Police staff celebrate MLAs brothers sons Birthday Birthday Party: ಶಾಸಕರ ತಮ್ಮನ ಮಗನ ಬರ್ತ್‌ಡೇ ಆಚರಿಸಿದ ಪೊಲೀಸರು! Vistara News
Connect with us

ಕರ್ನಾಟಕ

Birthday Party: ಶಾಸಕರ ತಮ್ಮನ ಮಗನ ಬರ್ತ್‌ಡೇ ಆಚರಿಸಿದ ಪೊಲೀಸರು!

Birthday party: ಪೊಲೀಸ್‌ ಅಧಿಕಾರಿಗಳು ಶಾಸಕರ ತಮ್ಮನ ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Birthday party
ಶಾಸಕರ ತಮ್ಮನ ಮಗನ ಹುಟ್ಟುಹಬ್ಬದಲ್ಲಿ ಪೊಲೀಸರು
Koo

ಚಿತ್ರದುರ್ಗ: ಮೊಳಕಾಲ್ಮುರು ಶಾಸಕ ಎನ್‌.ವೈ ಗೋಪಾಲಕೃಷ್ಣ (MLA NY Gopalakrishna) ಅವರ ತಮ್ಮನ ಮಗ ಚೇತನ್‌ ಹುಟ್ಟುಹಬ್ಬವನ್ನು (Birthday Party) ಪೊಲೀಸರು (Police staff) ಆಚರಿಸಿದ ವಿದ್ಯಮಾನ ನಡೆದು ಚರ್ಚೆಗೆ ಕಾರಣವಾಗಿದೆ.

ಎನ್‌.ವೈ ಗೋಪಾಲಕೃಷ್ಣ ಅವರ ತಮ್ಮ ಎನ್‌.ವೈ ಪೆನ್ನೋಬಳ ಸ್ವಾಮಿ ಅವರ ಮಗ ಎನ್‌.ವೈ ಚೇತನ್‌ ಹುಟ್ಟುಹಬ್ಬ ಕೆಲವು ದಿನಗಳ ಹಿಂದೆ ನಡೆದಿತ್ತು. ಗೋಪಾಲಕೃಷ್ಣ ಅವರ ತೋಟದ ಮನೆಯಲ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಶ್ರೀರಾಂಪುರ ಹಾಗೂ ಮೊಳಕಾಲ್ಮೂರು ಪೊಲೀಸರು ಹುಟ್ಟು ಹಬ್ಬದಲ್ಲಿ ಭಾಗಿಯಾಗಿದ್ದರು.

ಮೊಳಕಾಲ್ಮೂರು ಕ್ಷೇತ್ರದ ಯುವ ನಾಯಕ ಎಂದೇ ಬಿಂಬಿತ ಆಗಿರುವ ಎನ್.ವೈ.ಚೇತನ್ ಅವರ ಹೆಸರಿನಲ್ಲಿ ಕೇಕ್‌ ಕೂಡಾ ಮಾಡಿಸಿ ತಂದಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

ಹುಟ್ಟುಹಬ್ಬದಲ್ಲಿ ಒಟ್ಟು 7 ಮಂದಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದು ಒಂದು ಕಡೆಯಾದರೆ ಅವರು ಸಮವಸ್ತ್ರ ಧರಿಸಿಯೇ ಅದ್ಧೂರಿಯಾಗಿ ಹುಟ್ಟುಹಬ್ಬ ಮಾಡಿದ್ದು ಚರ್ಚೆ ಹುಟ್ಟು ಹಾಕಿದೆ.

ಚೇತನ್ ಬರ್ತ್‌ ಡೇಯಲ್ಲಿ ಇಷ್ಟೊಂದು ಅಧಿಕಾರಿಗಳು ಭಾಗಿಯಾಗಿದ್ದು ಯಾಕೆ..? ಕರ್ತವ್ಯದಲ್ಲಿ ಇರಬೇಕಾದ ಪೊಲೀಸರು ಬರ್ತಡೇಯಲ್ಲಿ ಭಾಗಿಯಾಗಿದ್ದು ಸರಿಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿವೆ. ಖಾಸಗಿಯಾಗಿ ಹೋಗುವುದು ಬೇರೆ, ಸಮವಸ್ತ್ರದಲ್ಲಿ ಹೋಗುವುದು ಬೇರೆ, ತಾವೇ ಕೇಕ್‌ ಹಿಡಿದುಕೊಂಡು ಹೋಗುವುದು ಇಲಾಖೆಯ ಗೌರವಕ್ಕೆ ಮಾಡಿದ ಅಪಮಾನವಾಗುತ್ತದೆ ಎನ್ನುವುದು ಸಾರ್ವಜನಿಕ ವಲಯದ ಚರ್ಚೆ.

