ಕೋಲಾರ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಒಂದು ವರ್ಷದಿಂದ ಅತ್ಯಾಚಾರ (physical abuse, Pocso Case) ಎಸಗುತ್ತ ಬಂದಿದ್ದ ನಾಲ್ವರು ಆರೋಪಿಗಳನ್ನು ಕೋಲಾರ (Kolar news) ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಐದು ಜನ ಕಳೆದೊಂದು ವರ್ಷದಿಂದ ಬಾಲಕಿ ಮೇಲೆ ಅತ್ಯಾಚಾರ ನಡೆಸುತ್ತಿದ್ದು, ಆರೋಪಿಗಳಾದ ನಾಗರಾಜ್, ಲವಕುಮಾರ್, ನವೀನ್, ಶಬರೀಶ್, ಸುಮನ್ ಎಂಬವರನ್ನು ಬಂಧಿಸಲಾಗಿದೆ.
ಸಂತ್ರಸ್ತೆ ಬಾಲಕಿಗೆ ಕೆಜಿಎಫ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕಿಯ ಆರೋಗ್ಯ ಪರೀಕ್ಷೆ ವೇಳೆ ಈಕೆ ಗರ್ಭಿಣಿಯಾಗಿರುವುದು ಪತ್ತೆಯಾಗಿದ್ದು, ವಿಚಾರಿಸಿದಾಗ ಸತ್ಯ ಬಯಲಾಗಿದೆ. ಸಂತ್ರಸ್ತ ಬಾಲಕಿಯ ತಾಯಿಯ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಂಟಮೂರಿ ಪ್ರಕರಣ, ಇನ್ನಿಬ್ಬರು ಆರೋಪಿಗಳ ಸೆರೆ
ಬೆಳಗಾವಿ: ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣದಲ್ಲಿ ಬೆಳಗಾವಿ ಮಹಾನಗರ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ 13 ಆರೋಪಿಗಳನ್ನೂ ಬಂಧಿಸಿದಂತಾಗಿದೆ.
ನರ್ಸಿಂಗ್ ವಿದ್ಯಾರ್ಥಿ ಸಂತೋಷ ನಾಯಕ (19) ಹಾಗೂ ಓರ್ವ ಬಾಲಾಪರಾಧಿಯನ್ನು ಆರೆಸ್ಟ್ ಮಾಡಲಾಗಿದ್ದು, ಆರೋಪಿಗಳನ್ನು ಬೆಳಗಾವಿ ಪೊಲೀಸರು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಸಂಬಂಧ ಕಾಕತಿ ಠಾಣೆಯಲ್ಲಿ 13 ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು.
ಇದನ್ನೂ ಓದಿ: Skeletons Found: ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ!