POCSO Case: ನಾಲ್ಕು ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಶಿರಸಿಯಲ್ಲಿ ಯುವಕನ ಬಂಧನ Vistara News
Connect with us

ಉತ್ತರ ಕನ್ನಡ

POCSO Case: ನಾಲ್ಕು ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಶಿರಸಿಯಲ್ಲಿ ಯುವಕನ ಬಂಧನ

Molestation Case: ನಾಲ್ಕು ವರ್ಷದ ಬಾಲಕಿ ಮೇಲೆ ನಿರಂತರ ದೌರ್ಜನ್ಯ ನಡೆಸಿ ದೈಹಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ ಯುವಕನನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಈಗ ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

VISTARANEWS.COM


on

POCSO Case Four year old girl assaulted Youth arrested in Sirsi
Koo

ಶಿರಸಿ: ನಾಲ್ಕು ವರ್ಷದ ಬಾಲಕಿಯೊಬ್ಬಳ ಮೇಲೆ ಪದೆ ಪದೇ ದೈಹಿಕ ದೌರ್ಜನ್ಯ ನಡೆಸಿ ಅತ್ಯಾಚಾರಕ್ಕೆ ಬಳಸಲು ಪ್ರಯತ್ನಿಸುತ್ತಿದ್ದ ಆರೋಪದಡಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಈ ಕುರಿತು ಪಾಲಕರು ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯ ಮೇಲೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ (POCSO Case) ಅಡಿ ಪ್ರಕರಣ ದಾಖಲಾಗಿದೆ.

ರಾಯಚೂರು ಮೂಲದ ಶಿವ ರಾಮಯ್ಯ (26) ಎಂಬಾತನೇ ಈ ಕೃತ್ಯ ನಡೆಸಿದ್ದು ಆತನನ್ನು ಬಂಧಿಸಲಾಗಿದೆ. ಈತ ನಾಲ್ಕು ವರ್ಷದ ಬಾಲಕಿಯ ಮೇಲೆ ನಿರಂತರ ದೈಹಿಕ ಹಿಂಸೆ ನೀಡಿ ಆಕೆಯನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಹೊಂದಲು ಪ್ರಯತ್ನ ಪಡುತ್ತಿದ್ದ. ಇದನ್ನು ಅರಿತ ಪಾಲಕರು ಆತನ ಮೇಲೆ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಈಗ ಆರೋಪಿಯ ಮೇಲೆ ಪೋಕ್ಸೋ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿದ್ದಾರೆ.

ಮಾರುಕಟ್ಟೆ ಪೊಲೀಸ್ ಠಾಣೆಯ ಪಿ.ಎಸ್.ಐ. ಭೀಮಾಶಂಕರ ಪ್ರಕರಣ ದಾಖಲಿಸಿಕೊಂಡಿದ್ದು ಸಿ.ಪಿ.ಐ. ರಾಮಚಂದ್ರ ನಾಯಕ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Video Viral: ಸರ್ಕಾರಿ ಬಸ್ಸಲ್ಲಿ ಮಹಿಳೆಯರ ಪಾರುಪಥ್ಯ; ಸೀಟ್‌ ಹಿಡಿಯೋಕೆ ಡ್ರೈವರ್‌ ಸೀಟ್‌ನಿಂದ ನುಗ್ಗಿದ ಗಂಡಸರು!

