POCSO Case: ಚಾಕೋಲೆಟ್‌ ಕೊಡೋದಾಗಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರು ಯುವಕರಿಗೆ ಧರ್ಮದೇಟು - Vistara News

ಕರ್ನಾಟಕ

POCSO Case: ಚಾಕೋಲೆಟ್‌ ಕೊಡೋದಾಗಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರು ಯುವಕರಿಗೆ ಧರ್ಮದೇಟು

POCSO Case: ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಾಕೋಲೆಟ್ ಮತ್ತು ಬೊಂಬೆ ಕೊಡಿಸುತ್ತೇನೆ ಎಂದು ಹೇಳಿ ಅಪ್ರಾಪ್ತ ಬಾಲಕಿಯನ್ನು ಈ ಕಾಮುಕರು ಕರೆದೊಯ್ದಿದ್ದಾರೆ. ಮನೆಯಲ್ಲಿ ಹೆಣ್ಣುಮಗಳನ್ನು ವಿವಸ್ತ್ರಗೊಳಿಸಿದ್ದರು. ಆದರೆ, ಈ ಯುವಕರ ವರ್ತನೆಯನ್ನು ದೂರದಿಂದಲೇ ಗಮನಿಸಿದ್ದ ಸ್ಥಳೀಯರಿಗೆ ಇವರ ಮೇಲೆ ಅನುಮಾನ ಬಂದಿದೆ. ಹೀಗಾಗಿ ನಿಗಾ ಇಟ್ಟಿದ್ದರು. ಅವರು ಮನೆಯೊಳಗೆ ಕರೆದೊಯ್ಯುತ್ತಿದ್ದಂತೆ ಬಂದು ರಕ್ಷಣೆ ಮಾಡಿದ್ದಾರೆ.

VISTARANEWS.COM


on

POCSO Case 7 year old girl attempted to rape on pretext of giving her chocolates
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: 7 ವರ್ಷದ ಹೆಣ್ಣು ಮಗಳೊಬ್ಬಳ ಮೇಲೆ ಇಬ್ಬರು ಯುವಕ ಕಾಮಪಿಶಾಚಿಗಳು ಅತ್ಯಾಚಾರಕ್ಕೆ (Assault case) ಯತ್ನಿಸಿದ್ದಾರೆ. ಅದೃಷ್ಟವಶಾತ್‌ ಸ್ಥಳೀಯರಿಗೆ ಮಾಹಿತಿ ಗೊತ್ತಾಗಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ, ಇಬ್ಬರು ಯುವಕರಿಗೆ ಧರ್ಮದೇಟು ನೀಡಿದ್ದಾರೆ. ಏಪ್ರಿಲ್‌ 24ರಂದು ಈ ಪೋಕ್ಸೋ ಪ್ರಕರಣ (POCSO Case) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಬ್ಬ ಆರೋಪಿ ಮಾತ್ರ ಸಿಕ್ಕಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಾಕೋಲೆಟ್ ಮತ್ತು ಬೊಂಬೆ ಕೊಡಿಸುತ್ತೇನೆ ಎಂದು ಹೇಳಿ ಅಪ್ರಾಪ್ತ ಬಾಲಕಿಯನ್ನು ಈ ಕಾಮುಕರು ಕರೆದೊಯ್ದಿದ್ದಾರೆ. ಮನೆಯಲ್ಲಿ ಹೆಣ್ಣುಮಗಳನ್ನು ವಿವಸ್ತ್ರಗೊಳಿಸಿದ್ದರು. ಆದರೆ, ಈ ಯುವಕರ ವರ್ತನೆಯನ್ನು ದೂರದಿಂದಲೇ ಗಮನಿಸಿದ್ದ ಸ್ಥಳೀಯರಿಗೆ ಇವರ ಮೇಲೆ ಅನುಮಾನ ಬಂದಿದೆ. ಹೀಗಾಗಿ ನಿಗಾ ಇಟ್ಟಿದ್ದರು.

