಸಿಗಳಿಗೆ ಅನುಕೂಲಕವಾಗಲಿದೆ. ಯಾಕೆಂದರೆ ಅಂತಿಮ ನಿಲ್ದಾಣದವಾದ ಮಾದವಾರದ ಮೂಲಕ ಕೇವಲ 6 ಕಿ.ಮೀ ದೂರದಲ್ಲಿದೆ.

ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಮಾತನಾಡಿ, ಟ್ರ್ಯಾಕ್ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ಎರಡು ತಿಂಗಳಲ್ಲಿ ನಾವು ಟ್ರಯಲ್‌ ಪರೀಕ್ಷೆಯನ್ನು ನಡೆಸುತ್ತೇವೆ. ಜುಲೈ ಅಂತ್ಯದ ವೇಳೆಗೆ ರೈಲು ಕಾರ್ಯಾಚರಣೆಗಳು ಪ್ರಾರಂಭವಾಗಲಿವೆ ಎಂದರು.

ಇನ್ನೂ ವಿಸ್ತರಣೆ ಮಾರ್ಗದ ನಿಲ್ದಾಣಗಳ ಒಳಗೆ ಪೇಂಟಿಂಗ್ ಕೆಲಸ, ಗ್ರಾನೈಟ್ ಕಲ್ಲುಗಳ ಸ್ಥಾಪನೆ ಮತ್ತು ವಿದ್ಯುತ್ ಮತ್ತು ಸಿಗ್ನಲಿಂಗ್ ನಂತಹ ಸಿಸ್ಟಮ್ ಕೆಲಸಗಳು ಸೇರಿದಂತೆ ಕೆಲವು ಕಾರ್ಯಗಳು ಇನ್ನೂ ಪೂರ್ಣಗೊಂಡಿಲ್ಲ. ಇವೆಲ್ಲವನ್ನೂ ಜೂನ್‌ಗೆ ಪೂರ್ಣಗೊಳಿಸುವ ಗುರಿಯನ್ನು ಬಿಎಂಆರ್‌ಸಿಎಲ್‌ ಹೊಂದಿದೆ. ಪ್ರಾಯೋಗಿಕ ಸಂಚಾರ ಮತ್ತು ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಪಾಸಣೆಯ ನಂತರ, ಜುಲೈ ಅಂತ್ಯದ ವೇಳೆಗೆ ಈ ಮಾರ್ಗವನ್ನು ತೆರೆಯುವ ನಿರೀಕ್ಷೆಯಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

ಮಾದಾವರ ಟು ತುಮಕೂರು ಮೆಟ್ರೋ ಮಾರ್ಗ

ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ ಕನಸು ನನಸಾಗುವ ಸಾಧ್ಯತೆ ಹೆಚ್ಚಾಗಿದೆ. ಎರಡು ನಗರಗಳ ನಡುವಿನ ಮೆಟ್ರೋ ಯೋಜನೆ ಬಗ್ಗೆ ಹೊಸ ಅಪ್‌ಡೇಟ್ ಸಿಕ್ಕಿದ್ದು, 52.41 ಕಿ.ಮೀ. ಮಾರ್ಗದಲ್ಲಿ, 19 ಎತ್ತರದ ನಿಲ್ದಾಣಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಮಾದಾವರ (BIEC) ನಿಲ್ದಾಣದಿಂದ ಪ್ರಾರಂಭವಾಗುವ ಮೆಟ್ರೋ ಮಾರ್ಗವು ತುಮಕೂರು ಬಸ್ ನಿಲ್ದಾಣದವರೆಗೆ ವಿಸ್ತರಿಸುವ ಗುರಿ ಹೊಂದಿದೆ. ಬಹು ನಿರೀಕ್ಷಿತ ಈ ಯೋಜನೆಯು ತುಮಕೂರು- ಬೆಂಗಳೂರು ನಡುವಿನ ಸಾರಿಗೆ ಸೌಲಭ್ಯವನ್ನು ಮತ್ತಷ್ಟು ಸುಲಭವಾಗಿಸಲಿದೆ. ಈ ಸಂಬಂಧ ಬಿಎಂಆರ್‌ಸಿಎಲ್‌ (BMRCL) ಗೆ ಹಲವು ಗುತ್ತಿಗೆದಾರ ಕಂಪನಿಗಳಿಂದ ಕಾರ್ಯ ಸಾಧ್ಯತಾ ವರದಿ ಸಲ್ಲಿಕೆಯಾಗಿದೆ.

ತುಮಕೂರು ಮೆಟ್ರೋ ಯೋಜನೆಯು ಆರ್ಥಿಕ ಅಭಿವೃದ್ಧಿ ಮತ್ತು ನಿವಾಸಿಗಳ ಜೀವನದ ಗುಣಮಟ್ಟವನ್ನು ಹೆಚ್ಚಿಸುವ ಭರವಸೆಯನ್ನು ಹೊಂದಿದೆ. ಸಮರ್ಥ ಮೆಟ್ರೋ ವ್ಯವಸ್ಥೆಯು ತುಮಕೂರು-ಬೆಂಗಳೂರು ನಡುವೆ ಹೂಡಿಕೆಯನ್ನು ಆಕರ್ಷಿಸಲು, ನಗರದ ವಿವಿಧ ಭಾಗಗಳಿಗೆ ಸಾರಿಗೆ ವ್ಯವಸ್ಥೆ ಸುಧಾರಿಸಲು ಮತ್ತು ಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡುವ ಗುರಿ ಹೊಂದಿದೆ. ಹೀಗಾಗಿ ತುಮಕೂರು ರಸ್ತೆಯ ಅಸಂಖ್ಯಾತ ಮಂದಿ ಪ್ರಯಾಣಿಕರು ವಿಸ್ತರಿತ ಮೆಟ್ರೋ ಮಾರ್ಗಕ್ಕಾಗಿ ಬಹುನಿರೀಕ್ಷೆಯಿಂದ ಕಾಯುತ್ತಿದ್ದಾರೆ.

ವಿಸ್ತರಿತ ತುಮಕೂರು ಮಾರ್ಗಕ್ಕೆ ಹಲವು ಕಂಪನಿಗಳು ಕಾರ್ಯಸಾಧ್ಯತಾ ವರದಿ ಸಲ್ಲಿಕೆ ಮಾಡಿವೆ. ಈ ವರದಿಯ ಆಧಾರದ ಮೇಲೆ ಬಿಎಂಆರ್‌ಸಿಎಲ್‌ ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳಲಿದ್ದು, ಸರ್ಕಾರದ ಮುಂದೂಡಲಿದೆ. ಬಳಿಕ ಸಮಗ್ರ ವರದಿ ಯೋಜನೆಗೂ ಶೀಘ್ರದಲ್ಲೇ ಮೆಟ್ರೋ ಟೆಂಡರ್ ಆಹ್ವಾನ ಮಾಡಲಿದೆ. ಹೀಗಾಗಿ ಸರ್ಕಾರ ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ರೇವಣ್ಣಗೆ ಜಾಮೀನು; ಹೊಳೆನರಸೀಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು ವಶಕ್ಕೆ

Prajwal Revanna Case: ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.

VISTARANEWS.COM


on

Prajwal Revanna Case
Koo

ಹಾಸನ: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ರೇವಣ್ಣ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.

ಹೊಳೆನರಸೀಪುರದ ಗಾಂಧಿ ಸರ್ಕಲ್‌ನಲ್ಲಿ ಸೋಮವಾರ ಪಟಾಕಿ ಸಿಡಿಸಿ ರೇವಣ್ಣ ಬೆಂಬಲಿಗರು, ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸಿದರು. ಪಟಾಕಿ ಸಿಡಿಸಿದ ಹಿನ್ನೆಲೆ ರಾಜು ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಟಾಕಿ ಸಿಡಿಸಿದ ಹಿನ್ನೆಲೆ ಸ್ಥಳಕ್ಕೆ ಡಿವೈಎಸ್‌ಪಿ ಅಶೋಕ್ ಹಾಗೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಅಜಯ್‌ಕುಮಾರ್ ಆಗಮಿಸಿ, ಸ್ಥಳದಲ್ಲಿ ಜಮಾಯಿಸಿದ್ದವರನ್ನು ವಾಪಸ್ ಕಳುಹಿಸಿದರು. ಚುನಾವಣಾ ನೀತಿ ಸಂಹಿತೆ (ಜೂ.6ರವರೆಗೆ) ಹಿನ್ನೆಲೆಯಲ್ಲಿ ಪಟಾಕಿ ಹೊಡೆಯುವುದು ನಿಷೇಧ. ಹೀಗಾಗಿ ಗಾಂಧಿ ವೃತ್ತದಲ್ಲಿ ಜಮಾಯಿಸಿದವರನ್ನು ಪೊಲೀಸರು ಕಳುಹಿಸಿದರು.