ಲಿಫ್ಟ್​​ನಲ್ಲಿ ಸಿಕ್ಕ ಬಾಲಕಿಗೆ ಲೈಂಗಿಕ ದೌರ್ಜನ್ಯ; ಫುಡ್ ಡೆಲಿವರಿ ಹುಡುಗ ಸೆರೆ

ಬೆಂಗಳೂರು: ಫುಡ್​ ಡೆಲಿವರಿ ಕೊಡಲು (Food Delivery Boy) ಬಂದಿದ್ದ ಯುವಕನೊಬ್ಬ , ಲಿಫ್ಟ್​​ನಲ್ಲಿ ಸಿಕ್ಕ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಈಗ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ತಲಘಟ್ಟಪುರ ಅಪಾರ್ಟ್‌ಮೆಂಟ್​​ನಲ್ಲಿ ಈ ಘಟನೆ ನಡೆದಿದೆ. ಅಪಾರ್ಟ್​​ಮೆಂಟ್​​ನ 13ನೇ ಮಹಡಿಯಲ್ಲಿರುವ ಫ್ಲಾಟ್​​ನಲ್ಲಿರುವವರಿಗೆ ಫುಡ್​ ಡೆಲಿವರಿ ಕೊಡಲು ಹೋಗಿದ್ದವ ಒಂಟಿಯಾಗಿ ಸಿಕ್ಕ ಬಾಲಕಿ ಮೇಲೆ ಕ್ರೌರ್ಯ ತೋರಿಸಿದ್ದಾನೆ.

13ನೇ ಮಹಡಿಗೆ ಚೇತನ್​ ಲಿಫ್ಟ್​​ನಲ್ಲಿ ಹೋಗುತ್ತಿದ್ದ. ಆಗ 10 ವರ್ಷದ ಬಾಲಕಿಯೂ ಅಲ್ಲಿ ಇದ್ದಳು. ಚೇತನ್​ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಲಿಫ್ಟ್​ನಿಂದ ಹೊರಬಿದ್ದು ಮನೆಗೆ ಹೋದ ಹುಡುಗಿ ಅಮ್ಮನಿಗೆ ವಿಷಯ ತಿಳಿಸಿದ್ದಾಳೆ. ಆಕೆಯ ತಾಯಿ ತಕ್ಷಣವೇ ಅಪಾರ್ಟ್​ಮೆಂಟ್​​ನ ಸೆಕ್ಯೂರಿಟಿಗೆ ವಿಷಯ ಮುಟ್ಟಿಸಿದಳು. ಯುವಕ ಫುಡ್​ ಡೆಲಿವರಿ ಕೊಟ್ಟು ವಾಪಸ್​ ಹೋಗುವುದರೊಳಗೆ ಅಪಾರ್ಟ್​ಮೆಂಟ್​​ನ ಇತರ ನಿವಾಸಿಗಳು, ಸೆಕ್ಯೂರಿಟಿ ಎಲ್ಲ ಸೇರಿ ಅವನನ್ನು ಹಿಡಿದಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಚೇತನ್​ ವಿರುದ್ಧ ಸದ್ಯ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Free Bus Service: ಹೆಚ್ಚಿದ ನಾರಿ ಶಕ್ತಿ! 166 ಕೋಟಿ ರೂಪಾಯಿ ಮೀರಿ ಮುನ್ನುಗ್ಗುತ್ತಿರುವ ಶಕ್ತಿ ಸ್ಕೀಂ!

ಇನ್ನು ಲಿಫ್ಟ್​​ನಲ್ಲಿ ಹಾಕಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಫುಡ್​ ಡೆಲಿವರಿ ಬಾಯ್ ಕೃತ್ಯ ಸೆರೆಯಾಗಿದೆ. ಪೊಲೀಸರು ಚೇತನ್​​ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಅಪಾರ್ಟ್​ಮೆಂಟ್​ಗಳಲ್ಲಿ ಹೀಗೆ ಮಕ್ಕಳೂ ಕೂಡ ಒಬ್ಬೊಬ್ಬರೇ ಲಿಫ್ಟ್‌ನಲ್ಲಿ ಓಡಾಡುವುದು ಸಾಮಾನ್ಯ. ಆದರೆ ಈ ಘಟನೆ ಅಲ್ಲಿನ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಹೀಗೆ ಮಕ್ಕಳನ್ನು ಒಬ್ಬೊಬ್ಬರನ್ನೇ ಕಳಿಸುವ ಮುನ್ನ ಯೋಚಿಸುವಂತೆ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Weather report : ರಾಜ್ಯದಲ್ಲಿ ಮಳೆಯಾಟ ಆಟಕ್ಕುಂಟು ಆದರೆ ಲೆಕ್ಕಕ್ಕಿಲ್ಲ..

Rain News : ಉತ್ತರ ಒಳನಾಡಿನ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಉಳಿದಂತೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ (Weather report) ಮಳೆಯಾಗಲಿದೆ.

