40% ಕಮಿಷನ್‌ ಅಂಗಳಕ್ಕೆ ಕೇಂದ್ರ ಸರ್ಕಾರ ಎಂಟ್ರಿ: ಗುತ್ತಿಗೆದಾರರಿಗೆ ಖುಷಿ, ಸರ್ಕಾರಕ್ಕೆ ನಡುಕ - Vistara News

ಕರ್ನಾಟಕ

40% ಕಮಿಷನ್‌ ಅಂಗಳಕ್ಕೆ ಕೇಂದ್ರ ಸರ್ಕಾರ ಎಂಟ್ರಿ: ಗುತ್ತಿಗೆದಾರರಿಗೆ ಖುಷಿ, ಸರ್ಕಾರಕ್ಕೆ ನಡುಕ

ರಾಜ್ಯದಲ್ಲಿ ಸರ್ಕಾರಿ ಇಲಾಖೆಯಲ್ಲಿನ ಲಂಚಾವತಾರದ ಆರೋಪ ತೆರೆಗೆ ಸರಿಯಿತು ಎನ್ನುವಾಗಲೇ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ಕಾರ್ಯಾಲಯದಿಂದ ಗುತ್ತಿಗೆದಾರರ ಸಂಘಕ್ಕೆ ದೂರವಾಣಿ ಕರೆ ಮಾಡಲಾಗಿದ್ದು, ಕಮಿಷನ್‌ ದಂಧೆಕೋರರು ತಣ್ಣನೆಯ ವಾತಾವರಣದಲ್ಲೂ ಬೆವರುವಂತೆ ಮಾಡಿದೆ.

VISTARANEWS.COM


on

PMO enters into 40 percent commission case in karnataka
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರವನ್ನು ಅನೇಕ ದಿನಗಳವರೆಗೆ ಕಾಡಿ ಹಿರಿಯ ಸಚಿವರೊಬ್ಬರ ರಾಜೀನಾಮೆಗೂ ಕಾರಣವಾದ ನಲವತ್ತು ಪರ್ಸೆಂಟ್‌ ಕಮಿಷನ್‌ ಹಗರಣದಲ್ಲಿ ಇದೀಗ ಸ್ವತಃ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಸುಮಾರು ಒಂದು ವರ್ಷದ ಹಿಂದೆ ಗುತ್ತಿಗೆದಾರರ ಸಂಘ ನೀಡಿದ್ದ ದೂರಿನ ಕುರಿತು ಪ್ರಕ್ರಿಯೆ ಆರಂಭಿಸಿರುವುದು ಗುತ್ತಿಗೆದಾರರಲ್ಲಿ ಸಂತಸ ಮೂಡಿಸಿದ್ದರೆ ಸರ್ಕಾರದಲ್ಲಿ ನಡುಕ ಹುಟ್ಟಿಸಿದೆ.

ರಾಜ್ಯದಲ್ಲಿ ಭ್ರಷ್ಟಾಚಾರ ಅಂಕೆಗೂ ಮೀರಿ ನಡೆಯುತ್ತಿದೆ, ಪ್ರತಿ ಗುತ್ತಿಗೆಗೆ ಶೇ.40 ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರಧಾನಿ ಕಾರ್ಯಾಲಯಕ್ಕೆ ದೂರು ನೀಡಿದ್ದರು. ಇದೀಗ ಪ್ರಧಾನಿ ಕಾರ್ಯಾಲಯವು ಕೇಂದ್ರ ಗೃಸಚಿವಾಲಯಕ್ಕೆ ಮಾಹಿತಿ ರವಾನಿಸಿದೆ. ಗೃಹ ಸಚಿವಾಲಯದಿಂದ ಗುತ್ತಿಗೆದಾರರ ಸಂಘಕ್ಕೆ ಕರೆ ಬಂದಿದೆ.

