ನವದೆಹಲಿ: ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಪ್ರಧಾನಿ ಆಶಯವಾಗಿದ್ದು, ಸೂರ್ಯ ಘರ್ ಯೋಜನೆ ಇದಕ್ಕೆ ಪ್ರತೀಕವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು.
ನವದೆಹಲಿಯಲ್ಲಿ ಮಂಗಳವಾರ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ಸಭೆ ಉದ್ದೇಶಿಸಿ, ಅವರು ಮಾತನಾಡಿದರು.
ಇದನ್ನೂ ಓದಿ: Bengaluru Power Cut: ಜೂನ್ 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ
ಈ ನೂತನ ಸೂರ್ಯ ಘರ್ ಯೋಜನೆಯಡಿ ದೇಶಾದ್ಯಂತ 1 ಕೋಟಿ ಗ್ರಾಹಕರು 300 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.
ದೇಶದ ನಾನಾ ರಾಜ್ಯಗಳು, ವಿತರಕ ಘಟಕಗಳು ಮತ್ತು ನಾಗರಿಕರು ಈ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಈ ಮಹತ್ವದ ಸಭೆಯಲ್ಲಿ ಸಚಿವ ಪ್ರಲ್ಹಾದ್ ಜೋಶಿ ಮಾರ್ಗದರ್ಶನ ನೀಡಿದರು.
ಇದನ್ನೂ ಓದಿ: Fortis Hospital: 32 ವರ್ಷದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ
ಸೂರ್ಯ ಘರ್ ಮೂಲಕ ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಸಾಧಿಸುವುದು ಭಾರತದ ಆಶಯವಾಗಿದ್ದು, ಇದು ಹಸಿರು ಹಾಗೂ ಹೆಚ್ಚು ಸುಸ್ಥಿರ ಭವಿಷ್ಯಕ್ಕೆ ಸುಗಮ ದಾರಿಯಾಗಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.