VISTARANEWS.COM


on

Edited by

Girls walking in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ ಮಳೆರಾಯ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾನೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Weather report) ನಿರೀಕ್ಷೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮಳೆಯಾಟ (Rain News) ಆಟಕ್ಕುಂಟು ಲೆಕ್ಕಿಲ್ಲ ಎಂಬಂತೆ ಆಗಿದೆ.

ದಕ್ಷಿಣ ಒಳನಾಡಲ್ಲಿ ಸಣ್ಣದೊಂದು ಮಳೆ

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಭಾಗದಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದಂತೆ ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಮಂಡ್ಯ ಅತಿ ಕಡಿಮೆ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್‌ ನೀಡಿದೆ.

ಇದನ್ನೂ ಓದಿ: Cylinder blast : ಸಿಲಿಂಡರ್‌ ಸ್ಫೋಟ; 7 ದಿನಗಳು ನರಳಾಡಿ ಪ್ರಾಣಬಿಟ್ಟ ಮಹಿಳೆ

ಸೆ.22ರ ಶುಕ್ರವಾರ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಭಾರಿ ಮಳೆಯು ಬಿಳಗಿಯಲ್ಲಿ 10 ಹಾಗೂ ಮಂಠಾಳ 9, ಖಜೂರಿ 8 ಹಾಗೂ ಕಲಬುರಗಿ, ಸುತ್ತೂರಲ್ಲಿ ತಲಾ 7 ಸೆಂ. ಮೀ ಮಳೆಯಾಗಿದೆ.

ಅಡಕಿ, ಚಿತ್ತಾಪುರ, ಸೇಡಂ, ಸುಲೇಪೇಟ, ಬುಕ್ಕಪಟ್ಟಣ, ಕೊಟ್ಟಿಗೆಹಾರ, ಹೊಸಕೋಟೆಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಹಾಲಿಂಗಪುರ, ಕಲಬುರ್ಗಿ AWS, ಚಿಂಚೋಳಿ, ಗುಂಡಗುರ್ತಿ, ಕೋಲಾರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಕದ್ರಾ, ರಬಕವಿ, ಹುಮನಾಬಾದ್, ಮಹಾಗೋವಾ, ಕಮಲಾಪುರ, ಜಾಲಹಳ್ಳಿ, ಮುದಗಲ್ ಹಾಗೂ ಚಿಕ್ಕಬಳ್ಳಾಪುರ , ಸಿ ಆರ್ ಪಟ್ನಾದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮಂಕಿ, ಗೋಕರ್ಣ, ಗಬ್ಬೂರು , ಶಹಾಪುರ, ಹುಣಸಗಿ, ನಾರಾಯಣಪುರ ಎಚ್‌ಎಂಎಸ್ , ಆಲಮಟ್ಟಿ ಎಚ್‌ಎಂಎಸ್, ತಾಳಿಕೋಟೆ , ಆಳಂದ , ಸೇಡಬಾಳ ಹಾಗೂ ಭಾಲ್ಕಿ, ದೇವನಹಳ್ಳಿ, ಕಳಸ, ಯಗಟಿ, ಮಾಲೂರು, ಚಾಮರಾಜನಗರ, ಮಂಡ್ಯದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಪುತ್ತೂರು Hms, ಹೊನ್ನಾವರ, ಕುಮಟಾ, ಕಾರವಾರ, ಹಳಿಯಾಳ , ಕಕ್ಕೇರಿ, ಶೋರಾಪುರ, ಕೆಂಬಾವಿ, ವಿಜಯಪುರ, ನೆಲೋಗಿ, ಯೆಡ್ವಾಡ ಕೂಡಲಸಂಗಮ, ಮಧುಗಿರಿ, ಚಿಕ್ಕನಹಳ್ಳಿ AWS , ರಾಯಲ್ಪಾಡು, ಟಿ ನರಸೀಪುರ ಸೋಮವಾರಪೇಟೆ, ಹಾರಂಗಿ, ಚಿಂತಾಮಣಿ, ಮೈಸೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Uttara Kannada News: ರೇಬೀಸ್ ನಿಯಂತ್ರಣಕ್ಕೆ ಮುಂಜಾಗ್ರತೆ ಅಗತ್ಯ; ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ

Uttara Kannada News: ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

VISTARANEWS.COM


on

Edited by

Take necessary precautions to control rabies says ADC Raju Mogaweera
ಕಾರವಾರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಮಾತನಾಡಿದರು.
Koo

ಕಾರವಾರ: ಜಿಲ್ಲೆಯಲ್ಲಿ ನಾಯಿ ಕಡಿತ (Dog Bite) ಮತ್ತು ರೇಬೀಸ್ ರೋಗದ (Rabies Disease) ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ (Precautions) ಕ್ರಮಗಳನ್ನು ಕೈಗೊಳ್ಳುವಂತೆ ಪಶುಪಾಲನಾ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೇಬೀಸ್ ರೋಗವು ಒಂದು ಮಾರಣಾಂತಿಕ ರೋಗವಾಗಿದ್ದು, ಈ ರೋಗದ ಹರಡುವಿಕೆ, ಚಿಕಿತ್ಸೆ ಮತ್ತು ಅದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಂಪನ್ಮೂಲ ವ್ಯಕ್ತಿಗಳಿಂದ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಮತ್ತು ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ರೇಬೀಸ್ ರೋಗ ನಿಯಂತ್ರಣದ ಕುರಿತು ಮಾಹಿತಿ ತಲುಪಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ಗ್ರಾಮ ಮತ್ತು ಎಲ್ಲಾ ನಗರಗಳ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ನಡೆಸಬೇಕು. ಸಾಕು ಪ್ರಾಣಿಗಳನ್ನು ಸಾಕುವ ಕುಟುಂಬದವರಿಗೂ ಕೂಡಾ ರೇಬಿಸ್‌ ರೋಗದ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ ಎಂದರು.

ಇದನ್ನೂ ಓದಿ: Money Guide: ಅಕ್ಟೋಬರ್ 1ರ ಮೊದಲೇ ಇದೆಲ್ಲ ಮಾಡಿಕೊಳ್ಳಿ… ಇಲ್ಲದಿದ್ದರೆ ಹಣ ಕಳೆದುಕೊಳ್ಳುವಿರಿ!

ಬೀದಿ ನಾಯಿಗಳು ಮತ್ತು ಸಾಕು ನಾಯಿಗಳು ಕಚ್ಚಿದರೆ ತಕ್ಷಣ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸಾ ವಿಧಾನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಹಾಗೂ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ ಬದಿಯಲ್ಲಿ ಮತ್ತು ಶಾಲೆಗಳ ಸಮೀಪ ಆಹಾರ ತ್ಯಾಜ್ಯಗಳ ಶೇಖರಣೆ ಕಂಡುಬಾರದಂತೆ ಸೂಕ್ತ ರೀತಿಯಲ್ಲಿ ಸ್ವಚ್ಛತೆ ಕೈಗೊಳ್ಳಬೇಕು. ಸಾಕು ನಾಯಿಗಳ ಮಾಲೀಕರು ಅವುಗಳಿಗೆ ರೇಬೀಸ್ ನಿರೋಧಕ ಲಸಿಕೆ ಕೊಡಿಸಬೇಕು. ಸಾರ್ವಜನಿಕರು ನಾಯಿ ಕಚ್ಚಿದಲ್ಲಿ ಕೂಡಲೇ ಸಮೀಪದ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಬಿ.ವಿ. ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ರೇಬೀಸ್ ನಿರೋಧಕ ಚುಚ್ಚುಮದ್ದು ಸಂಗ್ರಹ ಸಾಕಷ್ಟು ಪ್ರಮಾಣದಲ್ಲಿ ಇದ್ದು, ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅರ್ಚನಾ ನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಇದುವರೆಗೆ 6224 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದರು.