ಇದನ್ನೂ ಓದಿ | 40% ಆಯ್ತು, ಈಗ 30% ಕಮಿಷನ್‌ ಚರ್ಚೆ: ಮಠಗಳಿಂದ ಕಮಿಷನ್‌ ವಿಚಾರದಲ್ಲಿ ಸರ್ಕಾರಕ್ಕೆ ಮುಖಭಂಗ

ಗೃಹಸಚಿವಾಲಯದಿಂದ ಅಧಿಕಾರಿಗಳು ಗುತ್ತಿಗೆದಾರರ ಸಂಘಕ್ಕೆ ಕರೆ ಮಾಡಿದ್ದಾರೆ. ನಿಮ್ಮ ದೂರು ತಲುಪಿದೆ. ಈ ಕುರಿತು ಗಮನಹರಿಸುತ್ತಿದ್ದೇವೆ. ನಿಮ್ಮ ಆರೋಪದ ಕುರಿತು ಪೂರಕ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ. ನಮ್ಮ ತಂಡ ನಿಮ್ಮನ್ನು ಸಂಪರ್ಕಿಸಲಿದೆ ಎಂದು ತಿಳಿಸಿದ್ದಾರೆ. ಈ ಕರೆ ಬಂದಿರುವುದನ್ನು ಗುತ್ತಿಗೆದಾರರ ಸಂಘದ ಸದಸ್ಯರು ಖಚಿತಪಡಿಸಿದ್ದಾರೆ.

Contractor accuses
ಗುತ್ತಿಗೆದಾರರ ಸಂಘ ಈ ಹಿಂದೆ ನಡೆಸಿದ್ದ ಸುದ್ದಿಗೋಷ್ಠಿ

ಇಷ್ಟು ದಿನಗಳ ನಂತರವಾದರೂ ಕೇಂದ್ರ ಸರ್ಕಾರದಿಂದ ಸ್ಪಂದನೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಗುತ್ತಿಗೆದಾರರ ಸಂಘದ ಸದಸ್ಯರೊಬ್ಬರು, ತಮ್ಮ ಕೋರಿಗೆಗೆ ಈಗಲಾದರೂ ನ್ಯಾಯ ಸಿಗುತ್ತದೆಯೇ ಎಂದು ನಿರೀಕ್ಷಿಸುತ್ತಿರುವುದಾಗಿ ಹೇಳಿದ್ದಾರೆ. ಸದ್ಯದಲ್ಲೆ ದಾಖಲೆಗಳನ್ನು ನೀಡುವುದಾಗಿ ತಿಳಿಸಿದ್ದಾರೆ. ಆದರೆ ಇತ್ತ ಸರ್ಕಾರ ಹಾಗೂ ವಿವಿಧ ಸಚಿವರಿಗೆ ಈ ಬೆಳವಣಿಗೆಯಿಂದ ನಡುಕ ಆರಂಭವಾಗಿದೆ.

ಪ್ರಧಾನಿಗೆ ನೀಡಿದ ದೂರಿನಲ್ಲಿ ಏನಿದೆ?

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಗುತ್ತಿಗೆ ಕಾಮಗಾರಿಗಳ ಮೊತ್ತದ ಶೇ.40 ರಷ್ಟು ಲಂಚದ ರೂಪದಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳ ಜೇಬು ಸೇರುತ್ತಿದೆ. ಅದರಲ್ಲೂ ಆರೋಗ್ಯ, ಲೋಕೋಪಯೋಗಿ, ಜಲ ಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ನಗರಾಭಿವೃದ್ಧಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಕೆಲವು ಸಚಿವರು ಟೆಂಡರ್‌ ಅನುಮೋದನೆಗೂ ಮೊದಲೇ ಲಂಚಕ್ಕೆ ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವನ್ನು ಗುತ್ತಿಗೆದಾರರ ಸಂಘ ಮಾಡಿತ್ತು.

ಕಾಮಗಾರಿ ಆರಂಭಕ್ಕೂ ಮುನ್ನವೇ ಒಟ್ಟು ಮೊತ್ತದ ಶೇ.2 ಮೊತ್ತವನ್ನು ತಮಗೆ ನೀಡುವಂತೆ ರಾಜ್ಯದ ಕೆಲವು ಸಂಸದರು ಗುತ್ತಿಗೆದಾರರಿಗೆ ಕಿರುಕುಳ ನೀಡುತ್ತಿದ್ದಾರೆ. ಕಟ್ಟಡ ಕಾಮಗಾರಿಗಳಲ್ಲಿ ಶೇ. 5 ಮತ್ತು ರಸ್ತೆ ಕಾಮಗಾರಿಗಳಲ್ಲಿ ಶೇ.10 ಲಂಚವನ್ನು ಮುಂಗಡವಾಗಿ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ರಾಜ್ಯದ ಹಿರಿಯ ಸಚಿವರೊಬ್ಬರು ಟೆಂಡರ್‌ ಅನುಮೋದನೆಗೂ ಮೊದಲು ಶೇ.15 ಲಂಚ ಕೊಡುವುದನ್ನು ಕಡ್ಡಾಯ ಮಾಡಿದ್ದಾರೆ. 2019ರಿಂದ ಲಂಚದ ಪ್ರಮಾಣ ದುಪ್ಪಟ್ಟಾಗಿದ್ದು, ಕೆಲವು ಪ್ರಕರಣಗಳಲ್ಲಿ ಶೇ.52ರಷ್ಟು ಪಾಲು ಕೇಳುತ್ತಿದ್ದಾರೆ. ಗುತ್ತಿಗೆದಾರರಿಗೆ ಬಿಲ್‌ ಪಾವತಿಸುವಲ್ಲೂ ಅಕ್ರಮ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘ ದೂರಿನಲ್ಲಿ ಆರೋಪಿಸಿತ್ತು.

ರಾಜ್ಯಕ್ಕೆ ಬರಲಿದೆಯಾ ತಂಡ?

ಪ್ರಧಾನಮಂತ್ರಿ ಕಾರ್ಯಾಲಯದ ಸೂಚನೆ ಮೇರೆಗೆ ಗೃಹಸಚಿವಾಲಯದ ತನಿಖಾ ತಂಡವೊಂದು ರಾಜ್ಯಕ್ಕೆ ಬರುವ ನಿರೀಕ್ಷೆಯಲ್ಲಿ ಗುತ್ತಿಗೆದಾರರ ಸಂಘ ಇದೆ. ಸಂಘದಿಂದ ದಾಖಲೆಗಳನ್ನು ಪಡೆಯುವುದರ ಜತೆಗೆ ನಾಲ್ಕೈದು ಗುತ್ತಿಗೆದಾರರನ್ನು ಕರೆಸಿ ಅವರ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ದಾಖಲಿಸಬಹುದು ಎನ್ನಲಾಗಿದೆ. ಗುತ್ತಿಗೆದಾರರು ಯಾರ‍್ಯಾರ ಮೇಲೆ ಆರೋಪಗಳನ್ನು ಮಾಡಿದ್ದಾರೆಯೋ, ಅವರನ್ನೂ ಕರೆಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ತನಿಖೆ ಶುರುವಾದರೆ ಯಾವ ಇಲಾಖೆಯವರಿಗೆ ನಡುಕ?

ಗುತ್ತಿಗೆದಾರ ಸಂಘದ ದೂರಿನಲ್ಲಿ ಹಲವು ಇಲಾಖೆಗಳ ಅಧಿಕಾರಿಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ. ಅದರಲ್ಲಿ ಪ್ರಮುಖವಾಗಿ ಲೋಕೋಪಯೋಗಿ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ ಇಲಾಖೆಯು ಸೇರಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ನಗರಾಭಿವೃದ್ಧಿ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಒಳಗೊಂಡಂತೆ ಹೆಚ್ಚಿನ ತನಿಖೆ ನಡೆಯಲಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಶೇ.40 ಕಮಿಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್‌ ಏಪ್ರಿಲ್‌ನಲ್ಲಿ ಉಡುಪಿಯ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ನಂತರ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯೆದ್ದು, ಕೊನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೆಂದ್ರ ಸರ್ಕಾವೇ ಪ್ರಕರಣದಲ್ಲಿ ಪ್ರವೇಶ ಮಾಡಿರುವುದರಿಂದ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಸೇರಿ, ಆರೋಪಿತ ಇಲಾಖೆಗಳ ಹೊಣೆ ಹೊತ್ತ ಸಚಿವರಿಗೆ ನಡುಕ ಉಂಟಾಗಿದೆ.

