ಹುಬ್ಬಳ್ಳಿ: ಮಾವನ ಮಗನೇ ಬಾಲಕಿಯನ್ನು ಗರ್ಭಿಣಿ ಮಾಡಿರುವ ಪ್ರಕರಣ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಯುವಕನ ವಿರುದ್ಧ ಪೋಕ್ಸೊ ಪ್ರಕರಣ (Pocso Case) ದಾಖಲಾಗಿದೆ.
ನಿರಂತರವಾಗಿ ವಾಂತಿ ಮಾಡಿಕೊಳ್ಳುತಿದ್ದ ಬಾಲಕಿಯನ್ನು ಚಿಕಿತ್ಸೆಗೆಂದು ಕಿಮ್ಸ್ ಆಸ್ಪತ್ರೆಗೆ ತಾಯಿ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿ ಎನ್ನುವ ಮಾಹಿತಿ ಬಹಿರಂಗವಾಗಿದೆ. ಅಣ್ಣನ ಮಗನೇ ಪುಸಲಾಯಿಸಿ ಮಗಳ ಜತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಿ ಬಾಲಕಿ ತಾಯಿ ದೂರು ನೀಡಿದ್ದರಿಂದ ಕೇಶ್ವಾಪುರ ಠಾಣೆ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂತ್ರಸ್ತ ಬಾಲಕಿಯನ್ನು ನಿರ್ಭಯಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಸದ್ಯ ಆರೋಪಿ ಯುವಕ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ | Selfie tragedy | ಜಲಪಾತದಲ್ಲಿ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರ ಸಾವು, ಸೆಲ್ಫಿ ವೇಳೆ ದುರಂತ