ಇದನ್ನೂ ಓದಿ: India Canada Row: ಭಾರತದಿಂದಲೇ G20 ಶೃಂಗಸಭೆ ಯಶಸ್ವಿ ಎಂದ ಬ್ರೆಜಿಲ್;‌ ಕೆನಡಾ ಪಿಎಂ ಆರೋಪಕ್ಕೆ ಏನೆಂದಿತು?

ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ರಾಕೇಶ ಬಂಗಲೆ ಮಾತನಾಡಿ, ಇಲಾಖೆ ವತಿಯಿಂದ ಬೀದಿ ನಾಯಿಗಳಿಗೆ ಸುರಕ್ಷಿತ ಸಂತಾನಹರಣ ಚಿಕಿತ್ಸೆ ಮತ್ತು ಲಸಿಕೆ ನೀಡಲು ಎಲ್ಲಾ ಸೌಲಭ್ಯಗಳಿದ್ದು, ರೇಬೀಸ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಆರೋಗ್ಯ ಇಲಾಖೆ, ಪಶುಪಾಲನಾ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.

Continue Reading

ಉಡುಪಿ

Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Rain News : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಲ್ಲಿ (Weather report) ಸಾಮಾನ್ಯವಾಗಿರಲಿದೆ.

VISTARANEWS.COM


on

Edited by

Rain day Girl enjoying
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸೆ.23-24ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಉತ್ತರ ಕರ್ನಾಟಕದಲ್ಲಿ ಬಿಡುವೇ ಇಲ್ಲ

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆನಯನ್ನು (weather report) ನೀಡಲಾಗಿದೆ. ಎಡಬಿಡದೆ ಮಳೆ ಸುರಿಯಲಿದ್ದು, ಜತೆಗೆ ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ದಕ್ಷಿಣ ಒಳನಾಡಲ್ಲಿ ಲಘು ಮಳೆ

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯಲ್ಲಿ ತಗ್ಗಿದ ಅಬ್ಬರ

ಕರಾವಳಿಯಲ್ಲಿ ಮಳೆ ಅಬ್ಬರ ತಗ್ಗಿದೆ. ಆದಾಗ್ಯೂ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ಬೆಂಗಳೂರಲ್ಲಿ ಸಂಜೆಗೆ ಮಳೆ ಕಾಟ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಿಸಿಲಿನ ತಾಪ ಜಾಸ್ತಿ ಇದ್ದರೆ, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್‌; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 23ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.6160165735
ಆಲಮಟ್ಟಿ ಜಲಾಶಯ
(Almatti Dam)
519.6114.73405405
ಮಲಪ್ರಭಾ ಜಲಾಶಯ (Malaprabha Dam)633.8021.440194
ಘಟಪ್ರಭಾ ಜಲಾಶಯ
(Ghataprabha Dam)
662.9142.402311181
ತುಂಗಾಭದ್ರಾ ಜಲಾಶಯ (Tungabhadra Dam)497.7162.92437810316
ಭದ್ರಾ ಜಲಾಶಯ (Bhadra Dam)657.7343.23290290
ಕಬಿನಿ ಜಲಾಶಯ (Kabini Dam)696.1314.8031664390
ಹಾರಂಗಿ
(Harangi Dam)
871.388.0613352791
ಲಿಂಗನಮಕ್ಕಿ (Linganamakki Dam) 554.4468.3054935393
ಹೇಮಾವತಿ
(Hemavathi Dam)
890.5817.6649861300

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Uttara Kannada News: ಕಬ್ಬು ಬೆಳೆಗಾರರಿಗೆ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ: ಡಿಸಿ ಗಂಗೂಬಾಯಿ ಮಾನಕರ್

Uttara Kannada News: ಕಾರವಾರ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ಜಿಲ್ಲೆಯ ಕಬ್ಬು ಬೆಳಗಾರರ ಸಭೆಯು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅಧ್ಯಕ್ಷತೆಯಲ್ಲಿ ಜರುಗಿತು.