ರೇವಣ್ಣ ಬೆಂಬಲಿಗರನ್ನು ಪೊಲೀಸರು ಚದುರಿಸಿದ ನಂತರ ಕಾರ್ಯಕರ್ತರೊಬ್ಬರು ಮತ್ತೆ ಪಟಾಕಿ ತಂದಿದ್ದಾರೆ. ಇದರಿಂದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಯಿತು. ಕಾರ್ಯಕರ್ತರನ್ನು ಮನವೊಲಿಸಲು ಪೊಲೀಸರು ಪ್ರಯತ್ನ ನಡೆಸಿದರು. ಆದರೂ ನಾನು ಪಟಾಕಿ ಹೊಡೆದೇ ಹೊಡೆಯುತ್ತೇನೆ ಎಂದು ರೇವಣ್ಣ ಅಭಿಮಾನಿ ಪಟ್ಟು ಹಿಡಿದಿದ್ದರಿಂದ, ಪೊಲೀಸರು ಪಟಾಕಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ | Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆದಿದೆ. ಕೊನೆಗೂ ರೇವಣ್ಣ ಅವರಿಗೆ ಜಾಮೀನು ಮಂಜೂರು (HD Revanna Bail) ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಈ ವೇಳೆ ರೇವಣ್ಣ ಪರ ಹಾಗೂ ಸರ್ಕಾರಿ ವಕೀಲರ ನಡುವೆ ವಾದ – ಪ್ರತಿವಾದಗಳು ನಡೆದಿವೆ. ಇಂಥ ಕಾರಣಗಳಿಗೆ ಜಾಮೀನು ಕೊಡಲೇ ಬೇಕು ಎಂದು ರೇವಣ್ಣ ಪರ ವಕೀಲರಾದ ನಾಗೇಶ್‌ ವಾದ ಮಂಡಿಸಿದರೆ, ಜಾಮೀನನ್ನು ಏಕೆ ಕೊಡಬಾರದು? ಕೊಟ್ಟರೆ ಮುಂದೇನಾಗುತ್ತದೆ ಎಂದು ಎಸ್‌ಐಟಿ ಪರ ವಕೀಲರಾದ (ಎಸ್‌ಪಿಪಿ) ಜಯ್ನಾ ಕೊಠಾರಿ ಹಾಗೂ ಅಶೋಕ್‌ ನಾಯ್ಕ್‌ ವಾದಿಸಿದ್ದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯವು ರೇವಣ್ಣ ಅವರಿಗೆ ಜಾಮೀನು ನೀಡಿ ಆದೇಶಿಸಿದೆ. ಈ ಮೂಲಕ ಅವರ ಆರು ದಿನಗಳ ಜೈಲುವಾಸ ಅಂತ್ಯವಾಗಿದೆ.
ಇಂದು ಬಿಡುಗಡೆ ಭಾಗ್ಯವಿಲ್ಲ

ಐದು ಲಕ್ಷ ರೂಪಾಯಿಯ ಬಾಂಡ್ ಶ್ಯೂರಿಟಿಯನ್ನು ಪಡೆದುಕೊಳ್ಳಲಾಗಿದೆ. ಇಬ್ಬರ ಶ್ಯೂರಿಟಿಯನ್ನೂ ಪಡೆದುಕೊಳ್ಳಲಾಗಿದೆ. ಅಲ್ಲದೆ, ಸಾಕ್ಷಿ ನಾಶಪಡಿಸಬಾರದು. ದೇಶ ಬಿಟ್ಟು ಹೋಗುವಂತಿಲ್ಲ. ಜತೆಗೆ ಮೈಸೂರಿನ ಕೆ. ಆರ್. ನಗರಕ್ಕೂ ಪ್ರವೇಶಿಸಬಾರದು ಎಂದು ಷರತ್ತು ವಿಧಿಸಲಾಗಿದೆ. ಇನ್ನು ಎಸ್ಐಟಿ ತನಿಖೆಗೆ ಸ್ಪಂದಿಸಬೇಕು ಎಂದು ಕೋರ್ಟ್‌ ತಾಕೀತು ಮಾಡಿದೆ. ಇನ್ನು ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಇಂದು ಬಿಡುಗಡೆ ಭಾಗ್ಯವಿಲ್ಲ.

