ಬೆಂಗಳೂರು: ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ ನೀಡಲಾಗುವ 2023ನೇ ಸಾಲಿನ ಆರ್ಯಭಟ ಪ್ರಶಸ್ತಿಗೆ ರಾಜಾಜಿನಗರ ಪೊಲೀಸ್ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಆರ್.ಪಿ.ಅಶೋಕ್ ಭಾಜನರಾಗಿದ್ದಾರೆ. ಪೊಲೀಸ್ ಸೇವೆಯಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ ಹಿನ್ನೆಲೆಯಲ್ಲಿ ಅವರಿಗೆ (RP Ashok) ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಹಲವು ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ ಹಿನ್ನೆಲೆಯಲ್ಲಿ ಆರ್.ಪಿ.ಅಶೋಕ್ ಅವರಿಗೆ ಆರ್ಯಭಟ ಪ್ರಶಸ್ತಿ ನೀಡಲಾಗಿದೆ. ಇವರ ಕಾರ್ಯಕ್ಷಮತೆಗೆ 2015ರಲ್ಲಿ ಮುಖ್ಯಮಂತ್ರಿಗಳ ಪದಕ, 2019ರಲ್ಲಿ ರೆಂಜ್ ಲೇವಲ್ ಡ್ಯೂಟಿ ಮೀಟ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ, ರಾಜ್ಯ ಮಟ್ಟದ ಡ್ಯೂಟಿ ಮೀಟ್‌ನಲ್ಲಿ ಕಂಚಿನ ಪದಕ, 53 ಬಾರಿ ನಗದು ಬಹುಮಾನ ಸೇರಿ ಹಲವು ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ ಇವರದ್ದಾಗಿದೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಿರ್ದೇಶಕ, ನಟ ಟಿ.ಎಸ್. ನಾಗಾಭರಣ, ಎಚ್‌ಎಲ್ಎನ್ ರಾವ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ ಜೋಶಿ ಇನ್ನಿತರ ಗಣ್ಯರು ಭಾಗಿಯಾಗಿದ್ದರು.
ಇದನ್ನೂ ಓದಿ | ವಿಸ್ತಾರ Explainer: Aritificial Intelligence : ಆರ್ಟಿಫಿಶಿಯಲ್ ಇಂಟಲಿಜೆನ್ಸ್ ನಿಮ್ಮ ಉದ್ಯೋಗವನ್ನು ಕಸಿದುಕೊಳ್ಳಲಿದೆಯೇ?