VISTARANEWS.COM


on

Edited by

sugar factory representatives and sugarcane growers meeting at DC office Karwar
ಕಾರವಾರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ಜಿಲ್ಲೆಯ ಕಬ್ಬು ಬೆಳಗಾರರ ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಮಾತನಾಡಿದರು.
Koo

ಕಾರವಾರ: ಪ್ರಸಕ್ತ ಸಾಲಿನ ಕಬ್ಬು (Sugarcane) ಅರೆಯುವ ಹಂಗಾಮು ನವೆಂಬರ್ 1 ರಿಂದ 15ರ ವರೆಗೆ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆ (Sugar Factory) ವತಿಯಿಂದ ಜಿಲ್ಲೆಯ ಕಬ್ಬು ಬೆಳೆಗಾರರರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ, ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ಜಿಲ್ಲೆಯ ಕಬ್ಬು ಬೆಳಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 2022-23 ರಲ್ಲಿ 10,18,382 ಮೆ. ಟನ್ ಕಬ್ಬು ನುರಿಸಲಾಗಿದ್ದು, 1,19,478 ಮೆ.ಟನ್ ಸಕ್ಕರೆ ಉತ್ಪಾದಿಸುವುದರೊಂದಿಗೆ 11.97% ಶೇಕಡಾ ಇಳುವರಿ ದಾಖಲಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 6,633 ಹೆಕ್ಟೇರ್ ಹೊಸ ಕಬ್ಬು ಹಾಗೂ 8,005 ಹೆಕ್ಟೇರ್ ಕುಳೆ ಕಬ್ಬು ಸೇರಿದಂತೆ ಒಟ್ಟು 14,638 ಹೆಕ್ಟೇರ್‌ನಲ್ಲಿ ಕಬ್ಬು ಬೆಳೆಯಲಾಗಿದೆ.

ಪ್ರಸಕ್ತ ಸಾಲಿನ ಕಬ್ಬು ಬೆಳೆಗೆ ಹಳಿಯಾಳ ತಾಲೂಕಿನ ಇ.ಐ.ಡಿ.ಪ್ಯಾರಿ (ಇಂಡಿಯಾ) ಲಿ ಇವರು ಪ್ರತಿ ಟನ್ ಗೆ ರೂ.3678 ನ್ಯಾಯ ಮತ್ತು ಲಾಭದಾಯಕ ಬೆಲೆಯನ್ನು ನಿಗಧಿಪಡಿಸಿದ್ದಾರೆ. ಜಿಲ್ಲೆಯ ಕಬ್ಬು ಬೆಳಗಾರರಿಂದ ಕಬ್ಬು ಖರೀದಿಸುವ ಸಂದರ್ಭದಲ್ಲಿ ಬೆಳಗಾರರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪರಸ್ಪರ ಸಮನ್ವಯದಿಂದ ಕಬ್ಬು ಖರೀದಿಯ ಎಲ್ಲಾ ಪ್ರಕ್ರಿಯೆಯನ್ನು ನಡೆಸುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ: Vijayanagara News: ಕನ್ನಡ ಮಾಧ್ಯಮದಲ್ಲಿ ಓದಿದರೆ ವಿಜ್ಞಾನಿಗಳಾಗುವುದಕ್ಕೆ ಅಡ್ಡಿ ಇಲ್ಲ: ಇಸ್ರೋ ವಿಜ್ಞಾನಿ ಡಾ.ಬಿ.ಎಚ್‌.ಎಂ ದಾರುಕೇಶ್‌