ಸಂತ್ರಸ್ತೆ ಹೇಳಿಕೆಯ ವಿಡಿಯೊ ಪ್ರಸ್ತಾಪ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಪ್ರಕರಣ ಸಂಬಂಧ ವಾದ ಮಂಡಿಸಿದ ಎಸ್‌ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, 2 ವಿಚಾರಗಳಿಗೆ ಸಂಬಂಧಿಸಿ ಆರೋಪಿಗೆ ಜಾಮೀನು ಕೊಡಬೇಡಿ. ಒಂದು ಪ್ರಕರಣದ ಗಂಭೀರತೆಯನ್ನು ನೋಡಬೇಕಿದ್ದು, ಇದರಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿದೆ. ಕಿಡ್ನ್ಯಾಪ್ ಕೇಸಲ್ಲೂ ಈಗಾಗಲೇ 2ನೇ ಆರೋಪಿ ಹೇಳಿಕೆಯನ್ನು ಪಡೆಯಲಾಗಿದೆ. ಈ ನಡುವೆ ಸಂತ್ರಸ್ತೆಯ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸಂತ್ರಸ್ತೆ ಸ್ಪಷ್ಟನೆ ನೀಡಿದ್ದಾರೆ ಎಂಬುದಾಗಿ ವಿಡಿಯೋ ವೈರಲ್ ಬಗ್ಗೆ ಕೋರ್ಟ್‌ಗೆ ಮಾಹಿತಿಯನ್ನು ನೀಡಿದರು.

ಮೊದಲು ತನಿಖಾ ವರದಿ ಕೊಡಿ ಎಂದ ನ್ಯಾಯಾಧೀಶರು

ಈ ವೇಳೆ ಮಧ್ಯಪ್ರವೇಶ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ತನಿಖಾಧಿಕಾರಿಯ ಇನ್‌ವೆಸ್ಟಿಗೇಷನ್‌ ರಿಪೋರ್ಟ್ ಅನ್ನು ಮೊದಲು ಸಲ್ಲಿಸಿ. ಕಿಡ್ನ್ಯಾಪ್ ಕೇಸ್‌ ಸಂಬಂಧ ಏನೇನು ವಿಚಾರಗಳು ನಡೆದಿವೆ ಎಂಬುದನ್ನು ತಿಳಿಯಬೇಕು ಎಂದು ಎಸ್‌ಪಿಪಿಗೆ ಸೂಚಿಸಿದರು. ಆಗ ರೇವಣ್ಣ ಪರ ವಕೀಲ ಸಿ.ವಿ. ನಾಗೇಶ್‌, ತನಿಖಾ ವರದಿಯನ್ನು ನಮಗೂ ಕೊಟ್ಟಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ಇನ್‌ವೆಸ್ಟಿಗೇಷನ್ ರಿಪೋರ್ಟ್‌ ಅನ್ನು ಸಲ್ಲಿಸಲಾಯಿತು. ಇದಕ್ಕೆ ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ರಿಂದ ಆಕ್ಷೇಪ ವ್ಯಕ್ತವಾಯಿತು. ಬಳಿಕ ತಮಗೂ ಒಂದು ಕಾಪಿ ನೀಡಲು ಕೇಳಿದ್ದು, ಅವರಿಗೂ ಒಂದು ಪ್ರತಿಯನ್ನು ನೀಡಲಾಯಿತು.

ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲೇಖಿಸಿದ ಎಸ್‌ಪಿಪಿ

ಈ ವೇಳೆ ವಾದ ಮುಂದುವರಿಸಿದ ಜಯ್ನಾ ಕೊಠಾರಿ ಅವರು ಸುಪ್ರೀಂಕೋರ್ಟ್‌ ಕೇಸ್‌ ಸ್ಟಡಿಗಳನ್ನು ಉಲ್ಲೇಖಿಸಿದರು. ಕೆಲವು ತೀರ್ಪುಗಳನ್ನು ಓದಿ ಹೇಳಿದರು. ಕಿಡ್ನ್ಯಾಪ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಹಿಂದಿನ ತೀರ್ಪುಗಳನ್ನು ಕೋರ್ಟ್‌ ಗಮನಕ್ಕೆ ತಂದರು. ಕಿಡ್ನ್ಯಾಪ್‌ ಪ್ರಕರಣದಲ್ಲಿ ಸೆಕ್ಷನ್‌ 364ಎ ಅಂದ್ರೆ ಜೀವಾವಧಿ ಶಿಕ್ಷೆ ಇದೆ. ಐಪಿಸಿ ಸೆಕ್ಷನ್‌ 364ಎ ಅಡಿಯಲ್ಲಿ ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿದೆ. ಹೀಗಾಗಿ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಕೊಡಬಾರದು ಎಂದು ವಾದ ಮಂಡಿಸಿದರು. ಶಿಕ್ಷೆಯ ಪ್ರಮಾಣದ ಗಂಭೀರತೆಯನ್ನು ಪರಿಗಣಿಸಿ ಬೇಲ್ ಅನ್ನು ಕೊಡಲೇಬಾರದು ಎಂದು ಮನವಿ ಮಾಡಿದರು.

ದೆಹಲಿ ಕೋರ್ಟ್‌ನ ಗುರುಚರಣ್ ಸಿಂಗ್‌ ಪ್ರಕರಣದ ಬಗ್ಗೆ ಉಲ್ಲೇಖ

ಗುರುಚರಣ್ ಸಿಂಗ್‌ ಪ್ರಕರಣದಲ್ಲಿ ಕೋರ್ಟ್‌ ಬೇಲ್ ತಿರಸ್ಕರಿಸಿತ್ತು. ಈಗ ರೇವಣ್ಣ ಪರ ದಾಖಲಾಗಿರುವ ಕೆ.ಆರ್.ನಗರ ಅಪಹರಣ ಪ್ರಕರಣವು ಒಂದು ಸೀರಿಯಸ್ ಕ್ರಿಮಿನಲ್ ಕೇಸ್ ಆಗಿದೆ ಎಂದು ವಾದ ಮಂಡಿಸಿ ಕೆಲವು ಹೈಕೋರ್ಟ್‌ ಹಾಗೂ ಸುಪ್ರೀಂಕೋರ್ಟ್‌ ತೀರ್ಪುಗಳನ್ನು ಉಲ್ಲೇಖಿಸಿದರು.

ಆರೋಪಿ ಎಚ್‌.ಡಿ. ರೇವಣ್ಣ ಅವರ ಮಗ ಪ್ರಜ್ವಲ್‌ ರೇವಣ್ಣ ಕೂಡ ಬೇರೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಮಾಹಿತಿಯನ್ನು ಗೌಪ್ಯವಾಗಿಡಬೇಕು. ಕೆಲವು ಪ್ರಕರಣದಲ್ಲಿ ಮಾತ್ರ ಅಲ್ಲ, ಬೇರೆ ಪ್ರಕರಣಗಳಲ್ಲಿಯೂ ಈ ರೀತಿ ಸಂದರ್ಭದಲ್ಲಿ ಜಾಮೀನು ಕೊಟ್ಟರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ. ಗಂಭೀರತೆ ಹೆಚ್ಚಿರುವ ಪ್ರಕರಣಗಳಲ್ಲಿ ಜಾಮೀನು ಕೊಡಬಾರದು. ಜಾಮೀನು ಕೊಡಬಾರದೆಂದು ಹಲವು ಕೋರ್ಟ್‌ಗಳ ತೀರ್ಪಿದೆ. ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪುಗಳನ್ನು ಕೊಠಾರಿ ಉಲ್ಲೇಖಿಸಿದರು.

ಜಾಮೀನು ನೀಡಿದರೆ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇರುತ್ತದೆ. ಸಂತ್ರಸ್ತೆ ಮತ್ತು ಆಕೆಯ ಪುತ್ರನಿಗೆ ಜೀವ ಬೆದರಿಕೆಯೂ ಇದೆ. ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆಯ ಮಾಹಿತಿ ಗೌಪ್ಯವಾಗಿ ಇಡಬೇಕು. ಈ ಸಂದರ್ಭದಲ್ಲಿ ಸಂತ್ರಸ್ತೆ ಮಾಹಿತಿ ಗೌಪ್ಯವಾಗಿ ಇಡಲಿಲ್ಲ ಅಂದರೆ ಬೇರೆ ಯಾವ ಸಂತ್ರಸ್ತೆಯರು ಮುಂದೆ ಬಂದು ದೂರು ನೀಡುತ್ತಾರೆ? ರೇವಣ್ಣಗೆ ಜಾಮೀನು ನೀಡಲೇಬಾರದು. ಈ ಪರಿಸ್ಥಿತಿಯಲ್ಲಿ ರೇವಣ್ಣಗೆ ಜಾಮೀನು ನೀಡಿದರೆ ನ್ಯಾಯಾಂಗ ಹಾದಿಗೇ ಅಡಚಣೆಯಾಗುತ್ತದೆ ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಇದನ್ನೂ ಓದಿ | Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಕೋರ್ಟ್‌ ತೀರ್ಪಿನ ಪ್ರತಿ ಬೇಕೆಂದ SPP; ನೀವೇ ಓದ್ಕೋಬೇಕು ಅಂದ್ರು ನಾಗೇಶ್‌!

