Site icon Vistara News

Veer Savarkar Flex: ಜಾತ್ರೆಯಲ್ಲಿ ಹಾಕಿದ್ದ ಸಾವರ್ಕರ್ ಫ್ಲೆಕ್ಸ್ ತೆರವಿಗೆ ಪೊಲೀಸರ ಸೂಚನೆ

Veer Savarkar Flex at tumkur

ತುಮಕೂರು: ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ಮರಳೂರು ದಿಣ್ಣೆಯ 5ನೇ ಕ್ರಾಸ್‌ನಲ್ಲಿ ಹಾಕಲಾಗಿದ್ದ ವೀರ ಸಾವರ್ಕರ್ ಫ್ಲೆಕ್ಸ್ ಅನ್ನು ತೆರವುಗೊಳಿಸಲು ಪೊಲೀಸರು ಸೂಚಿಸಿದ್ದಾರೆ. ಹಿಂದು ಸಂಘಟನೆಗಳಿಂದ 46ನೇ ವರ್ಷದ ಜಾಡಾಳಮ್ಮ ಜಾತ್ರಾ ಮಹೋತ್ಸವಕ್ಕೆ ಶುಭಾಶಯ ಕೋರಿ ಹಾಕಲಾಗಿದ್ದ ಫ್ಲೆಕ್ಸ್‌ನಲ್ಲಿ (Veer Savarkar Flex) ವೀರ ಸಾವರ್ಕರ್ ಭಾವಚಿತ್ರವಿದ್ದ ಕಾರಣ ತೆರವುಗೊಳಿಸಲು ಪೊಲೀಸರು ತಿಳಿಸಿದ್ದಾರೆ.

ವಿಶ್ವ ಹಿಂದು ಪರಿಷತ್, ಬಜರಂಗದಳದಿಂದ ವೀರ ಸಾವರ್ಕರ್ ಭಾವಚಿತ್ರವಿರುವ ಫ್ಲೆಕ್ಸ್ ಹಾಕಲಾಗಿತ್ತು. ಮರಳೂರು ದಿಣ್ಣೆ ಪ್ರದೇಶದಲ್ಲಿ ಎರಡು ಕೋಮಿನ‌ ಜನರು ಹೆಚ್ಚಾಗಿ ವಾಸವಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕೋಮು ಸೌಹಾರ್ಧತೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಯನಗರ ಠಾಣೆ ಪೊಲೀಸರು, ಸಾವರ್ಕರ್ ಫ್ಲೆಕ್ಸ್ ತೆರವಿಗೆ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸ್ಥಳೀಯ ಮುಖಂಡರೊಂದಿಗೆ ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ.‌

ಇದನ್ನೂ ಓದಿ | Opposition Meet : ಘಟಬಂಧನ್‌ ಅಲ್ಲ ಘಟಶ್ರಾದ್ಧ; ರಾಜಕಾರಣಿಗಳ ಸೇವೆಗೆ IAS ಬಳಕೆಗೆ HDK ಕೆಂಡ

ಶಿರಾ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಜಿಪಂ ಸಿಇಒ ಸಭೆ

ತುಮಕೂರು: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಅವರ ನೇತೃತ್ವದಲ್ಲಿ ಶಿರಾ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಮಂಗಳವಾರ ನಡೆಯಿತು.

ಮಳೆ ಕೊರತೆ, ಕೃಷಿ ಚಟುವಟಿಕೆ, ಕುಡಿಯುವ ನೀರು, ಗೊಬ್ಬರ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಜಿಪಂ ಸಿಇಒ ಅವಲೋಕಿಸಿದರು.

ಇತ್ತೀಚಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ಅವರು ತುಮಕೂರು ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ಮಟ್ಟದಲ್ಲಿ ಪರಿಶೀಲನೆ ನಡೆಸಿ ತುರ್ತುಕ್ರಮಕ್ಕೆ ಸೂಚಿಸಿದ ಹಿನ್ನೆಲೆಯಲ್ಲಿ ಜಿಪಂ ಸಿಇಒ ಶಿರಾ ತಾಲೂಕು ಪಂಚಾಯಿತಿಯಲ್ಲಿ ಸಭೆ ನಡೆಸಿದರು.

ಇದನ್ನೂ ಓದಿ | Opposition Meet: ಸಿದ್ಧಾಂತಗಳ ಬಗ್ಗೆ ಮಾತಾಡಿದರೆ ಸರಿಯಿರೋಲ್ಲ: ಬೂಟಾಟಿಕೆ ಬಿಡಿ ಎಂದ ಎಚ್‌.ಡಿ. ಕುಮಾರಸ್ವಾಮಿ

ಸಭೆಯಲ್ಲಿ ಶಿರಾ ಪ್ರಭಾರ ತಹಸೀಲ್ದಾರ್ ನಾಗಮಣಿ, ತಾಲೂಕು ಪಂಚಾಯಿತಿ ಇ.ಒ ಅನಂತರಾಜು,
ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

Exit mobile version