ಕೊಣನೂರು ಪಿಎಸ್‌ಐ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಹಾಸನ : ಹಾಸನದ ಅರಕಲಗೂಡು ತಾಲೂಕಿನ ಕೊಣನೂರು ಪಿಎಸ್‌ಐ ಮನೆಗೆ ಕೆಲ ದುಷ್ಕರ್ಮಿಗಳು ಬೆಂಕಿ ಹಾಕಿದ್ದಾರೆ. ಕೊಣನೂರು ಪೊಲೀಸ್ ಠಾಣೆಯ (Konanur Police Station) ಪಿಎಸ್ಐ (PSI) ಶೋಭಾ ಬರಮಕ್ಕನವರ್ ಅವರು ಇದ್ದ ಬಾಡಿಗೆ ಮನೆಗೆ ಬೆಂಕಿ ಹಾಕಲಾಗಿದೆ.

ರಜೆ‌ ಮೇಲೆ ಊರಿಗೆ ತೆರೆಳಿದ್ದಾಗ ದುಷ್ಕರ್ಮಿಗಳು ಮನೆಯ ಕಿಟಿಕಿ ಒಡೆದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ ಸೇರಿ ಪೀಠೋಪಕರಣಗಳು ಬೆಂಕಿಗಾಹುತಿ ಆಗಿವೆ. ಬುಧವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಹೋಗಿರುವ ಸಾಧ್ಯತೆ ಇದೆ.

PSI Home
ಪಿಎಸ್‌ಐ ಶೋಭಾ ಅವರ ಬಾಡಿಗೆ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Election: ಬಿಜೆಪಿ ಶಾಸಕ ಹರೀಶ್‌ ಪೂಂಜಾ ಪರ ಪ್ರಚಾರ ಮಾಡಿದ ಗ್ರಾಪಂ ಸಿಬ್ಬಂದಿ ಅಮಾನತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Shivamogga News: ಶಿವಮೊಗ್ಗ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ: ಸಂಸದ ಬಿ.ವೈ. ರಾಘವೇಂದ್ರ

Shivamogga News: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಕೇಂದ್ರ ಸರ್ಕಾರವು ಅನುಮತಿ ನೀಡಿದ್ದು, ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಯೋಜನೆಯನ್ನು ಕಾರ್ಯಗತಗೊಳಿಸಿ, ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ ನೀಡಿದ್ದಾರೆ.

VISTARANEWS.COM


on

Edited by

Shivamogga MP B Y Raghavendra meeting
ಶಿವಮೊಗ್ಗ ವಲಯದ ಬಿಎಸ್ಎನ್ಎಲ್ ನ ಹಿರಿಯ ಅಧಿಕಾರಿಗಳೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಸಭೆ ನಡೆಸಿದರು.
Koo

ಶಿವಮೊಗ್ಗ: ಕೇಂದ್ರ ಸರ್ಕಾರವು (Central government) ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ (Mobile towers) ಸ್ಥಾಪನೆಗೆ ಅನುಮತಿ ನೀಡಿದ್ದು, ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಯೋಜನೆಯನ್ನು ಕಾರ್ಯಗತಗೊಳಿಸಿ, ಯಶಸ್ವಿಗೊಳಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ ನೀಡಿದರು.

ಶಿವಮೊಗ್ಗ ವಲಯದ ಬಿಎಸ್ಎನ್ಎಲ್‌ನ ಹಿರಿಯ ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ಎಲ್ಲ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಕಾರ್ಯಗತಗೊಳಿಸಿ, ಯಶಸ್ವಿಗೊಳಿಸಿ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.

ಈಗಾಗಲೇ ಜಿಲ್ಲೆಯ ಹಲವು ಗ್ರಾಮಾಂತರ ಪ್ರದೇಶಗಳಲ್ಲಿ ಬಿ.ಎಸ್.ಎನ್.ಎಲ್. ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ನೆಟ್‌ವರ್ಕ್‌ ಇಲ್ಲದೇ ಜನಸಾಮಾನ್ಯರಿಗೆ ಆನ್‌ಲೈನ್ ಮೂಲಕ ಹಣದ ವ್ಯವಹಾರ ಮಾಡಲೂ ಸಹ ತೊಂದರೆಯಾಗುತ್ತಿರುವುದರಿಂದ, ಹಾಲಿ ಇರುವ ಟವರ್‌ಗಳಲ್ಲಿಯೂ ಸಹ ಉತ್ತಮ ರೀತಿಯಲ್ಲಿ ನೆಟ್ವರ್ಕ್ ಸಂಪರ್ಕ ದೊರೆಯುವಂತೆ ಮಾಡಲು ತೀವ್ರ ಗಮನಹರಿಸುವಂತೆ ಹಾಗೂ ಗ್ರಾಮಸ್ಥರಿಂದ ಆಕ್ಷೇಪಣೆ ಬಾರದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಬೇಸಿಗೆ ರಜಾ ಇದ್ದರೂ ಶಾಲೆಗೆ ಹೋಗಿ ನಿಗೂಢವಾಗಿ ಮೃತಪಟ್ಟ 10ನೇ ತರಗತಿ ವಿದ್ಯಾರ್ಥಿನಿ