ಈ ಕಾರಣಕ್ಕಾಗಿ ಜಾಮೀನು ನೀಡಬಾರದು

ರೇವಣ್ಣ ಪ್ರಭಾವಿಯಾಗಿದ್ದು, ಅವರ ಪುತ್ರ ಸಂಸದ ಪ್ರಜ್ವಲ್ ತಲೆಮರೆಸಿಕೊಂಡಿದ್ದಾರೆ. ಇದು ಕೇವಲ ಅಪಹರಣ ಪ್ರಕರಣ ಅಲ್ಲ, ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕಿಡ್ನ್ಯಾಪ್ ಆಗಿದೆ. ಪ್ರಕರಣದಲ್ಲಿ ಯಾವುದೇ ಮಹಿಳೆಯರು ದೂರು ನೀಡದಂತೆ ತಡೆಯುವ ಯತ್ನ ಇದಾಗಿದೆ. ಎಚ್.ಡಿ. ರೇವಣ್ಣಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಕಿಡ್ನ್ಯಾಪ್ ಪ್ರಕರಣದಲ್ಲಿ ಕೆಲವರ ಹೇಳಿಕೆ ಸಿಆರ್‌ಪಿಸಿ 164 ಅಡಿಯಲ್ಲಿ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ಹೇಳಿಕೆ ದಾಖಲಿಸಬೇಕು ಎಂದು ಜಯ್ನಾ ಕೊಠಾರಿ ವಾದ ಮಂಡನೆ ಮಾಡಿ ಮುಗಿಸಿದರು.

ರೇವಣ್ಣ ವಿರುದ್ಧ ಬಲವಾದ ಸಾಕ್ಷಿಗಳೇ ಇಲ್ಲ

ಕಿಡ್ನ್ಯಾಪ್ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ವಿರುದ್ಧ ಬಲವಾದ ಸಾಕ್ಷಿಗಳೇ ಇಲ್ಲ. ಆದರೂ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಶಿಕ್ಷೆಯಾಗುವ ಸೆಕ್ಷನ್‌ಗಳನ್ನು ಹಾಕಲಾಗಿದೆ. ಏನೇ ಆದರೂ ಈ ರೀತಿ ಪ್ರಕರಣದಲ್ಲಿ ಬೇಲ್ ಯಾಕೆ ನೀಡಬಾರದು? ಎಂದು ಕೆಲವು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೇಸ್ ಸ್ಟಡಿಗಳನ್ನು ಉಲ್ಲೇಖಿಸಿದರು. ಇನ್ನು ರೇವಣ್ಣ ವಿರುದ್ಧ ಪ್ರೈಮಾಫೇಸಿ ಸಾಬೀತಾಗುವ ಯಾವುದೇ ಆರೋಪವೂ ಇಲ್ಲ. ತಮಗೆ ಗೊತ್ತಿರುವವರನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡರೆ ತಪ್ಪೇನು? ಸಂತ್ರಸ್ತೆಯನ್ನು ಭವಾನಿ ರೇವಣ್ಣ ಮನೆಗೆ ಕರೆಸಿಕೊಂಡ ಕ್ರಮಕ್ಕೆ ಸಮರ್ಥನೆ ಮಾಡಿದರು.

ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ 6 ದಿನವಾದರೂ ಸೂಕ್ತ ರೀತಿ ಹೇಳಿಕೆ ಪಡೆದಿಲ್ಲ. ಟ್ಯೂಷನ್‌ಗೆ ಹೋಗಿದ್ದ ಬಾಲಕನ ಕಿಡ್ನ್ಯಾಪ್ ಪ್ರಕರಣವನ್ನು ಇದೇ ವೇಳೆ ಉಲ್ಲೇಖಿಸಿದರು. ನಿಮ್ಮ ತಂದೆಗೆ ಅಪಘಾತವಾಗಿದೆ, ಆಸ್ಪತ್ರೆಯಲ್ಲಿದ್ದಾರೆಂದು ಹೇಳಿ ಅಪಹರಿಸಿದ್ದಾರೆ. ಬಾಲಕನನ್ನು ಅಪಹರಿಸಿದ ಬಳಿಕ ತಂದೆಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಪೊಲೀಸರಿಗೆ ಎಲ್ಲಿಯೂ ಹೇಳದಂತೆ ಬೆದರಿಕೆಯನ್ನು ಹಾಕಿದ್ದರು. ಆದರೆ, ಎಚ್.ಡಿ.ರೇವಣ್ಣ ಪ್ರಕರಣದಲ್ಲಿ ಯಾವುದೇ ರೀತಿ ಬೆದರಿಕೆ, ಬೇಡಿಕೆ ಇಲ್ಲ. ಹಾಗಾಗಿ ಎಚ್.ಡಿ.ರೇವಣ್ಣ ಅವರಿಗೆ ಇದು ಜಾಮೀನು ನೀಡಬಹುದಾದ ಪ್ರಕರಣವಾಗಿದೆ ಎಂದು ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದರು.

ತೀರ್ಪಿನ ಪ್ರತಿಗಾಗಿ ವಾದ – ಪ್ರತಿವಾದ

ಎಸ್‌ಐಟಿ ಉಲ್ಲೇಖಿಸಿದ ತೀರ್ಪುಗಳಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಲಾಗಿತ್ತು ಆದರೆ ರೇವಣ್ಣ ಪ್ರಕರಣದಲ್ಲಿ ಬೆದರಿಕೆ ಎಲ್ಲಿ ಹಾಕಿದ್ದಾರೆ? ಯಾವ ಬೇಡಿಕೆ ಇದೆ..? ಎಸ್‌ಐಟಿ ಕೇಸ್‌ ಸ್ಟಡಿಗೆ ಕೌಂಟರ್ ಕೊಟ್ಟು ರೇವಣ್ಣ ಪರ ವಕೀಲ ನಾಗೇಶ್ ವಾದ ಮಂಡಿಸುತ್ತಾ, ಕೆ.ಆರ್.ನಗರ ಕಿಡ್ನ್ಯಾಪ್ ಕೇಸಲ್ಲಿ 364ಎ ಹಾಕಲು ಬೇಕಾದ ಬೇಸಿಕ್ ಅಂಶಗಳಿಲ್ಲ ಎಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪುಗಳನ್ನು ಉಲ್ಲೇಖಿಸಿದರು. ಆದರೆ ಆ ಎಲ್ಲಾ ಪ್ರಕರಣಗಳಲ್ಲಿ ಬೆದರಿಕೆವೊಡ್ಡಿ ಹಣಕ್ಕಾಗಿ ಬೇಡಿಕೆ ಇರಿಸಲಾಗಿತ್ತು. ಇಲ್ಲಿ ದಾಖಲಾದ ಕಿಡ್ನ್ಯಾಪ್ ಪ್ರಕರಣದಲ್ಲಿ ರೇವಣ್ಣ ವಿರುದ್ಧ ಆ ಆರೋಪಗಳಿಲ್ಲ ಎಂದು ವಾದಿಸಿದರು.

