ಬೆಂಗಳೂರು: ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ (Police Constable) ಎಚ್.ಎಂ ಲೋಕೇಶ್ ಆಯ್ಕೆ ಆಗಿದ್ದಾರೆ.
ನಗರ ಪೊಲೀಸ್ ಆಯಕ್ತರ ಕಚೇರಿಯಲ್ಲಿ ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸಂವಹನ, ಕಂಪ್ಯೂಟರ್ ಮತ್ತು ಇಂಗ್ಲಿಷ್‌ನಲ್ಲಿ ಕೌಶಲ್ಯ ಹೊಂದಿದ್ದ ಎಚ್.ಎಂ. ಲೋಕೇಶ್ ಅವರು ಕೊರೊನಾ ಸಮಯದಲ್ಲಿ ನಾಗರಿಕರ ಜತೆ ನಿರಂತರ ಸಂಪರ್ಕ ಹೊಂದಿದ್ದರು. ಜನರ ಸಂದೇಹಗಳಿಗೆ ಉತ್ತರಿಸಿ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದರು.
ಇದನ್ನೂ ಓದಿ: Rapido Bike Vs Auto: ಕಂಡ ಕಂಡಲ್ಲಿ ರ‍್ಯಾಪಿಡೋ ಬೈಕ್ ಚಾಲಕರ ಮೇಲೆ ಹಲ್ಲೆ ಯತ್ನ; ಆಟೋ ಚಾಲಕರ ಕಿರುಕುಳಕ್ಕೆ ಕಂಗಾಲು
ಭಾರತೀಯ ರಾಯಭಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಹುದ್ದೆಗೆ ವಿವಿಧ ಹಂತಗಳಲ್ಲಿ ಸಂದರ್ಶನವನ್ನು ಕಾನ್ಸ್‌ಟೇಬಲ್ ಲೋಕೇಶ್ ಎದುರಿಸಿದ್ದರು. ಪ್ರವೀಣ್ ಸೂದ್, ಮೇಘರಿಕ್, ಸುನೀಲ್ ಕುಮಾರ್, ಭಾಸ್ಕರ್ ರಾವ್, ಕಮಲ್ ಪಂತ್ ಮತ್ತು ಪ್ರತಾಪ್ ರೆಡ್ಡಿ ಅವಧಿಯಲ್ಲಿ ಲೋಕೇಶ್ ಕೆಲಸ ಮಾಡಿದ್ದರು. ಬೆಂಗಳೂರು ಪೊಲೀಸ್ ಸೋಷಿಯಲ್ ಮೀಡಿಯಾ ಖಾತೆಗೆ ಹೊಸ ಛಾಪು ಮೂಡಿಸಿದ್ದ ಕಾನ್ಸ್‌ಟೇಬಲ್ ಲೋಕೇಶ್ ಅವರು ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಆಯ್ಕೆ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