ಇದನ್ನೂ ಓದಿ | 1% ಕಮಿಷನ್‌ ಬೇಡಿಕೆ ಸಾಬೀತು, ಪಂಜಾಬ್‌ ಆರೋಗ್ಯ ಸಚಿವ ವಿಜಯ್‌ ಸಿಂಗ್ಲಾ ಅರೆಸ್ಟ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಯಲ್ಲಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Uttara Kannada News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಯಲ್ಲಾಪುರ ಬಿಜೆಪಿ ಮಂಡಲದ ವತಿಯಿಂದ ಯಲ್ಲಾಪುರ ಪಟ್ಟಣದಲ್ಲಿ ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

Protest by BJP in Yallapur against petrol and diesel price hike
Koo

ಯಲ್ಲಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ, ಯಲ್ಲಾಪುರ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದಲ್ಲಿ ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ (Uttara Kannada News) ನಡೆಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಉಮೇಶ ಭಾಗ್ವತ್ ಮಾತನಾಡಿ, ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದರು. ಆದರೆ ಈಗ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು, ಅಭಿವೃದ್ಧಿ ಕಾರ್ಯ ಮಾಡಲು ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲದೆ ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೊರೆಯಾಗಿಸಿದೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಕಾಂಗ್ರೆಸ್ ಸರ್ಕಾರದ ಶಾಸಕರೇ ಇಂದು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ತೈಲ ಬೆಲೆ ಏರಿಕೆ ನೇರವಾಗಿ ಎಲ್ಲಾ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಗ್ಯಾರಂಟಿ ಯೋಜನೆಗಳಿಗಾಗಿ ಜನರ ಬದುಕನ್ನು ದುಸ್ತರವಾಗಿಸುವ ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಹೀಗಿದೆ

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರುತಿ ಹೆಗಡೆ, ಹಿರಿಯ ನಾಯಕ ರಾಮು ನಾಯ್ಕ್, ಗೋಪಾಲಕೃಷ್ಣ ಗಾವಂಕರ್, ಶಿವಲಿಂಗಯ್ಯ ಅಲ್ಲಯ್ಯನವರಮಠ, ಪ.ಪಂ ಸದಸ್ಯರಾದ ಕಲ್ಪನಾ ನಾಯ್ಕ, ಸೋಮೇಶ್ವರ ನಾಯ್ಕ, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

ರೇಣುಕಾಸ್ವಾಮಿ ಕೊಲೆ (Renuka Swamy Murder) ಕೇಸ್‌ನಲ್ಲಿ ನಟ ದರ್ಶನ್ (Actor Darshan) ಗ್ಯಾಂಗ್‌ ಬಂಧಿತರಾಗಿದ್ದಾರೆ. ಇದೀಗ ದರ್ಶನ್‌ ಹಲ್ಲೆ ನಡೆಸಿದ್ದನ್ನು ವಿಡಿಯೋ ಮಾಡಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Renuka swamy Murder case
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renuka Swamy Murder) ಸಂಬಂಧಿಸಿದ್ದಂತೆ ಪೊಲೀಸರ ತನಿಖೆಯು ತೀವ್ರಗೊಳ್ಳುತ್ತಿದೆ. ಈ ನಡುವೆ ನಟ ದರ್ಶನ್ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದಾಗ ಅದನ್ನೂ ವಿಡಿಯೋ ಮಾಡಿಕೊಂಡಿದ್ದ ಮೂವರು ಹುಡುಗರನ್ನು ವಶಕ್ಕೆ ಪಡೆಯಲಾಗಿದೆ.

ಹಲ್ಲೆ ವಿಡಿಯೋವನ್ನು ಬೇರೆ ಯಾರಿಗೋ ಫಾರ್ವರ್ಡ್ ಮಾಡಿದ್ದು, ಇದಾದ ನಂತರವೇ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮೂವರು ನಾಪತ್ತೆಯಾಗಿದ್ದರು. ಗುರುವಾರ ಮಧ್ಯಾಹ್ನ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ವಿಡಿಯೋ ಮಾಡಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೊಬೈಲ್ ಪರಿಶೀಲನೆ ವೇಳೆ ವಿಡಿಯೋ ಡಿಲೀಟ್ ಮಾಡಿರುವುದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಡಿಯೋ ರಿಟ್ರೀವ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ವಿಡಿಯೊ ರಿಟ್ರೀವ್ ಆದರೆ ಕೇಸ್‌ಗೆ ಮತ್ತೊಂದು ಮಹತ್ವದ ಸಾಕ್ಷ್ಯ ಆಗಲಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

ದರ್ಶನ್‌ ಗ್ಯಾಂಗ್‌ನಿಂದ ಪೊಲೀಸ್‌ ಮೇಲೂ ಹಲ್ಲೆ! ಹೊರಬರ್ತಿದೆ ರಾಕ್ಷಸ ಪಡೆಯ ಒಂದೊಂದೇ ಕರಾಳ ಕೃತ್ಯ