ಜಿಲ್ಲೆಯ ಇ.ಐ.ಡಿ.ಪ್ಯಾರಿ (ಇಂಡಿಯಾ) ಲಿ ಅವರು ರೈತರು ಕಾರ್ಖಾನೆಗೆ ತರುವ ಕಬ್ಬನ್ನು ತೂಕ ಮಾಡುವಾಗ ಬೆಳಗಾರರು ಮತ್ತು ಕಾರ್ಖಾನೆಯ ನಡುವೆ ಗೊಂದಲಗಳು ಇದ್ದು, ಈ ಪ್ರಕ್ರಿಯೆಯಲ್ಲಿ ಪಾರದರ್ಶಕವಾಗಿ ತೂಕ ಮಾಡುವಂತೆ ಮತ್ತು ತೂಕದ ಪ್ರಮಾಣವನ್ನು ಬೆಳಗಾರರು ನೋಡಲು ಅನುಕೂಲವಾಗುವಂತೆ ಎಲ್ಲಾ ಅಗತ್ಯ ವ್ಯವಸ್ಥೆ ಮಾಡುವಂತೆ ಹಾಗೂ ಮುಂದಿನ ಅವಧಿಯ ವೇಳೆಗೆ ಕಾರ್ಖಾನೆಯ ಪ್ರವೇಶ ದ್ವಾರದಲ್ಲಿಯೇ ತೂಕ ಪರೀಕ್ಷಿಸಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚದಲ್ಲಿ ಹೆಚ್ಚಿನ ದರ ಪಡೆಯುತ್ತಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ರೈತ ಮುಖಂಡರು, ಇತರೆ ಜಿಲ್ಲೆಯಲ್ಲಿ ಪ್ರತಿ ಟನ್ ಗೆ 772 ದರ ಇದ್ದು, ಜಿಲ್ಲೆಯಲ್ಲಿ 893 ರೂ. ದರ ಇದೆ ಎಂದು ಅಸಮದಾನ ವ್ಯಕ್ತಪಡಿಸಿ, ಹಿಂದಿನ ಆದೇಶದ ಪ್ರಕಾರ ದರ ಪಡೆಯುವಂತೆ ತಿಳಿಸಿದರು. ಈ ಕುರಿತಂತೆ ಕಾರ್ಖಾನೆಯ ಅಧಿಕಾರಿಗಳು ಪರಿಶೀಲಿಸಿ ದರ ಕಡಿಮೆಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಕಾರ್ಖಾನೆಗೆ ತೆಗೆದುಕೊಂಡು ಬಂದ ಕಬ್ಬನ್ನು ಕೂಡಲೇ ತೂಕ ಮಾಡದೇ 2-3 ದಿನ ತಡವಾಗಿ ತೂಕ ಮಾಡುವುದರಿಂದ ಕಬ್ಬು ಒಣಗಿ ತೂಕ ಕಡಿಮೆಯಾಗುತ್ತಿದೆ. ಅಲ್ಲದೇ ಪ್ಲಾಂಟೇಷನ್ ಸ್ಲಿಪ್ ಮತ್ತು ಆದ್ಯತಾ ಪಟ್ಟಿ ನೀಡಬೇಕು. ಪ್ರತಿದಿನ ರಿಕವರಿಯನ್ನು ಪಾರದರ್ಶಕವಾಗಿ ತೋರಿಸುವಂತೆ ರೈತರು ಆಗ್ರಹಿಸಿದರು. ಜಿಲ್ಲೆಯ ಕಬ್ಬು ಬೆಳಗಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಗೊಂದಲ ಮತ್ತು ಸಮಸ್ಯೆಗಳಿಗೆ ಆಸ್ಪದ ನೀಡದಂತೆ ಸಕ್ಕರೆ ಕಾರ್ಖಾನೆಯು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ

ಉಳಿದಂತೆ ಹಿಂದಿನ ದಾಖಲೆಗಳನ್ನು ಪರಿಶೀಲಿಸಿ 2016-17 ರಲ್ಲಿನ ಎಫ್.ಆರ್.ಪಿ ಮೇಲಿನ ಹೆಚ್ಚುವರಿ ಬಾಕಿ ಮೊತ್ತ ರೂ.305 ರೂಪಾಯಿಗಳನ್ನು ಬೆಳಗಾರರಿಗೆ ಪಾವತಿಸುವಂತೆ ತಿಳಿಸಿದರು. ಈ ಹಿಂದೆ ರೈತರ ಮೇಲೆ ಕಾರ್ಖಾನೆ ದಾಖಲಿಸಿರುವ ಪ್ರಕರಣಗಳ ವಿವರ ಪಡೆದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಕಾರವಾರ ಉಪ ವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್, ಆಹಾರ ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣಕರ್, ಇ.ಐ.ಡಿ.ಪ್ಯಾರಿ (ಇಂಡಿಯಾ) ಪ್ರೈ.ಲಿ ವ್ಯವಸ್ಥಾಪಕ ವೆಂಕಟರಾವ್, ಕಬ್ಬು ಬೆಳಗಾರರ ಮುಖಂಡರು ಮತ್ತು ರೈತ ಮುಖಂಡರು ಮತ್ತಿತರರು ಭಾಗವಹಿಸಿದ್ದರು.