ಒಟ್ಟು 225 ಮೊಬೈಲ್ ಟವರ್‌ಗಳ ಪೈಕಿ, ಸಾಗರ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್‌ಗಳು ಮಂಜೂರಾಗಿವೆ. ಆರಂಭಿಕ ಮೂರು ಹಂತಗಳಲ್ಲಿ ಶಿವಮೊಗ್ಗ ಜಿಲ್ಲೆಯ 112 ಹಾಗೂ ಬೈಂದೂರು ಕ್ಷೇತ್ರದಲ್ಲಿ 25 ಟವರ್ ಸ್ಥಾಪನೆಗೆ ಅನುಮತಿ ಲಭ್ಯವಾಗಿದ್ದು, ಬಿ.ಎಸ್.ಎನ್.ಎಲ್. ಸಂಸ್ಥೆಯು ಟವರ್ ಸ್ಥಾಪನೆಗೆ ಸೂಕ್ತ ಜಾಗಗಳನ್ನು ಗುರುತಿಸಿದೆ. ಈ ಸಂಬಂಧ ಭೂಮಿ ಹಸ್ತಾಂತರದ ಪ್ರಕ್ರಿಯೆ ಆರಂಭವಾಗಬೇಕಿದೆ. ತಲಾ ಒಂದು ಟವರ್‌ಗೆ ಅಂದಾಜು 75 ಲಕ್ಷ ರೂ.ಗಳಿಂದ 1 ಕೋಟಿವರೆಗೂ ಖರ್ಚಾಗುವ ಸಾಧ್ಯತೆ ಇದ್ದು, ಒಟ್ಟಾರೆ 200 ಕೋಟಿಗೂ ಅಧಿಕ ಮೊತ್ತ ಈ ಕಾಮಗಾರಿಗೆ ಖರ್ಚಾಗಲಿದೆ ಎಂದು ತಿಳಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ದೂರ ಸಂಪರ್ಕ ವ್ಯವಸ್ಥೆಯಲ್ಲಿನ ಅಭಿವೃದ್ಧಿ ಮತ್ತು ಸುಧಾರಣೆ ದೃಷ್ಟಿಯಿಂದ ಅದರಲ್ಲೂ ದೂರಸಂಪರ್ಕ ವ್ಯವಸ್ಥೆಯಿಂದ ವಂಚಿತವಾದ ನೂರಾರು ಕುಗ್ರಾಮಗಳನ್ನು ಗುರುತಿಸಿ, ಆ ಗ್ರಾಮಗಳಿಗೆ ತುರ್ತಾಗಿ ದೂರಸಂಪರ್ಕ ವ್ಯವಸ್ಥೆಯನ್ನು ಮತ್ತು ಮೊಬೈಲ್ ಟವರ್ ಸ್ಥಾಪನೆಗೆ ಕಳೆದ 3-4 ವರ್ಷಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಎನ್.ಎಲ್. ಜೊತೆಯಲ್ಲಿ ಖಾಸಗಿ ಕಂಪನಿಗಳಾದ ಜಿಯೋ ಮತ್ತು ಏರ್‌ಟೆಲ್ ಸಂಸ್ಥೆಗಳೊಂದಿಗೆ ಕ್ಷೇತ್ರದಲ್ಲಿನ ನೆಟ್‌ವರ್ಕ್ ವಂಚಿತ ಪ್ರದೇಶಗಳಿಗೆ ಮೊಬೈಲ್ ಟವರ್ ಒದಗಿಸುವ ನಿಟ್ಟಿನಲ್ಲಿ ಹಲವಾರು ಬಾರಿ ಸಭೆ ನಡೆಸಿದ್ದರು.

ಇದನ್ನೂ ಓದಿ: Ashish Vidyarthi: ಯಾವುದೇ ವಯಸ್ಸಲ್ಲಾದರೂ ಸಂತೋಷವಾಗಿರಬಹುದು; ಮದುವೆ ಬಗ್ಗೆ ಆಶಿಶ್ ವಿದ್ಯಾರ್ಥಿ ಹೇಳಿದ್ದೇನು?