ಮಂಡ್ಯ: ಬೀಭತ್ಸವಾಗಿ ರೇಣುಕಾಸ್ವಾಮಿ ಕೊಲೆ (Renuka Swamy Murder) ನಡೆಸಿದ ನಟ ದರ್ಶನ್ (Actor Darshan) ಗ್ಯಾಂಗ್‌ ಪೊಲೀಸರನ್ನೂ ಬಿಟ್ಟಿಲ್ಲ. ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಮೇಲೂ ದರ್ಪ ಮೆರೆದಿರುವ ಡಿ ಬಾಸ್‌ ಗ್ಯಾಂಗ್‌, ತೀವ್ರ ಹಲ್ಲೆ (Assault case) ನಡೆಸಿರುವುದು ಬೆಳಕಿಗೆ ಬಂದಿದೆ. ಗಾಯಗೊಂಡ ಪೊಲೀಸ್‌ ಪೇದೆ ಸರ್ಕಾರಿ ಆಸ್ಪತ್ರೆಯಲ್ಲಿ ಇದಕ್ಕಾಗಿ ಚಿಕಿತ್ಸೆ ಪಡೆದ ದಾಖಲೆಯೂ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಇದು ನಡೆದಿರುವುದು ಬೇರೆಲ್ಲೂ ಅಲ್ಲ, ಮದ್ದೂರು ಶಾಸಕರ ಮನೆಯಲ್ಲಿಯೇ ಹಲ್ಲೆ ನಡೆದಿತ್ತು ಎನ್ನಲಾಗಿದೆ. ಶಾಸಕ ಕದಲೂರು ಉದಯ್ ಅವರ ಗನ್ ಮ್ಯಾನ್ ಆಗಿದ್ದ ಡಿಎಆರ್ ಪೇದೆ ನಾಗೇಶ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಮದ್ದೂರಿನಲ್ಲಿ ದರ್ಶನ್‌ ಲೋಕಸಭಾ ಚುನಾವಣೆ ಕಣದ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಮದ್ದೂರು ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ ನಡೆದಿತ್ತು. ಆ ವೇಳೆ ಗನ್ ಮ್ಯಾನ್ ನಾಗೇಶ್ ಜೊತೆ ದರ್ಶನ್ ಪಟಾಲಂ ಗಲಾಟೆ ತೆಗೆದಿದೆ. ಮುಖಂಡರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳುವ ವಿಚಾರದಲ್ಲಿ ಡಿ ಗ್ಯಾಂಗ್‌ಗ ಲಕ್ಷ್ಮಣ್, ನಾಗರಾಜು ಹಾಗೂ ಇತರರು ಜಗಳ ತೆಗೆದಿದ್ದರು. ನಂತರ ಇದೇ ಜಗಳ ಮುಂದುವರೆಸಿ ಕದಲೂರು ಉದಯ್ ಮನೆ ಮುಂದೆ ಪೇದೆ ನಾಗೇಶ್‌ಗೆ ಹಲ್ಲೆ ನಡೆಸಿದ್ದರು.

ಹಲ್ಲೆ ಮಾಡುವುದರೊಂದಿಗೆ, ʼಪೊಲೀಸರು ನಮ್ಮನ್ನೂ ಏನೂ ಮಾಡಲು ಆಗಲ್ಲ, ನಮ್ಮತ್ರ ಏನೂ ಕಿತ್ಕೊಳೋಕೆ ಆಗಲ್ಲʼ ಎಂದು ಧಮಕಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ಪೇದೆ ನಾಗೇಶ್ ಕೆಸ್ತೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ನಂತರ ರಾಜಿ ಸಂಧಾನದ ಮೂಲಕ ನಾಗೇಶರನ್ನು ಶಾಸಕ ಉದಯ್ ಮರಳಿ ಕಳುಹಿಸಿದ್ದರು.

