ಕಲಬುರಗಿ: ಇಲ್ಲಿನ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ದಾಳಿ ವೇಳೆ ಓಡಿ ಹೋಗುವಾಗ ಯುವಕ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಸಿದ್ದಪ್ಪ ಕೊಂಡಾ (20) ಮೃತ ದುರ್ದೈವಿ.
ಮಂಗಳವಾರ ತಡರಾತ್ರಿ ಲಾಡ್ಲಾಪುರ ಗ್ರಾಮದ ಹಾಜಿ ಸರ್ವರ್ ದರ್ಗಾದಲ್ಲಿ ಇಸ್ಪೀಟ್ ಆಡುತ್ತಿದ್ದ 10ರಿಂದ 15 ಜನರ ತಂಡದ ಮೇಲೆ ವಾಡಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಓಡಿ ಹೋಗುವಾಗ ಸಿದ್ದಪ್ಪ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ರಸ್ತೆ ತಡೆದು ಗ್ರಾಮಸ್ಥರ ಪ್ರತಿಭಟನೆ
ಪೊಲೀಸರ ದಾಳಿಯಿಂದ ಸಿದ್ದಪ್ಪ ಕೊಂಡ ಮೃತಪಟ್ಟ ಹಿನ್ನೆಲೆ ಗ್ರಾಮಸ್ಥರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಕಲಬುರಗಿ-ಯಾದಗಿರಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದರು. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Bear attack | ರೈತನ ಮೇಲೆ ಕರಡಿಗಳ ದಾಳಿ; ಪ್ರಾಣಾಪಾಯದಿಂದ ಪಾರು