ಬೆಂಗಳೂರು: ರಾಜ್ಯದಲ್ಲಿ ಜುಲೈ ೧ ರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಲಿದೆ.
ಕಳೆದ ಜನವರಿ-ಮಾರ್ಚ್ ಅವಧಿಯಲ್ಲಿ ಕಲ್ಲಿದ್ದಲು ಬೆಲೆ ಏರಿಕೆಯಾಗಿತ್ತು. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಪ್ರಮುಖ ಮೂಲವಾಗಿದ್ದು, ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಕಲ್ಲಿದ್ದಲು ಖರೀದಿಗೆ ಖರ್ಚಾಗಿರುವ ಹೆಚ್ಚುವರಿ ಹಣವನ್ನು ಗ್ರಾಹಕರಿಂದ ವಸೂಲು ಮಾಡಲು ಎಸ್ಕಾಂಗಳು ಕೆಇಆರ್‌ಸಿಗೆ ಮನವಿ ಮಾಡಿತ್ತು.
ಈ ನಿರ್ಧಾರದ ಪರಿಣಾಮ ೧೦೦ ಯುನಿಟ್ ವಿದ್ಯುತ್ ಬಳಕೆಯ ಬಿಲ್‌ನಲ್ಲಿ ದರ ೧೯ ರೂ.ಗಳಿಂದ ೩೦ ರೂ. ತನಕ ಏರಿಕೆಯಾಗುವ ನಿರೀಕ್ಷೆ ಇದೆ.
ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಆರು ತಿಂಗಳ ಅವಧಿಗೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ವಸೂಲು ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಹೆಚ್ಚಳವಾಗಲಿದೆ.
ಜುಲೈ 1 ರಿಂದ ವಿದ್ಯುತ್ ದರ ಏರಿಕೆಯಾಗುವ ಕುರಿತು ಮಾತನಾಡಿರುವ ಕೆಇಆರ್ಸಿ ಅಧ್ಯಕ್ಷ ರವಿಕುಮಾರ್ ಇದು ತಾತ್ಕಾಲಿಕ ಮಾತ್ರ..ವಸೂಲಿ ಸಂಪೂರ್ಣ ಮುಕ್ತವಾದರೆ ಮತ್ತೆ ದರಗಳು ಯಥಾಸ್ಥಿತಿಗೆ ಬರಲಿವೆ ಎಂದಿದ್ದಾರೆ. ಅಲ್ಲದೆ ಎಸ್ಕಾಂಗಳ ನಷ್ಟದ ಪ್ರಮಾಣವನ್ನು ಪರಿಗಣಿಸಿ ಇಂಧನ ವೆಚ್ಚ ಹೊಂದಾಣಿಕೆ, ಶುಲ್ಕ ವಸೂಲಿಗೆ ಅವಕಾಶ ನೀಡಲಾಗಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಈ ಆದೇಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಪ್ರತಿ ಯೂನಿಟ್ ಗೆ 38 ರಿಂದ 55 ರೂಪಾಯಿ ವಸೂಲಿ ಮಾಡಲು ಎಸ್ಕಾಂಗಳು ಕೋರಿವೆ. ಈ ಪ್ರಸ್ತಾವನೆಗೆ ವಿದ್ಯುತ್ ನಿಯಂತ್ರಣ ಆಯೋಗ ಅನುಮೋದನೆ ನೀಡಿದ್ದರೂ, ಎಸ್ಕಾಂಗಳು ನಿಗದಿಪಡಿಸಿದ್ದ ದುಬಾರಿ ದರ ಕಡಿತಗೊಳಿಸಲಾಗಿದೆ. ಗ್ರಾಹಕರಿಗೆ ದುಬಾರಿ ದರದಿಂದ ಹೊರೆಯಾಗುವ ಕಾರಣಕ್ಕೆ ಎಸ್ಕಾಂಗಳು ನಿಗದಿಪಡಿಸಿದ ದರ ಕಡಿತಗೊಳಿಸಲಾಗಿದೆ. ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಆರು ತಿಂಗಳ ಅವಧಿಗೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ವಸೂಲು ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಹೆಚ್ಚಳವಾಗಲಿದೆ.
” ಕಲ್ಲಿದ್ದಲು ಬೆಲೆ ಏರಿಕೆ, Fuel adjustment cost ನಿಂದಾಗಿ ಎಸ್ಕಾಂಗಳಿಗೆ ಹೊರೆಯಾಗಿದೆ. ಕಲ್ಲಿದ್ದಲು ಬೆಲೆ ಇಳಿಕೆಯಾದೊಡನೆ ವಿದ್ಯುತ್ ದರ ಕೂಡ ಕಡಿಮೆಯಾಗುವ ನಿರೀಕ್ಷೆ ಇದೆ ʼʼ ಎಂದು ಮೂಲಗಳು ತಿಳಿಸಿವೆ.