ಇದಾದ ಬಳಿಕ ನೊಂದಿದ್ದ ನಾಗೇಶ್‌, ಶಾಸಕ ಉದಯ್ ಗನ್‌ ಮ್ಯಾನ್ ಕೆಲಸದಿಂದ ಹೊರಬಂದಿದ್ದರು. ಇದೀಗ ಡಿಎಆರ್ ತುಕಡಿಯಲ್ಲಿ ನಾಗೇಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲ್ಲೆ ನಡೆದ ಬಳಿಕ ನಾಗೇಶ್‌ ಮದ್ದೂರಿನ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Mysuru News : ಪತ್ನಿಯ ಶೀಲ ಶಂಕಿಸಿದ ಪಾಪಿ ಪತಿಯೊಬ್ಬ ಸ್ಯಾನಿಟೈಜರ್ ಸುರಿದು ಬೆಂಕಿ ಹಚ್ಚಿದ್ದ. ಗಂಭೀರ ಗಾಯಗೊಂಡಿದ್ದ ಮಹಿಳೆ ನರಳಾಡಿ (Murder case) ಮೃತಪಟ್ಟಿದ್ದಳು. ಇದೀಗ ಕೃತ್ಯ ನಡೆಸಿದ ಆರೋಪಿಗೆ 4 ವರ್ಷದ ನಂತರ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

VISTARANEWS.COM


on

By

Mysuru News
ಸಾಂದರ್ಭಿಕ ಚಿತ್ರ
Koo

ಮೈಸೂರು: ಪತ್ನಿ ಶೀಲ ಶಂಕಿಸಿ ಕೊಲೆ (Murder Case) ಮಾಡಿದ (Mysuru News) ಆರೋಪಿಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ಮೈಸೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ರವಿ ಜೀವಾವಧಿ ಶಿಕ್ಷೆಗೆ ಒಳಗಾದವನು. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇಬೂರು ಗ್ರಾಮದ ನಿವಾಸಿಯಾದ ರವಿ ಎಂಬಾತ ಪತ್ನಿ ಅಮುದಾಳ ಶೀಲ ಶಂಕಿಸಿ ಕೊಲೆ ಮಾಡಿದ್ದ.

ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ರವಿಗೆ ಐಪಿಸಿ ಸೆಕ್ಷನ್ 498(ಎ ) ಪ್ರಕಾರ 2 ವರ್ಷ ಕಠಿಣ ಶಿಕ್ಷೆ ಒಂದು ಸಾವಿರ ದಂಡ ಹಾಗೂ ಐಪಿಸಿ ಸೆಕ್ಷನ್ 302 ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ ಐದು ಸಾವಿರ ದಂಡ ಹಾಕಿ ಆದೇಶಿಸಿದೆ. ಮೈಸೂರು 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್ ತೀರ್ಪು ನೀಡಿದ್ದಾರೆ.

ಮಕ್ಕಳಿಬ್ಬರು ಅನಾಥ

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇಬೂರು ಗ್ರಾಮದ ಸುಬ್ಬ ಅಲಿಯಾಸ್‌ ರವಿ 10 ವರ್ಷದ ಹಿಂದೆ ನಂಜನಗೂಡು ಪಟ್ಟಣದ ರಾಜಾಜಿ ಕಾಲೋನಿಯ ನಂಜುಂಡ ಅವರ ಮಗಳು ಅಮುದಾರವರನ್ನು ಮದುವೆ ಆಗಿದ್ದ. ಈ ದಂಪತಿಗೆ 9 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದರು.

ಮದುವೆಯಾದ 2-3 ವರ್ಷಕ್ಕೆ ಆರೋಪಿ ರವಿ ತನ್ನ ವಾರೆಸೆ ಶುರು ಮಾಡಿದ್ದ. ಅಮುದಾಳಿಗೆ ನೀನು ಬೇರೆಯವರ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ಶೀಲ ಶಂಕಿಸಿ ಪ್ರತಿದಿನ ಕುಡಿದು ಬಂದು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ.

ಹೀಗೆ ಕಳೆದ 2020ರ ಡಿಸೆಂಬರ್‌ 6ರಂದು ಸಂಜೆ 4-30ರ ಸುಮಾರಿಗೆ ಕುಡಿದು ಬಂದ ರವಿ, ಅಮುದಾಳೊಂದಿಗೆ ಜಗಳ ತೆಗೆದಿದ್ದ. ಈ ವೇಳೆ ರವಿಗೆ ಊಟ ಬಡಿಸುತ್ತಿದ್ದಾಗ ಅಮುದಾ ಮೇಲೆ ಸ್ಯಾನಿಟೈಜರ್ ಸುರಿದು ಬೆಂಕಿ ಹಚ್ಚಿದ್ದ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಆಮುದಾಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಮುದಾ ಮೃತಪಟ್ಟಿದ್ದಳು.

