ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ತನಿಖೆ ನಡೆಸಿರುವ ಪೊಲೀಸರು ದೋಷಾರೋಪ ಪಟ್ಟಿಯಿಂದ ಹೆಸರು ಕೈಬಿಟ್ಟ ಹಿನ್ನೆಲೆಯಲ್ಲಿ ನಟ ದರ್ಶನ್ ನಿರಾಳರಾಗುವಂತಾಗಿದೆ. ದರ್ಶನ್ (Actor Darshan) ಅವರ ಸಾಕು ನಾಯಿ ಕಚ್ಚಿದ್ದರಿಂದ ಮಹಿಳೆಯೊಬ್ಬರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದ ಪ್ರಕರಣದಲ್ಲಿ ಈಗ ಪೊಲೀಸರು, ದರ್ಶನ್ ಅವರ ಹೆಸರನ್ನೇ ಕೈಬಿಟ್ಟಿದ್ದಾರೆ. ಹೀಗಾಗಿ ದೂರುದಾರೆ ಮಹಿಳೆಯ ಮುಂದಿನ ನಡೆ ಕುತೂಹಲ ಕೆರಳಿಸಿದೆ.
ದೂರಿನಲ್ಲಿ ದರ್ಶನ್ ಅವರನ್ನು ಎರಡನೇ ಆರೋಪಿಯಾಗಿ ಮಾಡಿ ಮಹಿಳೆ ದೂರು ನೀಡಿದ್ದರು. ಹೀಗಾಗಿ ಎಫ್ಐಆರ್ ದಾಖಲಿಸಿದ ಪೊಲೀಸರು ನಟ ದರ್ಶನ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ಇದೀಗ ಪ್ರಕರಣದಲ್ಲಿ ದರ್ಶನ್ ಕೈವಾಡವಿಲ್ಲ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಿರುವ ಪೊಲೀಸರು, ದೋಷಾರೋಪ ಪಟ್ಟಿಯಿಂದ ನಟ ದರ್ಶನ್ ಹೆಸರನ್ನು ಕೈಬಿಟ್ಟಿದ್ದಾರೆ.
ಪ್ರಕರಣ ನಡೆಯುವ ಸಂದರ್ಭದಲ್ಲಿ ದರ್ಶನ್ ಮನೆಯಲ್ಲಿರಲಿಲ್ಲ. ಇದರಲ್ಲಿ ನನ್ನ ಕೈವಾಡವಿಲ್ಲ ಎಂದು ದರ್ಶನ್ ಕೂಡಾ ವಿಚಾರಣೆ ವೇಳೆ ಹೇಳಿದ್ದರು. ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದರು. ಹೀಗಾಗಿ ಚಾರ್ಜ್‌ಶೀಟ್‌ನಿಂದ ಹೆಸರನ್ನು ಕೈಬಿಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಏನಿದು ಪ್ರಕರಣ?
ವೈದ್ಯೆಯೊಬ್ಬರಿಗೆ ನಟ ದರ್ಶನ್ ಮನೆಯ ನಾಯಿಗಳು ಕಚ್ಚಿದ ಹಿನ್ನೆಲೆಯಲ್ಲಿ ದರ್ಶನ್ (Actor Darshan) ಅವರ ವಿರುದ್ಧ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಲೀಕ ದರ್ಶನ್ ಹಾಗೂ ನಾಯಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವೈದ್ಯೆ ಅಮಿತಾ ಎಂಬುವವರು ದೂರು ನೀಡಿದ್ದರು.
ಇದನ್ನೂ ಓದಿ | Kirik Party: ʼಕಿರಿಕ್ ಪಾರ್ಟಿ 2ʼ ಬರುತ್ತಾ?; ಪರಂವಃ ಸ್ಟುಡಿಯೊದಿಂದ ಕುತೂಹಲಕಾರಿ ಸುಳಿವು!
ಅ.28ರಂದು ಸ್ಪರ್ಶ ಆಸ್ಪತ್ರೆಗೆ ಪಾರ್ಶ್ವವಾಯು ದಿನದ ಕಾರ್ಯಕ್ರಮಕ್ಕೆ ಬಂದಿದ್ದಾಗ ವೈದ್ಯೆ ಮೇಲೆ ನಾಯಿಗಳು ದಾಳಿ ಮಾಡಿದ್ದವು. ಅವುಗಳನ್ನು ಎಳೆದುಕೊಳ್ಳುವಂತೆ ವೈದ್ಯ ಸೂಚಿಸಿದ್ದರೂ ವ್ಯಕ್ತಿ ನಿರ್ಲಕ್ಷ್ಯ ಮಾಡಿದ್ದರಿಂದ ವೈದ್ಯೆ ಮೇಲೆ ನಾಯಿಗಳು ದಾಳಿ ಮಾಡಿದ್ದವು. ಆದ್ದರಿಂದ ಅವರು ಪೊಲೀಸರಿಗೆ ದೂರು ಕೊಟ್ಟಿದ್ದರು.