ಯಾವಾಗ ಈ ಯುವಕರು ಆ ಬಾಲಕಿಯನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಬಾಗಿಲು ಹಾಕಿಕೊಂಡರೋ ಆ ತಕ್ಷಣ ಸ್ಥಳೀಯರು ಆ ಮನೆಗೆ ದೌಡಾಯಿಸಿದ್ದಾರೆ. ಮನೆ ಬಾಗಿಲು ಬಡಿದು ಹೊರಗೆ ಬರುವಂತೆ ಕೂಗಿದ್ದಾರೆ . ಎಷ್ಟೇ ಬಾಗಿಲು ಬಡಿದರೂ ಯುವಕರು ಕೆಲ ಸಮಯ ಬಾಗಿಲು ತೆಗೆಯಲಿಲ್ಲ. ಕೊನೆಗೆ ಬಾಗಿಲು ಒಡೆಯುವ ಬೆದರಿಕೆಯನ್ನೂ ಒಡ್ಡಲಾಯಿತು. ಸ್ವಲ್ಪ ಸಮಯದ ಬಳಿಕ ಯುವಕರು ಬಾಗಿಲು ತೆಗೆದಿದ್ದಾರೆ. ಆಗ ಯುವಕರನ್ನು ಹಿಡಿದುಕೊಂಡ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಆದರೆ, ಅಷ್ಟರಲ್ಲಿ ಒಬ್ಬ ತಪ್ಪಿಸಿಕೊಂಡಿದ್ದಾನೆ. ಆತನ ಶೋಧ ಕಾಋಯ ಮುಂದುವರಿದಿದೆ.

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ, ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ, ಸಾಹಿಲ್ ಆ್ಯಪ್‌ನ ಸಹ ಮಾಲೀಕ ಎಂಬುದು ಪೊಲೀಸರಿಗೆ ತನಿಖೆಯಲ್ಲಿ ಗೊತ್ತಾಗಿದೆ. ಸಾಹಿಲ್‌ ಈ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಮಾತ್ರವಲ್ಲ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು.

ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

ಇದನ್ನೂ ಓದಿ: The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

2023ರಲ್ಲಿ, ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗವು ಡಿಸೆಂಬರ್ 15ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೆ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏನಿದು ಮಹದೇವ್​ ಬೆಟ್ಟಿಂಗ್​ ಪ್ರಕರಣ?

ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ (Chhattisgarh Polls) ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಭಾಗಿಯಾಗಿದ್ದಾರೆ ಎನ್ನಲಾದ ಬೆಟ್ಟಿಂಗ್ ಹಗರಣವೊಂದು ಹೊರಕ್ಕೆ ಬಂದಿತ್ತು. ಮಹದೇವ್‌ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್ ಪ್ರಮೋಟರ್‌ಗಳಿಂದ (Mahadev Betting App Promoters) ಇದುವರೆಗೆ ಭೂಪೇಶ್‌ ಬಘೇಲ್‌ (Bhupel Bhaghel) ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಹೇಳಿದ್ದರು. ಚುನಾವಣೆ ಹೊತ್ತಿನಲ್ಲೇ ಇ.ಡಿ ಪ್ರಸ್ತಾಪಿಸಿದ ವಿಷಯವು ಚರ್ಚೆಗೆ ಗ್ರಾಸವಾಗಿತ್ತು.

ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿತ್ತು. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿತ್ತು. ಆಸಿಂ ದಾಸ್‌ ಎಂಬಾತನನ್ನು ಕೂಡ ಇ.ಡಿ ಬಂಧಿಸಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೇ ಲಂಚ ಸ್ವೀಕರಿಸಿದ್ದಾರೆ ಎಂದು ಇ.ಡಿ ತಿಳಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading
Advertisement
Latest5 hours ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest9 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest9 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest1 day ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest1 day ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ1 day ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest1 day ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest1 day ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest1 day ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