ಕೆಲವು ಕಡೆಗಳಲ್ಲಿ ಖಾಸಗಿ ಕಂಪನಿಗಳಾದ ಜಿಯೋ ಮತ್ತು ಏರ್ಟೆಲ್ ಕಂಪನಿಗಳು ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದರೂ ಸಹ ಕೆಲವು ಕುಗ್ರಾಮಗಳಲ್ಲಿ ಜನವಸತಿ ಕಡಿಮೆ ಇರುವ ಕಾರಣದಿಂದಾಗಿ ಈ ಖಾಸಗಿ ಕಂಪನಿಗಳು ಟವರ್ ನಿರ್ಮಾಣದಲ್ಲಿ ಆಸಕ್ತಿ ತೋರಿರಲಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದಲೇ ಮೊಬೈಲ್ ಟವರ್ ನಿರ್ಮಾಣವನ್ನು ಕೈಗೊಳ್ಳಲು ಕೇಂದ್ರದ ದೂರಸಂಪರ್ಕ ಸಚಿವ ಅಶ್ವಿನಿ ವೃಷ್ಣವ್ ಅವರಿಗೆ ಕಳೆದ ಆ.2ರಂದು 96 ಸ್ಥಳಗಳಲ್ಲಿ ಟವರ್ ನಿರ್ಮಾಣಕ್ಕೆ ಮನವಿ ಸಲ್ಲಿಸಲಾಗಿತ್ತು. ನಂತರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮೊಬೈಲ್ ನೆಟ್ ವರ್ಕ್ ಇಲ್ಲದ ಸ್ಥಳಗಳ ವಿವರಗಳನ್ನೂ ಸಹ ಕೇಂದ್ರ ದೂರಸಂಪರ್ಕ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ನನ್ನ ಸತತ ಪ್ರಯತ್ನಕ್ಕೆ ಮನ್ನಣೆ ನೀಡಿದ ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣನ್ ಅವರು ಶಿವಮೊಗ್ಗ ಟೆಲಿಕಾಂ ಜಿಲ್ಲೆಗೆ 4ಜಿ ಸ್ಯಾಚುರೇಷನ್ ಯೋಜನೆಯಡಿಯಲ್ಲಿ 198 ಹಾಗೂ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ 27 ಹೊಸ 4G ಟವರ್‌ಗಳಿಗೆ ಒಟ್ಟಾರೆ 225 ಟವರ್ ಗಳಿಗೆ ಮಂಜೂರಾತಿ ನೀಡಿದ್ದಾರೆ ಎಂದು ಸಂಸದರು ತಿಳಿಸಿದರು.

ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್‌ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ

ಈ ಸಂದರ್ಭದಲ್ಲಿ ಡಿ.ಜಿ.ಎಂ. (ಆಪರೇಷನ್) ವೆಂಕಟೇಶ್, ಸಬ್ ಡಿವಿಜನಲ್ ಎಂಜಿನಿಯರ್‌ಗಳಾದ ರಾಜು, ಜಯಕುಮಾರ್, ಎ.ಜಿ.ಎಂ. (ಆಪರೇಷನ್) ಎನ್. ಬಿ. ಹೆಬ್ಬಾಳ್, ಜೆ.ಟಿ.ಒ. ರಾಘವೇಂದ್ರ ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

Challakere News: ಶಿಥಿಲಾವಸ್ಥೆಯಲ್ಲಿ ದೊಡ್ಡೇರಿ ಗ್ರಾಮದ ಬಸ್ ತಂಗುದಾಣ; ದುರಸ್ತಿಗೆ ಬೇಕಿದೆ ಅನುದಾನ

Challakere News: ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಬಸ್ ತಂಗುದಾಣ ಶಿಥಿಲಾವಸ್ಥೆಯಲ್ಲಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಇದರಿಂದಾಗಿ ಪ್ರಯಾಣಿಕರು ನಿತ್ಯ ಬಸ್ಸಿಗಾಗಿ ಸುಡು ಬಿಸಿಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.

VISTARANEWS.COM


on

Edited by

bus stand in dilapidated condition at challakere taluk
ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲಾವಸ್ಥೆಯಲ್ಲಿರುವುದು.
Koo

ಚಳ್ಳಕೆರೆ: ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಬಸ್ ತಂಗುದಾಣ (Bus stand) ಶಿಥಿಲಾವಸ್ಥೆಯಲ್ಲಿದ್ದು (Dilapidated condition) ಪ್ರಯಾಣಿಕರಿಗೆ ಇದ್ದೂ ಇಲ್ಲದಂತಾಗಿದೆ. ಇದರಿಂದಾಗಿ ನಿತ್ಯ ಬಸ್ಸಿಗಾಗಿ ಸುಡು ಬಿಸಿಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.

ಗ್ರಾಮದಲ್ಲಿರುವ ಈ ಬಸ್ ತಂಗುದಾಣ ಬೀಳುವ ಹಂತದಲ್ಲಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಬಸ್ ಬರುವ ತನಕವೂ ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರು ಜೀವ ಕೈಯಲ್ಲಿ ಹಿಡಿದು ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ.

ಪಾವಗಡ ಕಡೆಗೆ ಹೋಗುವಾಗ ಸರ್ಕಾರಿ, ಖಾಸಗಿ ಬಸ್‌ಗಳು, ಆಟೋಗಳಿಗಾಗಿ ಇಲ್ಲಿ ಕಾಯುವ ಪ್ರಯಾಣಿಕರಿಗೆ ಬಿಸಿಲಿಗೆ ಸೂಕ್ತ ರಕ್ಷಣೆ ಇಲ್ಲದಂತೆ ಆಗಿದೆ. ಅಲ್ಲದೆ, ಮಳೆ ಬಂದರೂ ಸುರಕ್ಷತೆ ಇಲ್ಲವಾಗಿದೆ. ತುಂಬಾ ಹಳೆಯದಾಗಿರುವ ಈ ಬಸ್‌ ನಿಲ್ದಾಣದ ಗೋಡೆಗಳು ಬಿರುಕು ಬಿಟ್ಟಿದ್ದು, ಯಾವುದೇ ವೇಳೆ ಬೀಳುವ ಅಪಾಯ ಎದುರಾಗಿದೆ.

ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಬಸ್ ತಂಗುದಾಣದ ಹಿಂಭಾಗದ ಗೋಡೆ ಬಿರುಕು ಬಿಟ್ಟಿರುವುದು

ಇದನ್ನೂ ಒದಿ: Congress Guarantee: ಗಿಫ್ಟ್‌ ಕೂಪನ್‌ನಿಂದ ರಾಮನಗರದಲ್ಲಿ ಸೋಲು; ಜೆಡಿಎಸ್‌ ಆರೋಪಕ್ಕೆ ಬಿಜೆಪಿ ಸಾಕ್ಷಿ!

ಇದರಿಂದ ತಂಗುದಾಣದ ಒಳಗಡೆ ಪ್ರವೇಶಿಸಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದಾರೆ. ಆದರೆ, ತಾಲೂಕು ಆಡಳಿತವಾಗಲಿ ಅಥವಾ ಗ್ರಾಮ ಪಂಚಾಯಿತಿಯವರು ಸಹ ಈ ಸಮಸ್ಯೆ ಪರಿಹಾರ ಕಲ್ಪಿಸುವ ಗೋಜಿಗೆ ಹೋಗಿಲ್ಲ.
ಗ್ರಾಮದಿಂದ ಪ್ರತಿದಿನ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು, ಗ್ರಾಮಸ್ಥರು ತಮ್ಮ ದಿನನಿತ್ಯದ ಕೆಲಸಗಳಿಗೆ ತಾಲೂಕು ಕೇಂದ್ರಕ್ಕೆ ಹೋಗಬೇಕು ಎಂದರೆ ಅಗತ್ಯ ಬಸ್ಸಿಗಾಗಿ ಕಾಯಲು ಸುಸಜ್ಜಿತ ತಂಗುದಾಣದ ಅವಶ್ಯಕತೆ ಇದೆ. ಆದರೆ, ಈ ಬಗ್ಗೆ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ನಿರ್ವಹಣೆ ಕೊರತೆ

ತಾಲೂಕಿನ ಹಲವು ಗ್ರಾಮೀಣ ಪ್ರದೇಶದ ಅನೇಕ ಮುಖ್ಯರಸ್ತೆಗಳಲ್ಲಿ ಬಸ್‌ ತಂಗುದಾಣ ಇಲ್ಲದೆ ಜನತೆ ಬಿರುಬಿಸಿಲಿನಲ್ಲಿ ಬಸ್ಸಿಗಾಗಿ ಕಾದು ನಿಂತು ಹೈರಾಣಾಗುತ್ತಿದ್ದಾರೆ, ಇರುವ ಬಸ್‌ ತಂಗುದಾಣಗಳು ನಿರ್ವಹಣೆ ಇಲ್ಲದೆ ಬೀಳುವ ಸ್ಥಿತಿಯಲ್ಲಿವೆ. ಕೆಲವು ಪಡ್ಡೆ ಹುಡುಗರ ಅಡ್ಡೆಗಳಾಗುತ್ತಿವೆ.

ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್‌ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ

ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ಅನುಕೂಲ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

Continue Reading

ಕರ್ನಾಟಕ

Vijayanagara News: ಜಿ-20 ಶೃಂಗಸಭೆಯ ಪೂರ್ವಸಿದ್ಧತಾ ಸಭೆ; ಸಂಸ್ಕೃತಿಯ ಅನಾವರಣಕ್ಕೆ ತೀರ್ಮಾನ

G-20 Summit: ಜುಲೈನಲ್ಲಿ ಹಂಪಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆ ಕುರಿತು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಸಭೆಗೆ ಕೈಗೊಳ್ಳಬೇಕಾದ ಸೌಕರ್ಯ ಹಾಗೂ ಪ್ರವಾಸಿ ತಾಣಗಳ ಪರಿಚಯಕ್ಕೆ ಸಂಬಂಧಿಸಿದಂತೆ ಸಿದ್ಧತಾ ಕ್ರಮಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

VISTARANEWS.COM


on

Edited by

G 20 Summit Preparatory Meeting at Vijayanagara district
ಹಂಪಿ ಸಮೀಪದ ಕಮಲಾಪುರದ ಇವೋಲ್ವ್‌ ಬ್ಯಾಕ್‌ ಹೋಟೆಲ್‌ನಲ್ಲಿ ಶುಕ್ರವಾರ ಜಿ-20 ಶೃಂಗಸಭೆಯ ಪೂರ್ವಸಿದ್ಧತಾ ಸಭೆ ಜರುಗಿತು.
Koo

ಹೊಸಪೇಟೆ: ಹಂಪಿಯಲ್ಲಿ ಜುಲೈ 13 ರಿಂದ 15 ರವರೆಗೆ 3 ದಿನಗಳ ಕಾಲ ನಡೆಯಲಿರುವ ಜಿ-20 ಶೃಂಗಸಭೆ ಪೂರ್ವ‌ ಸಿದ್ಧತಾ ಸಭೆಗೆ (G-20 Summit) ಆಗಮಿಸುವ ಪ್ರತಿನಿಧಿಗಳಿಗೆ, ಸಭೆಗೆ ಅಗತ್ಯವುಳ್ಳ ಸಕಲ ಸೌಕರ್ಯ ಒದಗಿಸುವುದರ ಜತೆಗೆ ಐತಿಹಾಸಿಕ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆಯ ಅನಾವರಣಗೊಳಿಸುವ (Unveil culture) ಕುರಿತು ಸಿದ್ಧತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ತಿಳಿಸಿದರು.