ಆಗ ಮಧ್ಯ ಪ್ರವೇಶ ಮಾಡಿದ ಜಯ್ನಾ ಕೊಠಾರಿ, ನೀವು ಉಲ್ಲೇಖಿಸುತ್ತಿರುವ ಪ್ರಕರಣಗಳ ತೀರ್ಪಿನ ಪ್ರತಿ ಕೊಡಿ ಎಂದು ಕೋರಿದರು. ಈ ನಡುವೆ ಎಸ್‌ಪಿಪಿ ಜಯ್ನಾ ಕೊಠಾರಿ ಹಾಗೂ ರೇವಣ್ಣ ವಕೀಲರ ಮಧ್ಯೆ ವಾದ ಪ್ರತಿವಾದ ನಡೆಯಿತು. ನೀವು ಕೇಳಿದ ಕೂಡಲೇ ಕೊಡಬೇಕು ಅಂತೇನಿಲ್ಲ ಎಂದು ಸಿ.ವಿ.ನಾಗೇಶ್ ಹೇಳಿದರು. ವರದಿಯಾಗಿರುವ ಪ್ರಕರಣಗಳನ್ನು ನೀವು ಓದಿಕೊಂಡಿರಬೇಕು ಎಂದು ನಾಗೇಶ್ ಕುಟುಕಿದರು. ಆದರೆ, ಯಾವ ಕೇಸ್ ಸ್ಟಡಿ ಉಲ್ಲೇಖಿಸುತ್ತೀರೋ ಅದರ ಪ್ರತಿಯನ್ನು ಕೊಡಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ | Prajwal Revanna Case: ಎಚ್‌.ಡಿ. ರೇವಣ್ಣ ಜಾಮೀನು ಅರ್ಜಿಯ ರೋಚಕ ವಾದ – ಪ್ರತಿವಾದ; ಇಲ್ಲಿದೆ ಇಂಚಿಂಚು ಡಿಟೇಲ್ಸ್‌

ರೇವಣ್ಣ ವಿರುದ್ಧ ಆರೋಪಗಳೆಲ್ಲಾ ಊಹಾಪೋಹ, ರಾಜಕೀಯ ಪ್ರೇರಿತ. ಈ ರೀತಿಯಲ್ಲಿ ಆಧಾರರಹಿತ ಆರೋಪಗಳನ್ನು ಪರಿಗಣಿಸಬಾರದು. ರೇವಣ್ಣ 6 ಸಲ ಎಂಎಲ್‌ಎ ಆಗಿದ್ದವರು, ಕಾನೂನಿಗೆ ಸದಾ ತಲೆಬಾಗುತ್ತಾರೆ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಿ ಎಂದು ವಾದವನ್ನು ನಾಗೇಶ್‌ ಮುಕ್ತಾಯಗೊಳಿಸಿದರು. ವಾದ- ಪ್ರತಿವಾದ ಆಲಿಸಿದ ಮೇಲೆ ರೇವಣ್ಣ ಅವರಿಗೆ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.



Continue Reading
Advertisement
IPL 2024
ಪ್ರಮುಖ ಸುದ್ದಿ27 seconds ago

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

Chandrayaan 4
ದೇಶ4 mins ago

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

CBSE Class 10 Results
ಮಂಡ್ಯ6 mins ago

CBSE Class 10 Results: ಸತತ 9ನೇ ಬಾರಿಗೆ ಶೇ.100 ಫಲಿತಾಂಶ; ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಅಮೋಘ ಸಾಧನೆ

Climate Plan
ಕರ್ನಾಟಕ17 mins ago

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

Namma Metro green line
ಬೆಂಗಳೂರು32 mins ago

Namma Metro : ಜುಲೈ ಅಂತ್ಯಕ್ಕೆ ನಾಗಸಂದ್ರ-ಮಾದಾವರ ಮೆಟ್ರೋ ಕಾಮಗಾರಿ ಪೂರ್ಣ!

Rohit Sharma
ಕ್ರೀಡೆ33 mins ago

Rohit Sharma : ಭಾರತ ತಂಡದ ಹೊಸ ಜೆರ್ಸಿ ಬಿಡುಗಡೆ ಮಾಡಿದ ರೋಹಿತ್​ ಶರ್ಮಾ, ಇಲ್ಲಿದೆ ವಿಡಿಯೊ

Abdu Rozik
Latest41 mins ago

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

Song Release
ಸಿನಿಮಾ46 mins ago

Song Release: ‘ಇದು ನಮ್ ಶಾಲೆ’ ಚಿತ್ರದ ಹಾಡಿನ ಅನಾವರಣ

Prajwal Revanna Case
ಕರ್ನಾಟಕ47 mins ago

Prajwal Revanna Case: ರೇವಣ್ಣಗೆ ಜಾಮೀನು; ಹೊಳೆನರಸೀಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು ವಶಕ್ಕೆ

MS Dhoni
ಕ್ರೀಡೆ59 mins ago

MS Dhoni : ಧೋನಿಗೆ ದೇವಸ್ಥಾನ; ಸಿಎಸ್​​ಕೆ ತಂಡದ ಮಾಜಿ ಆಟಗಾರ ಅಭಿಮಾನದ ನುಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ1 hour ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ1 hour ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ2 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ2 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ2 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ9 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ13 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ15 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