Continue Reading
Advertisement
Chaitra Kundapura
ಉಡುಪಿ11 mins ago

Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್‌

women arrested
ದೇಶ42 mins ago

Illicit Affair : ಅಕ್ರಮ ಸಂಬಂಧ ನೋಡಿದ ಮಗನನ್ನೇ ಕೊಂದ ಹೆತ್ತಮ್ಮ; 2 ವರ್ಷದ ಬಳಿಕ ಪ್ರಿಯಕರನ ಜತೆ ಅರೆಸ್ಟ್​​

Kumaraswamys three suggestions to Government
ಕರ್ನಾಟಕ48 mins ago

HD Kumaraswamy : ನಾನು ಹೇಳಿದ ಹಾಗೆ ಮಾಡ್ತೀರಾ?; ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕುಮಾರಸ್ವಾಮಿ ನೀಡಿದ 3 ಸಲಹೆಗಳು

CM Siddaramaiah
ಕರ್ನಾಟಕ49 mins ago

Women’s Reservation Bill: ಮೋದಿಯವರ ಮಹಿಳಾ ಮೀಸಲಾತಿ 2024, 2029, 2034ರಲ್ಲೂ ಜಾರಿಯಾಗಲ್ಲ: ಸಿದ್ದರಾಮಯ್ಯ

naveen ul haq and gautam gambhir
ಕ್ರಿಕೆಟ್1 hour ago

‘ಎಂದಿಗೂ ಬದಲಾಗಬೇಡ’ ನವೀನ್ ಉಲ್ ಹಕ್​ಗೆ ಜನ್ಮದಿನದ ಶುಭಾಶಯ ಕೋರಿದ ಗಂಭೀರ್; ಹಾರೈಕೆ ಹಿಂದಿದೆ ನರಿ ಬುದ್ಧಿ

Gautam Adani
ದೇಶ1 hour ago

Gautam Adani : ಅದಾನಿ ಭೇಟಿ ಮಾಡಿದ ಶರದ್​ ಪವಾರ್​; ರಾಹುಲ್​ ಮಾತಿಗೆ ಕಿಮ್ಮತ್ತಿಲ್ಲ ಎಂದ ಬಿಜೆಪಿ!

Cauvry protest in Bangalore
ಕರ್ನಾಟಕ1 hour ago

Cauvery Protest: ಬೆಂಗಳೂರು ಬಂದ್‌ ಮಾಡುವುದು ಬೇಡ ಎಂದ ಡಿಕೆಶಿ, ಪ್ರತಿಭಟನೆ ಹಕ್ಕಿಗೆ ವಿರೋಧವಿಲ್ಲ ಎಂದ ಸಿದ್ದರಾಮಯ್ಯ

karnataka film chamber
ಪ್ರಮುಖ ಸುದ್ದಿ2 hours ago

Sandalwood : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ; ಗೆದ್ದವರ ವಿವರ ಇಲ್ಲಿದೆ

Book release in Ananth Namana Programme
ಕರ್ನಾಟಕ2 hours ago

Ananth Namana: ಅನಂತ ಕುಮಾರ್ ಇದ್ದಿದ್ದರೆ ಕಾವೇರಿ ಇಷ್ಟರ ಮಟ್ಟಿಗೆ ವಿವಾದ ಆಗುತ್ತಿರಲಿಲ್ಲ ಎಂದ ಡಿಕೆಶಿ

Shubman Gill and Sara Tendulkar
ಕ್ರಿಕೆಟ್2 hours ago

Sara vs Gill: ಶುಭಮನ್​ ಗಿಲ್​ ಜತೆಗಿನ ಪ್ರೀತಿಗೆ ಕ್ಲ್ಯಾರಿಟಿ ನೀಡಿದ ಸಾರಾ ತೆಂಡೂಲ್ಕರ್

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ6 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ1 week ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