ಹಂಪಿ ಸಮೀಪದ ಕಮಲಾಪುರದ ಇವೋಲ್ವ್‌ ಬ್ಯಾಕ್‌ ಹೋಟೆಲ್‌ನಲ್ಲಿ ಶುಕ್ರವಾರ ನಡೆದ ಜಿ-20 ಶೃಂಗಸಭೆ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯ ಕುರಿತು ಕೈಗೊಳ್ಳಬೇಕಾದ ಸೌಕರ್ಯ ಹಾಗೂ ಪ್ರವಾಸಿ ತಾಣಗಳ ಪರಿಚಯಕ್ಕೆ ಸಂಬಂಧಿಸಿದಂತೆ ಸಿದ್ಧತಾ ಕ್ರಮಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!

ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕೈಗೊಳ್ಳುವ ಕುರಿತು ಕೇಂದ್ರ ಸಚಿವಾಲಯದ ತಂಡದೊಂದಿಗೆ ಸಭೆ ನಡೆಸಲಾಗಿದೆ. ಹಂಪಿಯಲ್ಲಿ ಸಭೆ ನಡೆಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಹಾಗೂ ಸಭೆಯಲ್ಲಿ ಪಾಲ್ಗೊಳ್ಳುವ ಪ್ರತಿನಿಧಿಗಳಿಗೆ ವಿಶ್ವ ಪಾರಂಪರಿಕ ತಾಣಗಳನ್ನು ಪರಿಚಯಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ತಿಳಿಸಿದರು.

ಸಭೆಯಲ್ಲಿ ಪ್ರತಿನಿಧಿಗಳು ಸೇರಿ 200ಕ್ಕೂ ಹೆಚ್ಚು ಅಧಿಕಾರಿಗಳ ಮಟ್ಟದ ತಂಡ ಭೇಟಿ ನೀಡಲಿದೆ. ಇವರಿಗೆ ಸೌಲಭ್ಯ ಒದಗಿಸಲು ಕೇಂದ್ರ ಸಚಿವಾಲಯದ ಅಧಿಕಾರಿಗಳು ಸೂಕ್ತ ನಿರ್ದೇಶನ ನೀಡಿದ್ದು, ಅದಕ್ಕೆ ಪೂರಕವಾಗಿ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ವಿಶ್ವವಿಖ್ಯಾತ ಹಂಪಿಯಲ್ಲಿ ವಿಜಯ ವಿಠ್ಠಲ ದೇವಸ್ಥಾನ, ಪುರಂದರ ಮಂಟಪ ಹಾಗೂ ಎದುರು ಬಸವಣ್ಣ ವೇದಿಕೆಗಳ ಪರಿಶೀಲನೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಅಧಿಕಾರಿಗಳು ಸ್ಥಳ ವೀಕ್ಷಣೆ ಮಾಡಿದ್ದು, ಅಂತಿಮವಾಗಿ ಎರಡು ಸ್ಥಳಗಳು ನಿಗದಿಯಾಗಲಿವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Electric Bike : ಬೆಂಗಳೂರಿನ ರಸ್ತೆಗಿಳಿದಿದೆ 65,990 ರೂಪಾಯಿಯ ಎಲೆಕ್ಟ್ರಿಕ್​ ಬೈಕ್​

ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ವಿಶ್ವಪಾರಂಪರಿಕ ಸ್ಥಳ ಹಂಪಿಯಲ್ಲಿ ಶೆರ್ಪಾ ಮಟ್ಟದ ಸಭೆ ನಡೆಯಲಿದ್ದು, ಸಭೆಯನ್ನು ಉನ್ನತ ಮಟ್ಟದಲ್ಲಿ ನಡೆಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಂಪಿಯನ್ನು ವಿಶ್ವಮಟ್ಟದಲ್ಲಿ ಪ್ರಸ್ತುತ ಪಡಿಸಲು ಉತ್ತಮ ಅವಕಾಶ ದೊರಕಿದೆ. ಸಭೆಗೆ ಅಗತ್ಯವುಳ್ಳ ಮೂಲಭೂತ ಸೌಕರ್ಯಗಳನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಜಿಲ್ಲಾಡಳಿತಕ್ಕೆ ಪೂರ್ವಭಾವಿ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಶೃಂಗಸಭೆ ಅಂಗವಾಗಿ ಇಲ್ಲಿನ ವಿಶೇಷ ಆಚರಣೆ ತುಂಗಾರತಿಯನ್ನು ಸಹ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಭಾಗಿಯಾದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಸಿನ್ಹಾ ಹಾಗೂ ರಮೇಶ್ ಬಾಬು ಅವರು ಹಂಪಿಯಲ್ಲಿ ಒದಗಿಸಬೇಕಾದ ಅಗತ್ಯ ಸೌಕರ್ಯಗಳ ಸಿದ್ಧತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿದರು.