ರಾಜಭವನಕ್ಕೆ ಬಾಂಬ್ ಬೆದರಿಕೆ; ಪೊಲೀಸರ ದೌಡು, ಹೈ ಅಲರ್ಟ್
ಬೆಂಗಳೂರು: ರಾಜಧಾನಿಯ ಸುಮಾರು 48 ಶಾಲೆಗಳ ಆವರಣದಲ್ಲಿ ಬಾಂಬ್ ಇಡಲಾಗಿದೆ (Bomb threat to Schools) ಎಂದು ನಿಗೂಢ ತಾಣದಿಂದ ಈಮೇಲ್ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಘಟನೆಯ ಬೆನ್ನಿಗೇ ಇದೀಗ ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೇ (Bomb threat to Raj Bhavan) ಬಾಂಬ್ ಬೆದರಿಕೆ ಹಾಕಲಾಗಿದೆ.
ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ರಾತ್ರಿ ಕರೆ ಮಾಡಿ ತಿಳಿಸಲಾಗಿದೆ. ರಾತ್ರಿ 11.30ರ ಸುಮಾರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಆ ವ್ಯಕ್ತಿ ಹೇಳಿದ್ದಾನೆ.
ಕರೆ ಬಂದ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಪೊಲೀಸರು ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್‌ನೊಂದಿಗೆ ಅಲ್ಲಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರಾಜಭವನಕ್ಕೆ ಹೋಗಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ. ಆದರೆ, ಅವರು ಇನ್ನೂ ಕಟ್ಟೆಚ್ಚರ ವಹಿಸಿದ್ದಾರೆ.
ರಾಜಭವನ ತುಂಬ ವಿಶಾಲವಾದ ಜಾಗವಾಗಿದ್ದು ಯಾವ ಭಾಗದಲ್ಲಿ ಇಡಲಾಗಿದೆ ಎಂಬ ಮಾಹಿತಿಯನ್ನು ಆತ ನೀಡಿಲ್ಲ. ರಾಜಭವನದಲ್ಲಿ ರಾಜ್ಯಪಾಲರು ಮತ್ತು ಸಾಕಷ್ಟು ಸಿಬ್ಬಂದಿ ಇರುತ್ತಾರೆ. ಜತೆಗೆ ಸಾಕಷ್ಟು ಸಂದರ್ಶಕರು ಬರುತ್ತಿರುತ್ತಾರೆ. ಇದೊಂದು ಹುಸಿ ಕರೆಯೇ ಆಗಿರಬಹುದಾದ ಸಾಧ್ಯತೆ ಜಾಸ್ತಿ ಇದೆ. ಆದರೆ, ಹಾಗಂತ ಅದನ್ನು ಪೊಲೀಸರು ನಿರ್ಲಕ್ಷ್ಯ ಮಾಡುವಂತಿಲ್ಲ. ಹೀಗಾಗಿ ಎಲ್ಲಾ ಕಡೆ ಸರ್ಚ್ ಮಾಡಲಾಗಿದೆ.
ಇದನ್ನೂ ಓದಿ: Bomb Threat : 48 ಶಾಲೆಗಳಿಗೆ ಬಂದ ಬೆದರಿಕೆ EMail ಮೂಲ ಪತ್ತೆ, ಏನಿದು ಜರ್ಮನಿ ಕನೆಕ್ಷನ್?
ಈ ನಡುವೆ, ರಾಜಭವನಕ್ಕೆ ಯಾವ ನಂಬರ್‌ನಿಂದ ಕರೆ ಮಾಡಲಾಗಿದೆ. ಅದನ್ನು ಮಾಡಿದ್ದು ಯಾರು ಎಂಬ ವಿಚಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೊಂದು ಫೋನ್ ಕರೆ ಆಗಿರುವುದರಿಂದ ಆರೋಪಿಯನ್ನು ಪತ್ತೆ ಹಚ್ಚುವ ಸಾಧ್ಯತೆಗಳಿವೆ. ಬಳಿಕ ಆತನ ಹಿನ್ನೆಲೆಯನ್ನು ಅರಿಯಬೇಕಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