ಇದನ್ನೂ ಓದಿ: Hassan Shoot Out : ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ಇಬ್ಬರ ಹತ್ಯೆಗೈದ ಪಾತಕಿಗಳು!

ಮೃತಳ ಸಹೋದರ ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ರವಿ ವಿರುದ್ಧ ಕಲಂ 498(ಎ), 302 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ಮಾಡಿ ಅಂದಿನ ಪೊಲೀಸ್ ವೃತ್ತ ನಿರೀಕ್ಷಕರಾದ ಲಕ್ಷ್ಮೀಕಾಂತ ತಳವಾರ್‌ರವರು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಯು ಅಪರಾಧ ಎಸಗಿರುವುದು ಸಾಬೀತಾಗಿದೆ. ಹೀಗಾಗಿ ಆರೋಪಿಗೆ ಕಲಂ 498(ಎ) ಐಪಿಸಿ ಅಡಿಯ ಅಪರಾಧಕ್ಕೆ 2 ವರ್ಷ ಕಠಿಣ ಶಿಕ್ಷೆ ಮತ್ತು ರೂ.1.000/- ದಂಡವನ್ನು ವಿಧಿಸಿದ್ದು ಮತ್ತು ಕಲಂ 302 ಐಪಿಸಿ ಅಡಿಯ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು ರೂ.5,000/- ದಂಡವನ್ನು ವಿಧಿಸಿ ತೀರ್ಪು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

Shivamogga News: ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿ, ವಿಸ್ತಾರ ನ್ಯೂಸ್‌ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು, ಗಾಜನೂರು ಇವರ ಸಹಯೋಗದಲ್ಲಿ ಜೂ.22ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Yuva spoorthi samvaada programme on June 22 in Shivamogga
Koo

ಶಿವಮೊಗ್ಗ: ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿ, ವಿಸ್ತಾರ ನ್ಯೂಸ್‌ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು ಗಾಜನೂರು ಇವರ ಸಹಯೋಗದಲ್ಲಿ ಜೂ.22ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ (Shivamogga News) ಏರ್ಪಡಿಸಲಾಗಿದೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಜಿಲ್ಲೆಯ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಉದ್ಘಾಟಿಸುವರು. ಶಿವಮೊಗ್ಗದ ಶ್ರೀ ದೊಡ್ಡಮ್ಮ ದೇವಿ ಉಪಾಸಕರಾದ ಶ್ರೀ ಸಿದ್ದಪ್ಪಾಜಿ ದಿವ್ಯ ಸಾನ್ನಿಧ್ಯ ವಹಿಸುವರು. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಲೋಕಪ್ಪ ವಿ. ದಳವಾಯಿ ಅಧ್ಯಕ್ಷತೆ ವಹಿಸುವರು. ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿಯ ಮುಖ್ಯಸ್ಥ ಸುಂದರೇಶ್‌ ಸಿ.ಬಿ. ಪ್ರಾಸ್ತಾವಿಕವಾಗಿ ಮಾತನಾಡುವರು.

ಇದನ್ನೂ ಓದಿ: CM Siddaramaiah: ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ ಸಿಎಂ

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಬಿ., ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸ್ನೇಹಲ್‌ ಸುಧಾಕರ್‌ ಲೋಖಂಡೆ, ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಜಿ.ಕೆ., ಹೈಕೋರ್ಟ್‌ ಹಾಗೂ ಸುಪ್ರೀ ಕೋರ್ಟ್‌ನ ನ್ಯಾಯವಾದಿ ವಿಕ್ರಂ ಪಡ್ಕೆ ಪಾಲ್ಗೊಳ್ಳುವರು.

Continue Reading
Advertisement
Protest by BJP in Yallapur against petrol and diesel price hike
ಉತ್ತರ ಕನ್ನಡ54 seconds ago

Uttara Kannada News: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಯಲ್ಲಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Renuka swamy Murder case
ಬೆಂಗಳೂರು11 mins ago

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

International Yoga Day 2024
ಫ್ಯಾಷನ್21 mins ago

International Yoga Day 2024: ಯೋಗಾಭ್ಯಾಸಕ್ಕೆ ಪುರುಷರ ಉಡುಗೆಗಳು ಹೀಗಿರಬೇಕು

Amithab Bacchan
Latest34 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ36 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್39 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ44 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು46 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ51 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest1 hour ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