ಇದನ್ನೂ ಓದಿ: IPL 2023: ಗಿಲ್​ ಶತಕದ ಕಮಾಲ್​; ಮುಂಬೈಗೆ ಬೃಹತ್​ ಮೊತ್ತದ ಗುರಿ

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Karnataka Cabinet Expansion: ಸಚಿವರ ಪ್ರಮಾಣ ವಚನ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ

Karnataka Cabinet Expansion: ರಾಜಭವನದಲ್ಲಿ ಶನಿವಾರ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಸಂಪುಟ ಸೇರಿದ್ದಾರೆ. ಹೀಗಾಗಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ.

VISTARANEWS.COM


on

Edited by

congress workers celebration
ಗದಗದಲ್ಲಿ ಎಚ್.ಕೆ.ಪಾಟೀಲ್‌ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು.
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಶನಿವಾರ 24 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು, ಇದರಿಂದ ಸಿದ್ದರಾಮಯ್ಯ ಸಂಪುಟದ (Karnataka Cabinet Expansion) 34 ಸ್ಥಾನಗಳೂ ಭರ್ತಿಯಾದಂತಾಗಿದೆ. ಮತ್ತೊಂದೆಡೆ ತಮ್ಮ ನೆಚ್ಚಿನ ನಾಯಕರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ವಿವಿಧೆಡೆ ಕಾಂಗ್ರೆಸ್‌ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.

ಚಿಂತಾಮಣಿಯಲ್ಲಿ ಡಾ.ಎಂ.ಸಿ.ಸುಧಾಕರ್ ಅಭಿಮಾನಿಗಳಿಂದ ಸಂಭ್ರಮ

Congress workers distribute sweets in Chintamani
ಚಿಂತಾಮಣಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಸಿಹಿ ಹಂಚಿಕೆ

ಚಿಕ್ಕಬಳ್ಳಾಪುರ‌: ಶಾಸಕ ಡಾ‌.ಎಂ.ಸಿ.ಸುಧಾಕರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

2004 ಮತ್ತು 2008ರಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡಿ ಸತತ ಎರಡು ಬಾರಿ ಸೋಲು ಕಂಡಿದ್ದ ಸಚಿವ ಡಾ. ಎಂ.ಸಿ. ಸುಧಾಕರ್ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈಗ ಸಿದ್ದರಾಮಯ್ಯ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಚಿಂತಾಮಣಿ ತಾಲೂಕು ಕಚೇರಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದರು.

ಇದನ್ನೂ ಓದಿ | Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ

ವಿಜಯಪುರದಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ

Congress workers burst crackers in Vijayapura
ವಿಜಯಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ

ವಿಜಯಪುರ: ಸಚಿವರಾಗಿ ಶಿವಾನಂದ ಪಾಟೀಲ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ವಿಜಯಪುರ ನಗರದ ಚಾಂದನಿ ಹೋಟೆಲ್ ಎದುರು ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಕಾಂಗ್ರೆಸ್ ಸರ್ಕಾರ, ಸಚಿವ ಶಿವಾನಂದ ಪಾಟೀಲ ಪರವಾಗಿ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿ, ಶಿವಾನಂದ ಪಾಟೀಲ ಅವರು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದು ಹಾರೈಸಿದರು.

Santosh Lad's fans burst crackers in Dharwad
ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಮರಾಠಾ ಸಮಾಜದ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು

ಕಾರವಾರದಲ್ಲಿ ಮಂಕಾಳು ವೈದ್ಯ ಅಭಿಮಾನಿಗಳಿಂದ ಸಿಹಿ ಹಂಚಿಕೆ

Mankal Vaidya fans share sweets in Karwar

ಕಾರವಾರ: ಮಂಕಾಳು ವೈದ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾರವಾರದ ಸುಭಾಷ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಬಳಿಕ ಸಚಿವ ಮಂಕಾಳು ವೈದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಪರ ಕಾರ್ಯಕರ್ತರು ಜೈಕಾರ ಹಾಕಿ ಸಂಭ್ರಮಿಸಿದರು.

ಕೊಪ್ಪಳದಲ್ಲಿ ಶಿವರಾಜ್ ತಂಗಡಗಿ ಅಭಿಮಾನಿಗಳ ಹರ್ಷ

ಕೊಪ್ಪಳ: ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಜ್ ತಂಗಡಗಿ ಅವರು ಮೂರನೇ ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕೊಪ್ಪಳದ ಅಶೋಕ ವೃತ್ತದಲ್ಲಿ ಭೋವಿ ಸಮಾಜದ ಬೆಂಬಲಿಗರು ಸಂಭ್ರಮಾಚರಣೆ ನಡೆಸಿ ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ | Karnataka Cabinet expansion : 24 ನೂತನ ಸಚಿವರ ಸೇರ್ಪಡೆ: ಭರ್ತಿ ಸಂಪುಟದೊಂದಿಗೆ ಅಗ್ನಿ ಪರೀಕ್ಷೆಗಿಳಿದ ಸಿದ್ದರಾಮಯ್ಯ!

ಗದಗದಲ್ಲಿ ಎಚ್.ಕೆ.ಪಾಟೀಲ್‌ ಅಭಿಮಾನಿಗಳ ಸಂಭ್ರಮ

H K Patil fans celebrate in Gadag

ಗದಗ: ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ.ಪಾಟೀಲ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದ ಹಳೇ ಬಸ್ ನಿಲ್ದಾಣ ಬಳಿ ಅಭಿಮಾನಿಗಳು ಹಾಗೂ ಹಲವು‌ ಆಟೋ ಚಾಲಕರ ಸಂಘದ‌ ಸದಸ್ಯರು ಸಂಭ್ರಮಾಚರಣೆ ನಡೆಸಿದರು.

Continue Reading
Advertisement
Shivamogga MP B Y Raghavendra meeting
ಕರ್ನಾಟಕ11 mins ago

Shivamogga News: ಶಿವಮೊಗ್ಗ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ: ಸಂಸದ ಬಿ.ವೈ. ರಾಘವೇಂದ್ರ

bus stand in dilapidated condition at challakere taluk
ಕರ್ನಾಟಕ16 mins ago

Challakere News: ಶಿಥಿಲಾವಸ್ಥೆಯಲ್ಲಿ ದೊಡ್ಡೇರಿ ಗ್ರಾಮದ ಬಸ್ ತಂಗುದಾಣ; ದುರಸ್ತಿಗೆ ಬೇಕಿದೆ ಅನುದಾನ

ಬಾಲಿವುಡ್16 mins ago

Aahana Kumra: ಐಫಾ ಕಾರ್ಯಕ್ರಮದಲ್ಲಿ ಡ್ರೆಸ್‌ ಜಾರದಂತೆ ಹಿಡಿದುಕೊಂಡ ನಟಿ ಅಹಾನಾ ಕುಮ್ರಾ; ವಿಡಿಯೊ ವೈರಲ್​

Snake Found In Mid Day Meal
ವೈರಲ್ ನ್ಯೂಸ್27 mins ago

Viral News : ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಸಿಕ್ಕಿತು ಹಾವು! ಹಲವು ಮಕ್ಕಳು ಅಸ್ವಸ್ಥ

G-20 Summit Preparatory Meeting at Vijayanagara district
ಕರ್ನಾಟಕ29 mins ago

Vijayanagara News: ಜಿ-20 ಶೃಂಗಸಭೆಯ ಪೂರ್ವಸಿದ್ಧತಾ ಸಭೆ; ಸಂಸ್ಕೃತಿಯ ಅನಾವರಣಕ್ಕೆ ತೀರ್ಮಾನ

Declare Diwali As Federal Holiday In US Lawmaker Introduces Bill
ವಿದೇಶ33 mins ago

ದೀಪಾವಳಿಗೆ ಯುಎಸ್​​ನಲ್ಲಿ ಸಾರ್ವತ್ರಿಕ ರಜೆ ಕೊಡಬೇಕು; ಮಸೂದೆ ಮಂಡನೆ ಮಾಡಿದ ಅಮೆರಿಕ ಜನಪ್ರತಿನಿಧಿ

congress workers celebration
ಕರ್ನಾಟಕ36 mins ago

Karnataka Cabinet Expansion: ಸಚಿವರ ಪ್ರಮಾಣ ವಚನ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ

BK Hariprasad expresses displeasure over not including his name in karnataka cabinet expansion
ಕರ್ನಾಟಕ38 mins ago

Karnataka Cabinet: ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯಿತು ಮೂಲ-ವಲಸಿಗ ಜಗಳ: ಸಿಎಂ ವಿರುದ್ಧ ಹರಿಪ್ರಸಾದ್‌ ಪ್ರಹಾರ

karwali rain
ಉಡುಪಿ44 mins ago

Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ

Kidwai Hospital
ಆರೋಗ್ಯ58 mins ago

Oxygen Shortage: ಕಿದ್ವಾಯಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಕ್ಯಾನ್ಸರ್‌ ರೋಗಿ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ14 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Laxmi Hebbalkar oath taking as a minister
ಕರ್ನಾಟಕ1 hour ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ23 hours ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ24 hours ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ1 day ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ2 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ2 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ3 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

karnataka politics it takes time to implement guarantee schemes says minister priyank kharge
ಕರ್ನಾಟಕ3 days ago

Saffronisation issue : ಬಿಜೆಪಿಯವರಿಗೆ ತೊಂದರೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ; ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ

horoscope today
ಪ್ರಮುಖ ಸುದ್ದಿ4 days ago

Horoscope Today : ಪಂಚಮಿಯ ದಿನ ಪಂಚ ರಾಶಿಯವರಿಗೆ ಶುಭ ಫಲ; ಇಲ್ಲಿದೆ ಇಂದಿನ ದಿನ ಭವಿಷ್ಯ

ಟ್ರೆಂಡಿಂಗ್‌

error: Content is protected !!